ಚಾಮರಾಜನಗರ | ಅಸಮತೋಲನ ನಿವಾರಣೆ ಕುರಿತು ಪರಾಮರ್ಶೆ : ಪ್ರೊ. ಎಂ ಗೋವಿಂದ ರಾವ್

Date:

ಚಾಮರಾಜನಗರದ ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ಜಿಲ್ಲಾ ಮಟ್ಟದ ಸಂವಾದ ಸಭೆಯಲ್ಲಿ ಪ್ರಾದೇಶಿಕ ಅಸಮತೋಲನ ನಿವಾರಣಾ ಸಮಿತಿ ಅಧ್ಯಕ್ಷರಾದ ಪ್ರೊ. ಎಂ. ಗೋವಿಂದ ರಾವ್ ಮಾತನಾಡಿ ಅಸಮತೋಲನ ನಿವಾರಣೆ ಕುರಿತು ಪರಾಮರ್ಶೆ ವರದಿ ನೀಡಲಾಗುವುದು ಎಂದರು.

- Advertisement -

ಸಭೆಯಲ್ಲಿ ಸಮಿತಿಯ ಸದಸ್ಯ ಕಾರ್ಯದರ್ಶಿಗಳು ಹಾಗೂ ವಿತ್ತೀಯ ಸುಧಾರಣೆ ಮತ್ತು ಯೋಜನಾ ಇಲಾಖೆಯ ಸರ್ಕಾರದ ಕಾರ್ಯದರ್ಶಿ ಡಾ. ಆರ್. ವಿಶಾಲ್, ಸಮಿತಿಯ ಸದಸ್ಯರು, ನಿರ್ದೇಶಕರು ಹಾಗೂ ಜಿಲ್ಲೆಯ ಶಾಸಕರು, ಹಿರಿಯ ಅಧಿಕಾರಿಗಳು, ವಿವಿಧ ಸಂಸ್ಥೆಗಳ ಪ್ರತಿನಿಧಿಗಳನ್ನುದ್ದೇಶಿಸಿ ” ಡಾ.ಡಿ.ಎಂ. ನಂಜುಂಡಪ್ಪ ವರದಿ ಅನುಷ್ಠಾನದ ಬಳಿಕ ಜಿಲ್ಲೆಗಳಲ್ಲಿ ಯಾವ ರೀತಿಯ ಬೆಳವಣಿಗೆ ಬದಲಾವಣೆಯಾಗಿದೆ, ಇನ್ನೂ ಏನೇನು ಅಭಿವೃದ್ದಿಯಾಗಬೇಕಿದೆ ಎಂಬುದನ್ನು ಗುರುತಿಸಿ ಹೊಸದಾಗಿ ಸೂಚ್ಯಂಕ ಆಧರಿಸಿ ಪ್ರಾದೇಶಿಕ ಅಸಮತೋಲನ ನಿವಾರಣೆಗೆ ಪರಾಮರ್ಶಿಸಿ ವರದಿ ನೀಡಲಾಗುವುದು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಕ್ಷಿಪಣಿ ಬಿಡಿಭಾಗಗಳ ಖರೀದಿಯಲ್ಲಿ ಸ್ವಜನಪಕ್ಷಪಾತ; ಬಿಡಿಎಲ್ ಮಾಜಿ ಮುಖ್ಯಸ್ಥನ...

ಕ್ಷಿಪಣಿಯ ಆಪ್ಟಿಕಲ್ ಸೈಟ್‌ಗಳ ಪೂರೈಕೆಗಾಗಿ ಭಾರತ್ ಡೈನಾಮಿಕ್ಸ್ ಲಿಮಿಟೆಡ್ (BDL) ತನ್ನದೇ ಸಂಸ್ಥೆಯ ಮಾಜಿ ಅಧ್ಯಕ್ಷ ಹಾಗೂ ವ್ಯವಸ್ಥಾಪಕ ನಿರ್ದೇಶಕರ (CMD) ಪತ್ನಿಯ ಒಡೆತನದ ಖಾಸಗಿ ಕಂಪನಿಗೆ 'ತುರ್ತು' ನೆಪವೊಡ್ಡಿ 56.8 ಕೋಟಿ...

ನುಡಿ ನಮನ | ಚೆರುವಯಲ್ ರಾಮನ್ – ಭತ್ತದ...

