ಕೊಪ್ಪಳ | ಕರಪತ್ರ, ಬ್ಯಾನರ್, ಪೋಸ್ಟರ್ ಮುದ್ರಿಸಲು ಆರ್‌ಓ ಅನುಮತಿ ಕಡ್ಡಾಯ: ಜಿಲ್ಲಾಧಿಕಾರಿ

Date:

  • ಚುನಾವಣಾ ಬಹಿಷ್ಕಾರದ ಕರಪತ್ರ ಮತ್ತು ಬ್ಯಾನರ್ ಮುದ್ರಿಸುವಂತಿಲ್ಲ
  • ಜಿಲ್ಲೆಯ ಪ್ರಿಂಟಿಂಗ್ ಪ್ರೆಸ್ ಮಾಲೀಕರು ಮತ್ತು ಪ್ರತಿನಿಧಿಗಳೊಂದಿಗೆ ಸಭೆ

ರಾಜ್ಯಾದ್ಯಂತ ಚುನಾವಣಾ ನೀತಿ ಸಂಹಿತೆ ಜಾರಿಯಾಗಿರುವ ಹಿನ್ನೆಲೆಯಲ್ಲಿ, ರಾಜಕೀಯ ಪಕ್ಷಗಳ ಮತ್ತು ರಾಜಕೀಯ ಅಭ್ಯರ್ಥಿಗಳ ಕರಪತ್ರ, ಪೋಸ್ಟರ್ ಮತ್ತು ಬ್ಯಾನರ್‌ಗಳನ್ನು ಮುದ್ರಿಸುವ ಮೊದಲು ಆಯಾ ವಿಧಾನಸಭಾ ಮತಕ್ಷೇತ್ರಗಳ ಚುನಾವಣಾಧಿಕಾರಿ (ಆರ್‌ಓ) ಅನುಮತಿ ಪಡೆಯುವುದು ಕಡ್ಡಾಯ ಎಂದು ಕೊಪ್ಪಳ ಜಿಲ್ಲಾ ಚುನಾವಣಾಧಿಕಾರಿಯೂ ಆಗಿರುವ ಜಿಲ್ಲಾಧಿಕಾರಿ ಎಂ ಸುಂದರೇಶಬಾಬು ಹೇಳಿದ್ದಾರೆ.

- Advertisement -

ಕೊಪ್ಪಳ ಜಿಲ್ಲಾಡಳಿತ ಭವನದಲ್ಲಿ ಜಿಲ್ಲೆಯ ಪ್ರಿಂಟಿಂಗ್ ಪ್ರೆಸ್ ಮಾಲೀಕರು ಮತ್ತು ಪ್ರತಿನಿಧಿಗಳೊಂದಿಗೆ ಸಭೆ ನಡೆಸಿದರು. ಈ ವೇಳೆ ಮಾತನಾಡಿ, “ಯಾವುದೇ ರೀತಿಯ ಅಪಪ್ರಚಾರ, ಸುಳ್ಳು ಮಾಹಿತಿ, ಕೋಮುಗಲಭೆ ಸೃಷ್ಟಿಸುವಂತಹ ಕರಪತ್ರ, ಪೋಸ್ಟರ್ ಮತ್ತು ಬ್ಯಾನರ್‌ಗಳನ್ನು ಮುದ್ರಿಸಲು ಅವಕಾಶವಿರುವುದಿಲ್ಲ. ಯಾವುದೇ ನಿಬಂಧನೆಗಳನ್ನು ಉಲ್ಲಂಘಿಸಿದರೆ ಜೈಲು ಶಿಕ್ಷೆ ಮತ್ತು ದಂಡ ವಿಧಿಸಲಾಗುತ್ತದೆ” ಎಂದು ಎಚ್ಚರಿಕೆ ನೀಡಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಮೋದಿ ಆಡಳಿತದಲ್ಲಿ ಮಾಹಿತಿ ಹಕ್ಕು ಕಾಯ್ದೆಯ ‘ಸ್ಥಿತಿ’ ಹೇಗಿದೆ?...

