ಮಂಗಳೂರು | ಪೆಟ್ ಶಾಪ್‍ಗಳ ನೋಂದಣಿ ಕಡ್ಡಾಯ: ಡಿಸಿ ದರ್ಶನ್‌ ಸೂಚನೆ

Date:

ಪ್ರಾಣಿ ಹಿಂಸೆ ತಡೆಗಟ್ಟುವ ನಿಟ್ಟಿನಲ್ಲಿ ಜಿಲ್ಲೆಯಲ್ಲಿ ಕಾರ್ಯನಿರ್ವಹಿಸುತ್ತಿರುವ ಮುದ್ದು ಪ್ರಾಣಿಗಳ ಮಾರಾಟ ಮಳಿಗೆ ಕಡ್ಡಾಯವಾಗಿ ಪ್ರಾಣಿಗಳ ಮೇಲಿನ ಕ್ರೌರ್ಯ ತಡೆಗಟ್ಟುವಿಕೆ ಸೊಸೈಟಿಯಲ್ಲಿ ನೋಂದಣಿ ಮಾಡಿಕೊಳ್ಳಬೇಕು ಎಂದು ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ದರ್ಶನ್ ಹೆಚ್ ವಿ ಸೂಚಿಸಿದರು.

- Advertisement -

ದಕ್ಷಿಣ ಕನ್ನಡ ಜಿಲ್ಲಾ ಪ್ರಾಣಿ ದಯಾ ಸಂಘದ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, “ಎಸ್.ಪಿ.ಸಿ.ಎ ನೋಂದಣಿ ಪಡೆಯದೆ ಕಾರ್ಯ ನಿರ್ವಹಿಸುತ್ತಿರುವ ಪೆಟ್ ಶಾಪ್‍ಗಳ ಮಾಲೀಕರಿಗೆ ಕಾಲಮಿತಿ ನಿಗದಿಪಡಿಸಿ, ನಿಗದಿತ ಕಾಲಮಿತಿಯೊಳಗೆ ನೋಂದಣಿ ಪಡೆಯದ ಮಾಲೀಕರ ವಿರುದ್ಧ ಅಗತ್ಯ ಕಾನೂನು ಕ್ರಮ ಕೈಗೊಳ್ಳಬೇಕು. ಪ್ರಾಣಿಗಳ ರಕ್ಷಣೆ ಮಹತ್ವದ ಕಾರ್ಯವಾಗಿದ್ದು, ಜಿಲ್ಲೆಯಲ್ಲಿ ಪ್ರಾಣಿಗಳ ಮೇಲಾಗುವ ದೌರ್ಜನ್ಯವನ್ನು ತಡೆಗಟ್ಟಿ ಅವುಗಳನ್ನು ರಕ್ಷಿಸಬೇಕು. ಪ್ರಾಣಿಗಳ ಮೇಲೆ ಕ್ರೌರ್ಯ ನಡೆಸುವುದು ಕಂಡು ಬಂದರೆ ಅಂತವರ ವಿರುದ್ಧ ಸೂಕ್ತ ಕ್ರಮ ಕೈಗೊಳ್ಳಬೇಕು” ಎಂದು ಅಧಿಕಾರಿಗಳಿಗೆ ಸೂಚಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಮೋದಿ ಆಡಳಿತದಲ್ಲಿ ಮಾಹಿತಿ ಹಕ್ಕು ಕಾಯ್ದೆಯ ‘ಸ್ಥಿತಿ’ ಹೇಗಿದೆ?...

ಯಾವುದೇ ಸರ್ಕಾರ ಆಡಳಿತದಲ್ಲಿರಲಿ ಪ್ರಜಾಸತ್ತಾತ್ಮಕ ವ್ಯವಸ್ಥೆಯನ್ನು ಕಾಪಾಡಬೇಕಾದ ಸಂಸ್ಥೆಗಳ ಸ್ವಾಯತ್ತತೆ ಉಳಿಯಬೇಕು. ಅವು ಪಾರದರ್ಶಕವಾಗಿರಬೇಕು. ಪ್ರಜಾಸತ್ತೆಯ ಕಾರ್ಯವೈಖರಿಯನ್ನು ಕುರಿತಂತೆ ಮುಕ್ತ ಚರ್ಚೆ ನಡೆಯುತ್ತಿರಬೇಕು. ಇದು ಸಕ್ರಿಯ, ಅರ್ಥಪೂರ್ಣ ಪ್ರಜಾಸತ್ತೆಯ ಕನಿಷ್ಠ ಅವಶ್ಯಕತೆ. ಹಾಗಾಗಿ...

ಬಂಗಾಳ ವಿಭಜನೆ | ವಿಭಜನೆಯ ವಿಷಬೀಜದಿಂದ ಒಗ್ಗಟ್ಟಿನ ಜ್ಯೋತಿ...

