ಮೈಸೂರು | ಬಿಸಿಯೂಟ ಕಾರ್ಮಿಕರ ಗೌರವಧನ ಬಿಡುಗಡೆಗೆ ಕ್ರಮ ಕೈಗೊಳ್ಳುವಂತೆ ಮನವಿ

Date:

ಮೈಸೂರು ಜಿಲ್ಲೆಯಲ್ಲಿ ಕಳೆದ ಮೂರು ತಿಂಗಳಿನಿಂದ ಬಿಸಿಯೂಟ ಕಾರ್ಮಿಕರ ಗೌರವ ಧನ ಬಿಡುಗಡೆಯಾಗಿಲ್ಲ. ತಕ್ಷಣ ಕ್ರಮ ಕೈಗೊಳ್ಳುವಂತೆ ಜಿಲ್ಲೆಯ ಶಿಕ್ಷಣಾಧಿಕಾರಿಗಳಿಗೆ ಎಐಯುಟಿಯುಸಿ ಕಾರ್ಯಕರ್ತರು ಮನವಿ ಸಲ್ಲಿಸಿದರು.

- Advertisement -

​ಎಐಯುಟಿಯುಸಿ ಸಂಯೋಜಿತ ಕರ್ನಾಟಕ ರಾಜ್ಯ ಸಂಯುಕ್ತ ಅಕ್ಷರ ದಾಸೋಹ ಕಾರ್ಮಿಕರ ಸಂಘದ ಮೈಸೂರು ಜಿಲ್ಲಾ ಸಮಿತಿಯು, ಬಿಸಿಯೂಟ ಕಾರ್ಮಿಕರಿಗೆ ​ಕಳೆದ ಎರಡು-ಮೂರು ತಿಂಗಳಿಂದ ಗೌರವ ಧನ ಬಿಡುಗಡೆ ಆಗಿರುವುದಿಲ್ಲ. ಈಗಾಗಲೇ, ಅತ್ಯಂತ ಕಡಿಮೆ ಗೌರವ ಧನದಲ್ಲಿ ದುಡಿಯುತ್ತಿರುವ ಈ ಕಾರ್ಮಿಕರಿಗೆ ಸಂಬಳ ಇಲ್ಲದಿರುವುದರಿಂದ ಕುಟುಂಬಗಳ ದೈನಂದಿನ ಜೀವನ ನಿರ್ವಹಣೆಗೆ, ಮಕ್ಕಳ ವಿದ್ಯಾಭ್ಯಾಸಕ್ಕೆ ಮತ್ತು ಆರೋಗ್ಯದ ಖರ್ಚುಗಳಿಗೆ ತೀವ್ರ ತೊಂದರೆಯನ್ನುಂಟು ಮಾಡಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಪಾಕಿಸ್ತಾನದಲ್ಲಿ ಅಹಿಂಸಾ ಮೂರ್ತಿಯ ‘ರಹಸ್ಯರಕ್ಷಣೆ’: ಕರಾಚಿಯಿಂದ ಇಸ್ಲಾಮಾಬಾದ್‌ಗೆ ಗಾಂಧಿ...

ಪಾಕಿಸ್ತಾನದ ಇಸ್ಲಾಮಾಬಾದ್‌ನಲ್ಲಿರುವ ಭಾರತೀಯ ಹೈಕಮಿಷನ್ ಕಚೇರಿಯ ಪ್ರವೇಶ ದ್ವಾರದಲ್ಲಿ ಮಹಾತ್ಮ ಗಾಂಧೀಜಿಯವರ ಭವ್ಯ ಕಂಚಿನ ಪ್ರತಿಮೆ ಇಂದಿಗೂ ಗಾಂಭೀರ್ಯದಿಂದ ನಿಂತಿದೆ. ಕೈಯಲ್ಲಿ ಊರುಗೋಲು ಹಿಡಿದು ದೂರದ ದಿಗಂತವನ್ನು ದಿಟ್ಟಿಸುವಂತಿರುವ ಈ ಬಾಪೂ ಪ್ರತಿಮೆಯು...

ಗಾಂಧಿಯ ಆರ್ಥಿಕ ಸಾಮಾಜಿಕ ಸಂಕೇತಗಳು: ಉಪ್ಪು, ಖಾದಿ, ಚರಕ...

ಗ್ರಾಮೀಣ ಭಾರತದ ಆರ್ಥಿಕತೆ ಮನಗಂಡಿದ್ದ ಗಾಂಧಿ ಹಾಲಿನ ಬಗೆಗಿನ ಕಠೋರ ನಿಲುವನ್ನು ನಿರಾಕರಿಸಿ ತನ್ನನ್ನು ತಾನು ಮೇಕೆಯ ಮಮಕಾರದ ಹಾಲಿಗೆ ಕೊಟ್ಟುಕೊಂಡಿದ್ದರು. ಈಗಿನ ಪಶುಪಾಲಕ ಸಮುದಾಯಗಳ ಸಾವಯವ ಬದುಕಿನ ರೀತಿ ನೀತಿ ಗಮನಿಸಿ......

ದಕ್ಷಿಣ ಆಫ್ರಿಕಾದಲ್ಲಿ ಗಾಂಧಿ ಮೊಳಗಿಸಿದ್ದ ಮತ ಹಕ್ಕಿನ ಕೂಗಿಗೆ...

