ತಾಳಿಕೋಟೆ ತಾಲೂಕಿನಲ್ಲಿ ದಾಖಲೆ ಮಳೆ: ಕೆಲವು ಗ್ರಾಮಗಳ ಮನೆಗಳು ಕುಸಿತ

Date:

ವಿಜಯಪುರ ಜಿಲ್ಲೆಯ ತಾಳಿಕೋಟೆ ಪಟ್ಟಣದಲ್ಲಿ ಗುರುವಾರ ರಾತ್ರಿಯಿಂದ ಇಂದು ಬೆಳಿಗ್ಗೆಯವರೆಗೆ 12.84 ಸೆಂಮೀ ದಾಖಲೆಯ ಮಳೆಯಾಗಿದ್ದು, ತಾಲೂಕಿನಾದ್ಯಂತ ಕೆಲವು ಗ್ರಾಮಗಳಲ್ಲಿ ಮನೆಗಳು ಕುಸಿದಿರುವ ಘಟನೆ ನಡೆದಿದೆ.

- Advertisement -

“ತಾಲೂಕಿನ ಹಳ್ಳಗಳೆಲ್ಲ ಮತ್ತೆ ಮೈದುಂಬಿಕೊಂಡು ಹರಿಯುತ್ತಿದ್ದು, ಹಾಸ್ಟೆಲ್‌ವರೆಗೆ ನೀರು ಬಂದಿದೆ. ಕೂಚಬಾಳ ಹಾಗೂ ಬಾವೂರ ಮಧ್ಯೆ ಹರಿಯುವ ಸೋಗಲಿ ಹಳ್ಳಕ್ಕೆ ಪ್ರವಾಹ ಬಂದಿದ್ದು, ಸೇತುವೆ ಜಲಾವೃತವಾಗಿದೆ. ರಸ್ತೆ ಸಂಚಾರಕ್ಕೆ ಅಡ್ಡಿಯಾಗಿದೆ” ಎಂದು ಸ್ಥಳೀಯ ನಿವಾಸಿ ಮಹಾಂತೇಶ ತಿಳಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಬೆಟ್ಟದಷ್ಟಾದ ಅತ್ಯಾಚಾರ ಪ್ರಕರಣಗಳು – ತೆವಳುತ್ತಿರುವ ನ್ಯಾಯದಾನ

ಪೊಲೀಸರೆಂದು ನಟಿಸಿ ಬೆದರಿಸುವುದು, ನಿರ್ಜನ ಪ್ರದೇಶಗಳಲ್ಲಿ ತೋಳಗಳಂತೆ ಕಾದು ಹಲ್ಲೆಗೈದು ಸಾಮೂಹಿಕ ಅತ್ಯಾಚಾರ ನಡೆಸಿ ಕೊಂದೆಸೆಯುವುದು, ಕಿಂಚಿತ್ತೂ ಭಯವಿಲ್ಲದೆ ಕೃತ್ಯದ ವಿಡಿಯೋ ತುಣುಕುಗಳನ್ನು ಸಾಮಾಜಿಕ ಜಾಲತಾಣಗಳಲ್ಲಿ ಹರಿಬಿಡುವುದಲ್ಲದೆ, ಸಂತ್ರಸ್ತರ ಗುರುತು ಬಹಿರಂಗಪಡಿಸುವ ಪ್ರವೃತ್ತಿ...

ಶಾಮನೂರು ಫ್ಯಾಮಿಲಿಗೆ ಸಚಿವ ಬಸವಂತಪ್ಪ ಕೈ ಮುಗಿಯುವ ಅಗತ್ಯವಿದೆಯೇ?

