ಮಂಗಳೂರು ವಿವಿಯ ವಿಶ್ರಾಂತ ಉಪಕುಲಪತಿ ಪ್ರೊ.ಕೆ. ಭೈರಪ್ಪ ಇನ್ನಿಲ್ಲ

Date:

  • ಬೆಳಗಾವಿಗೆ ತೆರಳಲು ಬೆಂಗಳೂರು ವಿಮಾನ ನಿಲ್ದಾಣಕ್ಕೆ ಬಂದಿದ್ದ ವೇಳೆ ಹೃದಯಾಘಾತ
  • 2014ರಿಂದ 2019ರವರೆಗೆ ಮಂಗಳೂರು ವಿವಿಯ 8ನೇ ಕುಲಪತಿಯಾಗಿ ಕಾರ್ಯನಿರ್ವಹಿಸಿದ್ದ ಭೈರಪ್ಪ

ಮಂಗಳೂರು ವಿಶ್ವವಿದ್ಯಾನಿಲಯದ ವಿಶ್ರಾಂತ ಉಪಕುಲಪತಿ ಪ್ರೊ.ಕೆ.ಭೈರಪ್ಪ(69) ಸೋಮವಾರ ಬೆಳಗ್ಗೆ ಹೃದಯಾಘಾತದಿಂದ ಬೆಂಗಳೂರಿನಲ್ಲಿ ನಿಧನ ಹೊಂದಿದರು.

- Advertisement -

ಬೆಳಗಾವಿಯಲ್ಲಿ ನಡೆಯುತ್ತಿದ್ದ ಕಾರ್ಯಕ್ರಮವೊಂದಕ್ಕೆ ತೆರಳಲೆಂದು ಬೆಂಗಳೂರು ವಿಮಾನ ನಿಲ್ದಾಣಕ್ಕೆ ಬಂದಿದ್ದ ವೇಳೆ ತೀವ್ರ ಹೃದಯಾಘಾತಗೊಂಡು ಅವರು ಕೊನೆಯುಸಿರೆಳೆದಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಕೋಲಾರ ಕಾಂಗ್ರೆಸ್‌ಗೆ ಹೊಸ ಸಾರಥಿ: ಬಣ ರಾಜಕೀಯಕ್ಕೆ ಬೀಳುವುದೇ ತೆರೆ?

ಕೋಲಾರದ ನೂತನ ಕಾಂಗ್ರೆಸ್ ಜಿಲ್ಲಾಧ್ಯಕ್ಷರಾಗಿ ಮೈಕೆಲ್ ನಾರಾಯಣಸ್ವಾಮಿ ಆಯ್ಕೆಯಾಗಿರುವುದು ಕಾಂಗ್ರೆಸ್ ಪಕ್ಷಕ್ಕೆ ಒಂದು ಪ್ರಮುಖ ಘಟ್ಟವಾಗಿದೆ. ಸಾರ್ವಜನಿಕ ವಲಯದಲ್ಲಿ 'ರಮೇಶ್ ಕುಮಾರ್ ಬಣ'ದ ಬೆಂಬಲದೊಂದಿಗೆ ಬಂದಿದ್ದಾರೆಂಬ ಚರ್ಚೆಗಳಿದ್ದರೂ, ಎಲ್ಲರನ್ನೂ ಒಗ್ಗೂಡಿಸಿ ಬೂತ್ ಮಟ್ಟದಿಂದ...

ವ್ಯವಸ್ಥೆ V/S ವಿದ್ಯಾರ್ಥಿ: ಇಂದೋರ್‌ನಲ್ಲಿ ರಾಹುಲ್ ಕಟ್ಟಿದ ಹೊಸ...

“ಅಂಧಭಕ್ತ ಯಾರು? ಅಂಧಭಕ್ತ- ವಿದ್ಯಾರ್ಥಿ ವಿರೋಧಿ. ವಿದ್ಯಾರ್ಥಿ ಎಲ್ಲಿ ಪ್ರಶ್ನೆ ಕೇಳುತ್ತಾನೋ, ವಿದ್ಯಾರ್ಥಿ ಎಲ್ಲಿ ಕುತೂಹಲದಿಂದ ಇರುತ್ತಾನೋ, ಅಲ್ಲಿ ಅಂಧಭಕ್ತ ಭ್ರಮೆಯಲ್ಲಿ, ತನ್ನದೇ ಲೋಕದಲ್ಲಿ ವಾಸಿಸುತ್ತಾನೆ. ವಿದ್ಯಾರ್ಥಿ ಎಲ್ಲಿ ಪ್ರೀತಿಯಿಂದ ಮಾತನಾಡುತ್ತಾನೋ, ಗೌರವದಿಂದ...

ಕರಾವಳಿ ಕಾಂಗ್ರೆಸ್‌ಗೆ ಬೂಸ್ಟ್ ನೀಡಿದ ಸಚಿವ ಸಂಪುಟ ಸಭೆ:...

ಕೇವಲ ಯೋಜನೆಗಳ ಘೋಷಣೆಯಾದರೆ ಸಾಲದು; ಅನುದಾನ ಬಿಡುಗಡೆಯಾಗಬೇಕು, ಟೆಂಡರ್ ಪ್ರಕ್ರಿಯೆ ಮುಗಿದು ಕಾಮಗಾರಿಗಳು ನೆಲಮಟ್ಟದಲ್ಲಿ ಆರಂಭವಾಗಬೇಕು. ಕೆಲಸ ವಿಳಂಬವಾದರೆ ಜನರಲ್ಲಿ ನಿರಾಸೆ ಮೂಡುವುದು ಖಂಡಿತ. ಈ ರಾಜಕೀಯ ಲಾಭವು ಚುನಾವಣೆಯಲ್ಲಿ ಮತಗಳಾಗಿ ಬದಲಾಗಬೇಕಾದರೆ,...

