ಕೊಡಗು | ಸರ್ಕಾರಿ ಕಚೇರಿಗಳಲ್ಲಿ ಸಾರ್ವಜನಿಕರ ಅಹವಾಲುಗಳಿಗೆ ಸ್ಪಂದಿಸಿ: ದಿನಕರ್ ಶೆಟ್ಟಿ

Date:

ಕೊಡಗು ಜಿಲ್ಲೆ ಮಡಿಕೇರಿ ನಗರದ ತಹಶೀಲ್ದಾರ್ ಕಚೇರಿಯಲ್ಲಿ ಬುಧವಾರ ನಡೆದ ಲೋಕಾಯುಕ್ತ ಅಧಿಕಾರಿಗಳ ದೂರು ಅರ್ಜಿ ಸ್ವೀಕಾರ ಸಭೆಯಲ್ಲಿ ಸಾರ್ವಜನಿಕರಿಂದ 6 ಅರ್ಜಿಗಳು ಸಲ್ಲಿಕೆಯಾಗಿವೆ. ಅದರಲ್ಲಿ, ಕಂದಾಯ, ಅರಣ್ಯ, ಭೂ ದಾಖಲೆಗಳು ಸೇರಿದಂತೆ ವಿವಿಧ ರೀತಿಯ ಸಮಸ್ಯೆಗಳ ಕುರಿತು ಸಾರ್ವಜನಿಕರು ಲೋಕಾಯುಕ್ತ ಅಧಿಕಾರಿಗಳಿಗೆ ಮನವಿ ಸಲ್ಲಿಸಿದರು. ಮಡಿಕೇರಿಯ ಲೋಕಾಯುಕ್ತ ಪೊಲೀಸ್ ಉಪ ಅಧೀಕ್ಷಕರಾದ ದಿನಕರ ಶೆಟ್ಟಿ ದೂರು ಅರ್ಜಿ ಸ್ವೀಕರಿಸಿ ಮಾತನಾಡಿ, ‘ಸರ್ಕಾರಿ ಕಚೇರಿಗಳಲ್ಲಿ ಸಾರ್ವಜನಿಕರ ಅಹವಾಲುಗಳಿಗೆ ಸ್ಪಂದಿಸುವಂತೆ’ ಅಧಿಕಾರಿಗಳಿಗೆ ಸೂಚನೆ ನೀಡಿದರು.

- Advertisement -

“ಸಾರ್ವಜನಿಕರಿಂದ ಸಲ್ಲಿಕೆಯಾದ 6 ಅರ್ಜಿಗಳಿಗೆ ಸಂಬಂಧಿಸಿದಂತೆ ಒಂದು ವಾರದಲ್ಲಿ ಇತ್ಯರ್ಥ ಪಡಿಸುವಂತೆ ಸಂಬಂಧಪಟ್ಟ ಇಲಾಖೆ ಅಧಿಕಾರಿಗೆ ತಿಳಿಸಿದಲ್ಲದೆ, ಆಗದಿರುವ ಕೆಲಸಕ್ಕೆ ಹಿಂಬರಹ ನೀಡುವಂತಾಗಬೇಕು.ಸರ್ಕಾರಿ ಕೆಲಸ ಸಾರ್ವಜನಿಕರ ಕೆಲಸವಾಗಿದ್ದು, ಅದನ್ನು ಅರ್ಥ ಮಾಡಿಕೊಂಡು ಕಾರ್ಯನಿರ್ವಹಿಸಬೇಕು. ಯಾವುದೇ ಕಾರಣಕ್ಕೂ ವಿಳಂಬ ಮಾಡಬಾರದು” ಎಂದು ಅಧಿಕಾರಿಗಳಿಗೆ ಎಚ್ಚರಿಕೆ ನೀಡಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಅನುದಾನ ಕೊರತೆ: ವಿದ್ಯಾರ್ಥಿಗಳಿಂದ ನಿರ್ವಹಣಾ ಶುಲ್ಕ ವಸೂಲಿ, ಶಿಕ್ಷಕರ...

