ಮಳೆಗಾಲ | ಸಂಭವನೀಯ ಹಾನಿಗಳ ಬಗ್ಗೆ ನಿರ್ಲಕ್ಷ್ಯ ಬೇಡ: ಅಧಿಕಾರಿಗಳಿಗೆ ಸಚಿವ ದಿನೇಶ್‌ ಗುಂಡೂರಾವ್‌ ಸೂಚನೆ

Date:

ಮಳೆಗಾಲದಲ್ಲಿ ಸಂಭವಿಸುವ ಯಾವುದೇ ಹಾನಿ, ಅನಾಹುತಗಳ ಬಗ್ಗೆಅಧಿಕಾರಿಗಳು ನಿರ್ಲಕ್ಷ್ಯ ವಹಿಸಬಾರದು. ನಿರ್ಲಕ್ಷ್ಯ ವಹಿಸಿದರೇ ಅಂತಹ ಅಧಿಕಾರಗಳ ವಿರುದ್ಧ ಕಠಿಣ ಕ್ರಮಕೈಗೊಳ್ಳಲಾಗುವುದು ಎಂದು ದ.ಕ.ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್ ಹೇಳಿದರು.

- Advertisement -

ಬುಧವಾರ ಮಂಗಳೂರಿನ ಪಡೀಲ್‌ನಲ್ಲಿರುವ ದ.ಕ.ಜಿಲ್ಲಾಧಿಕಾರಿ ಕಚೇರಿ ಪ್ರಜಾ ಸೌಧದ ಸಭಾಂಗಣದಲ್ಲಿ ನಡೆದ ಜಿಲ್ಲಾ ವಿಪತ್ತು ನಿರ್ವಹಣಾ ಪ್ರಾಧಿಕಾರದ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, “ಮಳೆಹಾನಿ ಸಂತ್ರಸ್ತರಿಗೆ ಪರಿಹಾರ ಧನ ನೀಡುವುದಕ್ಕೆ ಹಿಂದೇಟು ಹಾಕಬಾರದು. ಜಿಲ್ಲೆಯಲ್ಲಿ ಕಳೆದ ಬಾರಿ ಎಲ್ಲೆಲ್ಲಿ ಭೂಕುಸಿತ, ಗುಡ್ಡ ಜರಿತದಂತಹ ಅನಾಹುತ ಸಂಭವಿಸಿದೆಯೋ ಈ ಭಾಗಳಲ್ಲಿ ಮುಂಜಾಗ್ರತೆ ವಹಿಸಲು ಅಧಿಕಾರಿಗಳು ಕ್ರಮ ಕೈಗೊಳ್ಳಬೇಕಿತ್ತು. ಅನಾಹುತ ಸಂಭವಿಸಿದ ಬಳಿಕ ಎಚ್ಚೆತ್ತುಕೊಳ್ಳುವ ಬದಲು ಮುಂಚೆಯೇ ಸೂಕ್ತ ಕ್ರಮ ಕೈಗೊಳ್ಳುವುದರಿಂದ ಅವಘಡ ತಪ್ಪಿಸಬಹುದು” ಎಂದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಮೋದಿ ಆಡಳಿತದಲ್ಲಿ ಮಾಹಿತಿ ಹಕ್ಕು ಕಾಯ್ದೆಯ ‘ಸ್ಥಿತಿ’ ಹೇಗಿದೆ?...

ಯಾವುದೇ ಸರ್ಕಾರ ಆಡಳಿತದಲ್ಲಿರಲಿ ಪ್ರಜಾಸತ್ತಾತ್ಮಕ ವ್ಯವಸ್ಥೆಯನ್ನು ಕಾಪಾಡಬೇಕಾದ ಸಂಸ್ಥೆಗಳ ಸ್ವಾಯತ್ತತೆ ಉಳಿಯಬೇಕು. ಅವು ಪಾರದರ್ಶಕವಾಗಿರಬೇಕು. ಪ್ರಜಾಸತ್ತೆಯ ಕಾರ್ಯವೈಖರಿಯನ್ನು ಕುರಿತಂತೆ ಮುಕ್ತ ಚರ್ಚೆ ನಡೆಯುತ್ತಿರಬೇಕು. ಇದು ಸಕ್ರಿಯ, ಅರ್ಥಪೂರ್ಣ ಪ್ರಜಾಸತ್ತೆಯ ಕನಿಷ್ಠ ಅವಶ್ಯಕತೆ. ಹಾಗಾಗಿ...

