ಬಂಟ್ವಾಳ | ನಗರ ಪುನರ್ವಸತಿ ಕಾರ್ಯಕರ್ತರ ನೇಮಕಾತಿ; ವಿಕಲಚೇತನರಿಂದ ಅರ್ಜಿ ಆಹ್ವಾನ

Date:

ವಿಕಲಚೇತನರಿಗೆ ವಿಕಲಚೇತನರ ಮೂಲಕವೇ ಅವರು ವಾಸಿಸುವ ವ್ಯಾಪ್ತಿಯಲ್ಲಿ ಶೈಕ್ಷಣಿಕ ಉದ್ಯೋಗ ತರಬೇತಿ, ಆರ್ಥಿಕ ಪುನರ್ವಸತಿ ಮತ್ತು ಸಾಮಾಜಿಕ ಭದ್ರತೆ ಸೌಲಭ್ಯವನ್ನು ಕಲ್ಪಿಸುವ ನಿಟ್ಟಿನಲ್ಲಿ ಪುನರ್ವಸತಿ ಕಾರ್ಯಕ್ರಮಗಳನ್ನು ಅನುಷ್ಠಾನಗೊಳಿಸಲಾಗುತ್ತಿದೆ. ಈ ನಿಟ್ಟಿನಲ್ಲಿ ಕಾರ್ಯಕ್ರಮಗಳನ್ನು ಅನುಷ್ಠಾನಗೊಳಿಸಲು ನಗರ ಪುನರ್ವಸತಿ ಕಾರ್ಯಕರ್ತರನ್ನು ನೇಮಕ ಮಾಡುವ ಸಲುವಾಗಿ ವಿಟ್ಲ ಪಟ್ಟಣ ಪಂಚಾಯತ್, ಬಂಟ್ವಾಳ ತಾಲೂಕು ವ್ಯಾಪ್ತಿಯಲ್ಲಿ ವಾಸಿಸುವ ಅರ್ಹ ವಿಕಲಚೇತನ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ.

- Advertisement -

ಇದನ್ನೂ ಓದಿ: ಶಕ್ತಿ ಯೋಜನೆ: ಮಹಿಳಾ ಸಬಲೀಕರಣಕ್ಕೆ ಹೊಸ ದಿಕ್ಕು

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ನೊಬೆಲ್‌ ಪ್ರಶಸ್ತಿ ಸರಣಿ | ಶಾಸ್ತ್ರೀಯ ಪರಂಪರೆಗೆ ಸಮಕಾಲೀನ...

ಈ ಬಾರಿಯ ಸಾಹಿತ್ಯದ ನೊಬೆಲ್‌ ಪುರಸ್ಕಾರ ಕೆನಡಾದ ಆನ್‌ ಕಾರ್ಸನ್‌ ಅವರ ಮುಡಿಗೇರಿದೆ. ಇವರು ಕವಯತ್ರಿ, ಪ್ರಬಂಧಗಾರ್ತಿ ಹಾಗೂ ಅನುವಾದಕಿ. ಕ್ಲಾಸಿಕಲ್‌ ಗ್ರೀಕ್‌ ಸಾಹಿತ್ಯದ ಪ್ರೇಮಿಯಾದ ಕಾರ್‌ಸನ್‌ ಶಾಸ್ತ್ರೀಯ ಮಾದರಿಯನ್ನು ಸಮಕಾಲೀನ ಸಂದರ್ಭಗಳಲ್ಲಿ...

ಭದ್ರಾವತಿ | ಕಲುಷಿತ ಕುಡಿಯುವ ನೀರು ಸರಬರಾಜು; ರೋಗಭೀತಿಯಲ್ಲಿ...

