ಜಿಂದಾಲ್ ಟೌನ್‌ಶಿಪ್‌ನಲ್ಲಿ ರೋಹಿಣಿ ಸಿಂಧೂರಿ ವಾಸ್ತವ್ಯ; ತನಿಖೆಗೆ ರೈತರ ಆಗ್ರಹ

Date:

ಬಳ್ಳಾರಿಯಲ್ಲಿ ಹೆಗ್ಗಿಲ್ಲದೆ ನಡೆಯುತ್ತಿರುವ ಗಣಿಗಾರಿಕೆಯಿಂದ ಕೃಷಿಗೆ ತೊಂದರೆಯಾಗುತ್ತಿದೆ ಎಂದು ರೈತರು ಪ್ರತಿಭಟನೆ ನಡೆಸುತ್ತಿದ್ದಾರೆ. ಅವರ ಅಳಲು-ಮನವಿ ಆಲಿಸಲು ಐಎಎಸ್‌ ಅಧಿಕಾರಿ, ಕಾರ್ಮಿಕ ಇಲಾಖೆಯ ಕಾರ್ಯದರ್ಶಿ ರೋಹಿಣಿ ಸಿಂಧೂರಿ ಬಳ್ಳಾರಿಗೆ ಭೇಟಿ ನೀಡಿದ್ದರು. ಈ ವೇಳೆ, ಅವರು ಸರ್ಕಾರಿ ಅತಿಥಿ ಗೃಹದಲ್ಲಿ ತಂಗುವ ಬದಲು, ಜಿಂದಾಲ್‌ ಸಂಸ್ಥೆಗೆ ಸೇರಿದ ಟೌನ್‌ಶಿಪ್‌ನಲ್ಲಿ ವಾಸ್ತವ್ಯ ಹೂಡಿದ್ದರು. ಅವರ ಈ ವಾಸ್ತವ್ಯವು ಚರ್ಚೆ ಮತ್ತು ಅನುಮಾನಗಳಿಗೆ ಕಾರಣವಾಗಿದೆ. ಅವರ ವಾಸ್ತವ್ಯದ ಕುರಿತು ತನಿಖೆ ನಡೆಸುವಂತೆ ಪ್ರತಿಭಟನಾನಿರತ ರೈತರು ಆಗ್ರಹಿಸಿದ್ದಾರೆ.

- Advertisement -

ಬಳ್ಳಾರಿಯಲ್ಲಿ ನಡೆಯುತ್ತಿರುವ ಗಣಿಗಾರಿಕೆಯಲ್ಲಿ ಜಿಂದಾಲ್ ಸಂಸ್ಥೆಯದ್ದೂ ಹೆಚ್ಚಿನ ಪಾಲಿದೆ. ಜಿಂದಾಲ್‌ ಕಂಪನಿಯು ಉಕ್ಕು ಉತ್ಪಾದನೆ ಜೊತೆಗೆ, ಸಂಡೂರಿನಲ್ಲಿ ಗಣಿಗಾರಿಕೆ ನಡೆಸುತ್ತಿದೆ. ಇತ್ತೀಚೆಗೆ ನಾಲ್ಕು ಗಣಿಗಳನ್ನು ಹರಾಜಿನಲ್ಲಿ ಖರೀದಿ ಮಾಡಿದೆ. ಗಣಿ ಹರಾಜಿನಲ್ಲಿ ಸುಪ್ರೀಂ ಕೋರ್ಟ್‌ ಆದೇಶಗಳ ಉಲ್ಲಂಘನೆಯಾಗಿದ್ದು, ಪ್ರಕರಣವು ಸುಪ್ರೀಂ ಕೋರ್ಟ್‌ನಲ್ಲಿದೆ. ಈ ಪ್ರಕರಣದಲ್ಲಿ ಜಿಂದಾಲ್ ಕಂಪನಿ, ರಾಜ್ಯ ಸರ್ಕಾರ ಹಾಗೂ ರೋಹಿಣಿ ಸಂಧೂರಿ ಕೂಡ ಪ್ರತಿವಾದಿಯಾಗಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಬೆಟ್ಟದಷ್ಟಾದ ಅತ್ಯಾಚಾರ ಪ್ರಕರಣಗಳು – ತೆವಳುತ್ತಿರುವ ನ್ಯಾಯದಾನ