ಹಾವೇರಿ ಜಿಲ್ಲೆಯಲ್ಲಿ ಸರಕಾರಿ ಶಾಲೆಗಳಿಗೆ ನಿರ್ವಹಣಾ ವೆಚ್ಚದ ಅನುದಾನ ಬಿಡುಗಡೆಯಾಗದ ಹಿನ್ನೆಲೆಯಲ್ಲಿ ಶಿಕ್ಷಕರು ನಿತ್ಯದ ಖರ್ಚು-ವೆಚ್ಚ ಸರಿದೂಗಿಸಲು ಪರದಾಡುವಂತಾಗಿದೆ. ಶಾಲೆ ನಡೆಸಲು ವಿದ್ಯಾರ್ಥಿಗಳಿಂದಲೇ ಹಣ ವಸೂಲಿ ಮಾಡುತ್ತಿರುವ ಆರೋಪ ಕೇಳಿಬಂದಿದ್ದು, ಪೋಷಕರಿಂದ ಮತ್ತು...

ಬೀಗರೂಟ ಬಂದ್ ಮಾಡಿ ಸುದ್ದಿಯಾದ ಹರಗಿ ಗ್ರಾಮದಲ್ಲಿ ಸಮಸ್ಯೆಗಳದ್ದೇ...

ಶಿವಮೊಗ್ಗ ಜಿಲ್ಲೆಯ ಶಿಕಾರಿಪುರ ತಾಲೂಕಿನಲ್ಲಿರುವ ಕಟ್ಟೆ ಕಡೆಯ ಕುಗ್ರಾಮ ಎಂದು ಹೇಳಬಹುದಾದ ಹರಗಿ ಗ್ರಾಮ ಇಡೀ ರಾಜ್ಯದ ಗಮನ ಸೆಳೆಯುತ್ತಿದೆ ಬೀಗರೂಟ ಹಾಕಿಸಿದರೆ ದಂಡ ವಿಧಿಸುತ್ತೇವೆ ಎಂದು ಗ್ರಾಮಸ್ಥರು ನಿರ್ಧಾರಕ್ಕೆ ಬಂದು ಬಡ...

ಮೋದಿ ಪರವಿದ್ದ ಯುವಜನರು ತಿರುಗಿಬಿದ್ದಿದ್ದು ಹೇಗೆ?

ಚುನಾವಣಾ ಆಯೋಗದಲ್ಲಿ ಎಸ್‌ಐಆರ್‌ ಮತ್ತು ಚುನಾವಣಾ ಪ್ರಕ್ರಿಯೆಗಳ ಕುರಿತು ಮುಖ್ಯಚುನಾವಣಾ ಆಯುಕ್ತ ಗ್ಯಾನೇಶ್‌ ಕುಮಾರ್‌ ಅವರು ಸರ್ವಾಧಿಕಾರಿಯಂತೆ, ಏಕಪಕ್ಷೀಯವಾಗಿ ನಿರ್ಧಾರಗಳ ತೆಗೆದುಕೊಂಡು, ಜಾರಿ ಮಾಡುತ್ತಿದ್ದಾರೆ ಎಂಬ ತನಿಖಾ ವರದಿ ದೇಶಾದ್ಯಂತ ಭಾರೀ ಚರ್ಚೆ...

“ಸಾರ್ವಜನಿಕರಿಂದ ಸಲ್ಲಿಕೆಯಾದ ಮನವಿಗಳಿಗೆ ವರ್ಷಗಳೇ ಕಳೆದರೂ ಪರಿಹರಿಸುವಲ್ಲಿ ವಿಫಲರಾಗಿದ್ದೀರಿ. ಹೀಗೆ ಆದರೆ ಹೇಗೆ? ಎಂದು ಪ್ರಶ್ನಿಸಿದರು. ಪ್ರತಿಯೊಬ್ಬ ಸರ್ಕಾರಿ ನೌಕರರು ಗುರುತಿನ ಚೀಟಿ ಕಡ್ಡಾಯವಾಗಿ ಧರಿಸಬೇಕು, ಚಲನವಲನ ವಹಿ ಬರೆಯಬೇಕು. ರಜೆ ಅಥವಾ ಕೇಂದ್ರ ಸ್ಥಾನದಿಂದ ಹೊರ ಹೋಗಿದ್ದಲ್ಲಿ ಸಂಬಂಧಪಟ್ಟ ಪತ್ರ ಇರಬೇಕು. ಅವರ ಪರವಾಗಿ ಬರುವವರಿಗೆ ಸಭೆಗೆ ನಿಯೋಜನೆ ಮಾಡಿರುವ ಬಗ್ಗೆ ಪತ್ರ ಇರಬೇಕು” ಎಂದು ನಿರ್ದೇಶನ ನೀಡಿದರು.