ಬಂಗಾಳ ವಿಭಜನೆ | ವಿಭಜನೆಯ ವಿಷಬೀಜದಿಂದ ಒಗ್ಗಟ್ಟಿನ ಜ್ಯೋತಿ...

ಬ್ರಿಟಿಷರ 'ಒಡೆದು ಆಳುವ ನೀತಿ'ಯ ಭಾಗವಾಗಿ 1905ರ ಅಕ್ಟೋಬರ್‌ನಲ್ಲಿ ಜಾರಿಗೆ ಬಂದ ಬಂಗಾಳ ವಿಭಜನೆಯು ಭಾರತೀಯರ ರಾಷ್ಟ್ರೀಯತೆಯನ್ನು ಒಡೆಯುವ ಕುತಂತ್ರವಾಗಿತ್ತು. ಇದಕ್ಕೆ ಪ್ರತಿಯಾಗಿ ಭಾರತೀಯರು 'ರಾಷ್ಟ್ರೀಯ ಶೋಕ ದಿನ' ಆಚರಿಸಿ, ಪರಸ್ಪರ ರಾಖಿ...

ನಟ ಇಮ್ರಾನ್ ಖಾನ್ ಪ್ರತಿಭಟಿಸಿದರೆ ಗಡಿಪಾರು; ಟ್ರಂಪ್ ಪರ...

ಕಾನೂನು ಮತ್ತು ರಾಜತಾಂತ್ರಿಕ ನಿಯಮಗಳು ಎಲ್ಲರಿಗೂ ಒಂದೇ ಆಗಿರಬೇಕು ಹೊರತು ಪ್ರಧಾನಿ ಮೋದಿಯವರ ರಾಜಕೀಯ ಅನುಕೂಲಕ್ಕೆ ತಕ್ಕಂತೆ ಬದಲಾಗಬಾರದು. ವಿದೇಶಿ ಪ್ರಜೆಯೊಬ್ಬ ಭಾರತದ ನೆಲದಲ್ಲಿ ಪ್ರತಿಭಟನೆಯಲ್ಲಿ ಪಾಲ್ಗೊಳ್ಳುವುದು ತಪ್ಪು ಎನ್ನುವುದಾದರೆ, ಭಾರತದ ಪ್ರಧಾನಿಯೊಬ್ಬರು...

ಜಿಲ್ಲಾ ಮತ್ತು ತಾಲ್ಲೂಕು ನಿಯಂತ್ರಣ ಕೊಠಡಿಗಳು ದಿನದ 24 ಗಂಟೆಯೂ ಸೇವೆಗೆ ಸಿಗುವಂತೆ ನೋಡಿಕೊಳ್ಳಬೇಕು. ಕೆತ್ತಿಕ್ಕಲ್ ಸಹಿತ ಅಪಾಯಕಾರಿ ಭೂಪ್ರದೇಶ, ಗುಡ್ಡ ಪ್ರದೇಶಗಳ ಬಗ್ಗೆ ವಿಶೇಷ ನಿಗಾ ವಹಿಸುವಂತೆ ಸೂಚಿಸಿದರು.

ಜಿಲ್ಲೆಯ ಹಲವೆಡೆ ಅಪಾಯದ ಅಂಚಿನಲ್ಲಿರುವ ಹಳೆಯ ಸೇತುವೆಗಳನ್ನು ತಜ್ಞರಿಂದ ಪರಿಶೀಲಿಸಿ, ವರದಿ ಬಂದ ಬಳಿಕ ಸೇತುವೆಗಳನ್ನು ಸಂಚಾರಕ್ಕೆ ಅನುವು ಮಾಡಿಕೊಂಡಬೇಕು ಹೇಳಿದರು.

