ಇಂಡಿ ತಾಲೂಕಿನ ಕೆರೆಗಳಿಗೆ ಕಂದಾಯ ಉಪ ವಿಭಾಗಾಧಿಕಾರಿ ಭೇಟಿ; ರೈತರು ಜೋಡಿಸಿದ್ದ 25 ಪಂಪ್‌ಸೆಟ್‌ ಜಪ್ತಿ

Date:

Advertisements

ವಿಜಯಪುರ ಜಿಲ್ಲೆಯ ಇಂಡಿ ತಾಲೂಕಿನ ಕೆರೆಗಳಾದ ಸಂಗೋಗಿ, ತಡವಲಗಾ, ನಿಂಬಾಳ ಕೆಡಿ, ಹಂಜಗಿ ಕೆರೆಗಳಿಗೆ ಕಂದಾಯ ಉಪ ವಿಭಾಗಾಧಿಕಾರಿ ಅನುರಾಧಾ ವಸ್ತ್ರದ ಅವರ ನೇತೃತ್ವದಲ್ಲಿ ಆಕಸ್ಮಿಕ ಭೇಟಿ ನೀಡಿದರು.

ಸಂಗೋಗಿ ಕೆರೆಗೆ ರೈತರು ಜೋಡಿಸಿದ್ದ 25 ಪಂಪ್‌ಸೆಟ್‌ಗಳನ್ನು ಜಪ್ತಿ ಮಾಡಿ, ʼಕೆರೆಯ ನೀರು ಕೇವಲ ಕುಡಿಯುವ ನೀರಿಗಾಗಿ ಮಾತ್ರ ಬಳಸಲಾಗುತ್ತಿದ್ದು, ರೈತರು ಕೃಷಿಗೆ ಬಳಸಿದರೆ ಎಫ್‌ಐಆರ್ ದಾಖಲಿಸಲಾಗುವುದು” ಎಂದು ತಾಕೀತು ಮಾಡಿದರು.

“ಬೇಸಿಗೆ ಬೇಗೆಯ ಕಾವು ತಾಲೂಕಿನಾದಂತ ಏರುತ್ತಿರುವಂತೆಯೇ ತಾಲೂಕಿನಲ್ಲಿ ಜಲಸಂಕಟದ ಭೀತಿ ಎದುರಾಗಿದೆ. ಕೆರೆಗಳಲ್ಲಿ ನೀರಿನ ಮಟ್ಟ ಕಡಿಮೆಯಾಗಿದ್ದು, ಸದ್ಯ ಕೆರೆಯಲ್ಲಿರುವ ನೀರು ಕೇವಲ ಗ್ರಾಮದ ಜನರಿಗೆ ಉಪಯೋಗಕ್ಕೆ ಮಾತ್ರ ಬಳಸಲು ಆದೇಶವಿದೆ. ರೈತರು ಕೃಷಿಗೆ ಬಳಸಬಾರದು” ಎಂದು ಎಸಿ ಅನುರಾಧಾ ಹೇಳಿದರು.

Advertisements
ಪಂಪ್‌ಸೆಟ್‌ ಜಪ್ತಿ

“ಮೇ ತಿಂಗಳಲ್ಲಿ ಗ್ರಾಮದ ಜನರಿಗೆ ಕುಡಿಯುವ ನೀರಿನ ಸಲುವಾಗಿ ಕೆರೆಗಳಲ್ಲಿ ನೀರು ಸಂಗ್ರಹಿಸಲಾಗುತ್ತಿದೆ. ಅದನ್ನು ಕೃಷಿಗೆ ಬಳಸಿದರೆ ಮುಂದೆ ಕೆರೆ ತುಂಬಲು ಕಷ್ಟ. ಹೀಗಾಗಿ ಕೆರೆಯ ನೀರು ಬಳಸಬಾರದು” ಎಂದು ವಿನಂತಿಸಿದರು.

ಇಒ ನಂದೀಪ ರಾಠೋಡ, ಪುರಸಭೆ ಮುಖ್ಯಾಧಿಕಾರಿ ಮಹಾಂತೇಶ ಹಂಗರಗಿ, ಕಂದಾಯ ನಿರೀಕ್ಷಕ ಎಚ್ ಎಚ್ ಗುನ್ನಾಪುರ, ಪಿಡಿಒ ಅಶೋಕ ಹೊನವಾಡ, ಪಿಎಸ್‌ಐ ಎಸ್ ಬಿ ಗಂಗನಹಳ್ಳಿ ಸೇರಿದಂತೆ ಇತರರು ಇದ್ದರು.