ಈ ಸುದ್ದಿ ಓದಿದ್ದೀರಾ?ಮಂಡ್ಯ | ಮಹಿಳೆಯರ ಸಬಲೀಕರಣಕ್ಕೆ ಸರ್ಕಾರ ಬದ್ಧವಾಗಿದೆ: ಸಚಿವ ಎನ್ ಚಲುವರಾಯಸ್ವಾಮಿ

ಸಭೆಯಲ್ಲಿ ಲೋಕಾಯುಕ್ತ ಪೊಲೀಸ್ ಇನ್ಸ್ಪೆಕ್ಟರ್ ವೀಣಾ, ತಹಶೀಲ್ದಾರ್ ಶ್ರೀಧರ, ಜಿಲ್ಲಾ ಹಾಗೂ ತಾಲ್ಲೂಕು ಮಟ್ಟದ ಅಧಿಕಾರಿಗಳು ಇದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಭೋವಿ ಸಮುದಾಯದ ಅರ್ಹರಿಗೆ ಜಾತಿ ಪ್ರಮಾಣ ಪತ್ರ ನೀಡಲು ಮುತುವರ್ಜಿ ವಹಿಸಿ : ರಾಮಪ್ಪ ಎಂ

ಭೋವಿ ಸಮುದಾಯದ ಸಾಮಾಜಿಕ, ಶೈಕ್ಷಣಿಕ ಹಾಗೂ ಆರ್ಥಿಕ ಅಭಿವೃದ್ಧಿಗಾಗಿ ಸರ್ಕಾರ ಜಾರಿಗೊಳಿಸಿರುವ...

ರಾಯಚೂರು | ಭೀಕರ ಬರ: ₹11 ಕೋಟಿ ಬಿಡುಗಡೆ: ಸಚಿವ ಅಜಯ್ ಸಿಂಗ್

ಜಿಲ್ಲೆಯಲ್ಲಿ ಭೀಕರ ಬರ ಪರಿಸ್ಥಿತಿ ಇದ್ದು, ರಾಜ್ಯ ಸರ್ಕಾರ ಇದನ್ನು ಗಂಭೀರವಾಗಿ...

ಉತ್ತರ ಕನ್ನಡ | ಪಶ್ಚಿಮ ಪದವೀಧರ ಕ್ಷೇತ್ರ: ನಾಮಪತ್ರ ಹಿಂಪಡೆಯಲು ಅಕ್ಟೋಬರ್ 9 ಕೊನೆಯ ದಿನ

ಉತ್ತರ ಕನ್ನಡ: ಕರ್ನಾಟಕ ಪಶ್ಚಿಮ ಪದವೀಧರ ಮತ ಕ್ಷೇತ್ರದ ವಿಧಾನ ಪರಿಷತ್...

ರಾಯಚೂರು | ಲಿಂಗಸುಗೂರು ಡಿವೈಎಸ್ಪಿಯಾಗಿ ಸುಲೇಮಾನ್ ತಹಶೀಲ್ದಾರ್ ವರ್ಗಾವಣೆ

ಲಿಂಗಸುಗೂರ ಪೊಲೀಸ್ ಉಪವಿಭಾಗಕ್ಕೆ ನೂತನ ಡಿವೈಎಸ್ಪಿಯಾಗಿ ಸುಲೇಮಾನ್ ತಹಶೀಲ್ದಾರ್ ಅವರನ್ನು ವರ್ಗಾವಣೆ...