ಕೊಡಗು | ಮಾಂದಲಪಟ್ಟಿ ಗಿರಿಧಾಮಕ್ಕೆ 60 ಲಕ್ಷ ರೂ. ವೆಚ್ಚದ ರಸ್ತೆ ಲೋಕಾರ್ಪಣೆ

Date:

ರಾಜ್ಯದ ಅತ್ಯಂತ ಪ್ರಸಿದ್ಧ ಹಾಗೂ ಸುಂದರ ಪ್ರವಾಸಿ ತಾಣಗಳಲ್ಲಿ ಒಂದಾದ ಮಾಂದಲಪಟ್ಟಿ (ಮುಗಿಲುಪೇಟೆ) ಗಿರಿಧಾಮಕ್ಕೆ 60 ಲಕ್ಷ ರೂ. ವೆಚ್ಚದಲ್ಲಿ ನಿರ್ಮಿಸಲಾದ 4 ಕಿ.ಮೀ. ರಸ್ತೆ ಕಾಮಗಾರಿಯನ್ನು ಹೊದ್ದೂರು ಗ್ರಾಮ ಪಂಚಾಯಿತಿ ಮಾಜಿ ಅಧ್ಯಕ್ಷ ಎಚ್.ಎ. ಹಂಸ ಅವರು ಸ್ಥಳೀಯ ಮುಖಂಡರೊಂದಿಗೆ ಉದ್ಘಾಟಿಸಿದರು.

- Advertisement -

ಮಡಿಕೇರಿ ಕ್ಷೇತ್ರದ ಶಾಸಕ ಡಾ. ಮಂತರ್ ಗೌಡ ಅವರ ನಿರ್ದೇಶನದ ಮೇರೆಗೆ ರಸ್ತೆ ನಿರ್ಮಾಣಗೊಂಡಿದ್ದು, ಶಾಸಕರ ಅನುಪಸ್ಥಿತಿಯಲ್ಲಿ ನಡೆದ ಕಾರ್ಯಕ್ರಮದಲ್ಲಿ ಮಾತನಾಡಿದ ಎಚ್.ಎ. ಹಂಸ ಅವರು, ಸ್ಥಳೀಯ ನಿವಾಸಿಗಳು, ಗ್ರಾಮಸ್ಥರು ಹಾಗೂ ಬಾಡಿಗೆ ಜೀಪ್ ಮಾಲೀಕರ ಬಹುದಿನಗಳ ಬೇಡಿಕೆಗೆ ಸ್ಪಂದಿಸಿ ಈ ರಸ್ತೆ ನಿರ್ಮಾಣಕ್ಕೆ ಅವಕಾಶ ಕಲ್ಪಿಸಲಾಗಿದೆ ಎಂದು ತಿಳಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಚಿಕ್ಕಮಗಳೂರು | ಉದ್ಯಾನವನಕ್ಕೆ ಮೀಸಲಿಟ್ಟ ಜಾಗದಲ್ಲಿ ಸಂತೆ ನಡೆಸಲು...

ಉದ್ಯಾನವನ ಮಾನವನ ಮಾನಸಿಕ ನೆಮ್ಮದಿ, ವಿನೋದ, ವಿಶ್ರಾಂತಿ ಹಾಗೂ ವನ್ಯಜೀವಿ ಹಾಗೂ ನೈಸರ್ಗಿಕ ಪರಿಸರವನ್ನು ಸಂರಕ್ಷಿಸಲು ಮೀಸಲಿಟ್ಟ ಒಂದು ಹಸಿರು ತಾಣ ಎಂದೇ ಹೇಳಬಹುದು. ಆಧುನಿಕ ವ್ಯವಸ್ಥೆಯಲ್ಲಿ ನಗರ ಜೀವನದ ಜಂಜಾಟದ ನಡುವೆ...

ವಿಜಯಪುರ | 80ರ ಗಡಿ ದಾಟಿದ ಬಿಳಿ ಜೋಳ,...

ವಿಜಯಪುರ ಎಂದಾಕ್ಷಣ ನೆನಪಾಗುವುದು ಬಿಳಿ ಜೋಳದ ರೊಟ್ಟಿ. ಉತ್ತರ ಕರ್ನಾಟಕದ ಜನರ ಬದುಕು, ಆಹಾರ ಸಂಸ್ಕೃತಿಯ ಅವಿಭಾಜ್ಯ ಭಾಗವಾಗಿರುವ ಜೋಳವೇ ಈಗ ಸಾಮಾನ್ಯ ಜನರ ಕೈಗೆಟುಕದ ವಸ್ತುವಾಗುತ್ತಿದೆ. ಕೆಲವೇ ದಿನಗಳ ಹಿಂದೆ ಕೆಜಿಗೆ...

ರಾಜಕಾರಣಿಯ ಬೆಡ್‌ರೂಮಿನಲ್ಲಿ ಪ್ರಜಾಪ್ರಭುತ್ವ ಹುಡುಕುವ ಮಾಧ್ಯಮಗಳು!

