ಕೆಎಸ್‌ಆರ್‌ಟಿಸಿ ಬಸ್ ಮತ್ತು ಕಾರಿನ ನಡುವೆ ಭೀಕರ ಅಪಘಾತ ಸಂಭವಿಸಿ ಕಾರಿನಲ್ಲಿದ್ದ ಒಂದೇ ಕುಟುಂಬದ ನಾಲ್ವರು ದಾರುಣವಾಗಿ ಸಾವನ್ನಪ್ಪಿದ ಘಟನೆ ಗದಗ ಜಿಲ್ಲೆಯ ನರಗುಂದ ತಾಲೂಕಿನ ಕೊಣ್ಣೂರ ಗ್ರಾಮದ ಹೊರವಲಯದಲ್ಲಿ ನಡೆದಿದೆ.
ಮುಂಜಾನೆ 6:30ರ ಸುಮಾರಿಗೆ ಈ ಘಟನೆ ನಡೆದಿದೆ. ಕೆಎಸ್‌ಆರ್‌ಟಿಸಿ ಬಸ್ ಹುಬ್ಬಳ್ಳಿಯತ್ತ ಸಾಗುತ್ತಿತ್ತು. ಕಾರು ಹುಬ್ಬಳ್ಳಿಯಿಂದ ಕೊಣ್ಣೂರ ಕಡೆ ತೆರಳುತ್ತಿತ್ತು. ಈ ವೇಳೆ ಅಪಘಾತ ಸಂಭವಿಸಿದೆ ಎಂದು ವರದಿಯಾಗಿದೆ.

ಮೃತರನ್ನು ಹಾವೇರಿ ಮೂಲದ ರುದ್ರಪ್ಪ ಅಂಗಡಿ (55), ಪತ್ನಿ ರಾಜೇಶ್ವರಿ (45), ಮಗಳು ಐಶ್ವರ್ಯ (16) ಮತ್ತು ಮಗ ವಿಜಯ (12) ಎಂದು ಗುರುತಿಸಲಾಗಿದೆ.
ಇದನ್ನು ಓದಿದ್ದೀರಾ? ಗದಗ | ಪಿಎಸ್‌ಐ ಪರಶುರಾಮ ಸಾವಿನ ಕುರಿತು ತನಿಖೆ ನಡೆಸಿ ತಪ್ಪಿತಸ್ಥರನ್ನು ಬಂಧಿಸಿ: ದಸಂಸ ಆಗ್ರಹ
ಶ್ರಾವಣ ಮಾಸದ ಕಾರಣ ರುದ್ರಪ್ಪ ಕುಟುಂಬ ಸಮೇತ ಕಲ್ಲಾಪೂರ ಬಸವೇಶ್ವರ ದೇವಸ್ಥಾನಕ್ಕೆ ಹೊರಟ್ಟಿದ್ದರು ಎಂದು ಮಾಹಿತಿ ಲಭಿಸಿದೆ.