ರೈತ ವಿರೋಧಿ ಕಾಯ್ದೆಗಳ ಮರುಪರಿಶೀಲನೆ: ಸಿಎಂ ಸಿದ್ದರಾಮಯ್ಯ ಭರವಸೆ

Date:

ಭೂ ಸುಧಾರಣಾ ಕಾಯ್ದೆ ತಿದ್ದುಪಡಿ, ಎಪಿಎಂಸಿ ಕಾಯ್ದೆ ತಿದ್ದುಪಡಿ ಹಾಗೂ ಜಾನುವಾರು ಹತ್ಯೆ ಕಾಯ್ದೆ ತಿದ್ದುಪಡಿ ಮೊದಲಾದವುಗಳ ಮರುಪರಿಶೀಲನೆ ಮಾಡುವುದಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ತಿಳಿಸಿದರು.

ಬುಧವಾರ ತಮ್ಮನ್ನು ಭೇಟಿ ಮಾಡಿದ ವಿವಿಧ ರೈತ ಮುಖಂಡರ ಜೊತೆ ಸಿದ್ದರಾಮಯ್ಯ ಮಾತುಕತೆ ನಡೆಸಿದರು. ಈ ವೇಳೆ “ಕೇಂದ್ರ ಸರ್ಕಾರವು ಕಾರ್ಪೊರೇಟ್‌ ಕೃಷಿಯನ್ನು ಪರಿಚಯಿಸುವುದರಿಂದ ಶೇ. 85 ಕ್ಕೂ ಹೆಚ್ಚಿನ ಪ್ರಮಾಣದಲ್ಲಿರುವ ಸಣ್ಣ ಮತ್ತು ಅತಿ ಸಣ್ಣ ರೈತರಿಗೆ ತೊಂದರೆಯಾಗಲಿದೆ” ಎಂದು ರೈತ ಮುಖಂಡರು ಆತಂಕ ವ್ಯಕ್ತಪಡಿಸಿದರು.

ಕೃಷಿ ಕ್ಷೇತ್ರದ ಅಭಿವೃದ್ಧಿಗೆ ಅಗತ್ಯವಿರುವ ನೀತಿ, ನಿಯಮಾವಳಿಗಳ ಕುರಿತು ವಿವರವಾಗಿ ಪ್ರತ್ಯೇಕವಾಗಿ ಚರ್ಚಿಸಲು ಪ್ರತ್ಯೇಕ ಸಭೆ ನಡೆಸುವುದಾಗಿ ಮುಖ್ಯಮಂತ್ರಿಗಳು ತಿಳಿಸಿದರು.

ಬಡಗಲಪುರ ನಾಗೇಂದ್ರ, ಚಾಮರಸ ಮಾಲಿ ಪಾಟೀಲ್, ಜಿ.ಸು.ಬೈಯ್ಯಾ ರೆಡ್ಡಿ, ಎಚ್.ಆರ್.ಬಸವರಾಜಪ್ಪ ಸೇರಿದಂತೆ ಹಲವಾರು ಮುಖಂಡರು ನಿಯೋಗದಲ್ಲಿದ್ದರು.

ಈ ದಿನ ಡೆಸ್ಕ್‌
Website | + posts

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಹೆಚ್ಚು ಓದಿಸಿಕೊಂಡ ಲೇಖನಗಳು

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಚಾಮರಾಜನಗರ | ಜಾತಿ ನಿಂದನೆ; ನಟ ಉಪೇಂದ್ರ ಬಂಧನಕ್ಕೆ ಆಗ್ರಹ

ನಟ ಉಪೇಂದ್ರ ಅವರು, ʼಊರು ಇದ್ದಲ್ಲಿ ಹೊಲಗೇರಿʼ ಎನ್ನುವ ಮಾತನ್ನು ಹೇಳುವುದರ...

ಕಾವೇರಿ ವಿವಾದ | ಬೆಂಗಳೂರು ಬಂದ್‌ಗೆ ಎಫ್‌ಐಟಿಯು ಬೆಂಬಲ: ಅಬ್ದುಲ್ ರಹಿಮಾನ್

ಕಾವೇರಿ ಜಲ ವಿವಾದದ ಹಿನ್ನಲೆಯಲ್ಲಿ ಮಂಗಳವಾರ ನಡೆಯಲಿರುವ ಬೆಂಗಳೂರು ಬಂದ್‌ಗೆ ಫೆಡರೇಶನ್...

ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ ಮಹಿಳಾ ಮೀಸಲು ಮಸೂದೆಗೆ ತಿದ್ದುಪಡಿ: ಮಲ್ಲಿಕಾರ್ಜುನ ಖರ್ಗೆ

2024ರಲ್ಲಿ ಕೇಂದ್ರದಲ್ಲಿ ಅಧಿಕಾರಕ್ಕೆ ಬಂದರೆ ಮಹಿಳಾ ಮೀಸಲಾತಿ ಮಸೂದೆಗೆ ತಿದ್ದುಪಡಿ ತರುವುದಾಗಿ...

ಬೀದರ್‌ | ಪಡಿತರದಲ್ಲಿ ಅಕ್ರಮ; 22 ನ್ಯಾಯಬೆಲೆ ಅಂಗಡಿಗಳ ಅಮಾನತು

ಪಡಿತರ ಮಾರಾಟದಲ್ಲಿ ನಿಗದಿತ ಬೆಲೆಗಿಂತ ಹೆಚ್ಚು ದರ ವಿಧಿಸುವುದು, ಇಲ್ಲವೇ ಬಯೋಮೆಟ್ರಿಕ್‌...