ಭದ್ರಾವತಿ ತಾಲೂಕಿನ ಶಿವರಾಮನಗರ ಗ್ರಾಮದಲ್ಲಿ ನಗರಸಭೆ ಕಲುಷಿತ ಕುಡಿಯುವ ನೀರನ್ನು ಸರಬರಾಜು ಮಾಡುತ್ತಿರುವುದು ಗ್ರಾಮಸ್ಥರಲ್ಲಿ ತೀವ್ರ ಅಸಮಾಧಾನಕ್ಕೆ ಕಾರಣವಾಗಿದೆ. ಈ ವಿಷಯದಲ್ಲಿ ನಗರಸಭೆ ಆಡಳಿತ ಮತ್ತು ಆರೋಗ್ಯ ಇಲಾಖೆ ಕಣ್ಮುಚ್ಚಿ ಕುಳಿತಿರುವುದಾಗಿ ಸ್ಥಳೀಯರು...

15 ವರ್ಷಗಳಿಂದ ಪ್ಲಾಸ್ಟಿಕ್‌ ದೂರವಿಟ್ಟ ಗ್ರಾಮ; ನಮ್ಮೂರಿಗೂ ಇದು...

ಒಂದು ಗ್ರಾಮವೆಂದರೆ, ಇಂದಿಗೂ ಮಣ್ಣಿನ ರಸ್ತೆಗಳು, ಕಚ್ಚಾ ಮನೆಗಳು, ಹೊಲ-ಗದ್ದೆಗಳು ಮಾತ್ರ ನೆನಪಾಗುತ್ತವೆ. ಅಲ್ಲಿನ ಜನರ ಬದುಕಿನ ಶಿಸ್ತು, ಸಾರ್ವಜನಿಕ ಸ್ಥಳಗಳ ಮೇಲಿನ ಅವರ ಹೊಣೆಗಾರಿಕೆ ಮತ್ತು ಮುಂದಿನ ಪೀಳಿಗೆಯ ಬಗ್ಗೆ ಇರುವ...

ಅರ್ಹತೆ: ನಗರ ಪುನರ್ವಸತಿ ಕಾರ್ಯಕರ್ತರು ಸ್ಥಳೀಯರಾಗಿರಬೇಕು. ವಯೋಮಿತಿ 18-45 ವರ್ಷ. ವಿದ್ಯಾರ್ಹತೆ ಎಸ್.ಎಸ್.ಎಲ್.ಸಿ. ಪಾಸ್/ಫೇಲ್ ಆದವರು ಅರ್ಜಿ ಸಲ್ಲಿಸಬಹುದು. ಅಂಗವಿಕಲರಾಗಿರಬೇಕು, ಭಾಗಶಃ ಅಂಧರಿಗೆ/ ಭಾಗಶಃ ಶ್ರವಣದೋಷವುಳ್ಳವರಿಗೆ (ಮೈಲ್ಡ್ ಮತ್ತು ಮಾಡರೇಟ್) ಮತ್ತು ದೈಹಿಕ ಅಂಗವಿಕಲರಿಗೆ ಅವಕಾಶ ಕಲ್ಪಿಸಲಾಗುತ್ತದೆ. ಅಂಗವಿಕಲತೆಯು ಶೇ. 40 ರಷ್ಟಿರಬೇಕು. ಅಂಗವಿಕಲತೆಯ ಬಗ್ಗೆ ವೈದ್ಯಕೀಯ ಮಂಡಳಿಯ ಪ್ರಮಾಣ ಪತ್ರ/ ಗುರುತಿನ ಚೀಟಿಯ ದಾಖಲೆ ಒದಗಿಸಬೇಕು.

