ರೈಲ್ವೆಹಳಿ ಮೇಲೆ ಕುಸಿದ ಬಂಡೆ; ತೆರವು ಕಾರ್ಯ ಯಶಸ್ವಿ, ರೈಲು ಸಂಚಾರ ಪುನಾರಂಭ

Date:

ಸಕಲೇಶಪುರದಿಂದ ಸುಬ್ರಹ್ಮಣ್ಯ ರೋಡ್ ರೈಲ್ವೆ ನಿಲ್ದಾಣದ ನಡುವೆ ಬರುವ ಎಡಕುಮೇರಿ-ಶಿರಿಬಾಗಿಲು ನಡುವೆ ಗುಡ್ಡ ಕುಸಿದು ಸುಮಾರು ಐದಾರು ಗಂಟೆಗಳ ಕಾಲ ಸ್ಥಗಿತವಾಗಿದ್ದ ಬೆಂಗಳೂರು-ಮಂಗಳೂರು ನಡುವೆ ರೈಲು ಸಂಚಾರವನ್ನು ಕಾರ್ಯಾಚರಣೆ ನಡೆಸಿ ಇಂದು ಬೆಳಗ್ಗೆ 9.30ರ ಸುಮಾರಿಗೆ ಎಲ್ಲವನ್ನೂ ತೆರವುಗೊಳಿಸಿ, ಹಳಿ ದುರಸ್ತಿ ಪಡಿಸಿ ರೈಲು ಸಂಚಾರಕ್ಕೆ ಅನುವು ಮಾಡಿಕೊಡಲಾಗಿದೆ.

- Advertisement -

ಪಶ್ಚಿಮಘಟ್ಟ ಭಾಗದಲ್ಲಿ ಭಾರೀ ಮಳೆಯಿಂದ 74-75ನೇ ಮೈಲಿನಲ್ಲಿ ಹಳಿ ಮೇಲೆ ಗುಡ್ಡ ಕುಸಿದಿತ್ತು. ಇದರಿಂದ ಬೆಂಗಳೂರು-ಕಣ್ಣೂರು ಬೆಂಗಳೂರು-ಮುರುಡೇಶ್ವರ ರೈಲುಗಳ ಸಂಚಾರ ಕೆಲವು ಗಂಟೆ ಸ್ಥಗಿತಗೊಂಡಿತ್ತು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಬ್ರಿಟಿಷ್ ಕಾಲದ ʼಗುಲಾಮಗಿರಿʼ ಕಾನೂನುಗಳೇ ಇಂದಿನ ಪೊಲೀಸ್‌ ವ್ಯವಸ್ಥೆಯ...

ಸ್ವಾತಂತ್ರ್ಯ ಬಂದು ದಶಕಗಳೇ ಕಳೆದಿದ್ದರೂ, ನಾವಿನ್ನೂ ಬ್ರಿಟಿಷರು ಭಾರತೀಯರನ್ನು ದಮನ ಮಾಡಲು ರೂಪಿಸಿದ 1861ರ ಪೊಲೀಸ್ ಕಾಯಿದೆಯ ನೆರಳಿನಲ್ಲೇ ಬದುಕುತ್ತಿದ್ದೇವೆಯೇ? ಖಾಕಿ ಪಡೆಯನ್ನು 'ಪ್ರಜೆಗಳ ರಕ್ಷಕ'ನಾಗಿಸಬೇಕಿದ್ದ ವ್ಯವಸ್ಥೆ, ಇಂದಿಗೂ ರಾಜಕಾರಣಿಗಳ ಕೈಗೊಂಬೆಯಾಗಿ ಉಳಿದುಕೊಳ್ಳಲು...

ಯಾರು ಹಿತವರು ಈ ಇಬ್ಬರೊಳಗೆ? ನೇಹಾ ಬೋರಾ ಅಭಿಜಿತ್...

“ಹೋಲಿಕೆ ಬೇಡ, ಒಗ್ಗಟ್ಟು ಬೇಕು. ನಾವೆಲ್ಲರೂ ಒಟ್ಟಾಗಿ ಚುನಾವಣಾ ಆಯೋಗದ ಅಕ್ರಮಗಳ ವಿರುದ್ಧ ಹೋರಾಡಬೇಕು” ಎಂದು ನೇಹಾ ಬರೆದರೆ, ಅದಕ್ಕೆ ಅಭಿಜೀತ್ ಉತ್ತರ- “ಇಂಕ್ವಿಲಾಬ್ ಜಿಂದಾಬಾದ್” ನೇಹಾ ಬೋರಾ ಮತ್ತು ಅಭಿಜಿತ್ ದೀಪ್ಕೆ ನಡುವೆ...

ಸ್ವತಂತ್ರ ಸಾಂವಿಧಾನಿಕ ಸಂಸ್ಥೆಗಳ ಮೇಲಿನ ನಂಬಿಕೆಯನ್ನು ಕಸಿದುಕೊಳ್ಳುತ್ತಿರುವ ಚುನಾವಣಾ...