ಬಸವಂತಪ್ಪನವರನ್ನು ಗೆಲ್ಲಿಸಿದ್ದು, ಕಾಂಗ್ರೆಸ್ಸಿನ ಸಾಂಪ್ರದಾಯಿಕ ಮತದಾರರು. ಶಾಮನೂರು ಕುಟುಂಬದ ಸುತ್ತ ಕಟ್ಟಿರುವ ಕಲ್ಪಿತ ಬಲವನ್ನು ಮೀರಿ, ಬಸವಂತಪ್ಪ ಬೆಳೆಯಬೇಕು ಎಂಬುದು ಕ್ಷೇತ್ರದ ಮತದಾರರ ಅಭಿಪ್ರಾಯ. ಪೌರಕಾರ್ಮಿಕರ ಮಗನಾಗಿ ಹುಟ್ಟಿ, ಸಚಿವ ಸ್ಥಾನದವರೆಗೆ ಬೆಳೆದವರು ಕೆ.ಎಸ್....

ಪಾಕ್‌ಗೆ ತಕ್ಕ ಉತ್ತರ ನೀಡಿದ್ದಾಗಿ ಎದೆ ತಟ್ಟಿಕೊಳ್ಳುವ ಮೋದೀಜಿ,...

ಬಾಲಾಕೋಟ್‌ನಿಂದ ಇತ್ತೀಚಿನ 'ಆಪರೇಷನ್ ಸಿಂಧೂರ್'ವರೆಗೆ ಪಾಕಿಸ್ತಾನಕ್ಕೆ ತಕ್ಕ ಉತ್ತರ ನೀಡಿದ್ದಾಗಿ ಪ್ರಧಾನಿ ಮೋದಿ ನೇತೃತ್ವದ ಬಿಜೆಪಿ ಸರ್ಕಾರ ಎದೆ ತಟ್ಟಿಕೊಳ್ಳುತ್ತಿದೆ. ಶತೃ ದೇಶವನ್ನು ಮಣಿಸುವುದು ಯಾರಿಗಾದರೂ ಹೆಮ್ಮೆಯೇ. ಆದರೆ, ದೇಶದ ಅಖಂಡತೆಗೆ ಅತಿ...

ಮೂಕಿಹಾಳ ಬಳಿಯ ಸೇತುವೆ ಮುಳುಗಿದ್ದು, ತಾಳಿಕೋಟೆಯಿಂದ ಹಡಗಿನಾಳ ಮಾರ್ಗ ಬಂದ್ ಆಗಿದೆ. ಮುದ್ದೇಬಿಹಾಳ, ಬಾಗಲಕೋಟೆಗೆ ತೆರಳಬೇಕಿದ್ದ ಹೆಚ್ಚಿನ ವಾಹನಗಳು ರಾಜ್ಯ ಹೆದ್ದಾರಿಯಲ್ಲಿರುವ ಡೋಣಿ ನದಿ ಸೇತುವೆ ಬಳಸಿ 5 ಕಿಮೀ ಸುತ್ತುಬಳಸಿ ಮಿಣಜಗಿ ಗ್ರಾಮದ ಮೂಲಕ ಸಾಗಿದವು.

ಹೆಚ್ಚಿನ ಜಮೀನುಗಳು ಜಲಾವೃತವಾಗಿದ್ದು, ಬೆಳೆಗಳ ಮಧ್ಯೆ ಮಳೆಯ ನೀರು ಸಂಗ್ರಹವಾದ್ದರಿಂದ ಬೆಳೆ ಹಾಳಾಗುವ ಭೀತಿಯಲ್ಲಿ ರೈತರು ಕಂಗಾಲಾಗಿದ್ದಾರೆ.

ರಾತ್ರಿಯಿಡೀ ಸುರಿದ ಮಳೆಯಿಂದ ಪಟ್ಟಣದ ಹಲವು ರಸ್ತೆ ಗುಂಡಿಗಳಲ್ಲಿ ನೀರು ತುಂಬಿಕೊಂಡು ಸಂಚಾರಕ್ಕೆ ತೊಂದರೆಯಾಗಿದೆ. ಪಟ್ಟಣದಿಂದ ಕಲಕೇರಿಗೆ ಹೋಗುವ ಮಾರ್ಗದಲ್ಲಿನ ಕೆಸರಟ್ಟಿಯಿಂದ ಬಿಂಜಲಭಾವಿ ಗ್ರಾಮದ ಬಳಿಯ ಸುಮಾರು 8 ಕಿಮೀ ರಸ್ತೆ ಹಾಳಾಗಿದೆ. ಕಾರಗನೂರು ಮತ್ತು ಹರನಾಳ್‌ನಲ್ಲಿ ಮೂರು ಮನೆ ಭಾಗಶಃ ಹಾನಿಯಾಗಿವೆ.