ಕೃಷಿ ಎಂದರೆ ಕೇವಲ ಬೆಳೆ ಬೆಳೆಯುವುದಲ್ಲ; ಬಿತ್ತನೆಗೆ ಸೂಕ್ತವಾದ ಬೀಜಗಳನ್ನು ಆಯ್ಕೆ ಮಾಡುವುದು, ಅವುಗಳನ್ನು ಸಂಗ್ರಹಿಸುವುದು ಹಾಗೂ ಮುಂದಿನ ಋತುವಿಗೆ ಉಳಿಸುವುದೂ ಕೃಷಿಯ ಅವಿಭಾಜ್ಯ ಅಂಗ ಎನ್ನುತ್ತಿದ್ದ ರಾಮನ್, ತಮ್ಮ ಇಡೀ ಜೀವನವನ್ನೇ...

ಬರಗಾಲದ ದಸರಾದಲ್ಲಿ ಕಂಬಳದ ಹಠ: ಜನಾಭಿಪ್ರಾಯಕ್ಕೆ ಬೆಲೆಯಿಲ್ಲವೇ?

ನೀರಿನ ಅಭಾವ, ಪರಿಸರ ನಾಶ, ಸಾರ್ವಜನಿಕ ಹಣದ ವೆಚ್ಚದ ನಡುವೆ ಸರ್ಕಾರದ ಸಮರ್ಥನೆ; ಇತಿಹಾಸದ ಹೆಸರಿನಲ್ಲಿ ವಿವಾದ, ಆಡಳಿತದ ನಡೆಗೆ ಸಾರ್ವಜನಿಕರ ಪ್ರಶ್ನೆ. ರಾಜ್ಯದ ಜನತೆ ಬರಗಾಲದ ಸಂಕಷ್ಟ ಎದುರಿಸುತ್ತಿರುವಾಗ, ರೈತರು ಮಳೆ-ಬೆಳೆಯಿಲ್ಲದೆ ಕಂಗಾಲಾಗಿರುವಾಗ,...

ಪ್ರಾದೇಶಿಕ ಅಸಮತೋಲನ ನಿವಾರಣೆ ಕುರಿತ ಡಾ. ಡಿ.ಎಂ. ನಂಜುಂಡಪ್ಪ ಅಧ್ಯಕ್ಷತೆಯ ಸಮಿತಿಯು 2002ರಲ್ಲಿ ವರದಿ ನೀಡಿದ ಶಿಫಾರಸಿನ ಅನ್ವಯ ಗುರುತಿಸಲಾದ ಹಿಂದುಳಿದ ತಾಲೂಕುಗಳ ಅಭಿವೃದ್ದಿಗೆ ಸರ್ಕಾರ 43 ಸಾವಿರ ಕೋಟಿ ರೂ. ವೆಚ್ಚ ಮಾಡಿದೆ. ಈ ತಾಲೂಕುಗಳಲ್ಲಿ ಯಾವ ರೀತಿಯ ಬೆಳವಣಿಗೆಯಾಗಿದೆ, ಯಾವ ತಾಲೂಕುಗಳಲ್ಲಿ ಇನ್ನೂ ಹಿಂದುಳಿದ ಪ್ರದೇಶಗಳು ಮುಂದುವರೆದಿವೆ ಎಂಬುದನ್ನು ಸಮಿತಿ ಪರಾಮರ್ಶಿಸಲಿದೆ ” ಎಂದರು.

” ಅಸಮತೋಲನ ಹೆಚ್ಚಾದಾಗ ಪ್ರದೇಶಗಳು ಹಿಂದುಳಿಯಲಿವೆ. ನಂಜುಂಡಪ್ಪ ವರದಿ ಅನುಷ್ಠಾನದಿಂದ ಹೇಗೆ ಅಭಿವೃದ್ದಿಯಾಗಿದೆ ಎಂಬುದನ್ನು ಸೂಚ್ಯಂಕದ ಅಧಾರದ ಮೇಲೆ ನೋಡಲಾಗುತ್ತದೆ. ಹಿಂದುಳಿದಿದ್ದಲ್ಲಿ ಯಾವ ಕಾರಣಕ್ಕಾಗಿ ಯಾವ ಕ್ಷೇತ್ರದಲ್ಲಿ ಹಿಂದೆ ಉಳಿದಿದೆ ಎಂಬುದನ್ನು ಸಮಿತಿಯು ಪರಾಮರ್ಶಿಸಲಿದೆ. ತಲಾ ಆದಾಯ, ಶಿಕ್ಷಣ, ಆರೋಗ್ಯ, ಇನ್ನಿತರ ಕ್ಷೇತ್ರಗಳಲ್ಲಿನ ಸುಧಾರಣೆ, ಬೆಳವಣಿಗೆಯ ಬಗ್ಗೆಯು ಸಮಿತಿಯು ಪರಿಶೀಲಿಸಲಿದೆ. ಎಲ್ಲ ಅಂಶಗಳನ್ನು ಗಮನಿಸಿ ಅಧ್ಯಯನ ಮಾಡಿ ಸರ್ಕಾರಕ್ಕೆ ವರದಿ ಸಲ್ಲಿಸಲಾಗುತ್ತದೆ ” ಎಂದರು.