ಯಾವುದೇ ಸರ್ಕಾರ ಆಡಳಿತದಲ್ಲಿರಲಿ ಪ್ರಜಾಸತ್ತಾತ್ಮಕ ವ್ಯವಸ್ಥೆಯನ್ನು ಕಾಪಾಡಬೇಕಾದ ಸಂಸ್ಥೆಗಳ ಸ್ವಾಯತ್ತತೆ ಉಳಿಯಬೇಕು. ಅವು ಪಾರದರ್ಶಕವಾಗಿರಬೇಕು. ಪ್ರಜಾಸತ್ತೆಯ ಕಾರ್ಯವೈಖರಿಯನ್ನು ಕುರಿತಂತೆ ಮುಕ್ತ ಚರ್ಚೆ ನಡೆಯುತ್ತಿರಬೇಕು. ಇದು ಸಕ್ರಿಯ, ಅರ್ಥಪೂರ್ಣ ಪ್ರಜಾಸತ್ತೆಯ ಕನಿಷ್ಠ ಅವಶ್ಯಕತೆ. ಹಾಗಾಗಿ...

ಬಂಗಾಳ ವಿಭಜನೆ | ವಿಭಜನೆಯ ವಿಷಬೀಜದಿಂದ ಒಗ್ಗಟ್ಟಿನ ಜ್ಯೋತಿ...

ಬ್ರಿಟಿಷರ 'ಒಡೆದು ಆಳುವ ನೀತಿ'ಯ ಭಾಗವಾಗಿ 1905ರ ಅಕ್ಟೋಬರ್‌ನಲ್ಲಿ ಜಾರಿಗೆ ಬಂದ ಬಂಗಾಳ ವಿಭಜನೆಯು ಭಾರತೀಯರ ರಾಷ್ಟ್ರೀಯತೆಯನ್ನು ಒಡೆಯುವ ಕುತಂತ್ರವಾಗಿತ್ತು. ಇದಕ್ಕೆ ಪ್ರತಿಯಾಗಿ ಭಾರತೀಯರು 'ರಾಷ್ಟ್ರೀಯ ಶೋಕ ದಿನ' ಆಚರಿಸಿ, ಪರಸ್ಪರ ರಾಖಿ...

ನಟ ಇಮ್ರಾನ್ ಖಾನ್ ಪ್ರತಿಭಟಿಸಿದರೆ ಗಡಿಪಾರು; ಟ್ರಂಪ್ ಪರ...

ಕಾನೂನು ಮತ್ತು ರಾಜತಾಂತ್ರಿಕ ನಿಯಮಗಳು ಎಲ್ಲರಿಗೂ ಒಂದೇ ಆಗಿರಬೇಕು ಹೊರತು ಪ್ರಧಾನಿ ಮೋದಿಯವರ ರಾಜಕೀಯ ಅನುಕೂಲಕ್ಕೆ ತಕ್ಕಂತೆ ಬದಲಾಗಬಾರದು. ವಿದೇಶಿ ಪ್ರಜೆಯೊಬ್ಬ ಭಾರತದ ನೆಲದಲ್ಲಿ ಪ್ರತಿಭಟನೆಯಲ್ಲಿ ಪಾಲ್ಗೊಳ್ಳುವುದು ತಪ್ಪು ಎನ್ನುವುದಾದರೆ, ಭಾರತದ ಪ್ರಧಾನಿಯೊಬ್ಬರು...