ಈ ಸುದ್ದಿ ಓದಿದ್ದೀರಾ? ಮಾಲೂರು ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರಿಂದ ಶಾಸಕ ಕೊತ್ತೂರು ಮಂಜುನಾಥ್, ಅನಿಲ್ ಕುಮಾರ್‌ಗೆ ಸನ್ಮಾನ

“ಮೂಕಿಹಾಳ ಬಳಿಯ ಸೋಗ್ಲಿಹಳ್ಳದ ಸೇತುವೆ ಮೇಲೆ ನೀರಿನ ಪ್ರವಾಹದಿಂದ ಸಂಚಾರ ಸ್ಥಗಿತವಾಗಿದೆ. ಡೋಣಿ ನದಿಯ ಪ್ರವಾಹ ಹೆಚ್ಚುತ್ತಿದ್ದು ನದಿ ದಂಡೆಗಳಲ್ಲಿ ಜನ-ಜಾನುವಾರು ಸಂಚಾರ ನಿಲ್ಲಿಸಬೇಕು” ಎಂದು ತಹಶೀಲ್ದಾರ್ ಡಾ.ವಿನಯಾ ಹೂಗಾರ ತಿಳಿಸಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ರಾಯಚೂರು | ತೆರಿಗೆ ವಸೂಲಾತಿಯಲ್ಲಿ ಲೋಪ: ಇಬ್ಬರು ಪಿಡಿಓ ಅಮಾನತು, ಮೂವರು ಕರವಸೂಲಿಗಾರರ ವಜಾಕ್ಕೆ ವಿಚಾರಣೆ

ತೆರಿಗೆ ವಸೂಲಾತಿಯಲ್ಲಿ ನಿರ್ಲಕ್ಷ್ಯ ಹಾಗೂ ಕರ್ತವ್ಯ ಲೋಪ ಎಸಗಿರುವುದು ಪತ್ತೆಯಾದ ಹಿನ್ನೆಲೆಯಲ್ಲಿ...

ಹಾವೇರಿ | ಪುಸ್ತಕ ಓದಿನ ಪರಂಪರೆಯನ್ನು ಮರು ಕಟ್ಟಬೇಕಾಗಿದೆ: ಶೋಭಾ ಜಾಗಟಗೇರಿ

"ಮುಷ್ಠಿಯಲ್ಲಿ ಇರುವ ಮೊಬೈಲ್ ಜೀವನ ಪಾಠವನ್ನ್ನು ಕಲಿಸುವುದಕ್ಕಿಂತ ದಾರಿ ತಪ್ಪಿಸುವ ಕೆಲಸ...

ಉತ್ತರ ಕನ್ನಡ | 3.24 ಲಕ್ಷ ಪಡಿತರ ಚೀಟಿ ಸದಸ್ಯರ ಇ-ಕೆವೈಸಿ ಬಾಕಿ; ಅಕ್ಟೋಬರ್ 20ರೊಳಗೆ ಪೂರ್ಣಗೊಳಿಸಲು ಮನವಿ

ಉತ್ತರ ಕನ್ನಡ ಜಿಲ್ಲೆಯ ಪಡಿತರ ಚೀಟಿಗಳಲ್ಲಿರುವ 5,69,044 ಸದಸ್ಯರು ಐದು ವರ್ಷಗಳ...

ಉಡುಪಿ | ಇಂದ್ರಾಳಿ ಮಂಚಿ ನೂರಾನಿ ಮಸೀದಿಗೆ ನೂತನ ಆಡಳಿತ ಸಮಿತಿ ರಚನೆ

ಉಡುಪಿ ತಾಲೂಕಿನ ಇಂದ್ರಾಳಿ ಮಂಚಿ ನೂರಾನಿ ಮಸೀದಿಯ ಆಡಳಿತ ಸಮಿತಿಗೆ ನೂತನ...