ಸಮಿತಿಯ ಸದಸ್ಯ ಕಾರ್ಯದರ್ಶಿಗಳು ಹಾಗೂ ವಿತ್ತೀಯ ಸುಧಾರಣೆ ಮತ್ತು ಯೋಜನಾ ಇಲಾಖೆಯ ಸರ್ಕಾರದ ಕಾರ್ಯದರ್ಶಿಗಳಾದ ಡಾ. ಆರ್. ವಿಶಾಲ್ ಮಾತನಾಡಿ ” ಕರ್ನಾಟಕ ಪ್ರಾದೇಶಿಕ ಅಸಮತೋಲನ ನಿವಾರಣಾ ಸಮಿತಿಯು ಹೊಸ ಸೂಚ್ಯಂಕಗಳನ್ನು ಆಧರಿಸಿ ಶಿಫಾರಸು ಮಾಡಬೇಕಿದೆ. ಅಸಮತೋಲನ ನಿವಾರಣೆ ಸಂಬಂಧ ಜಿಲ್ಲೆಗಳಿಗೆ ಭೇಟಿ ನೀಡಿ ಸಂವಾದ ನಡೆಸಿ ಅಭಿಪ್ರಾಯ ಸಲಹೆಗಳನ್ನು ಪಡೆಯಲಾಗುತ್ತಿದೆ. ಅಗಬೇಕಿರುವ ಅಭಿವೃದ್ದಿಗಳ ಸಂಬಂಧ ಸ್ಥಳೀಯವಾಗಿ ಚರ್ಚಿಸಿ ವಿವರ ಪಡೆದುಕೊಳ್ಳಲಾಗುತ್ತಿದೆ ” ಎಂದರು.

ಶಾಸಕರಾದ ಎ.ಆರ್. ಕೃಷ್ಣಮೂರ್ತಿ ಮಾತನಾಡಿ ‘ ಜಿಲ್ಲೆಯಲ್ಲಿ ಸಾಕಷ್ಟು ಅರಣ್ಯ ಪ್ರದೇಶವಿದ್ದು ಹಿಂದುಳಿದವರು, ಪರಿಶಿಷ್ಟ ಜಾತಿ, ಪರಿಶಿಷ್ಟ ವರ್ಗದವರು ಹೆಚ್ಚಿನ ಸಂಖ್ಯೆಯಲ್ಲಿದ್ದಾರೆ. ಶಾಲೆಗಳಿಗೆ ಅಗತ್ಯ ಸಂಖ್ಯೆಗೆ ಅನುಗುಣವಾಗಿ ನುರಿತ ಶಿಕ್ಷಕರ ನೇಮಕವಾಗಬೇಕಿದೆ. ಕೌಶಲ್ಯ ಅಭಿವೃದ್ದಿಗೆ ಗಮನಹರಿಸಿ ಸ್ಥಳೀಯರಿಗೆ ಉದ್ಯೋಗ ಅವಕಾಶಗಳನ್ನು ನೀಡಬೇಕಿದೆ. ಪ್ರವಾಸಿ ತಾಣ, ಧಾರ್ಮಿಕ ಕ್ಷೇತ್ರಗಳು, ಅರಣ್ಯಧಾಮಗಳಂತಹ ಪ್ರವಾಸಿ ಸ್ಥಳಗಳಿದ್ದು ಪ್ರವಾಸೋದ್ಯಮ ಅಭಿವೃದ್ದಿಗೆ ಜಿಲ್ಲೆ ಪೂರಕವಾಗಿದೆ. ಕಬಿನಿ 2ನೇ ಹಂತ ಜಾರಿಯಾದರೆ ಅನುಕೂಲವಾಗಲಿದೆ. ಹೀಗೆ ಹಲವು ಕ್ಷೇತ್ರಗಳ ಅಭಿವೃದ್ದಿ ಬಗ್ಗೆ ಸಮಿತಿಯು ಗಮನಿಸಿ ಶಿಫಾರು ಮಾಡಬೇಕು ‘ ಎಂದರು.