ಮತದಾನ ಕೇವಲ ಹಕ್ಕಲ್ಲ, ಅದು ಪ್ರಜೆಯೊಬ್ಬನ ಘನತೆ ಹಾಗೂ ಅಸ್ತಿತ್ವದ ಸಂಕೇತ. 131 ವರ್ಷಗಳ ಹಿಂದೆ ದಕ್ಷಿಣ ಆಫ್ರಿಕಾದಲ್ಲಿ ಇದೇ ಮತಾಧಿಕಾರಕ್ಕಾಗಿ ಗಾಂಧೀಜಿ ಬ್ರಿಟಿಷರ ವಿರುದ್ಧ ಸಿಡಿದೆದ್ದಿದ್ದರು. ಆದರೆ, ಇಂದು ಸ್ವತಂತ್ರ ಭಾರತದಲ್ಲಿ...

​ಬಿಸಿಯೂಟ ಕಾರ್ಯಕರ್ತರು ಶಾಲಾ ಮಕ್ಕಳಿಗೆ ಸಮಯಕ್ಕೆ ಸರಿಯಾಗಿ ಆಹಾರ ಒದಗಿಸುವ ಜವಾಬ್ದಾರಿಯನ್ನು ಶ್ರದ್ಧೆಯಿಂದ ನಿರ್ವಹಿಸುತ್ತಿದ್ದಾರೆ. ಅವರ ಈ ಸೇವೆ ಗುರುತಿಸಿ, ಅವರಿಗೆ ಕಾಲ ಕಾಲಕ್ಕೆ ಗೌರವ ಧನವನ್ನು ನೀಡುವುದು ಸರ್ಕಾರದ ಮತ್ತು ಜಿಲ್ಲಾಡಳಿತದ ಕರ್ತವ್ಯವಾಗಿದೆ. ​ಆದ್ದರಿಂದ, ಈ ವಿಷಯದ ಬಗ್ಗೆ ಗಂಭೀರವಾಗಿ ಗಮನಹರಿಸಿ, ತಕ್ಷಣವೇ ಸಂಬಂಧಪಟ್ಟ ಇಲಾಖೆಗಳಿಗೆ ಸೂಕ್ತ ಆದೇಶಗಳನ್ನು ನೀಡಿ, ಬಾಕಿ ಇರುವ ಗೌರವ ಧನವನ್ನು ವಿಳಂಬವಿಲ್ಲದೆ ಬಿಡುಗಡೆ ಮಾಡಲು ತಕ್ಷಣವೇ ಸ್ಪಂದಿಸಿ ಕ್ರಮ ಕೈಗೊಳ್ಳಬೇಕೆಂದು ಮನವಿ ಸಲ್ಲಿಸಿದರು.

ಈ ಸುದ್ದಿ ಓದಿದ್ದೀರಾ? ಮೈಸೂರು | ಹುಲಿ ದಾಳಿಗೆ ಮತ್ತೋರ್ವ ದನಗಾಹಿ ಬಲಿ

ಮನವಿ ಸಲ್ಲಿಸುವಾಗ ರಾಜ್ಯ ಕಾರ್ಯದರ್ಶಿ ಸಂಧ್ಯಾ ಪಿ.ಎಸ್, ರಾಜ್ಯ ಉಪಾಧ್ಯಕ್ಷೆ ರಾಜೇಶ್ವರಿ, ಜಿಲ್ಲಾಧ್ಯಕ್ಷೆ ಉಮಾ, ಸೌಮ್ಯ, ಮಹದೇವಮ್ಮ ಸೇರಿದಂತೆ ಇನ್ನಿತರರು ಇದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಅ.4ರಿಂದ ವಿಜಯಪುರ – ತಿರುಪತಿ ದಸರಾ ಎಕ್ಸ್‌ಪ್ರೆಸ್ ರೈಲು ಸೇವೆ ಆರಂಭ

ದಸರಾ ಹಬ್ಬದ ಹಿನ್ನೆಲೆಯಲ್ಲಿ ತಿರುಪತಿ–ವಿಜಯಪುರ ನಡುವೆ ಪ್ರಯಾಣಿಕರ ಅನುಕೂಲಕ್ಕಾಗಿ ಸಾಪ್ತಾಹಿಕ ವಿಶೇಷ...

ವಿಜಯಪುರ | ರೂ. 2,500 ಸಬ್ಸಿಡಿಗೆ ವಿರೋಧ: ಸರ್ಕಾರಕ್ಕೆ ದೇಣಿಗೆ ಸಂಗ್ರಹಿಸಿ ಕೊಟ್ಟ ರೈತರು!

ಭೀಕರ ಬರದಿಂದ ನಲುಗಿರುವ ರೈತರಿಗೆ ರಾಜ್ಯ ಸರ್ಕಾರ ಘೋಷಿಸಿರುವ ₹2,500 ಇನ್‌ಪುಟ್...

ರಾಜ್ಯ ಸಂಪುಟದಲ್ಲಿ ಮಹಿಳಾ ಪ್ರಾತಿನಿಧ್ಯದ ಚರ್ಚೆ: ಅನ್ನಪೂರ್ಣ ಹೆಸರು ಮುನ್ನೆಲೆಗೆ!

ರಾಜ್ಯ ಸಚಿವ ಸಂಪುಟದಲ್ಲಿ ಸದ್ಯ ಎರಡು ಸಚಿವ ಸ್ಥಾನಗಳು ಖಾಲಿ ಉಳಿದಿದ್ದು,...

ಕೊಡಗಿನಲ್ಲಿ ಮಳೆ ಕೊರತೆ; ಭತ್ತಕ್ಕೆ ಬೆಂಕಿ ರೋಗ-ಕೀಟ ಬಾಧೆ

ಕೊಡಗು ಎಂದರೆ ಕಾಫಿ ತೋಟಗಳು, ಮೆಣಸಿನ ಬಳ್ಳಿ, ಶುಂಠಿ ಹಾಗೂ ಭತ್ತದ...