ಪೊಲೀಸರೆಂದು ನಟಿಸಿ ಬೆದರಿಸುವುದು, ನಿರ್ಜನ ಪ್ರದೇಶಗಳಲ್ಲಿ ತೋಳಗಳಂತೆ ಕಾದು ಹಲ್ಲೆಗೈದು ಸಾಮೂಹಿಕ ಅತ್ಯಾಚಾರ ನಡೆಸಿ ಕೊಂದೆಸೆಯುವುದು, ಕಿಂಚಿತ್ತೂ ಭಯವಿಲ್ಲದೆ ಕೃತ್ಯದ ವಿಡಿಯೋ ತುಣುಕುಗಳನ್ನು ಸಾಮಾಜಿಕ ಜಾಲತಾಣಗಳಲ್ಲಿ ಹರಿಬಿಡುವುದಲ್ಲದೆ, ಸಂತ್ರಸ್ತರ ಗುರುತು ಬಹಿರಂಗಪಡಿಸುವ ಪ್ರವೃತ್ತಿ...

ಶಾಮನೂರು ಫ್ಯಾಮಿಲಿಗೆ ಸಚಿವ ಬಸವಂತಪ್ಪ ಕೈ ಮುಗಿಯುವ ಅಗತ್ಯವಿದೆಯೇ?

ಬಸವಂತಪ್ಪನವರನ್ನು ಗೆಲ್ಲಿಸಿದ್ದು, ಕಾಂಗ್ರೆಸ್ಸಿನ ಸಾಂಪ್ರದಾಯಿಕ ಮತದಾರರು. ಶಾಮನೂರು ಕುಟುಂಬದ ಸುತ್ತ ಕಟ್ಟಿರುವ ಕಲ್ಪಿತ ಬಲವನ್ನು ಮೀರಿ, ಬಸವಂತಪ್ಪ ಬೆಳೆಯಬೇಕು ಎಂಬುದು ಕ್ಷೇತ್ರದ ಮತದಾರರ ಅಭಿಪ್ರಾಯ. ಪೌರಕಾರ್ಮಿಕರ ಮಗನಾಗಿ ಹುಟ್ಟಿ, ಸಚಿವ ಸ್ಥಾನದವರೆಗೆ ಬೆಳೆದವರು ಕೆ.ಎಸ್....

ಪಾಕ್‌ಗೆ ತಕ್ಕ ಉತ್ತರ ನೀಡಿದ್ದಾಗಿ ಎದೆ ತಟ್ಟಿಕೊಳ್ಳುವ ಮೋದೀಜಿ,...

ಬಾಲಾಕೋಟ್‌ನಿಂದ ಇತ್ತೀಚಿನ 'ಆಪರೇಷನ್ ಸಿಂಧೂರ್'ವರೆಗೆ ಪಾಕಿಸ್ತಾನಕ್ಕೆ ತಕ್ಕ ಉತ್ತರ ನೀಡಿದ್ದಾಗಿ ಪ್ರಧಾನಿ ಮೋದಿ ನೇತೃತ್ವದ ಬಿಜೆಪಿ ಸರ್ಕಾರ ಎದೆ ತಟ್ಟಿಕೊಳ್ಳುತ್ತಿದೆ. ಶತೃ ದೇಶವನ್ನು ಮಣಿಸುವುದು ಯಾರಿಗಾದರೂ ಹೆಮ್ಮೆಯೇ. ಆದರೆ, ದೇಶದ ಅಖಂಡತೆಗೆ ಅತಿ...

ಈ ಲೇಖನ ಓದಿದ್ದೀರಾ?: ಉನ್ನಾಂವ್ ಅತ್ಯಾಚಾರ ಹಗರಣ: ಕುಲದೀಪ್ ಸೆಂಗರ್‌ನ ಹೀನಕೃತ್ಯ; ಬಿಜೆಪಿ ನೈತಿಕ ದಿವಾಳಿತನ

ಹೀಗಾಗಿ, ರೈತರ ಪ್ರತಿಭಟನೆಯು ಜಿಂದಾಲ್ ಸಂಸ್ಥೆಯ ವಿರುದ್ಧವೂ ನಡೆಯುತ್ತಿದೆ. ಹೀಗಿರುವಾಗ, ರೈತರ ಮನವಿ ಆಲಿಸಲು ಡಿಸೆಂಬರ್ 25ರಿಂದ 27ರವರೆಗೆ ಬಳ್ಳಾರಿ ಜಿಲ್ಲಾ ಪ್ರವಾಸ ಕೈಗೊಂಡಿದ್ದ ರೋಹಿಣಿ ಸಿಂಧೂರಿ, ಜಿಂದಾಲ್ ಟೌನ್‌ಶಿಪ್‌ನಲ್ಲಿ ಉಳಿದುಕೊಂಡಿದ್ದು, ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ.