ಶಾಸಕರಾದ ಎಂ.ಆರ್. ಮಂಜುನಾಥ್ ಮಾತನಾಡಿ ‘ ಹನೂರು ಕ್ಷೇತ್ರದಲ್ಲಿ ನೀರಾವರಿಗೆ ಹೆಚ್ಚಿನ ಆದ್ಯತೆ ಕಲ್ಪಿಸಬೇಕು. ಕ್ಷೇತ್ರದಲ್ಲಿ ಯಾವುದೇ ಕೈಗಾರಿಕೆ ಪ್ರದೇಶಗಳಿಲ್ಲ. ಹೀಗಾಗಿ ಉದ್ಯೋಗಕ್ಕಾಗಿ ಬೇರೆಕಡೆ ಸ್ಥಳೀಯರು ಹೋಗಬೇಕಿದೆ. ಕಾಡಂಚಿನ ಗ್ರಾಮಗಳು, ರಸ್ತೆ ಸಂಪರ್ಕಗಳು ಇಲ್ಲದ ಕಾರಣ ವಿದ್ಯಾರ್ಥಿಗಳಿಗೆ ತೀವ್ರ ತೊಂದರೆಯಾಗಿದೆ. ಉದ್ಯೋಗ ಸೃಷ್ಟಿ, ರೈತರಿಗೆ ನೆರವು, ಆರೋಗ್ಯ ಕ್ಷೇತ್ರದ ಸುಧಾರಣೆಯಾಗಬೇಕಿದೆ ‘ ಎಂದು ಸಮಿತಿಯ ಗಮನಕ್ಕೆ ತಂದರು.

ಜಿಲ್ಲಾಧಿಕಾರಿ ಶಿಲ್ಪಾ ನಾಗ್ ಮಾತನಾಡಿ ‘ ಇಲ್ಲಿ ಉತ್ಪಾದಿಸುವ ಬೆಳೆಗಳಿಗೆ ಮೌಲ್ಯವರ್ಧನೆ ಆಗಬೇಕಿದೆ. ಜಿಲ್ಲೆಯ ಪ್ರವಾಸಿ ತಾಣಗಳ ಅಭಿವೃದ್ದಿ ಸಂಬಂಧ ವಿಸೃತ ಯೋಜನೆ ತಯಾರಿಸಲಾಗಿದೆ. ಮೂಲ ಸೌಕರ್ಯಗಳ ಅಭಿವೃದ್ದಿಗೆ ಒತ್ತು ಕೊಡಲಾಗಿದೆ. ಬೆಳೆಗಳಿಗೆ ಬೆಂಬಲ ಬೆಲೆ, ಉದ್ಯೋಗ ಸೃಷ್ಠಿ, ನೀರಾವರಿ, ಸೂಪರ್ ಸ್ಪೆಶಾಲಿಟಿ ಆಸ್ಪತ್ರೆಗಳು, ಸಣ್ಣ ಉದ್ಯಮಗಳಿಗೂ ಹೆಚ್ಚಿನ ಉತ್ತೇಜನ, ಶಿಕ್ಷಣ ಸಂಸ್ಥೆಗಳಿಗೆ ಮೂಲ ಸೌಕರ್ಯ, ಕಾಡು ಪ್ರಾಣಿಗಳಿಂದ ಬೆಳೆಗಳ ರಕ್ಷಣ, ಟೆಕ್‍ಟೈಲ್ಸ್ ಹಬ್, ಜಿ.ಎಸ್.ಟಿ ವಿನಾಯಿತಿ, ಬ್ಯಾಂಕುಗಳಿಂದ ಸಾಲ ಸೌಲಭ್ಯ, ವಿದ್ಯಾರ್ಥಿಗಳಿಗೆ ಕ್ರೀಡಾ ಕ್ಷೇತ್ರದಲ್ಲಿ ಪ್ರೋತ್ಸಾಹ, ಕೃಷಿ ಆಧಾರಿತ ಕೈಗಾರಿಕೆಗಳು, ಅತಿಥಿ ಶಿಕ್ಷಕರಿಗೆ ಹೆಚ್ಚಿನ ಗೌರವಧನ, ರೇಷ್ಮೆ ಅಭಿವೃದ್ದಿ ಪುನಶ್ಚೇತನ ‘ ಸೇರಿದಂತೆ ಇನ್ನಿತರ ಅಂಶಗಳ ಬಗ್ಗೆ ಮಾಹಿತಿ ನೀಡಿದರು.

