ಕೃಷಿ ವಿಜ್ಞಾನ ವಿವಿಗಳಲ್ಲಿ ಕೃಷಿ ಡಿಪ್ಲೊಮಾ ಕೋರ್ಸ್‌ ಪುನರಾರಂಭಕ್ಕೆ ಆಗ್ರಹ

Date:

ರಾಜ್ಯದ ಕೃಷಿ ವಿಜ್ಞಾನ ವಿಶ್ವವಿದ್ಯಾಲಯಗಳಲ್ಲಿ ಕೃಷಿ ಡಿಪ್ಲೊಮಾ ಕೋರ್ಸನ್ನು ರದ್ದುಗೊಳಿಸಿರುವ ನಿರ್ಧಾರವನ್ನು ಹಿಂಪಡೆಯಬೇಕು. ಆ ಕೋರ್ಸ್‌ಅನ್ನು ಪುನರಾರಂಭಿಸಬೇಕು ಎಂದು ಭಾರತೀಯ ಕೃಷಿಕ ಸಂಯುಕ್ತ ಹೋರಾಟ ಸಮಿತಿಯ ರಾಜ್ಯಾಧ್ಯಕ್ಷ ಸಿದಗೌಡ ಮೋದಗಿ ಅವರು ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಕೃಷಿ ಸಚಿವ ಎನ್ ಚೆಲುವರಾಯಸ್ವಾಮಿ ಅವರಿಗೆ ಮನವಿ ಸಲ್ಲಿಸಿದರು.

- Advertisement -

ಬೆಂಗಳೂರಿನ ವಿಧಾನಸೌಧದಲ್ಲಿ ಕಲಬುರಗಿ ಜಿಲ್ಲೆ ಆಳಂದ ಶಾಸಕ ಬಿ.ಆರ್ ಪಾಟಿಲ್ ಆಯೋಜಿಸಿದ್ಧ ಕಾರ್ಯಕ್ರಮದಲ್ಲಿ ಭಾಗವಹಿಸಿ, ಮನವಿ ಸಲ್ಲಿಸಿದರು. “ಧಾರವಾಡ ಮತ್ತು ಬೆಂಗಳೂರಿನಲ್ಲಿರುವ ಕೃಷಿ ವಿಜ್ಞಾನಗಳ ವಿಶ್ವವಿದ್ಯಾಲಯಗಳು ಕೃಷಿ, ಅರಣ್ಯೀಕರಣ ಮತ್ತು ರೇಷ್ಮೆ ಸಾಕಾಣಿಕೆಗಳಲ್ಲಿ 2 ವರ್ಷಗಳ ಕನ್ನಡ ಮಾಧ್ಯಮ ಡಿಪ್ಲೊಮಾ ಕೋರ್ಸಗಳಗಾಗಿ ನೋಟಿಫಿಕೇಶನ್‌ಗಳನ್ನು ಹೊರಡಿಸಿದ್ದವು. ಆದರೆ, ಇದ್ದಕ್ಕಿದ್ದಂತೆ ಅವುಗಳನ್ನು ಹಿಂಪಡೆದಿವೆ. ಹೊಸ ಶಿಕ್ಷಣ ನೀತಿಗೆ ಅನುಗುಣವಾಗಿ ರಾಜ್ಯ ಸರ್ಕಾರದ ಸೂಚನೆ ಮೇರೆಗೆ ವಿಶ್ವವಿದ್ಯಾಲಯಗಳು ಈ ಕೋರ್ಸುಗಳನ್ನು ಹಿಂಪಡೆದಿವೆ ಎನ್ನಲಾಗಿದೆ. ಅಲ್ಲದೇ ಸರ್ಕಾರವು ಸಾಕಷ್ಟು ಹಣಕಾಸು ಬೆಂಬಲ ನೀಡದೇ ಇರುವುದೂ ಕಾರಣ ಎನ್ನಲಾಗುತ್ತಿದೆ” ಎಂದು ಹೇಳಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಬ್ರಿಟಿಷ್ ಕಾಲದ ʼಗುಲಾಮಗಿರಿʼ ಕಾನೂನುಗಳೇ ಇಂದಿನ ಪೊಲೀಸ್‌ ವ್ಯವಸ್ಥೆಯ...