ಬ್ರಿಟಿಷರ 'ಒಡೆದು ಆಳುವ ನೀತಿ'ಯ ಭಾಗವಾಗಿ 1905ರ ಅಕ್ಟೋಬರ್‌ನಲ್ಲಿ ಜಾರಿಗೆ ಬಂದ ಬಂಗಾಳ ವಿಭಜನೆಯು ಭಾರತೀಯರ ರಾಷ್ಟ್ರೀಯತೆಯನ್ನು ಒಡೆಯುವ ಕುತಂತ್ರವಾಗಿತ್ತು. ಇದಕ್ಕೆ ಪ್ರತಿಯಾಗಿ ಭಾರತೀಯರು 'ರಾಷ್ಟ್ರೀಯ ಶೋಕ ದಿನ' ಆಚರಿಸಿ, ಪರಸ್ಪರ ರಾಖಿ...

ನಟ ಇಮ್ರಾನ್ ಖಾನ್ ಪ್ರತಿಭಟಿಸಿದರೆ ಗಡಿಪಾರು; ಟ್ರಂಪ್ ಪರ...

ಕಾನೂನು ಮತ್ತು ರಾಜತಾಂತ್ರಿಕ ನಿಯಮಗಳು ಎಲ್ಲರಿಗೂ ಒಂದೇ ಆಗಿರಬೇಕು ಹೊರತು ಪ್ರಧಾನಿ ಮೋದಿಯವರ ರಾಜಕೀಯ ಅನುಕೂಲಕ್ಕೆ ತಕ್ಕಂತೆ ಬದಲಾಗಬಾರದು. ವಿದೇಶಿ ಪ್ರಜೆಯೊಬ್ಬ ಭಾರತದ ನೆಲದಲ್ಲಿ ಪ್ರತಿಭಟನೆಯಲ್ಲಿ ಪಾಲ್ಗೊಳ್ಳುವುದು ತಪ್ಪು ಎನ್ನುವುದಾದರೆ, ಭಾರತದ ಪ್ರಧಾನಿಯೊಬ್ಬರು...

ಜಿಲ್ಲೆಯ ವ್ಯಾಪ್ತಿಯಲ್ಲಿರುವ ನಿರಾಶ್ರಿತ ಪ್ರಾಣಿಗಳಿಗೆ ಅಗತ್ಯ ಶುಶ್ರೂಷೆ ಕೊಡುವ ನಿಟ್ಟಿನಲ್ಲಿ ಮಂಗಳೂರು ತಾಲೂಕಿನ ಬೊಂಡಂತಿಲ ಗ್ರಾಮದಲ್ಲಿ ಪ್ರಾಣಿ ಮಿತ್ರ ಆಸ್ಪತ್ರೆ ತೆರೆಯುವ ಯೋಜನೆ ಅನುಷ್ಠಾನದ ಕುರಿತು ಹಾಗೂ ರಸ್ತೆ ಅಪಘಾತಗಳಲ್ಲಿ ಇತರೆ ಕಾರಣಗಳಿಂದ ಸತ್ತ ಪ್ರಾಣಿಗಳನ್ನು ಯಾರೂ ಸಹ ಮುಟ್ಟುವುದಿಲ್ಲ. ಅವುಗಳ ಮೃತದೇಹ ಅಲ್ಲಿಯೇ ಕೊಳೆಯುತ್ತಿರುತ್ತವೆ. ಪ್ರಾಣಿಗಳ ಅಂತ್ಯಸಂಸ್ಕಾರಕ್ಕೆ ಸ್ಮಶಾನ ಸೌಲಭ್ಯದ ಬಗ್ಗೆಯೂ ಸಭೆಯಲ್ಲಿ ಚರ್ಚಿಸಲಾಯಿತು.

