ಉಡುಪಿ | ತುರ್ತು ಪರಿಸ್ಥಿತಿಯ ಸಂದರ್ಭದಲ್ಲಿ ರೆಡ್‌ಕ್ರಾಸ್ ಸಂಸ್ಥೆಯ ಸೇವೆ ಅಭೂತಪೂರ್ವ – ಅಪರ ಜಿಲ್ಲಾಧಿಕಾರಿ ಅಬೀದ್ ಗದ್ಯಾಳ

Date:

ರಕ್ತದಾನ, ಪ್ರಥಮ ಚಿಕಿತ್ಸೆಯ ಜೊತೆಗೆ, ಪ್ರಕೃತಿ ವಿಕೋಪ, ಪ್ರವಾಹದಂತಹ ಸಂದರ್ಭದಲ್ಲಿ ರೆಡ್‌ಕ್ರಾಸ್ ಸಂಸ್ಥೆಯು ಅಭೂತಪೂರ್ವ ಸೇವೆಯನ್ನು ಸಲ್ಲಿಸುತ್ತಾ ಬರುತ್ತಿದೆ. ಸಂಕಷ್ಟಗಳಿಗೆ ಸ್ಪಂದಿಸುವುದೇ ರೆಡ್‌ಕ್ರಾಸ್ ಸಂಸ್ಥೆಯ ಮೂಲಉದ್ದೇಶವಾಗಿದೆ ಎಂದು ಅಪರ ಜಿಲ್ಲಾಧಿಕಾರಿ ಅಬೀದ್ ಗದ್ಯಾಳ ಹೇಳಿದರು.

- Advertisement -

ಅವರು ಇಂದು ನಗರದ ಬ್ರಹ್ಮಗಿರಿಯ ರೆಡ್ ಕ್ರಾಸ್‌ಭವನದ ಜೀನ್ ಹೆನ್ರಿ ಡ್ಯುನಾಂಟ್ ಸಭಾಂಗಣದಲ್ಲಿ ಜಿಲ್ಲಾ ಭಾರತೀಯ ರೆಡ್‌ಕ್ರಾಸ್ ಸೊಸೈಟಿ ವತಿಯಿಂದ ನಡೆದ ವಿಶ್ವ ರೆಡ್‌ಕ್ರಾಸ್ ದಿನಾಚರಣೆ ಕಾರ್ಯಕ್ರಮವನ್ನು ಉದ್ಘಾಟಿಸಿ, ಫಲಾನುಭವಿಗಳಿಗೆ ಸಲಕರಣೆಗಳನ್ನು ವಿತರಿಸಿ ಮಾತನಾಡುತ್ತಿದ್ದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಮಂಗಳೂರಿನಲ್ಲಿ ವಿಶೇಷ ಸಚಿವ ಸಂಪುಟ: ಕರಾವಳಿಗರ ನಿರೀಕ್ಷೆಗಳೇನು?

ಮಂಗಳೂರಿನಲ್ಲಿ ನಡೆಯಲಿರುವ ಈ ಐತಿಹಾಸಿಕ ಸಚಿವ ಸಂಪುಟ ಸಭೆಯು ಕೇವಲ ಆಡಳಿತಾತ್ಮಕ ಪ್ರಕ್ರಿಯೆಯಾಗುಳಿಯದೆ, ಕರಾವಳಿ ಭಾಗದ ದಶಕಗಳ ಬೇಡಿಕೆಗಳಿಗೆ ಜೀವ ನೀಡುವ ಪ್ರಮುಖ ವೇದಿಕೆಯಾಗುವ ನಿರೀಕ್ಷೆಯಿದೆ. ರಸ್ತೆ ಮತ್ತು ಹೆದ್ದಾರಿಗಳ ದುರಸ್ತಿ, ಮಂಗಳೂರು...

“ಪವಿತ್ರ ಸ್ಥಳಗಳ ಮೇಲೆ ದಾಳಿ” ಹೆಸರಿನಲ್ಲಿ ಸೌದಿ ಅರೇಬಿಯಾ...

ಇತ್ತೀಚಿನ ದಿನಗಳಲ್ಲಿ ಮಧ್ಯಪ್ರಾಚ್ಯದ ಭೌಗೋಳಿಕ ರಾಜಕೀಯವು ಅತ್ಯಂತ ಸಂಕೀರ್ಣ ತಿರುವುಗಳನ್ನು ಪಡೆದುಕೊಳ್ಳುತ್ತಿದೆ. ಇಸ್ರೇಲ್ ಮೇಲೆ ದಾಳಿ ನಡೆಸುವ ಉದ್ದೇಶದಿಂದ ಯೆಮೆನ್‌ನ ಹೌತಿ ಪಡೆಗಳು (ಅನ್ಸಾರ್ ಅಲ್ಲಾ) ಉಡಾವಣೆ ಮಾಡುತ್ತಿರುವ ಕ್ಷಿಪಣಿಗಳು ಹಾಗೂ ಡ್ರೋನ್‌ಗಳು...