“ಮುದ್ರಕರು ಕತಪತ್ರಗಳು ಮತ್ತು ಪೋಸ್ಟರ್‌fಗಳನ್ನು ಮುದ್ರಿಸುವ ಮೊದಲು ಪ್ರಕಾಶಕರ ಗುರುತಿನ ಬಗ್ಗೆ ದೃಢೀಕರಣವನ್ನು ಇಬ್ಬರು ಅನುಮೋದಕರೊಂದಿಗೆ ಪಡೆದಿರಲೇಬೇಕು. ಗುರುತಿನ ದೃಢೀಕರಣವಿಲ್ಲದೇ ಮುದ್ರಣ ಮಾಡಬಾರದು. ಪ್ರಿಂಟಿಂಗ್ ಪ್ರೆಸ್ ಮಾಲೀಕರು ತಾವು ಮುದ್ರಿಸುವ ಒಂದು ಪ್ರತಿಯನ್ನು ನಿಗದಿತ ನಮೂನೆಯಲ್ಲಿ ಆರ್‌ಓಗಳಿಗೆ ಸಲ್ಲಿಸಬೇಕು. ಯಾವುದೇ ಜಾತ್ರೆ ಮತ್ತು ಧಾರ್ಮಿಕ ಕಾರ್ಯಕ್ರಮಗಳಿಗೆ ಮುದ್ರಣವಾಗುವ ಕರಪತ್ರಗಳಲ್ಲಿ ಅಭ್ಯರ್ಥಿಗಳ ಭಾವಚಿತ್ರ ಹಾಕಬಾರದು” ಎಂದು ಮಾಹಿತಿ ನೀಡಿದರು.

ಈ ಸುದ್ದಿ ಓದಿದ್ದೀರಾ?: ಮಂಡ್ಯ | ಅಂಗನವಾಡಿ ಕೇಂದ್ರಕ್ಕೆ ಕಳಪೆ ಆಹಾರ ಪೂರೈಕೆ; ಪೋಷಕರ ಆರೋಪ

ಅಪರ ಜಿಲ್ಲಾಧಿಕಾರಿ ಸಾವಿತ್ರಿ ಬಿ ಕಡಿ ಮಾತನಾಡಿ, “ಪ್ರತಿ ಪೇಜಿನ ಮುದ್ರಣಕ್ಕೆ ಈಗಾಗಲೇ ಹಣ ನಿಗದಿಪಡಿಸಲಾಗಿದೆ. ಕರಪತ್ರ, ಫಲಕ, ಪೋಸ್ಟರ್, ಬ್ಯಾನರ್ ಮುಂಭಾಗದಲ್ಲಿ ಮುದ್ರಕರ ಹೆಸರು, ಪ್ರಕಾಶಕರ ಹೆಸರು, ಮೊಬೈಲ್ ಸಂಖ್ಯೆ ಮತ್ತು ಮುದ್ರಣ ಪ್ರತಿಗಳ ಸಂಖ್ಯೆ ನಮೂದಿಸಬೇಕು. ಯಾವುದೇ ಜಾತಿ, ಧರ್ಮದ ಜನರ ಭಾವನೆಗೆ ಧಕ್ಕೆ ತರುವ ವಿಷಯವನ್ನು ಮುದ್ರಿಸಬಾರದು” ಎಂದು ತಿಳಿಸಿದರು.

“ಭಾರತ ಚುನಾವಣಾ ಆಯೋಗದ ಮಾರ್ಗಸೂಚಿ ಅನುಸಾರ ಬ್ಯಾನರ್, ಪ್ಲೆಕ್ಸ್, ಕರಪತ್ರ ಮುದ್ರಣವಾಗದೇ ನಿಯಮವನ್ನು ಉಲ್ಲಂಘಿಸಿದಲ್ಲಿ ಪ್ರಜಾಪ್ರತಿನಿಧಿ ಕಾಯ್ದೆ ಅನ್ವಯ ಶಿಕ್ಷೆಗೆ ಗುರಿಯಾಗಬೇಕಾಗುತ್ತದೆ. ಚುನಾವಣಾ ಬಹಿಷ್ಕಾರದಂತಹ ಪೋಸ್ಟರ್, ಕರಪತ್ರ ಮತ್ತು ಬ್ಯಾನರ್ ಮುದ್ರಿಸುವುದು ಕಾಯ್ದೆಯ ಉಲ್ಲಂಘನೆಯಾಗುತ್ತದೆ” ಎಂದು ತಿಳಿಸಿದರು.