ಇದನ್ನೂ ಓದಿ: ಮಂಗಳೂರು | ಕಟ್ಟಡ ನಿರ್ಮಾಣಕ್ಕೆ ಲೈಸೆನ್ಸ್‌ ಕಡ್ಡಾಯ, ತಪ್ಪಿದರೆ ಸೌಲಭ್ಯ ಕಟ್:‌ ಮನಪಾ

ಅರ್ಜಿ ಸಲ್ಲಿಸಲು ಜುಲೈ 31 ಕೊನೆಯ  ದಿನ. ಅರ್ಜಿ ನಮೂನೆಯನ್ನು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಶಿಶು ಅಭಿವೃದ್ಧಿ ಯೋಜನಾ ಕಚೇರಿ, ವಿಟ್ಲ ಕುಲಾಲ ರಜತ ಭವನ ಕಟ್ಟಡ, ಸಮುದಾಯ ಆರೋಗ್ಯ ಕೇಂದ್ರದ ಬಳಿ ವಿಟ್ಲ ಕಚೇರಿಗೆ ನೀಡಬೇಕು.

ಹೆಚ್ಚಿನ ಮಾಹಿತಿಗೆ (ದೂರವಾಣಿ ಸಂಖ್ಯೆ 08255-238080) ಮತ್ತು ಅರ್ಜಿ ನಮೂನೆಗಳಿಗೆ ಜಿಲ್ಲಾ ವಿಕಲಚೇತನರ ಕಲ್ಯಾಣಾಧಿಕಾರಿ ಕಚೇರಿ ಸಂಪರ್ಕಿಸಬಹುದು ಎಂದು ವಿಕಲಚೇತನರ ಕಲ್ಯಾಣಾಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಉಡುಪಿ | ಮೇವಿನ ಬಿತ್ತನೆ ಬೀಜ ಉಚಿತ ಪೂರೈಕೆ; ರೈತರಿಂದ ಅರ್ಜಿ ಆಹ್ವಾನ

ಪ್ರಸಕ್ತ ಸಾಲಿನಲ್ಲಿ ರಾಜ್ಯದಲ್ಲಿ ಮಳೆಯ ಪ್ರಮಾಣ ತೀರಾ ಕಡಿಮೆಯಾಗಿರುವ ಹಿನ್ನೆಲೆಯಲ್ಲಿ ಜಾನುವಾರುಗಳಿಗೆ...

ಉಡುಪಿ | ಅ.11ರಿಂದ 21ರವರೆಗೆ ಉಚ್ಚಿಲ ದಸರಾ: ಅ.12ರಂದು ಮಹಿಳಾ ದಸರಾ ಉದ್ಘಾಟಿಸಲಿರುವ ಸಿಎಂ

ದಕ್ಷಿಣ ಕನ್ನಡ ಮೊಗವೀರ ಮಹಾಜನ ಸಂಘದ ವ್ಯವಸ್ಥಾಪನೆಯ ಉಚ್ಚಿಲ ಶ್ರೀ ಮಹಾಲಕ್ಷ್ಮೀ...

ಹಾವೇರಿ | ಅಂಚೆ ಇಲಾಖೆಯಲ್ಲಿ ನೇರ ಸಂದರ್ಶನ

ಭಾರತೀಯ ಅಂಚೆ ಇಲಾಖೆಯಲ್ಲಿ ಪೋಸ್ಟಲ್ ಲೈಫ್ ಇನ್ಸೂರೆನ್ಸ್ (ಪಿಎಲ್‌ಐ-ಅಂಚೆ ಜೀವವಿಮೆ) ಮತ್ತು...

ಬಸವನ ಬಾಗೇವಾಡಿ | ತಾಲೂಕು ಆಸ್ಪತ್ರೆಯಲ್ಲಿ ಔಷಧ ಕೊರತೆ: ಡಿಎಚ್‌ಒ ಸ್ಪಷ್ಟನೆಗೆ ರೈತ ಸಂಘ ಆಗ್ರಹ

ವಿಜಯಪುರ ಜಿಲ್ಲೆಯ ಬಸವನ ಬಾಗೇವಾಡಿ ತಾಲೂಕು ಆಸ್ಪತ್ರೆಯಲ್ಲಿ ಬಡ ರೋಗಿಗಳಿಗೆ ಅಗತ್ಯ...