ಸ್ವಾತಂತ್ರ್ಯ ಬಂದು ದಶಕಗಳೇ ಕಳೆದಿದ್ದರೂ, ನಾವಿನ್ನೂ ಬ್ರಿಟಿಷರು ಭಾರತೀಯರನ್ನು ದಮನ ಮಾಡಲು ರೂಪಿಸಿದ 1861ರ ಪೊಲೀಸ್ ಕಾಯಿದೆಯ ನೆರಳಿನಲ್ಲೇ ಬದುಕುತ್ತಿದ್ದೇವೆಯೇ? ಖಾಕಿ ಪಡೆಯನ್ನು 'ಪ್ರಜೆಗಳ ರಕ್ಷಕ'ನಾಗಿಸಬೇಕಿದ್ದ ವ್ಯವಸ್ಥೆ, ಇಂದಿಗೂ ರಾಜಕಾರಣಿಗಳ ಕೈಗೊಂಬೆಯಾಗಿ ಉಳಿದುಕೊಳ್ಳಲು...

ಯಾರು ಹಿತವರು ಈ ಇಬ್ಬರೊಳಗೆ? ನೇಹಾ ಬೋರಾ ಅಭಿಜಿತ್...

“ಹೋಲಿಕೆ ಬೇಡ, ಒಗ್ಗಟ್ಟು ಬೇಕು. ನಾವೆಲ್ಲರೂ ಒಟ್ಟಾಗಿ ಚುನಾವಣಾ ಆಯೋಗದ ಅಕ್ರಮಗಳ ವಿರುದ್ಧ ಹೋರಾಡಬೇಕು” ಎಂದು ನೇಹಾ ಬರೆದರೆ, ಅದಕ್ಕೆ ಅಭಿಜೀತ್ ಉತ್ತರ- “ಇಂಕ್ವಿಲಾಬ್ ಜಿಂದಾಬಾದ್” ನೇಹಾ ಬೋರಾ ಮತ್ತು ಅಭಿಜಿತ್ ದೀಪ್ಕೆ ನಡುವೆ...

ಸ್ವತಂತ್ರ ಸಾಂವಿಧಾನಿಕ ಸಂಸ್ಥೆಗಳ ಮೇಲಿನ ನಂಬಿಕೆಯನ್ನು ಕಸಿದುಕೊಳ್ಳುತ್ತಿರುವ ಚುನಾವಣಾ...

ನ್ಯಾಯಾಲಯ ಮತ್ತು ಚುನಾವಣಾ ಆಯೋಗಗಳ 'ಸ್ವತಂತ್ರತೆ' ಎಂಬ ಮುಖವಾಡವೇ ಈಗ ಸರ್ಕಾರಕ್ಕೆ ರಕ್ಷಣಾ ಕವಚವಾಗಿ ಕೆಲಸ ಮಾಡುತ್ತಿದೆ. ಹೀಗಾಗಿ ಇವತ್ತು ವಿರೋಧ ಪಕ್ಷಗಳ ಆಕ್ರೋಶವೆಲ್ಲವೂ ಸಾಂವಿಧಾನಿಕ ಸಂಸ್ಥೆಗಳ ಕಡೆಗೆ ತಿರುಗಿದೆ. ಸರ್ಕಾರ ತೀರಾ...

“ಕೇವಲ 5 ಸಾವಿರ ರೂ.ಗಳ ಶುಲ್ಕದಲ್ಲಿ ರಾಜ್ಯದ ಬಡ ರೈತರು ಈ ಕೋರ್ಸ್‌ಗಳನ್ನು ನಡೆಯಬಹುದಾಗಿತ್ತು. ಅಲ್ಲದೇ ಇಂತಹ ಡಿಪ್ಲೊಮಾ ಕೋರ್ಸಗಳಲ್ಲಿ ಉತ್ತೀರ್ಣರಾದ ಯುವಜನರಿಗೆ ರಾಜ್ಯ ಸರ್ಕಾರದಲ್ಲಿ ಹಾಗೂ ಖಾಸಗಿ ಸಂಸ್ಥೆಗಳಲ್ಲಿ ಸಾಕಷ್ಟು ಉದ್ಯೋಗವಕಾಶಗಳ ಲಭ್ಯವಿದೆ. ಆದ್ದರಿಂದ ರಾಜ್ಯ ಸರ್ಕಾರ ಕೂಡಲೇ ಕೃಷಿ ವಿಶ್ವವಿದ್ಯಾಲಯಗಳಿಗೆ ಸೂಕ್ತ ಆದೇಶ ನೀಡುವ ಮೂಲಕ ಕೃಷಿ ವಿಜ್ಞಾನ ಡಿ‌ಪ್ಲೊಮಾ ಕೋರ್ಸ್‌ಗಳನ್ನು ಪುನರಾರಂಭಿಸಲು ಕ್ರಮ ಕೈಕೊಳ್ಳಬೇಕು” ಎಂದು ಒತ್ತಾಯಿಸಿದರು.