ಹೂಥಿಗಳು ಯಾರು? ಅವರು ಮೆಕ್ಕಾವನ್ನೇ ಗುರಿಯಾಗಿಸಿದ್ದರೇ?

ಇರಾನ್‌ನ ‘ಪ್ರತಿರೋಧ ಅಕ್ಷ’ದ ಪ್ರಮುಖ ಭಾಗವಾಗಿರುವ ಹೂಥಿಗಳು ಈಗ ಇಸ್ರೇಲ್, ಸೌದಿ ಅರೇಬಿಯಾ ಮತ್ತು ಕೆಂಪು ಸಮುದ್ರದ ಭದ್ರತಾ ಸಮೀಕರಣಗಳ ಕೇಂದ್ರದಲ್ಲಿ ನಿಂತಿದ್ದಾರೆ. ಮೆಕ್ಕಾವನ್ನೇ ಗುರಿಯಾಗಿಸಿ ಡ್ರೋನ್ ಕಳುಹಿಸಲಾಗಿದೆ ಎಂಬ ಸೌದಿ ಆರೋಪದ...

ಜಗತ್ತಿನ ಶಾಂತಿ ಕಾಪಾಡುವಲ್ಲಿ ರೆಡ್‌ಕ್ರಾಸ್ ಕೊಡುಗೆ ಸದಾ ಸ್ಮರಣೀಯ. ರೆಡ್‌ಕ್ರಾಸ್ ಸಂಸ್ಥೆಯು ನ್ಯಾಯಯುತವಾಗಿ ಕಷ್ಟದಲ್ಲಿರುವವರಿಗೆ ಸಹಾಯ ಮಾಡುವ ಕೆಲಸ ಮಾಡುತ್ತಾ ಬಂದಿದ್ದೂ, ಇದು ನಿಜಕ್ಕೂ ಶ್ಲಾಘನೀಯ. ಶಾಂತಿ ಮತ್ತು ಮಾನವೀಯತೆಯ ಕಡೆಗೆ ಪ್ರತಿಯೊಬ್ಬರ ಒಲವಿರಬೇಕು. ಒಬ್ಬರ ಒಳ್ಳೆಯ ಯೋಚನೆಗಳಿಂದ ಸಮಾಜದಲ್ಲಿ ಅನೇಕ ಒಳ್ಳೆಯ ಬದಲಾವಣೆಯನ್ನು ತರಲು ಸಾಧ್ಯ ಎಂದ ಅವರು, ಸಮಾಜಮುಖಿ ಸೇವೆಗೆ ರೆಡ್‌ಕ್ರಾಸ್ ಸಂಸ್ಥೆ ಅತ್ಯುತ್ತಮ ವೇದಿಕೆಯಾಗಿದೆ ಎಂದರು.

ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿದ ರಾಜ್ಯ ರೆಡ್ ಕ್ರಾಸ್ ಸಂಸ್ಥೆಯ ಸಭಾಪತಿ ಬಸ್ರೂರು ರಾಜೀವ ಶೆಟ್ಟಿ, ಜಗತ್ತಿನಲ್ಲಿ ಮಾನವೀಯತೆಯ ಸೇವೆಯನ್ನು ಸಲ್ಲಿಸಿದ ಅತೀ ದೊಡ್ಡ ಸಂಸ್ಥೆ ಎಂದು ಹೆಸರು ಗಳಿಸಿರುವ ರೆಡ್‌ಕ್ರಾಸ್ ಸಂಸ್ಥೆಯು ಸಮಾಜಕ್ಕೆ ನಿಸ್ವಾರ್ಥ ಸೇವೆಯನ್ನು ನೀಡಿಕೊಂಡು ಬಂದಿದ್ದು, ಪ್ರತಿಯೊಬ್ಬರು ರೆಡ್‌ಕ್ರಾಸ್ ಸಂಸ್ಥೆಯಿಂದ ದೊರಕುವ ಸೇವೆ-ಸೌಲಭ್ಯಗಳ ಸದುಪಯೋಗವನ್ನು ಪಡೆದುಕೊಳ್ಳಬೇಕು ಎಂದರು.

ಡಾ. ಜಿ.ಶಂಕರ್ ಮಹಿಳಾ ಸರಕಾರಿ ಪ್ರಥಮ ದರ್ಜೆ ಕಾಲೇಜಿನ ರೆಡ್‌ಕ್ರಾಸ್ ಸಂಯೋಜಕಿ ಡಾ. ದಿವ್ಯ ಎಂ.ಎಸ್ ಭಾರತೀಯ ರೆಡ್‌ಕ್ರಾಸಿನ ಕೊಡುಗೆ ಬಗ್ಗೆ ಉಪನ್ಯಾಸ ನೀಡಿದರು.

ಈ ಸಂದರ್ಭದಲ್ಲಿ ಸಮಾಜ ಸೇವೆಯಲ್ಲಿ ತೊಡಗಿಸಿ ಕೊಂಡಿರುವ ನಿತ್ಯಾನಂದ ಒಳಕಾಡು, ನಿರುಪಮಾ ಪ್ರಸಾದ್ ಮತ್ತು ಭಾರತಿಯವರನ್ನು ಸನ್ಮಾನಿಸಲಾಯಿತು.

