ರಸ್ತೆ ಅಪಘಾತದಲ್ಲಿ ಯುವಕನೋರ್ವ ಮೃತಪಟ್ಟಿದ್ದು, ಇಬ್ಬರಿಗೆ ಗಂಭೀರ ಗಾಯಗಳಾಗಿರುವ ಘಟನೆ ಚಿಂತಾಮಣಿ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯ ಕೊಡದವಾಡಿ ಸಮೀಪ ಶುಕ್ರವಾರ ನಡೆದಿದೆ.
ಅಪಘಾತದಲ್ಲಿ ಮೃತಪಟ್ಟ ವ್ಯಕ್ತಿಯನ್ನು ಚಿಂತಾಮಣಿ ನಗರದ ಎನ್ ಆರ್ ಬಡಾವಣೆಯ ನಿವಾಸಿ ಮೊನೀಶ್(21) ಎಂದು ತಿಳಿದುಬಂದಿದೆ.
ಮೊನೀಶ್ ಕಾರಿನಲ್ಲಿ ಚಿಂತಾಮಣಿ ಕಡೆಯಿಂದ ಮುಳಬಾಗಿಲು ಕಡೆ ಕೆಲಸದ ನಿಮಿತ್ತ ಹೋಗುತ್ತಿದ್ದ ವೇಳೆ ಈ ಅಪಘಾತ ಸಂಭವಿಸಿದೆ. ಅಪಘಾತದಲ್ಲಿ ಗಾಯಗೊಂಡ ವ್ಯಕ್ತಿಗಳನ್ನು ಚಿಂತಾಮಣಿ ನಗರದ ಸಾರ್ವಜನಿಕ ಆಸ್ಪತ್ರೆಗೆ ದಾಖಲಿಸಲಾಗಿದೆ.
ಇದನ್ನೂ ಓದಿ : ಚಿಕ್ಕಬಳ್ಳಾಪುರ | ಡಿ.27ರ ಗಾಂಧೀ ಭಾರತ್ ಸಮಾವೇಶಕ್ಕೆ ಪ್ರತೀ ಕ್ಷೇತ್ರದಿಂದ ನೂರು ಜನ ಭಾಗಿ : ಸಚಿವ ಎಂ ಸಿ ಸುಧಾಕರ್
ಅಪಘಾತದಿಂದ ಗಂಭೀರ ಗಾಯಗೊಂಡಿದ್ದ ಮೊನೀಶ್, ಚಿಕಿತ್ಸೆಗಾಗಿ ಬೆಂಗಳೂರಿಗೆ ಕರೆದುಕೊಂಡು ಹೋಗುವ ಮಾರ್ಗಮಧ್ಯೆ ಮೃತಪಟ್ಟಿದ್ದಾನೆ. ಗ್ರಾಮಾಂತರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.