ಇದನ್ನೂ ಓದಿ: ಮಂಗಳೂರು | ಡಿವೈಡರ್‌ಗೆ ಕಾರು ಡಿಕ್ಕಿ; NSUI ಮುಖಂಡ ಸೇರಿ ಇಬ್ಬರು ಸಾವು

ಈ ಸಂದರ್ಭದಲ್ಲಿ ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್, ದ.ಕ.ಜಿಪಂ ಸಿಇಒ ಡಾ. ಆನಂದ್, ಪೊಲೀಸ್ ಆಯುಕ್ತ ಸುಧೀರ್ ಕುಮಾರ್ ರೆಡ್ಡಿ, ಎಸ್ಪಿ ಡಾ. ಅರುಣ್, ಅಪರ ಜಿಲ್ಲಾಧಿಕಾರಿ ಡಾ. ಸಂತೋಷ್ ಕುಮಾರ್ ಉಪಸ್ಥಿತರಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಉಡುಪಿ | ಕಾರ್ಮಿಕರು ಹಕ್ಕು ಮತ್ತು ಸೌಲಭ್ಯಗಳಿಂದ ವಂಚಿತರಾಗದಂತೆ ನೋಡಿಕೊಳ್ಳಿ: ಟಿ.ಎಂ. ಶಾಹಿದ್ ತೆಕ್ಕಿಲ್

ಕಾರ್ಮಿಕರ ಹಿತಾಸಕ್ತಿಯನ್ನು ಕಾಪಾಡುವುದರೊಂದಿಗೆ ಸರ್ಕಾರದ ಕಲ್ಯಾಣ ಕಾರ್ಯಕ್ರಮಗಳು ಅರ್ಹ ಫಲಾನುಭವಿಗಳಿಗೆ ತಲುಪುವಂತೆ...

ಬಾಗೇಪಲ್ಲಿಯಲ್ಲಿ ರಸ್ತೆ ಅಪಘಾತ:ರೈತ ನಂಜಪ್ಪ ಸಾವು

ಕೆಎಸ್‌ಆರ್‌ಟಿಸಿ ಬಸ್ ಡಿಕ್ಕಿ ಹೊಡೆದು ದ್ವಿಚಕ್ರ ವಾಹನದಲ್ಲಿ ಹೊಲಕ್ಕೆ ತೆರಳುತ್ತಿದ್ದ ನಡಂಪಲ್ಲಿ...

ಮಂಗಳೂರು | ಕೊಳ್ತಮಜಲು ರಹ್ಮಾನ್ ಹತ್ಯೆ ಪ್ರಕರಣ: ಆರೋಪಿಗಳ ಜಾಮೀನು ರದ್ದುಪಡಿಸಿದ ಸುಪ್ರೀಂ ಕೋರ್ಟ್

ಕೊಳ್ತಮಜಲು ರಹ್ಮಾನ್ ಹತ್ಯೆ ಪ್ರಕರಣದಲ್ಲಿ ಆರೋಪಿಗಳಿಗೆ ಇತ್ತೀಚೆಗೆ ನ್ಯಾಯಾಲಯ ಜಾಮೀನು ನೀಡಿತ್ತು....

ಕೋಲಾರ | ಚೈನಾ ಶಾಂಘೈನಲ್ಲಿ ಕನ್ನಡದ ಮೊದಲ ಜಾನಪದ ಕಾರ್ಯಕ್ರಮ: ಗೋ.ನಾ. ಸ್ವಾಮಿ ಭಾಗಿ

ಚೈನಾ ದೇಶದ ಶಾಂಘೈನಲ್ಲಿ ಕನ್ನಡಿಗರ ಸಂಘದ ವತಿಯಿಂದ ಆಯೋಜಿಸಿದ್ದ ಕನ್ನಡದ ಮೊದಲ...