ಈ ಸುದ್ದಿ ಓದಿದ್ದೀರಾ? ಚಾಮರಾಜನಗರ | ಮೇ. 15 ರಂದು ಚಾಮರಾಜೇಶ್ವರ ದೇವಾಲಯ ಆವರಣದಲ್ಲಿ ಮಾಕ್ ಡ್ರಿಲ್

ಕರ್ನಾಟಕ ಪ್ರಾದೇಶಿಕ ಅಸಮತೋಲನ ನಿವಾರಣಾ ಸಮಿತಿಯ ಸದಸ್ಯ ಡಾ. ಎಂ.ಹೆಚ್. ಸೂರ್ಯನಾರಾಯಣ, ನಿರ್ದೇಶಕ ಚಂದ್ರಶೇಖರ್, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಮೋನಾ ರೋತ್, ಹೆಚ್ಚುವರಿ ಜಿಲ್ಲಾಧಿಕಾರಿ ಗೀತಾ ಹುಡೇದ, ಜಿಲ್ಲಾ ಮಟ್ಟದ ಅಧಿಕಾರಿಗಳು ಸಭೆಯಲ್ಲಿ ಇದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಮೈಸೂರು | ‘SIR’ ವಿರುದ್ಧ ಮಾನಸಗಂಗೋತ್ರಿಯಲ್ಲಿ ಪ್ರತಿಭಟನಾ ಜಾಥಾ

ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯನ್ನು ವಿರೋಧಿಸಿ, ಸಂವಿಧಾನದ...

ಕಂಬಳ, ತುಳುನಾಡಿನ ಟ್ಯಾಬ್ಲೋ ಈ ಬಾರಿಯ ಮೈಸೂರು ದಸರಾದ ಭಾಗವಾಗಿವೆ: ಸಿಎಂ ಡಿ ಕೆ ಶಿವಕುಮಾರ್

“ಕರಾವಳಿಯ ಕಂಬಳ, ತುಳುನಾಡಿನ ಟ್ಯಾಬ್ಲೋ ಈ ಬಾರಿಯ ಮೈಸೂರು ದಸರಾದ ಭಾಗವಾಗಿವೆ”...

ಕೋಲಾರ | ಟಾಟಾ ಎಲೆಕ್ಟ್ರಾನಿಕ್ಸ್‌ನಲ್ಲಿ ಮಹಿಳಾ ಕಾರ್ಮಿಕರ ಸಾವು: ಸಮಗ್ರ ತನಿಖೆಗೆ ಸಿಐಟಿಯು ಒತ್ತಾಯ

ನರಸಾಪುರ ಕೈಗಾರಿಕಾ ಪ್ರದೇಶದ ಟಾಟಾ ಎಲೆಕ್ಟ್ರಾನಿಕ್ಸ್ ಕಂಪನಿಯಲ್ಲಿ ಮಹಿಳಾ ಕಾರ್ಮಿಕರ ಸಾವಿನ...

ಮಹಿಳೆಯರ ಸ್ವಾವಲಂಬನೆಗೆ ಬಿ.ಎಸ್ ಡಬ್ಲ್ಯೂ ಹೊಲಿಗೆ ತರಬೇತಿ ಶಿಬಿರ ಪೂರಕ: ರಾಮಕೃಷ್ಣ

"ಮಹಿಳೆಯರು ಕೌಶಲ್ಯಾಧಾರಿತ ತರಬೇತಿಯನ್ನು ಪಡೆದು ಆರ್ಥಿಕವಾಗಿ ಸ್ವಾವಲಂಬಿಗಳಾಗಲು ಉಚಿತ ಹೊಲಿಗೆ ತರಬೇತಿ...