15 ಫಲಾನುಭವಿಗಳಿಗೆ ಗಾಲಿಕುರ್ಚಿ, 10 ಫಲಾನುಭವಿಗಳಿಗೆ ಶ್ರವಣಸಾಧನ, 10 ಫಲಾನುಭವಿಗಳಿಗೆ ಗೃಹಪಯೋಗಿ ವಸ್ತುಗಳನ್ನು ಹಾಗೂ ವಿವಿಧ ಶಾಲಾ ಕಾಲೇಜುಗಳಿಗೆ ಪ್ರಥಮ ಚಿಕಿತ್ಸಾ ಕಿಟ್ಟನ್ನು ವಿತರಿಸಲಾಯಿತು.

ಕಾರ್ಯಕ್ರಮದಲ್ಲಿ ಜಿಲ್ಲಾ ರೆಡ್‌ಕ್ರಾಸ್ ಸಂಸ್ಥೆಯ ಉಪಸಭಾಪತಿ ಅಶೋಕ್ ಕುಮಾರ್ ವೈ.ಜಿ, ಆಡಳಿತ ಮಂಡಳಿಯ ಸದಸ್ಯ ಚಂದ್ರಶೇಖರ್, ನಿಕಟ ಪೂರ್ವ ಕಾರ್ಯದರ್ಶಿ ಬಾಲಕೃಷ್ಣ ಶೆಟ್ಟಿ, ವಿವಿಧ ಕಾಲೇಜಿನ ವಿದ್ಯಾರ್ಥಿಗಳು, ಫಲಾನುಭವಿಗಳು ಹಾಗೂ ಮತ್ತಿತರರು ಉಪಸ್ಥಿತರಿದ್ದರು.

ಭಾರತೀಯ ರೆಡ್‌ಕ್ರಾಸ್ ಸಂಸ್ಥೆಯ ಸದಸ್ಯ ಕಾರ್ಯದರ್ಶಿ ಡಾ. ಗಣನಾಥ ಶೆಟ್ಟಿ ಎಕ್ಕಾರು ಸ್ವಾಗತಿಸಿ, ನಿರೂಪಿಸಿ, ಗೌರವ ಖಜಾಂಚಿ ರಮಾದೇವಿ ವಂದಿಸಿದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ನೆಲಮಂಗಲ | ಶಾಲಾ ಆವರಣದಲ್ಲಿ ಚೋಳರ ಕಾಲದ ಪ್ರಾಚೀನ ಶಾಸನ ಪತ್ತೆ

ನೆಲಮಂಗಲ ಬಳಿಯ ಮಂಡಿಗೆರೆ ಗ್ರಾಮದ ಸರ್ಕಾರಿ ಶಾಲೆಯಲ್ಲಿ ಕ್ರಿ.ಶ 1050ರ ಪ್ರಾಚೀನ...

ಕೋಲಾರ | ಹಾಲು ಉತ್ಪಾದಕರಿಗೆ ಕೋಮುಲ್, ಕೆಎಂಎಫ್ ಸೌಲಭ್ಯ ಸದುಪಯೋಗಪಡಿಸಿಕೊಳ್ಳಿ: ಚಂಚಿಮಲೆ ರಮೇಶ್

ತಾಲೂಕಿನ ವೇಮಗಲ್ ಕುರಗಲ್ ಪಟ್ಟಣ ಪಂಚಾಯಿತಿ ವ್ಯಾಪ್ತಿಯ 10ನೇ ವಾರ್ಡ್‌ನ ಹಾರ್ಜೇನಹಳ್ಳಿ...

ಕೋಲಾರ | ಬಿಸಿಯೂಟ ಮಾತೆಯರಿಗೆ ವೇತನ ವಿಲ್ಲದೆ ಪರದಾಟ ; ಅಧಿಕಾರಿಗಳ ವಿರುದ್ಧ ಕಲ್ವಮಂಜಲಿರಾಮುಶಿವಣ್ಣ ಆಕ್ರೋಶ

ಸರ್ಕಾರಿ ಹಾಗೂ ಅನುದಾನಿತ ಶಾಲೆಗಳಲ್ಲಿ ಕರ್ತವ್ಯ ನಿರ್ವಹಿಸುತ್ತಿರುವ ಬಿಸಿಯೂಟ ಮಾತೆಯರಿಗೆ ಕಳೆದ...

ಬಾಗೇಪಲ್ಲಿ ಮದ್ಯದಂಗಡಿ ಕೊಲೆ ಪ್ರಕರಣದ ಆರೋಪಿ ಬಂಧನ

ತಾಲ್ಲೂಕಿನ ಕೊಂಡರೆಡ್ಡಿಪಲ್ಲಿ ಗ್ರಾಮದ ಬಳಿಯ ಮದ್ಯ ಮಾರಾಟ ಮಳಿಗೆಯಲ್ಲಿ ಸೆ.5ರಂದು ನಡೆದ...