ಕಲಬುರಗಿ | ಮತದಾರರ ಪಟ್ಟಿಯಲ್ಲಿ ಹೆಸರು ಇಲ್ಲದವರು ನೋಂದಾಯಿಸಿ : ಅಪರ ಜಿಲ್ಲಾಧಿಕಾರಿ ರಾಯಪ್ಪ ಹುಣಸಗಿ

Date:

Advertisements

ಮತದಾರರ ಪಟ್ಟಿಯಲ್ಲಿ ಹೆಸರು ಇಲ್ಲದವರು ನೋಂದಾಯಿಸಿಕೊಳ್ಳಬೇಕು ಎಂದು ಅಪರ ಜಿಲ್ಲಾಧಿಕಾರಿ ರಾಯಪ್ಪ ಹುಣಸಗಿ ಹೇಳಿದರು.

ನಗರದ ಗೋದುತಾಯಿ ದೊಡ್ಡಪ್ಪ ಅಪ್ಪ ಕಲಾ, ವಾಣಿಜ್ಯ ಮತ್ತು ವಿಜ್ಞಾನ ಪದವಿ ಮಹಿಳಾ ಮಹಾವಿದ್ಯಾಲಯದಲ್ಲಿ ಶನಿವಾರ ಜಿಲ್ಲಾಡಳಿತ ಹಾಗೂ ಕಲಬುರಗಿ ಮಹಾನಗರ ಪಾಲಿಕೆ ಸಂಯುಕ್ತಾಶ್ರಯದಲ್ಲಿ ಮತದಾರರ ವಿಶೇಷ ನೋಂದಣಿ ಅಭಿಯಾನ ಉದ್ಘಾಟಿಸಿ ಮಾತನಾಡಿದರು.

“ಹದಿನೆಂಟು ವರ್ಷ ಮೇಲ್ಪಟ್ಟ ಎಲ್ಲಾ ವಿದ್ಯಾರ್ಥಿಗಳು ತಮ್ಮ ಹೆಸರನ್ನು ನೊಂದಾಯಿಸಿಕೊಳ್ಳಬೇಕು. ಚುನಾವಣಾ ಆಯೋಗವು ಪಾರದರ್ಶಕ ಚುನಾವಣೆ ನಡೆಸುತ್ತಿದೆ. ಈ ಮೂಲಕ ಮುಂಬರುವ ಚುನಾವಣೆಗಳಲ್ಲಿ ತಾವು ಉತ್ತಮ ಜನಪ್ರತಿನಿಧಿಯನ್ನು ಆಯ್ಕೆ ಮಾಡುವ ಹಕ್ಕು ಪಡೆದುಕೊಳ್ಳಬೇಕು” ಎಂದು ಹೇಳಿದರು.

Advertisements

ಮಹಾನಗರ ಪಾಲಿಕೆಯ ಎಸ್ಟೇಟ್ ಅಧಿಕಾರಿ ಸಾವಿತ್ರಿ ಸಲಗರ ಮಾತನಾಡಿ, “ಯುವಕರೇ ದೇಶದ ಆಸ್ತಿ, ಮತದಾನ ಪ್ರತಿಯೊಬ್ಬರ ಜನ್ಮಸಿದ್ಧ ಹಕ್ಕಾಗಿದೆ. ಮತದಾರರ ಪಟ್ಟಿಯಲ್ಲಿ ಹೆಸರನ್ನು ನೋದಾಯಿಸಿಕೊಂಡು ತಮ್ಮ ಮತದಾನದ ಹಕ್ಕನ್ನು ಚಲಾಯಿಸಬೇಕು. ಮತದಾನ ಮಾಡುವುದಕ್ಕೆ ಅಸಡ್ಡೆ ಮಾಡಬಾರದು” ಎಂದು ಸಲಹೆ ನೀಡಿದರು.

ಚುನಾವಣಾ ತರಬೇತಿದಾರ ಶಶಿಶೇಖರ ರೆಡ್ಡಿ ಮತದಾರರ ಪಟ್ಟಿಯಲ್ಲಿ ಹೆಸರು ನೋಂದಾಯಿಸಿಕೊಳ್ಳುವ ಕುರಿತು ಉಪನ್ಯಾಸ ನೀಡಿದರು.