ನ್ಯಾಯಾಲಯ ಮತ್ತು ಚುನಾವಣಾ ಆಯೋಗಗಳ 'ಸ್ವತಂತ್ರತೆ' ಎಂಬ ಮುಖವಾಡವೇ ಈಗ ಸರ್ಕಾರಕ್ಕೆ ರಕ್ಷಣಾ ಕವಚವಾಗಿ ಕೆಲಸ ಮಾಡುತ್ತಿದೆ. ಹೀಗಾಗಿ ಇವತ್ತು ವಿರೋಧ ಪಕ್ಷಗಳ ಆಕ್ರೋಶವೆಲ್ಲವೂ ಸಾಂವಿಧಾನಿಕ ಸಂಸ್ಥೆಗಳ ಕಡೆಗೆ ತಿರುಗಿದೆ. ಸರ್ಕಾರ ತೀರಾ...

ಬಂಡೆ ಬಿದ್ದಿದ್ದ ಅನತಿ ದೂರದಲ್ಲಿ ಬೆಂಗಳೂರು ಕಣ್ಣೂರು ಎಕ್ಸ್‌ಪ್ರೆಸ್ ರೈಲು ನಿಂತಿತ್ತು. ಬಂಡೆ ಉರುಳಿ ಬಿದ್ದ ರಭಸಕ್ಕೆ ರೈಲ್ವೇ ಹಳಿ ಡ್ಯಾಮೇಜ್ ಆಗಿತ್ತು. ಹೀಗಾಗಿ ಅರ್ಧ ಮಾರ್ಗದಲ್ಲೇ ರೈಲುಗಳು ನಿಲ್ಲಬೇಕಾಗಿತ್ತು.

ಇದನ್ನೂ ಓದಿ: ಹಾಸನ | ಪ್ರಜ್ವಲ್ ರೇವಣ್ಣ ಲೈಂಗಿಕ ಹಲ್ಲೆ ಪ್ರಕರಣ; ದಿನನಿತ್ಯ ವಿಚಾರಣೆ

ಸಕಲೇಶಪುರ ರೈಲ್ವೆ ನಿಲ್ದಾಣದಲ್ಲಿ ನಿಂತ ರೈಲು ಪ್ರಯಾಣಿಕರಿಗೆ, ಅಧಿಕಾರಿಗಳೇ ಕಾಫಿ-ತಿಂಡಿ ವ್ಯವಸ್ಥೆ ಮಾಡಿದರು. ನಂತರ ಬೆಳಕಾಗುವವರೆಗೂ ಎಲ್ಲರೂ ರೈಲಿನಲ್ಲೇ ರಾತ್ರಿ ಕಳೆಯಬೇಕಾಯಿತು. ಕೆಲವರು ಬೇರೆ ವಾಹನದಲ್ಲಿ ತಮ್ಮ ತಮ್ಮ ಊರಿಗೆ ತೆರಳಿದರು.

ಸಕಲೇಶಪುರದಲ್ಲಿ ನಿಂತಿದ್ದ ಬೆಂಗಳೂರು ಮುರುಡೇಶ್ವರ, ವಿಜಯಪುರ ಮಂಗಳೂರು ಸೆಂಟ್ರಲ್ ಎಕ್ಸ್‌ಪ್ರೆಸ್ ರೈಲುಗಳು ಸಂಚಾರ ಆರಂಭಿಸಿದವು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಶಿರಸಿ | ರಾಜೇಂದ್ರ ಸಿರ್ಸಿಕರ್‌ಗೆ ಇಂಡಿಯಾ ಬುಕ್ ಆಫ್ ರೆಕಾರ್ಡ್ಸ್ ಗೌರವ

ಶಿರಸಿ: ಪ್ರಾಣಿ-ಪಕ್ಷಿಗಳ ರಕ್ಷಣೆ ಮತ್ತು ಪುನರ್ವಸತಿ ಕ್ಷೇತ್ರದಲ್ಲಿ ಕಾರ್ಯನಿರ್ವಹಿಸುತ್ತಿರುವ ಶಿರಸಿಯ ರಾಜೇಂದ್ರ...

ಧಾರವಾಡ | ಪೊಲೀಸ್ ಹೆಸರೇಳಿ ರೂ. 15,700 ವಂಚನೆ: ನಾಲ್ಕು ಬೈಕ್‍ಗಳು ನಗದು ವಶ

ಪೊಲೀಸ್ ಹೆಸರೇಳಿ ವ್ಯಕ್ತಿಯೊಬ್ಬರಿಂದ ₹15,700 ಹಣ ಪಡೆದು ವಂಚಿಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ...

ಗೋಕರ್ಣ | ಕುಡ್ಲೆ ಕಡಲತೀರದಲ್ಲಿ ಸಮುದ್ರ ಸುಳಿಗೆ ಸಿಲುಕಿದ್ದ ಬೆಂಗಳೂರಿನ ಇಬ್ಬರು ಪ್ರವಾಸಿಗರ ರಕ್ಷಣೆ

ಗೋಕರ್ಣ: ಸಮುದ್ರದಲ್ಲಿ ಈಜುತ್ತಿದ್ದ ವೇಳೆ ಅಪಾಯಕಾರಿ ಸುಳಿಗೆ ಸಿಲುಕಿದ ಬೆಂಗಳೂರಿನ ಇಬ್ಬರು...