ಒಂದು ಸಣ್ಣ ಪ್ರಶ್ನೆ, ಪ್ರಿಯ ಓದುಗರೇ! ಬೆಡ್‌ರೂಮಿನ ಹೊಗೆಯ ಹಿಂದೆ ಓಡುವ ಮಾಧ್ಯಮಗಳಿಗೆ, ಜನರ ಬದುಕನ್ನು ಸುಡುತ್ತಿರುವ ಬೆಂಕಿ ಕಾಣುವುದಿಲ್ಲವೇ? ರಾಜಕಾರಣಿಯೊಬ್ಬರ ಖಾಸಗಿ ಬದುಕಿನ ಬಗ್ಗೆ ಸುದ್ದಿ ಹೊರಬಿದ್ದರೆ ಸಾಕು; ಮಾಧ್ಯಮಗಳಲ್ಲಿ ಚರ್ಚೆಗಳ ಮಹಾಪೂರ. ಯಾರು...

ಪ್ರವಾಸಿ ತಾಣದಲ್ಲಿ ಯಾವುದೇ ನಿಯಮಬಾಹಿರ ಚಟುವಟಿಕೆಗಳು ನಡೆಯದಂತೆ ಸ್ಥಳೀಯರು ಎಚ್ಚರ ವಹಿಸಬೇಕು ಎಂದು ಮನವಿ ಮಾಡಿದ ಅವರು, ಕಾಲೂರು ಗ್ರಾಮಕ್ಕೆ ಬಸ್ ಸಂಚಾರ ನಡೆಸುವ ರಸ್ತೆ ಹದಗೆಟ್ಟಿರುವ ಹಿನ್ನೆಲೆಯಲ್ಲಿ ತಾತ್ಕಾಲಿಕ ದುರಸ್ತಿ ಕಾಮಗಾರಿ ಕೈಗೊಳ್ಳಲು ಶಾಸಕ ಡಾ. ಮಂತರ್ ಗೌಡ ಅವರು ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ ಎಂದು ಮಾಹಿತಿ ನೀಡಿದರು.

ಕಾರ್ಯಕ್ರಮದಲ್ಲಿ ಪ್ರಾಸ್ತಾವಿಕವಾಗಿ ಮಾತನಾಡಿದ ರಾಜೀವ್ ಗಾಂಧಿ ಪಂಚಾಯತ್ ರಾಜ್ ಸಂಘಟನೆಯ ಜಿಲ್ಲಾಧ್ಯಕ್ಷ ತೆನ್ನಿರ ಮೈನಾ, ಜಿಲ್ಲೆಯ ಪ್ರಮುಖ ಪ್ರವಾಸಿ ತಾಣವಾದ ಮಾಂದಲಪಟ್ಟಿಗೆ ಬಾಡಿಗೆ ಜೀಪ್ ಚಾಲನೆ ಮಾಡಿ ಜೀವನ ಸಾಗಿಸುತ್ತಿರುವ ನೂರಾರು ಕುಟುಂಬಗಳ ಹಿತದೃಷ್ಟಿಯಿಂದ ಹಾಗೂ ಪ್ರವಾಸೋದ್ಯಮಕ್ಕೆ ಪೂರಕ ವಾತಾವರಣ ಕಲ್ಪಿಸುವ ಉದ್ದೇಶದಿಂದ ರಸ್ತೆ ನಿರ್ಮಾಣ ಮಾಡಲಾಗಿದೆ ಎಂದು ಹೇಳಿದರು.

ಕೊಡಗು ಫಾರೆಸ್ಟ್ ಫೌಂಡೇಶನ್ ನಿಧಿಯಿಂದ 50 ಲಕ್ಷ ರೂ. ಹಾಗೂ ರಾಜ್ಯ ಸರ್ಕಾರದ ವನ್ಯಜೀವಿ ವಿಭಾಗದ ಅನುದಾನದಿಂದ 10 ಲಕ್ಷ ರೂ. ಸೇರಿದಂತೆ ಒಟ್ಟು 60 ಲಕ್ಷ ರೂ. ಅನುದಾನ ಒದಗಿಸಲಾಗಿದ್ದು, ಕಳೆದ ನಾಲ್ಕು ತಿಂಗಳಿನಿಂದ ಅರಣ್ಯ ಇಲಾಖೆ ಕಾಮಗಾರಿ ನಡೆಸಿ ಇದೀಗ ಸಾರ್ವಜನಿಕ ಬಳಕೆಗೆ ಲೋಕಾರ್ಪಣೆ ಮಾಡಲಾಗಿದೆ ಎಂದು ವಿವರಿಸಿದರು.