ಈ ಸುದ್ದಿ ಓದಿದ್ದೀರಾ? ಬೀದರ್‌ | ಸಾಲದ ಹೊರೆ ತಾಳಲಾಗದೆ ರೈತ ಆತ್ಮಹತ್ಯೆ

ಕಾರ್ಯಕ್ರಮದಲ್ಲಿ ಮಹಾನಗರ ಪಾಲಿಕೆ ಅಧಿಕಾರಿ ಕೆ.ಎಸ್.ಪಾಟೀಲ, ಮಹಾವಿದ್ಯಾಲಯದ ಪ್ರಾಚಾರ್ಯೆ ಜಾನಕಿ ಹೊಸೂರ, ಐಕ್ಯೂಎಸಿ ಸಂಯೋಜಕಿ ಡಾ.ಪುಟ್ಟಮಣಿ ದೇವಿದಾಸ ಸೇರಿದಂತೆ ಮಹಾವಿದ್ಯಾಲಯದ ಶಿಕ್ಷಕರು ಮತ್ತು ವಿದ್ಯಾರ್ಥಿನಿಯರು ಉಪಸ್ಥಿತರಿದ್ದರು. ಕೃಪಾಸಾಗರ ಗೊಬ್ಬುರ ಸ್ವಾಗತಿಸಿದರು. ಸುಶ್ಮೀತಾ, ಕನ್ಯಾಕುಮಾರಿ ಪ್ರಾರ್ಥಿಸಿದರು.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಚಿಕ್ಕಮಗಳೂರು l ಸಮಾಜದಲ್ಲಿ ಜಾತಿ,ಧರ್ಮಗಳ ಕಂದಕದ ಗೋಡೆಗಳನ್ನು ತೊಡೆದು ಹಾಕುವುದೇ ನಿಜವಾದ ಸಾಹಿತ್ಯ; ಸಾಹಿತಿ ಮನಸುಳಿ ಮೋಹನ್‌

ಚಿಕ್ಕಮಗಳೂರು ಜಿಲ್ಲೆ ತರೀಕೆರೆ ತಾಲೂಕಿನಲ್ಲಿ ಕನ್ನಡ ಸಾಹಿತ್ಯ ಪರಿಷತ್ತು ತಾಲ್ಲೂಕು ಸಮಿತಿ...

ಉಡುಪಿ | ಅಡಿಷನಲ್ ಎಸ್‌ಪಿ ಕಾರಿಗೆ ಡಿಕ್ಕಿ ಹೊಡೆದು ಕರ್ತವ್ಯಕ್ಕೆ ಅಡ್ಡಿ ಆರೋಪ; ಮೂವರ ಬಂಧನ

ಮಹೇಶ್ ಶೆಟ್ಟಿ ತಿಮರೋಡಿ ಅವರನ್ನು ಬಂಧಿಸಿ ಕರೆದೊಯ್ಯುವಾಗ ಪೊಲೀಸರ ಕರ್ತವ್ಯಕ್ಕೆ ಅಡ್ಡಿಪಡಿಸಿದ...

ಚಿಕ್ಕಮಗಳೂರು l ಕಾಫಿ ನಾಡಿನಲ್ಲಿ ಕಾಡಾನೆ ಹಾವಳಿ; ರೈತರ ಬೆಳೆ ಹಾನಿ

ಕಾಫಿ ನಾಡಿನಲ್ಲಿ ಕಾಡಾನೆ ಎಲ್ಲೆಡೆ ಓಡಾಡುತ್ತಿರುವ ದೃಶ್ಯ ಸಾರ್ವಜನಿಕರಿಗೆ ಹಾಗೂ ಸ್ಥಳೀಯ...

ಬೀದರ್‌ | ಬೆಳೆ ಹಾನಿ : ಹೆಕ್ಟೇರ್‌ಗೆ ₹50 ಸಾವಿರ ಪರಿಹಾರಕ್ಕೆ ಶಾಸಕ ಶೈಲೇಂದ್ರ ಬೆಲ್ದಾಳೆ ಒತ್ತಾಯ

ಬೀದರ್ ಜಿಲ್ಲೆಯಲ್ಲಿ ಅತಿವೃಷ್ಟಿಯಿಂದ ವ್ಯಾಪಕ ಬೆಳೆ ಹಾನಿ, ಸಾರ್ವಜನಿಕ ಆಸ್ತಿಪಾಸ್ತಿ ನಷ್ಟವಾಗಿದೆ....

Download Eedina App Android / iOS

X