ಚುನಾವಣಾ ವೆಚ್ಚದ ನೋಡಲ್ ಅಧಿಕಾರಿ ಅಮಿನ್ ಅತ್ತಾರ ಅವರು ಇತರೆ ಮಾಹಿತಿಯನ್ನು ವಿವರಿಸಿದರು. ಸಭೆಯಲ್ಲಿ ಜಿಲ್ಲಾ ವಾರ್ತಾಧಿಕಾರಿ ಗವಿಸಿದ್ದಪ್ಪ ಹೊಸಮನಿ, ಜಿಲ್ಲೆಯ ವಿವಿಧ ಪ್ರಿಂಟಿಂಗ್ ಪ್ರೆಸ್ ಮಾಲೀಕರು ಮತ್ತು ಪ್ರತಿನಿಧಿಗಳು ಹಾಜರಿದ್ದರು.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಉಡುಪಿ | ಕಾರ್ಮಿಕರು ಹಕ್ಕು ಮತ್ತು ಸೌಲಭ್ಯಗಳಿಂದ ವಂಚಿತರಾಗದಂತೆ ನೋಡಿಕೊಳ್ಳಿ: ಟಿ.ಎಂ. ಶಾಹಿದ್ ತೆಕ್ಕಿಲ್

ಕಾರ್ಮಿಕರ ಹಿತಾಸಕ್ತಿಯನ್ನು ಕಾಪಾಡುವುದರೊಂದಿಗೆ ಸರ್ಕಾರದ ಕಲ್ಯಾಣ ಕಾರ್ಯಕ್ರಮಗಳು ಅರ್ಹ ಫಲಾನುಭವಿಗಳಿಗೆ ತಲುಪುವಂತೆ...

ಬಾಗೇಪಲ್ಲಿಯಲ್ಲಿ ರಸ್ತೆ ಅಪಘಾತ:ರೈತ ನಂಜಪ್ಪ ಸಾವು

ಕೆಎಸ್‌ಆರ್‌ಟಿಸಿ ಬಸ್ ಡಿಕ್ಕಿ ಹೊಡೆದು ದ್ವಿಚಕ್ರ ವಾಹನದಲ್ಲಿ ಹೊಲಕ್ಕೆ ತೆರಳುತ್ತಿದ್ದ ನಡಂಪಲ್ಲಿ...

ಮಂಗಳೂರು | ಕೊಳ್ತಮಜಲು ರಹ್ಮಾನ್ ಹತ್ಯೆ ಪ್ರಕರಣ: ಆರೋಪಿಗಳ ಜಾಮೀನು ರದ್ದುಪಡಿಸಿದ ಸುಪ್ರೀಂ ಕೋರ್ಟ್

ಕೊಳ್ತಮಜಲು ರಹ್ಮಾನ್ ಹತ್ಯೆ ಪ್ರಕರಣದಲ್ಲಿ ಆರೋಪಿಗಳಿಗೆ ಇತ್ತೀಚೆಗೆ ನ್ಯಾಯಾಲಯ ಜಾಮೀನು ನೀಡಿತ್ತು....

ಕೋಲಾರ | ಚೈನಾ ಶಾಂಘೈನಲ್ಲಿ ಕನ್ನಡದ ಮೊದಲ ಜಾನಪದ ಕಾರ್ಯಕ್ರಮ: ಗೋ.ನಾ. ಸ್ವಾಮಿ ಭಾಗಿ

ಚೈನಾ ದೇಶದ ಶಾಂಘೈನಲ್ಲಿ ಕನ್ನಡಿಗರ ಸಂಘದ ವತಿಯಿಂದ ಆಯೋಜಿಸಿದ್ದ ಕನ್ನಡದ ಮೊದಲ...