ಸಹ ಪ್ರಾಧ್ಯಾಪಕರ ನೇಮಕಾತಿ |‌ ನ್ಯಾಯಾಲಯದ ತೀರ್ಪು ನೋಡಿ ನಿರ್ಧಾರ: ಸಚಿವ ಎಂ ಸಿ ಸುಧಾಕರ್

Date:

  • ಹೋರಾಟ ನಿರತ ಸಹ ಪ್ರಾಧ್ಯಾಪಕ ಆಕಾಂಕ್ಷಿಗಳ ಭೇಟಿ ಮಾಡಿದ ಸಚಿವರು
  • ‘ಎರಡು ವರ್ಷ ಕಾದಿದ್ದೀರಿ, ಕೆಲವೇ ದಿನಗಳಲ್ಲಿ ನಿಮ್ಮ ಸಮಸ್ಯೆಗೆ ಪರಿಹಾರ’

ಎರಡು ವರ್ಷಗಳ ಹಿಂದೆ 2021ರಲ್ಲಿ ನೇಮಕಗೊಂಡು ಹುದ್ದೆ ನಿರೀಕ್ಷೆಯಲ್ಲಿರುವ ಸಹಾಯಕ ಪ್ರಾಧ್ಯಾಪಕರ ನೇಮಕಾತಿ ಕುರಿತಂತೆ ನ್ಯಾಯಾಲಯದ ನಾಳಿನ ತೀರ್ಪು ನೋಡಿಕೊಂಡು ರಾಜ್ಯ ಸರ್ಕಾರ ಸೂಕ್ತ ತೀರ್ಮಾನಕ್ಕೆ ಬರಲಿದೆ ಎಂದು ಉನ್ನತ ಶಿಕ್ಷಣ ಸಚಿವ ಡಾ.ಎಂ ಸಿ ಸುಧಾಕರ್ ಹೇಳಿದರು.

- Advertisement -

ಸ್ವತಂತ್ರ ಉದ್ಯಾನವನದಲ್ಲಿ ಅನಿರ್ಧಿಷ್ಟಾವಧಿ ಮುಷ್ಕರ ಕೈಗೊಂಡಿರುವ 2021ರ ಸಹ ಪ್ರಾಧ್ಯಾಪಕರ ನೇಮಕಾತಿ ನಿರೀಕ್ಷೆಯಲ್ಲಿರುವ ಹೋರಾಟ ನಿರತರನ್ನು ಭೇಟಿ ನೀಡಿದ ಸಚಿವರು, “ರಾಜ್ಯ ಸರ್ಕಾರ ನಿಮ್ಮ ನ್ಯಾಯಯುತ ಬೇಡಿಕೆ ಈಡೇರಿಸಲು ಮುಕ್ತವಾಗಿದೆ” ಎಂದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಬ್ರಿಟಿಷ್ ಕಾಲದ ʼಗುಲಾಮಗಿರಿʼ ಕಾನೂನುಗಳೇ ಇಂದಿನ ಪೊಲೀಸ್‌ ವ್ಯವಸ್ಥೆಯ...

ಸ್ವಾತಂತ್ರ್ಯ ಬಂದು ದಶಕಗಳೇ ಕಳೆದಿದ್ದರೂ, ನಾವಿನ್ನೂ ಬ್ರಿಟಿಷರು ಭಾರತೀಯರನ್ನು ದಮನ ಮಾಡಲು ರೂಪಿಸಿದ 1861ರ ಪೊಲೀಸ್ ಕಾಯಿದೆಯ ನೆರಳಿನಲ್ಲೇ ಬದುಕುತ್ತಿದ್ದೇವೆಯೇ? ಖಾಕಿ ಪಡೆಯನ್ನು 'ಪ್ರಜೆಗಳ ರಕ್ಷಕ'ನಾಗಿಸಬೇಕಿದ್ದ ವ್ಯವಸ್ಥೆ, ಇಂದಿಗೂ ರಾಜಕಾರಣಿಗಳ ಕೈಗೊಂಬೆಯಾಗಿ ಉಳಿದುಕೊಳ್ಳಲು...

ಯಾರು ಹಿತವರು ಈ ಇಬ್ಬರೊಳಗೆ? ನೇಹಾ ಬೋರಾ ಅಭಿಜಿತ್...

“ಹೋಲಿಕೆ ಬೇಡ, ಒಗ್ಗಟ್ಟು ಬೇಕು. ನಾವೆಲ್ಲರೂ ಒಟ್ಟಾಗಿ ಚುನಾವಣಾ ಆಯೋಗದ ಅಕ್ರಮಗಳ ವಿರುದ್ಧ ಹೋರಾಡಬೇಕು” ಎಂದು ನೇಹಾ ಬರೆದರೆ, ಅದಕ್ಕೆ ಅಭಿಜೀತ್ ಉತ್ತರ- “ಇಂಕ್ವಿಲಾಬ್ ಜಿಂದಾಬಾದ್” ನೇಹಾ ಬೋರಾ ಮತ್ತು ಅಭಿಜಿತ್ ದೀಪ್ಕೆ ನಡುವೆ...