ರೋಹಿಣಿ ಸಿಂಧೂರಿ ಅವರು ಸರ್ಕಾರಿ ಅಧಿಕಾರಿಯಾಗಿದ್ದರೂ, ಸರ್ಕಾರದ ವಸತಿಗೃಹದಲ್ಲಿ ಉಳಿದುಕೊಳ್ಳದೆ, ಖಾಸಗಿ ಉದ್ದಿಮೆದಾರರ ಅತಿಥಿ ಗೃಹದಲ್ಲಿ ತಂಗಿದ್ದಾರೆ. ಮಾತ್ರವಲ್ಲದೆ, ತಮ್ಮ ರಜಾ ದಿನದಲ್ಲಿಯೂ ಸರ್ಕಾರಿ ಅಧಿಕಾರಿಗಳು ಮತ್ತು ಸರ್ಕಾರಿ ವಾಹನಗಳನ್ನು ರೋಹಿಣಿ ಬಳಸಿದ್ದಾರೆ. ಅವರು ಕರ್ನಾಟಕ ನಾಗರಿಕ ಸೇವೆಗಳು (ನಡವಳಿಕೆ) ನಿಯಮಗಳು– 1966 ಅನ್ನು ಉಲ್ಲಂಘಿಸಿದ್ದಾರೆ. ಅವರ ವಿರುದ್ಧ ಉನ್ನತ ಮಟ್ಟದ ತನಿಖೆಯಾಗಬೇಕು ಎಂದು ರೈತರು ಆಗ್ರಹಿಸಿದ್ದಾರೆ. ಸರ್ಕಾರದ ಮುಖ್ಯಕಾರ್ಯದರ್ಶಿ ಪತ್ರ ಬರೆದಿದ್ದಾರೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ರಾಯಚೂರು | ತೆರಿಗೆ ವಸೂಲಾತಿಯಲ್ಲಿ ಲೋಪ: ಇಬ್ಬರು ಪಿಡಿಓ ಅಮಾನತು, ಮೂವರು ಕರವಸೂಲಿಗಾರರ ವಜಾಕ್ಕೆ ವಿಚಾರಣೆ

ತೆರಿಗೆ ವಸೂಲಾತಿಯಲ್ಲಿ ನಿರ್ಲಕ್ಷ್ಯ ಹಾಗೂ ಕರ್ತವ್ಯ ಲೋಪ ಎಸಗಿರುವುದು ಪತ್ತೆಯಾದ ಹಿನ್ನೆಲೆಯಲ್ಲಿ...

ಹಾವೇರಿ | ಪುಸ್ತಕ ಓದಿನ ಪರಂಪರೆಯನ್ನು ಮರು ಕಟ್ಟಬೇಕಾಗಿದೆ: ಶೋಭಾ ಜಾಗಟಗೇರಿ

"ಮುಷ್ಠಿಯಲ್ಲಿ ಇರುವ ಮೊಬೈಲ್ ಜೀವನ ಪಾಠವನ್ನ್ನು ಕಲಿಸುವುದಕ್ಕಿಂತ ದಾರಿ ತಪ್ಪಿಸುವ ಕೆಲಸ...

ಉತ್ತರ ಕನ್ನಡ | 3.24 ಲಕ್ಷ ಪಡಿತರ ಚೀಟಿ ಸದಸ್ಯರ ಇ-ಕೆವೈಸಿ ಬಾಕಿ; ಅಕ್ಟೋಬರ್ 20ರೊಳಗೆ ಪೂರ್ಣಗೊಳಿಸಲು ಮನವಿ

ಉತ್ತರ ಕನ್ನಡ ಜಿಲ್ಲೆಯ ಪಡಿತರ ಚೀಟಿಗಳಲ್ಲಿರುವ 5,69,044 ಸದಸ್ಯರು ಐದು ವರ್ಷಗಳ...

ಉಡುಪಿ | ಇಂದ್ರಾಳಿ ಮಂಚಿ ನೂರಾನಿ ಮಸೀದಿಗೆ ನೂತನ ಆಡಳಿತ ಸಮಿತಿ ರಚನೆ

ಉಡುಪಿ ತಾಲೂಕಿನ ಇಂದ್ರಾಳಿ ಮಂಚಿ ನೂರಾನಿ ಮಸೀದಿಯ ಆಡಳಿತ ಸಮಿತಿಗೆ ನೂತನ...