ಪ್ರೊ.ಕೆ.ಭೈರಪ್ಪ ಅವರು 2014ರ ಜೂನ್ ನಿಂದ 2019 ಜೂನ್ ವರೆಗೆ ಮಂಗಳೂರು ವಿಶ್ವವಿದ್ಯಾನಿಲಯದ ಎಂಟನೇ ಕುಲಪತಿಯಾಗಿ ಕಾರ್ಯನಿರ್ವಹಿಸಿದ್ದರು. ನಿವೃತ್ತಿಯ ಬಳಿಕ ಅವರು ಆದಿಚುಂಚಗಿರಿ ವಿವಿಯಲ್ಲಿ ಸಹ ಕುಲಪತಿಗಳಾಗಿ ಕಾರ್ಯನಿರ್ವಹಿಸುತ್ತಿದ್ದರು.

ಮೂಲತಃ ಮೈಸೂರಿನವರಾದ ಇವರು ಮೈಸೂರು ವಿಶ್ವವಿದ್ಯಾನಿಲಯದಲ್ಲಿ ಎಂ.ಎಸ್ಸಿ ಹಾಗೂ ರಶ್ಯದ ಮಾಸ್ಕೋ ಸ್ಟೇಟ್ ಯುನಿವರ್ಸಿಟಿಯಿಂದ ಪಿ.ಎಚ್.ಡಿ. ಪದವಿಯನ್ನು ಪಡೆದು, ಮೈಸೂರು ವಿವಿಯಲ್ಲಿ ಪ್ರಾಧ್ಯಾಪಕರಾಗಿ ಅನೇಕ ವರ್ಷಗಳ ಕಾಲ ಸೇವೆ ಸಲ್ಲಿಸಿದ್ದರು.

ಇದನ್ನು ಓದಿದ್ದೀರಾ? ಈ ದಿನ ಸಂಪಾದಕೀಯ | ವಂಚಕರು, ನಂಬಿಕೆದ್ರೋಹಿಗಳು ಕೇವಲ ಒಂದು ಸಮುದಾಯಕ್ಕೆ ಸೇರಿದವರೇ?

2017-18ರ ಅವಧಿಯಲ್ಲಿ ಸರ್ ಸಿ.ವಿ.ರಾಮನ್ ಜನ್ಮ ಶತಮಾನೋತ್ಸವ ಪ್ರಶಸ್ತಿಗೆ ಅವರು ಭಾಜನರಾಗಿದ್ದರು.
ಮೃತರು, ಪತ್ನಿ, ಇಬ್ಬರು ಪುತ್ರರ ಸಹಿತ ಅಪಾರ ಬಂಧುಮಿತ್ರರನ್ನು ಅಗಲಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಕೋಲಾರ | ಜನಪ್ರತಿನಿಧಿಗಳನ್ನು ಕಡೆಗಣಿಸಿ ಕಾಮಗಾರಿ ನಡೆಸಿದರೆ ಸಹಿಸುವುದಿಲ್ಲ: ಶಾಸಕ ಡಾ.ಕೊತ್ತೂರು ಜಿ ಮಂಜುನಾಥ್ ಗರಂ

ಸ್ಥಳೀಯ ಜನಪ್ರತಿನಿಧಿಗಳ ಗಮನಕ್ಕೆ ತರದೆ ಹಾಗೂ ಶಿಷ್ಟಾಚಾರ ಪಾಲಿಸದೆ ಏಕಾಏಕಿ ಕಾಮಗಾರಿಗಳನ್ನು...

ಕೊಲ್ಹಾರ | ಶಾಸಕರಿಲ್ಲದ ಪ್ರಜಾಸೇವಾ ಆಂದೋಲನ: ಅಹವಾಲು ಹೊತ್ತುಬಂದವರಿಗೆ ನಿರಾಸೆ, ಅಧಿಕಾರಿಗಳಿಂದ ಪರಿಹಾರದ ಭರವಸೆ

ವಿಜಯಪುರ ಜಿಲ್ಲೆಯ ಕೊಲ್ಹಾರ ಪಟ್ಟಣದಲ್ಲಿ ಶಾಸಕರಿಲ್ಲದೆ ಪ್ರಜಾಸೇವಾ ಆಂದೋಲನ ನಡೆಯಿತು. ಇದರಿಂದಾಗಿ...

ಬಾಗಲಕೋಟೆ | ಹಾವು ಕಚ್ಚಿದರೆ ಕ್ಷಣವೂ ತಡಮಾಡದೆ, ಸರ್ಕಾರಿ ಆಸ್ಪತ್ರೆಯತ್ತ ಧಾವಿಸಿ: ಡಾ. ಮಹೇಶ ಕೋಣಿ

ಹಾವು ಕಡಿತಕ್ಕೆ ಒಳಗಾದವರು ಆತಂಕಕ್ಕೊಳಗಾಗಿ ನಾಟಿ ಚಿಕಿತ್ಸೆ, ನಕಲಿ ವೈದ್ಯರ ಮೊರೆ...

ರಾಯಚೂರು | ಕೆ. ಶಾಂತಪ್ಪ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷರಾಗಿರುವುದು ಸಂತಸದ ವಿಚಾರ: ಬೋಸರಾಜು

ಜಿಲ್ಲಾ ಕಾಂಗ್ರೆಸ್ ಸಮಿತಿಯ ನೂತನ ಅಧ್ಯಕ್ಷರಾಗಿ ಕೆ. ಶಾಂತಪ್ಪ ಅವರು ಜವಾಬ್ದಾರಿ...