ಮಹಿಳಾ ಧ್ವನಿ ಪ್ರಾಯೋಗಿಕ ಪತ್ರಿಕೆಯ 100ನೇ ಸಂಚಿಕೆ ಬಿಡುಗಡೆ

ಮಹಿಳಾ ವಿವಿ 3

ವಿಜಯಪುರ ನಗರದ ಕರ್ನಾಟಕ ರಾಜ್ಯ ಅಕ್ಕಮಹಾದೇವಿ ಮಹಿಳಾ ವಿಶ್ವವಿದ್ಯಾನಿಲಯದ ಪತ್ರಿಕೋದ್ಯಮ ಮತ್ತು ಸಮೂಹ ಸಂವಹನ ವಿಭಾಗದ ಮಹಿಳಾ ಧ್ವನಿ ಪ್ರಾಯೋಗಿಕ ಪತ್ರಿಕೆಯ 100ನೇ ಸಂಚಿಕೆಯನ್ನು ಮಹಿಳಾ ವಿವಿಯ ಹಂಗಾಮಿ ಕುಲಪತಿ ಪ್ರೊ. ಶಾಂತಾದೇವಿ ಟಿ ಬಿಡುಗಡೆ ಮಾಡಿದರು.

ಈ ಸುದ್ದಿ ಓದಿದ್ದೀರಾ? ವಿಜಯಪುರ | 8 ಮಂದಿ ಮಕ್ಕಳೊಂದಿಗೆ ಆರಂಭವಾದ ಶಾಲೆಯಲ್ಲಿ ಇಂದು 148 ದಾಖಲಾತಿ; ಕಾರಣವೇನು?

ಕುಲಸಚಿವ ಶಂಕರಗೌಡ ಸೋಮನಾಳ, ಮೌಲ್ಯಮಾಪನ ಕುಲಸಚಿವ ಪ್ರೊ. ಎಚ್ ಎಂ ಚಂದ್ರಶೇಖರ, ಪತ್ರಿಕೋದ್ಯಮ ಮತ್ತು ಸಮೂಹ ಸಂವಹನ ವಿಭಾಗದ ಮುಖ್ಯಸ್ಥ ಪ್ರೊ. ಓಂಕಾರ ಕಾಕಡೆ, ಸಹಾಯಕ ಪ್ರಾಧ್ಯಾಪಕ ಸಂದೀಪ, ಸಂಶೋಧನಾ ವಿದ್ಯಾರ್ಥಿನಿಯರು ಹಾಗೂ ಸ್ನಾತಕೋತ್ತರ ವಿದ್ಯಾರ್ಥಿನಿಯರು ಇದ್ದರು.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಯಾದಗಿರಿ | ಅತಿವೃಷ್ಟಿಯಿಂದ ಬೆಳೆ ಹಾನಿ: ರೈತರಿಗೆ ಪರಿಹಾರ ನೀಡುವಂತೆ ಆಗ್ರಹ

ಯಾದಗಿರಿ ಜಿಲ್ಲೆಯಲ್ಲಿ ಅತಿವೃಷ್ಟಿಯಿಂದ ಬೆಳೆ ಹಾನಿದ ರೈತರಿಗೆ ಸಮೀಕ್ಷೆ ನಡೆಸಿ ಶೀಘ್ರದಲ್ಲಿ...

ಗುಬ್ಬಿ | ಜನಪದ ಸಾಹಿತ್ಯ ಎಂದೆಂದಿಗೂ ಜೀವಂತ : ಡಾ.ಮೂರ್ತಿ ತಿಮ್ಮನಹಳ್ಳಿ

ಕನ್ನಡ ಸಾಹಿತ್ಯ ಲೋಕದಲ್ಲಿ ಹಲವು ಪ್ರಕಾರಗಳ ಪೈಕಿ ಜನಪದ ಸಾಹಿತ್ಯ...

ಉಡುಪಿ | ಮಹೇಶ್‌ ಶೆಟ್ಟಿ ತಿಮರೋಡಿ ಬೆಂಬಲಿಗರ ಕಾರು ಪೊಲೀಸ್‌ ಅಧೀಕ್ಷರಕ ಕಾರಿಗೆ ಡಿಕ್ಕಿ !

ಬೆಳ್ತಂಗಡಿಯ ಸೌಜನ್ಯ ಪರ ಹೋರಾಟಗಾರ ಮಹೇಶ್‌ ಶೆಟ್ಟಿ ತಿಮರೋಡಿಯವರನ್ನು ಬ್ರಹ್ಮಾವರ ಪೊಲೀಸ್...

ಚಿಕ್ಕಮಗಳೂರು l ಸಮಾಜದಲ್ಲಿ ಜಾತಿ,ಧರ್ಮಗಳ ಕಂದಕದ ಗೋಡೆಗಳನ್ನು ತೊಡೆದು ಹಾಕುವುದೇ ನಿಜವಾದ ಸಾಹಿತ್ಯ; ಸಾಹಿತಿ ಮನಸುಳಿ ಮೋಹನ್‌

ಚಿಕ್ಕಮಗಳೂರು ಜಿಲ್ಲೆ ತರೀಕೆರೆ ತಾಲೂಕಿನಲ್ಲಿ ಕನ್ನಡ ಸಾಹಿತ್ಯ ಪರಿಷತ್ತು ತಾಲ್ಲೂಕು ಸಮಿತಿ...

Download Eedina App Android / iOS

X