ಪ್ರಾಧಿಕಾರದ ಆದೇಶದಂತೆ ತಮಿಳುನಾಡಿಗೆ ಕಾವೇರಿ ನೀರು ಬಿಡುಗಡೆ

Date:

Advertisements

ಕಾವೇರಿ ನೀರು ನಿರ್ವಹಣಾ ಪ್ರಾಧಿಕಾರ (ಸಿಡಬ್ಲ್ಯುಎಂಎ) ಹೊರಡಿಸಿದ ನಿರ್ದೇಶನದಂತೆ ತಮಿಳುನಾಡಿಗೆ ಕರ್ನಾಟಕವು ಕೆಆರ್‌ಎಸ್‌ ಜಲಾಶಯದಿಂದ ನೀರು ಹರಿಸಲು ಆರಂಭಿಸಿದೆ ಎಂದು ಅಧಿಕೃತ ಮೂಲಗಳು ತಿಳಿಸಿವೆ.

ಮುಂದಿನ ಹದಿನೈದು ದಿನಗಳ ಕಾಲ ಸೆಪ್ಟೆಂಬರ್ 12ರವರೆಗೆ ಪ್ರತಿದಿನ 5,000 ಕ್ಯೂಸೆಕ್ (ಸೆಕೆಂಡಿಗೆ ಘನ ಅಡಿ) ನೀರು ತಮಿಳುನಾಡಿಗೆ ಹರಿಸಬೇಕು. ಅಷ್ಟು ನೀರು ತಮಿಳುನಾಡು ತಲುಪುತ್ತಿದ್ದೆಯೇ ಎಂಬುದನ್ನು ಬಿಳಿಗುಂಡ್ಲು ಬಳಿ ಖಾತ್ರಿ ಪಡಿಸಬೇಕು ಎಂದು ಪ್ರಾಧಿಕಾರವು ಕರ್ನಾಟಕ ಸರ್ಕಾರಕ್ಕೆ ಸೂಚನೆ ನೀಡಿತ್ತು.

ಅದರಂತೆ ನೀರು ಹರಿಸಲಾಗುತ್ತಿದೆ. ಮಂಡ್ಯದ ಶ್ರೀರಂಗಪಟ್ಟಣ ಬಳಿಯ ಕೃಷ್ಣರಾಜ ಸಾಗರ (ಕೆಆರ್‌ಎಸ್) ಅಣೆಕಟ್ಟು ಮತ್ತು ಕಬಿನಿ ಜಲಾಶಯದಿಂದ ನದಿಗೆ ನೀರು ಬಿಡಲಾಗಿದೆ ಎಂದು ಮೂಲಗಳು ತಿಳಿಸಿರುವುದಾಗಿ ಡಿಎಚ್‌ ವರದಿ ಮಾಡಿದೆ.

ಕೆಆರ್‌ಎಸ್ ಮತ್ತು ಕಬಿನಿ ಜಲಾಶಯದಿಂದ ನೀರು ಬಿಡುವುದನ್ನು ವಿರೋಧಿಸಿ ರೈತಸಂಘದ ಕಾರ್ಯಕರ್ತರು ಕೆಆರ್‌ಎಸ್‌ ಬಳಿ ಆಹೋರಾತ್ರಿ ಧರಣಿ ನಡೆಸುತ್ತಿದ್ದಾರೆ.

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಶಿವಮೊಗ್ಗ | ಅಂಬೇಡ್ಕರ್ ಓದು ; ಭಾರತವನ್ನು ಅರಿಯುವ ದಾರಿ : ಕೋಟಿಗಾನಹಳ್ಳಿ ರಾಮಯ್ಯ ಅಭಿಪ್ರಾಯ

ಶಿವಮೊಗ್ಗ ಮಾನವತಾವಾದಿ ಅಂಬೇಡ್ಕರ್ ಅವರನ್ನು ಓದುವುದು ಎಂದರೆ ಭಾರತವನ್ನು ನೈಜವಾಗಿ ಅರಿಯುವುದು,...

ಬಿಜೆಪಿಯ ಆತ್ಮವಂಚನೆ ಪ್ರತಿಭಟನೆಗಳು ಕಲಬುರಗಿಗೆ ಅಗತ್ಯವಿಲ್ಲ: ಸಚಿವ ಪ್ರಿಯಾಂಕ್ ಖರ್ಗೆ

ಅಧಿಕಾರದಲ್ಲಿದ್ದಾಗ ಕಲಬುರಗಿ ಜಿಲ್ಲೆಯ ರೈತರಿಗೆ ದ್ರೋಹವೆಸಗಿದ್ದ ಬಿಜೆಪಿ ಈಗ ಪ್ರತಿಭಟನೆಯ ನಾಟಕ...

ಧಾರವಾಡ | ಹಿಂದುಳಿದ ವರ್ಗಗಳ ಸಮೀಕ್ಷೆ; ಸಬ್‌ಜೈಲ್ ಸುತ್ತ ಪ್ರದೇಶಗಳಲ್ಲಿ ನೆಟವರ್ಕ್ ಸಮಸ್ಯೆ

ಧಾರವಾಡ ಜಿಲ್ಲೆಯಲ್ಲಿ ಹಿಂದುಳಿದ ವರ್ಗಗಳ ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷೆ ಪ್ರಗತಿಯಲ್ಲಿದ್ದು,...

ವಿಜಯಪುರ | ಪರಿಸರ ಸಂರಕ್ಷಣೆ ಪ್ರತಿಯೊಬ್ಬರ ಕರ್ತವ್ಯ: ಶಂಕರಗೌಡ ಸೋಮನಾಳ

ಪರಿಸರಕ್ಕೆ ಹಾನಿ ಮಾಡದಂತಹ ತಂತ್ರಜ್ಞಾನಗಳನ್ನು ನಾವು ಪ್ರೋತ್ಸಾಹಿಸಬೇಕು. ಪರಿಸರ ಸಂರಕ್ಷಣೆಯಲ್ಲಿ ವಿದ್ಯಾರ್ಥಿಗಳ...

Download Eedina App Android / iOS

X