ಈ ಸುದ್ದಿ ಓದಿದ್ದೀರಾ? ಕಲಬುರಗಿ | ನೆಲಸಮಗೊಳಿಸಿರುವ ಶೌಚಾಲಯ ಮರುಸ್ಥಾಪಿಸುವಂತೆ ಆಗ್ರಹ

ಈ ವೇಳೆ ಶಾಸಕ ದರ್ಶನ್ ಪುಟ್ಟಣ್ಣಯ್ಯ, ಪ್ರಕಾಶ ಕಮ್ಮರಡ್ಡಿ‌, ಭಾರತೀಯ ಕೃಷಿಕ ಸಮಾಜದ ಮುಖಂಡ ಸಿದಗೌಡ ಮೋದಗಿ ಹಾಗೂ ರೈತ ಸಂಘಟನೆಯ ಮುಖಂಡರುಗಳಾದ ಬಡಗಲಾಪುರ ನಾಗೇಂದ್ರ, ಜಿ ಸಿ ಬಯ್ಯಾರಡ್ಡಿ, ಸಿದ್ದಗೌಡ ಪಾಟಿಲ್, ಕೆ ವಿ ಭಟ್ ಹಾಗೂ 20 ಮಂದಿ ರೈತ ಮುಖಂಡರು ಇದ್ಧರು.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಹಾವೇರಿ | ನಾಳೆ ಜಿಲ್ಲಾ ಮಟ್ಟದ ಕಾರ್ಯಾಗಾರ

ಸಾವಯವ ಹಾಗೂ ನೈಸರ್ಗಿಕ ಕೃಷಿ ಪದ್ಧತಿಯನ್ನು ಉತ್ತೇಜಿಸುವ ಜೊತೆಗೆ ರೈತರು ಬೆಳೆಯುವ...

ಶಿರಸಿ | ರಾಜೇಂದ್ರ ಸಿರ್ಸಿಕರ್‌ಗೆ ಇಂಡಿಯಾ ಬುಕ್ ಆಫ್ ರೆಕಾರ್ಡ್ಸ್ ಗೌರವ

ಶಿರಸಿ: ಪ್ರಾಣಿ-ಪಕ್ಷಿಗಳ ರಕ್ಷಣೆ ಮತ್ತು ಪುನರ್ವಸತಿ ಕ್ಷೇತ್ರದಲ್ಲಿ ಕಾರ್ಯನಿರ್ವಹಿಸುತ್ತಿರುವ ಶಿರಸಿಯ ರಾಜೇಂದ್ರ...

ಧಾರವಾಡ | ಪೊಲೀಸ್ ಹೆಸರೇಳಿ ರೂ. 15,700 ವಂಚನೆ: ನಾಲ್ಕು ಬೈಕ್‍ಗಳು ನಗದು ವಶ

ಪೊಲೀಸ್ ಹೆಸರೇಳಿ ವ್ಯಕ್ತಿಯೊಬ್ಬರಿಂದ ₹15,700 ಹಣ ಪಡೆದು ವಂಚಿಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ...

ಗೋಕರ್ಣ | ಕುಡ್ಲೆ ಕಡಲತೀರದಲ್ಲಿ ಸಮುದ್ರ ಸುಳಿಗೆ ಸಿಲುಕಿದ್ದ ಬೆಂಗಳೂರಿನ ಇಬ್ಬರು ಪ್ರವಾಸಿಗರ ರಕ್ಷಣೆ

ಗೋಕರ್ಣ: ಸಮುದ್ರದಲ್ಲಿ ಈಜುತ್ತಿದ್ದ ವೇಳೆ ಅಪಾಯಕಾರಿ ಸುಳಿಗೆ ಸಿಲುಕಿದ ಬೆಂಗಳೂರಿನ ಇಬ್ಬರು...