ಸ್ವತಂತ್ರ ಸಾಂವಿಧಾನಿಕ ಸಂಸ್ಥೆಗಳ ಮೇಲಿನ ನಂಬಿಕೆಯನ್ನು ಕಸಿದುಕೊಳ್ಳುತ್ತಿರುವ ಚುನಾವಣಾ...

ನ್ಯಾಯಾಲಯ ಮತ್ತು ಚುನಾವಣಾ ಆಯೋಗಗಳ 'ಸ್ವತಂತ್ರತೆ' ಎಂಬ ಮುಖವಾಡವೇ ಈಗ ಸರ್ಕಾರಕ್ಕೆ ರಕ್ಷಣಾ ಕವಚವಾಗಿ ಕೆಲಸ ಮಾಡುತ್ತಿದೆ. ಹೀಗಾಗಿ ಇವತ್ತು ವಿರೋಧ ಪಕ್ಷಗಳ ಆಕ್ರೋಶವೆಲ್ಲವೂ ಸಾಂವಿಧಾನಿಕ ಸಂಸ್ಥೆಗಳ ಕಡೆಗೆ ತಿರುಗಿದೆ. ಸರ್ಕಾರ ತೀರಾ...

“ಪರೀಕ್ಷೆ ಫಲಿತಾಂಶದ ನಂತರ ಉಂಟಾಗಿರುವ ಪ್ರಶ್ನೆ ಪತ್ರಿಕೆ ಬಯಲು ಪ್ರಕರಣ ಒಂದು ವಿಷಯಕ್ಕೆ ಮಾತ್ರ ಸೀಮಿತವಾಗಿದೆ. ಈಗಾಗಲೇ ಈ ಬಗ್ಗೆ ತಪ್ಪಿತಸ್ಥರ ಮೇಲೆ ಕಾನೂನಿನ ಕ್ರಮ ಕೈಗೊಳ್ಳಲಾಗಿದೆ. ಈ ವಿಚಾರಕ್ಕೆ ಸಂಬಂಧಿಸಿದಂತೆ ತನಿಖೆ ನಡೆಸಿದ ಸಿ.ಸಿ.ಬಿ ಪೊಲೀಸರು ಈಗಾಗಲೇ ಚಾರ್ಚ್‍ಶೀಟ್ ಅನ್ನು ನ್ಯಾಯಾಲಯಕ್ಕೆ ಸಲ್ಲಿಸಿದ್ದಾರೆ. ಆದರೆ, ತನಿಖೆ ಮುಗಿದಿದೆಯೇ, ಇಲ್ಲವೋ ಎಂಬುದರ ಬಗ್ಗೆ ಅಂತಿಮ ವರದಿ ನೀಡಿಲ್ಲ. ಹಾಗಾಗಿ ವಿಳಂಬವಾಗಿದೆ. ಈ ಬಗ್ಗೆ ವರದಿ ನೀಡುವಂತೆ ಸೂಚಿಸಲಾಗಿದೆ” ಎಂದರು.

“ಮತ್ತೊಂದು ಕಲ್ಯಾಣ ಕರ್ನಾಟಕದ 371ಜೆ ಸಂಬಂಧಿಸಿದಂತೆ ಹಿಂದಿನ ಸರ್ಕಾರ ಪರೀಕ್ಷೆ ಸಮಯದಲ್ಲಿ ಒಂದು ಮಾರ್ಗದರ್ಶನ ನೀಡಿ, ಆನಂತರ ಮತ್ತೊಂದು ಆದೇಶವನ್ನು ಹೊರಡಿಸಿದ್ದು ಕೂಡ ಈಗ ಗೊಂದಲಕ್ಕೆ ಕಾರಣವಾಗಿದೆ ಎಂದು ವಿವರಿಸಿದರು. ಎರಡು ವರ್ಷ ಕಾದಿದ್ದೀರಿ. ಇನ್ನು ಕೆಲವೇ ದಿನಗಳಲ್ಲಿ ನಿಮ್ಮ ಸಮಸ್ಯೆ ಪರಿಹಾರವಾಗಲಿದೆ” ಎಂದು ತಿಳಿಸಿದರು.

ಈ ಸುದ್ದಿ ಓದಿದ್ದೀರಾ? ಈ ದಿನ ಸಂಪಾದಕೀಯ | ರಾಜ್ಯದಲ್ಲಿ ಮತ್ತೆ ಶುರುವಾಯಿತು ಹೆಣ ರಾಜಕಾರಣ

“ಸಿ.ಸಿ.ಬಿ ವರದಿ ಹಾಗೂ 371ಜೆ ಪ್ರಕರಣಗಳು ಮುಖ್ಯವಾಗಿವೆ. ಈ ಹಿನ್ನೆಲೆಯಲ್ಲಿ ನಾಳೆ ನ್ಯಾಯಾಲಯ ಯಾವ ನಿರ್ಧಾರ ಕೈಗೊಳ್ಳುತ್ತದೆ ಎಂಬುದನ್ನು ಸರ್ಕಾರ ನಿರೀಕ್ಷಿಸುತ್ತಿದ್ದು, ತೀರ್ಪಿನ ನಂತರ ಸೂಕ್ತ ಕ್ರಮ ಕೈಗೊಳ್ಳುತ್ತೇವೆ. ನೇಮಕಾತಿಗೊಂಡಿರುವ 1242 ವಿದ್ಯಾರ್ಥಿಗಳಿಗೆ ಅನ್ಯಾಯವಾಗದಂತೆ ಸರ್ಕಾರ ನ್ಯಾಯ ದೊರಕಿಸಿಕೊಡಲು ಬದ್ಧವಾಗಿದೆ” ಎಂದು ಸಚಿವರು ಭರವಸೆ ನೀಡಿದರು.