ಈ ಸುದ್ದಿ ಓದಿದ್ದೀರಾ?ಮೈಸೂರು | ಬಾಲಕಾರ್ಮಿಕ ಪದ್ಧತಿ ನಿರ್ಮೂಲನೆಗೆ ಎಲ್ಲರ ಸಹಕಾರ ಅಗತ್ಯ: ರವಿಶಂಕರ್

ಕಾರ್ಯಕ್ರಮದಲ್ಲಿ ಮಡಿಕೇರಿ ವಿಭಾಗದ ವಲಯ ಅರಣ್ಯಾಧಿಕಾರಿ ಎಚ್.ಎಸ್. ಶಿವಕುಮಾರ್, ಉಪ ವಲಯ ಅರಣ್ಯಾಧಿಕಾರಿ ಭರತ್ ಎಂ.ಕೆ., ಮುಖಂಡರಾದ ಕೊಂಬಾರನ ಗಣಪತಿ, ಜಾನ್ಸನ್ ಪಿಂಟೋ, ವಕೀಲ ರೋಷನ್ ಗಣಪತಿ, ಕವನ್ ಕೊತ್ತೋಳಿ, ಅರ್ಜುನ್, ಶರಣ್, ಸಿದ್ದಂಡ ಪವನ್, ಚಂಡಿರ ರಾಜ, ಚೆನ್ನಪಂಡ ನರೆನ್ ಸೋಮಯ್ಯ, ನಂದಿರ ಹರಿ, ಚೆನ್ನಪಂಡ ಗಿರೀಶ್, ಚೆನ್ನಪಂಡ ನಂದ, ಚೆನ್ನಪಂಡ ಗೋವಿಂದ, ತಂಬುಕುತ್ತಿರ ರಮೇಶ್, ವಿಜು, ಕುಂಞಣ್ಣಿ, ಹಂಚೆಟ್ಟಿರ ಮನು ಮುದ್ದಪ್ಪ, ಅರಣ್ಯ ಇಲಾಖೆ ಸಿಬ್ಬಂದಿಗಳಾದ ಚೇತನ್, ಹನುಮಂತ ರಾಯಪ್ಪ ಸೇರಿದಂತೆ ಗ್ರಾಮಸ್ಥರು, ಪ್ರವಾಸಿಗರು ಹಾಗೂ ಸಾರ್ವಜನಿಕರು ಇದ್ದರು.

eedina
ಈ ದಿನ ಡೆಸ್ಕ್‌
Website | + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಕಾರವಾರ | ಬೈತಕೂಲ ಬಂದರಿನಲ್ಲಿ ನೀರಿಗೆ ಬಿದ್ದು ಒಡಿಶಾ ಮೂಲದ ಮೀನುಗಾರ ಸಾವು

ಮೀನುಗಳನ್ನು ಖಾಲಿ ಮಾಡಿ ಬೋಟಿಗೆ ಐಸ್ ತುಂಬುತ್ತಿದ್ದ ವೇಳೆ ಕಾಲು ಜಾರಿ...

ನವೆಂಬರ್ 26ರಿಂದ ರಾಜ್ಯಾದ್ಯಂತ ‘ಜನರ ದನಿ, ಸಂವಿಧಾನದ ದನಿ’ ಜಾಗೃತಿ ಅಭಿಯಾನ

ನವೆಂಬರ್ 26ರ ಸಂವಿಧಾನ ಸಮರ್ಪಣಾ ದಿನದ ಅಂಗವಾಗಿ, ದಲಿತ ಸಂಘರ್ಷ ಸಮಿತಿಗಳ...

ಉಡುಪಿ | ಮತದಾರರ ಹಕ್ಕು ರಕ್ಷಣೆಗೆ ಕಾಂಗ್ರೆಸ್‌ನಿಂದ ‘ವೋಟ್ ಬಚಾವೋ–ದೇಶ್ ಬಚಾವೋ’ ಆಂದೋಲನ

ದೇಶದ ಪ್ರಜಾಪ್ರಭುತ್ವದ ಮೌಲ್ಯಗಳು ಹಾಗೂ ಮತದಾನದ ಹಕ್ಕುಗಳ ರಕ್ಷಣೆಗೆ ಅಖಿಲ ಭಾರತ...

ಯಾದಗಿರಿ | ಆಂಧ್ರಪ್ರದೇಶದಲ್ಲಿ ಪ್ರಜಾಪ್ರಭುತ್ವದ ಹಕ್ಕುಗಳ ದಮನದ ಆರೋಪ: ಎಐಬಿಎಸ್‌ಪಿ ತೀವ್ರ ಖಂಡನೆ

ಆಂಧ್ರಪ್ರದೇಶದಲ್ಲಿ ವಿರೋಧ ಪಕ್ಷಗಳ ಅಭ್ಯರ್ಥಿಗಳಿಗೆ ನಾಮಪತ್ರ ಸಲ್ಲಿಸಲು ಅಡ್ಡಿಪಡಿಸಲಾಗಿದೆ ಎಂಬ ಆರೋಪಗಳನ್ನು...