ಇದನ್ನೂ ಓದಿ: ಮಂಗಳೂರು | ಇರಾನ್-ಇಸ್ರೇಲ್ ಸಂಘರ್ಷ ಹಿನ್ನೆಲೆ: ಹಲವು ವಿಮಾನಗಳ ಹಾರಾಟ ರದ್ದು

ಈ ಸಂದರ್ಭದಲ್ಲಿ ಪಶು ಪಾಲನಾ ಮತ್ತು ಪಶು ವೈದ್ಯಕೀಯ ಸೇವಾ ಇಲಾಖೆ ಉಪನಿರ್ದೇಶಕ ಅರುಣ್ ಕುಮಾರ್ ಶೆಟ್ಟಿ ಮಾತನಾಡಿ, ಮೂಕಪ್ರಾಣಿಗಳ ಬಗ್ಗೆ ಅನುಕಂಪ ಮತ್ತು ಮಾನವೀಯತೆಯ ಹಿನ್ನೆಲೆ ಚಿಕಿತ್ಸೆ ನೀಡುವ ಬಗ್ಗೆ ಸಾರ್ವಜನಿಕರಿಗೆ ಮತ್ತು ಶಾಲಾ ವಿದ್ಯಾರ್ಥಿಗಳಿಗೆ ಅರಿವು ಕಾರ್ಯಕ್ರಮದ ಮೂಲಕ ಮಾಹಿತಿ ನೀಡಲಾಗುತ್ತಿದೆ. ರಾಜ್ಯ ಮತ್ತು ಜಿಲ್ಲಾ ಮಟ್ಟದ ಸಂಬಂಧಪಟ್ಟ ಇಲಾಖೆಗಳೊಂದಿಗೆ ಕೈಜೋಡಿಸಿ ಪ್ರಾಣಿ ಕಲ್ಯಾಣ ಮಂಡಳಿಯಿಂದ ಸ್ಥಾಪಿಸಲ್ಪಟ್ಟ ಪ್ರಾಣಿ ಕಲ್ಯಾಣ ಕಾನೂನು ಜಾರಿಯ ಬಗ್ಗೆ ಅರಿವು ಕಾರ್ಯಕ್ರಮ ನಡೆಸಲಾಗುತ್ತಿದೆ ಎಂದು ಮಾಹಿತಿ ನೀಡಿದರು. ಸಭೆಯಲ್ಲಿ ಜಿಲ್ಲಾ ಪೆÇಲೀಸ್ ವರಿಷ್ಠಾಧಿಕಾರಿ ಡಾ.ಅರುಣ್ ಕೆ, ಎಸಿಪಿ ಗೀತಾ ಕುಲಕರ್ಣಿ, ಮಹಾನಗರಪಾಲಿಕೆ ಆಯುಕ್ತ ರವಿಚಂದ್ರ ನಾಯಕ್, ಸಮಿತಿಯ ಸದಸ್ಯೆ ಸುಮ ಆರ್ ನಾಯಕ್ ಮತ್ತಿತರರು ಉಪಸ್ಥಿತರಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಉಡುಪಿ | ಕಾರ್ಮಿಕರು ಹಕ್ಕು ಮತ್ತು ಸೌಲಭ್ಯಗಳಿಂದ ವಂಚಿತರಾಗದಂತೆ ನೋಡಿಕೊಳ್ಳಿ: ಟಿ.ಎಂ. ಶಾಹಿದ್ ತೆಕ್ಕಿಲ್

ಕಾರ್ಮಿಕರ ಹಿತಾಸಕ್ತಿಯನ್ನು ಕಾಪಾಡುವುದರೊಂದಿಗೆ ಸರ್ಕಾರದ ಕಲ್ಯಾಣ ಕಾರ್ಯಕ್ರಮಗಳು ಅರ್ಹ ಫಲಾನುಭವಿಗಳಿಗೆ ತಲುಪುವಂತೆ...

ಬಾಗೇಪಲ್ಲಿಯಲ್ಲಿ ರಸ್ತೆ ಅಪಘಾತ:ರೈತ ನಂಜಪ್ಪ ಸಾವು

ಕೆಎಸ್‌ಆರ್‌ಟಿಸಿ ಬಸ್ ಡಿಕ್ಕಿ ಹೊಡೆದು ದ್ವಿಚಕ್ರ ವಾಹನದಲ್ಲಿ ಹೊಲಕ್ಕೆ ತೆರಳುತ್ತಿದ್ದ ನಡಂಪಲ್ಲಿ...

ಮಂಗಳೂರು | ಕೊಳ್ತಮಜಲು ರಹ್ಮಾನ್ ಹತ್ಯೆ ಪ್ರಕರಣ: ಆರೋಪಿಗಳ ಜಾಮೀನು ರದ್ದುಪಡಿಸಿದ ಸುಪ್ರೀಂ ಕೋರ್ಟ್

ಕೊಳ್ತಮಜಲು ರಹ್ಮಾನ್ ಹತ್ಯೆ ಪ್ರಕರಣದಲ್ಲಿ ಆರೋಪಿಗಳಿಗೆ ಇತ್ತೀಚೆಗೆ ನ್ಯಾಯಾಲಯ ಜಾಮೀನು ನೀಡಿತ್ತು....

ಕೋಲಾರ | ಚೈನಾ ಶಾಂಘೈನಲ್ಲಿ ಕನ್ನಡದ ಮೊದಲ ಜಾನಪದ ಕಾರ್ಯಕ್ರಮ: ಗೋ.ನಾ. ಸ್ವಾಮಿ ಭಾಗಿ

ಚೈನಾ ದೇಶದ ಶಾಂಘೈನಲ್ಲಿ ಕನ್ನಡಿಗರ ಸಂಘದ ವತಿಯಿಂದ ಆಯೋಜಿಸಿದ್ದ ಕನ್ನಡದ ಮೊದಲ...