“ಅತ್ಯಂತ ಕಠಿಣ ಪರೀಕ್ಷೆಯನ್ನು ಎದುರಿಸಿ ಆಯ್ಕೆಯಾಗಿರುವ ನಿಮ್ಮೆಲ್ಲರ ನೋವಿಗೆ, ಆತಂಕಕ್ಕೆ ನನ್ನ ಸಹಮತವಿದೆ. ಆದರೆ, ವ್ಯವಸ್ಥೆಯಲ್ಲಿ ಸಮಸ್ಯೆಗಳಿಗೆ ಪರಿಹಾರ ಕಂಡುಕೊಳ್ಳುವುದು ಅಷ್ಟೇ ಮುಖ್ಯ. ದುಡುಕಿನ ನಿರ್ಧಾರ ಕೈಗೊಂಡರೆ ಮತ್ತೆ ನಿಮಗೆ ತೊಂದರೆ ಆಗಬಾರದೆಂಬ ನಿಲುವಿನಿಂದ ಸಿ.ಸಿ.ಬಿ ಅಂತಿಮ ವರದಿ ಹಾಗೂ ನ್ಯಾಯಾಲಯದ ತೀರ್ಪನ್ನು ಸರ್ಕಾರ ನಿರೀಕ್ಷಿಸುತ್ತಿದೆ. ಹಾಗಾಗಿ ಮುಷ್ಕರಕ್ಕಾಗಿ ನೂರಾರು ಮೈಲಿ ದೂರದ ಊರುಗಳಿಂದ ಬಂದಿರುವ ನೀವುಗಳು ಮುಷ್ಕರ ಕೈಬಿಟ್ಟು ನಮ್ಮೊಡನೆ ಸಹಕರಿಸಿ” ಎಂದು ವಿನಂತಿಸಿದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಹಾವೇರಿ | ನಾಳೆ ಜಿಲ್ಲಾ ಮಟ್ಟದ ಕಾರ್ಯಾಗಾರ

ಸಾವಯವ ಹಾಗೂ ನೈಸರ್ಗಿಕ ಕೃಷಿ ಪದ್ಧತಿಯನ್ನು ಉತ್ತೇಜಿಸುವ ಜೊತೆಗೆ ರೈತರು ಬೆಳೆಯುವ...

‘ದಿಮಾಗಿ ನಕ್ಸಲ್’ ಟೀಕೆಗಳಿಗೆ ಬಗ್ಗದಿರಿ, ಹೋರಾಟ ಮುಂದುವರಿಸಿ: ಪರಿಸರವಾದಿಗಳಿಗೆ ನಿವೃತ್ತ ಸುಪ್ರೀಂ ನ್ಯಾಯಮೂರ್ತಿ ಓಕಾ ಕರೆ

ಪರಿಸರ ರಕ್ಷಣೆ ಮತ್ತು ಸಾಂವಿಧಾನಿಕ ಹಕ್ಕುಗಳಿಗಾಗಿ ಧ್ವನಿ ಎತ್ತುವ ಹೋರಾಟಗಾರರನ್ನು ‘ದಿಮಾಗಿ...

ಶಿರಸಿ | ರಾಜೇಂದ್ರ ಸಿರ್ಸಿಕರ್‌ಗೆ ಇಂಡಿಯಾ ಬುಕ್ ಆಫ್ ರೆಕಾರ್ಡ್ಸ್ ಗೌರವ

ಶಿರಸಿ: ಪ್ರಾಣಿ-ಪಕ್ಷಿಗಳ ರಕ್ಷಣೆ ಮತ್ತು ಪುನರ್ವಸತಿ ಕ್ಷೇತ್ರದಲ್ಲಿ ಕಾರ್ಯನಿರ್ವಹಿಸುತ್ತಿರುವ ಶಿರಸಿಯ ರಾಜೇಂದ್ರ...

ಧಾರವಾಡ | ಪೊಲೀಸ್ ಹೆಸರೇಳಿ ರೂ. 15,700 ವಂಚನೆ: ನಾಲ್ಕು ಬೈಕ್‍ಗಳು ನಗದು ವಶ

ಪೊಲೀಸ್ ಹೆಸರೇಳಿ ವ್ಯಕ್ತಿಯೊಬ್ಬರಿಂದ ₹15,700 ಹಣ ಪಡೆದು ವಂಚಿಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ...