ಕೊಡಗು | ಎ.ಎಸ್. ಪೊನ್ನಣ್ಣರಿಗೆ ಸಚಿವ ಸ್ಥಾನ ನೀಡಲು ರೋಮನ್ ಕ್ಯಾಥೊಲಿಕ್ ಅಸೋಸಿಯೇಷನ್ ಆಗ್ರಹ

Date:

ನೂತನ ರಾಜ್ಯ ಸಚಿವ ಸಂಪುಟದಲ್ಲಿ ವಿರಾಜಪೇಟೆ ಕ್ಷೇತ್ರದ ಶಾಸಕ ಎ.ಎಸ್. ಪೊನ್ನಣ್ಣ ಅವರಿಗೆ ಕ್ಯಾಬಿನೆಟ್ ಸಚಿವ ಸ್ಥಾನ ನೀಡುವ ಜೊತೆಗೆ ಕೊಡಗು ಜಿಲ್ಲಾ ಉಸ್ತುವಾರಿ ಸಚಿವರನ್ನಾಗಿ ನೇಮಕ ಮಾಡಬೇಕು ಎಂದು ಕೊಡಗು ಜಿಲ್ಲಾ ರೋಮನ್ ಕ್ಯಾಥೊಲಿಕ್ ಅಸೋಸಿಯೇಷನ್ ಹಾಗೂ ವಿರಾಜಪೇಟೆ ತಾಲೂಕು ರೋಮನ್ ಕ್ಯಾಥೊಲಿಕ್ ಅಸೋಸಿಯೇಷನ್ ಆಗ್ರಹಿಸಿವೆ.

- Advertisement -

ವಿರಾಜಪೇಟೆ ಪತ್ರಕರ್ತರ ವೇದಿಕೆಯಲ್ಲಿ ಅಸೋಸಿಯೇಷನ್ ವತಿಯಿಂದ ಆಯೋಜಿಸಿದ್ದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಕೊಡಗು ಜಿಲ್ಲಾ ರೋಮನ್ ಕ್ಯಾಥೊಲಿಕ್ ಅಸೋಸಿಯೇಷನ್‌ನ ಜಿಲ್ಲಾ ಉಪಾಧ್ಯಕ್ಷ ಜೋಕೀಂ ರಾಡ್ರಿಗೀಸ್, ನೂತನ ಮುಖ್ಯಮಂತ್ರಿಯಾಗಿ ಪ್ರಮಾಣವಚನ ಸ್ವೀಕರಿಸಿರುವ ಡಿ.ಕೆ. ಶಿವಕುಮಾರ್ ಅವರಿಗೆ ಕ್ರೈಸ್ತ ಸಮುದಾಯದ ಪರವಾಗಿ ಶುಭಾಶಯ ಕೋರಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಖಾಲಿದ್‌ರಂತೆ ಸಿಜೆಪಿ ನಾಯಕರನ್ನೂ ದೀರ್ಘ ಜೈಲುವಾಸದ ಸುಳಿಯಲ್ಲಿ ಸಿಲುಕಿಸುವ...

ಚುನಾವಣಾ ಆಯೋಗದ ಅಕ್ರಮ ಪ್ರಶ್ನಿಸಿದ ಸಿಜೆಪಿ ನಾಯಕರ ವಿರುದ್ಧ ಸರಣಿ ದೂರು ದಾಖಲಿಸಲಾಗುತ್ತಿದೆ. ಮೋದಿ ಸರ್ಕಾರದ ಅವಧಿಯಲ್ಲಿ ‘ವಿಚಾರಣೆಯೇ ಒಂದು ಶಿಕ್ಷೆ’ ಎನ್ನುವ ತಂತ್ರ ಪುನರಾವರ್ತನೆಯಾಗುತ್ತಿದೆಯೇ? ಉಮರ್‌ ಖಾಲಿದ್‌ ರೀತಿಯಲ್ಲೇ ಸೌರವ್ ದಾಸ್,...

ಎಚ್ಚೆತ್ತುಕೊಳ್ಳುತ್ತಿವೆ DMK, YSRCP; ಡಿಲಿಮಿಟೇಷನ್‌ ಮಸೂದೆ ಮತ್ತೆ ಸೋಲುವ...

ಮೋದಿಯವರ ಅಹಂಕಾರದ ಆಡಳಿತಕ್ಕೆ ದಕ್ಷಿಣ ಭಾರತವು ಎಂದಿಗೂ ತಲೆಬಾಗುವುದಿಲ್ಲ, ಮತ್ತು ಈ ಬಾರಿಯ ಅವರ ಹತಾಶೆಯ ರಾಜಕೀಯ ಕುತಂತ್ರಗಳು ಅವರ ಪಾಲಿಗೆ ತಿರುಗುಬಾಣವಾಗಿ ದೇಶದ ಪ್ರಜಾಪ್ರಭುತ್ವವು ಗೆಲ್ಲುವುದು ಖಚಿತ ಮಹಿಳಾ ಮೀಸಲಾತಿ ಎಂಬ ಪವಿತ್ರ...

ಉತ್ತರ ಕನ್ನಡ: ಹಾಲಕ್ಕಿಗಳ ಹಾಡು-ಪಾಡು ಮತ್ತು ಮರೀಚಿಕೆಯಾದ ಮೀಸಲಾತಿ

ಹಾಲಕ್ಕಿಗಳಿಗೆ ಪರಿಶಿಷ್ಟ ಪಂಗಡ ಮೀಸಲಾತಿ ಮರೀಚಿಕೆ ಆಗುತ್ತಿದೆ. ಮೀಲಾತಿ ಕೊಡಿಸುವ ಬಣ್ಣ-ಬಣ್ಣದ ಮಾತುಗಳಿಂದ ಹಾಲಕ್ಕಿಗಳ ಮತ ದೋಚಿ ಗೆದ್ದವರು ಕೃತಘ್ನರಾಗಿದ್ದಾರೆ. ಎಸ್ಟಿ ಮೀಸಲಾತಿ ಸೌಲಭ್ಯ ಅಷ್ಟು ಸುಲಭಕ್ಕೆ ಹಾಕ್ಕಿಗಳಿಗೆ ದಕ್ಕಲು ಪ್ರಬಲ ಮೇಲ್ವರ್ಗದ...

ವಿರಾಜಪೇಟೆ ಕ್ಷೇತ್ರದ ಜನಪ್ರಿಯ ಶಾಸಕ ಎ.ಎಸ್. ಪೊನ್ನಣ್ಣ ಅವರಿಗೆ ಸಚಿವ ಸ್ಥಾನ ನೀಡುವುದರಿಂದ ಕೊಡಗು ಜಿಲ್ಲೆಯ ಅಭಿವೃದ್ಧಿಗೆ ಮತ್ತಷ್ಟು ವೇಗ ಸಿಗಲಿದೆ ಎಂದು ಅವರು ಹೇಳಿದರು. ಶಾಸಕರು ಕ್ಷೇತ್ರಕ್ಕೆ ಹೆಚ್ಚಿನ ಅನುದಾನ ತಂದು ರಸ್ತೆ ಅಭಿವೃದ್ಧಿ ಸೇರಿದಂತೆ ಹಲವು ಮೂಲಸೌಕರ್ಯ ಕಾಮಗಾರಿಗಳನ್ನು ಕೈಗೊಂಡಿದ್ದು, ಎಲ್ಲೆಡೆ ಕಾಂಕ್ರೀಟ್ ರಸ್ತೆಗಳ ನಿರ್ಮಾಣವಾಗುತ್ತಿರುವುದು ಅವರ ಅಭಿವೃದ್ಧಿ ಪರ ಕಾರ್ಯವೈಖರಿಗೆ ಸಾಕ್ಷಿಯಾಗಿದೆ ಎಂದು ತಿಳಿಸಿದರು.

ಅಸೋಸಿಯೇಷನ್‌ನ ವಿರಾಜಪೇಟೆ ತಾಲೂಕು ಘಟಕದ ಅಧ್ಯಕ್ಷ ಅಗಸ್ಟೀನ್ ಕ್ಷೇವಿಯರ್ ಮಾತನಾಡಿ, ಎ.ಎಸ್. ಪೊನ್ನಣ್ಣ ಅವರು ರಾಜ್ಯದ ಏಕೈಕ ಕೊಡವ ಸಮುದಾಯದ ಶಾಸಕರಾಗಿದ್ದು, ಹಲವು ವರ್ಷಗಳಿಂದ ಕೊಡಗು ಜಿಲ್ಲೆಗೆ ಸಚಿವ ಸಂಪುಟದಲ್ಲಿ ಸಮರ್ಪಕ ಪ್ರಾತಿನಿಧ್ಯ ದೊರೆತಿಲ್ಲ. ಬಿಜೆಪಿ ಭದ್ರಕೋಟೆಯಾಗಿದ್ದ ವಿರಾಜಪೇಟೆ ಕ್ಷೇತ್ರದಲ್ಲಿ ಕಾಂಗ್ರೆಸ್ ಪಕ್ಷವನ್ನು ಗೆಲುವಿನತ್ತ ಕೊಂಡೊಯ್ಯುವಲ್ಲಿ ಅವರ ಪಾತ್ರ ಮಹತ್ವದ್ದಾಗಿದೆ. ಎಲ್ಲ ವರ್ಗದ ಜನರಿಗೆ ಸಮಾನ ನ್ಯಾಯ ಒದಗಿಸುವ ಕೆಲಸವನ್ನು ಅವರು ಮಾಡುತ್ತಿರುವುದರಿಂದ ಸಚಿವ ಸ್ಥಾನ ನೀಡಬೇಕು ಎಂದು ಮನವಿ ಮಾಡಿದರು.

ಕೊಡಗು ಜಿಲ್ಲಾ ರೋಮನ್ ಕ್ಯಾಥೊಲಿಕ್ ಅಸೋಸಿಯೇಷನ್ ಜಿಲ್ಲಾ ಸಂಚಾಲಕ ಜ್ಯೂಡಿವಾಸ್ ಮಾತನಾಡಿ, ಕೊಡಗು ಜಿಲ್ಲೆಯ ಭೌಗೋಳಿಕ ಹಾಗೂ ಸಾಂಸ್ಕೃತಿಕ ವೈಶಿಷ್ಟ್ಯತೆಯನ್ನು ಗಮನದಲ್ಲಿಟ್ಟುಕೊಂಡು ಜಿಲ್ಲೆಗೆ ಸೂಕ್ತ ಪ್ರಾತಿನಿಧ್ಯ ನೀಡಬೇಕಾಗಿದೆ. ಶಾಸಕ ಪೊನ್ನಣ್ಣ ಅವರು ಕ್ರೀಡೆ, ಧಾರ್ಮಿಕ ಕ್ಷೇತ್ರ ಹಾಗೂ ಅಭಿವೃದ್ಧಿ ಕಾಮಗಾರಿಗಳಿಗೆ ಹೆಚ್ಚಿನ ಆದ್ಯತೆ ನೀಡಿದ್ದು, ತಲಕಾವೇರಿ, ಭಾಗಮಂಡಲ ಸೇರಿದಂತೆ ಹಲವು ಧಾರ್ಮಿಕ ಕ್ಷೇತ್ರಗಳ ಅಭಿವೃದ್ಧಿಗೆ ಕಾರಣಕರ್ತರಾಗಿದ್ದಾರೆ ಎಂದು ಹೇಳಿದರು.

ಜಿಲ್ಲಾ ಸಂಘಟನಾ ಕಾರ್ಯದರ್ಶಿ ಮರ್ವಿನ್ ಲೋಬೋ ಮಾತನಾಡಿ, ರಸ್ತೆ ಅಭಿವೃದ್ಧಿ, ಕುಡಿಯುವ ನೀರಿನ ವ್ಯವಸ್ಥೆ, ಕ್ರೀಡಾ ಹಾಗೂ ಧಾರ್ಮಿಕ ಕ್ಷೇತ್ರಗಳಿಗೆ ಅನುದಾನ ಒದಗಿಸುವ ಮೂಲಕ ಶಾಸಕರು ಕ್ಷೇತ್ರದ ಸಮಗ್ರ ಅಭಿವೃದ್ಧಿಗೆ ಶ್ರಮಿಸುತ್ತಿದ್ದಾರೆ. ಆದ್ದರಿಂದ ನೂತನ ಸಚಿವ ಸಂಪುಟದಲ್ಲಿ ಅವರಿಗೆ ಕ್ಯಾಬಿನೆಟ್ ಸಚಿವ ಸ್ಥಾನ ನೀಡುವುದರ ಜೊತೆಗೆ ಜಿಲ್ಲಾ ಉಸ್ತುವಾರಿ ಸಚಿವರನ್ನಾಗಿ ನೇಮಕ ಮಾಡಬೇಕು ಎಂದು ಮುಖ್ಯಮಂತ್ರಿಗಳಿಗೆ ಮನವಿ ಮಾಡಿದರು.

ಪತ್ರಿಕಾಗೋಷ್ಠಿಯಲ್ಲಿ ರೋಮನ್ ಕ್ಯಾಥೊಲಿಕ್ ಅಸೋಸಿಯೇಷನ್ ಜಿಲ್ಲಾ ಯುವ ಘಟಕದ ಉಪಾಧ್ಯಕ್ಷ ಡ್ಯಾನಿಯಲ್ ಸಲ್ಡಾನಾ ಇದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಹಾಸನ | ಉಸ್ತುವಾರಿ ಸಚಿವರ ಕಾರ್ಯವೈಖರಿ ಬಗ್ಗೆ ಬೇಸರ; ಶಾಸಕ ಸ್ವರೂಪ್ ಪ್ರಕಾಶ್

ಜಿಲ್ಲೆಗೆ ಸಚಿವ ಶಿವಲಿಂಗೇಗೌಡರು ದೊಡ್ಡಮಂಡಿಗನಹಳ್ಳಿ ಗ್ರಾಮಕ್ಕೆ ಭೇಟಿ ನೀಡಿದ್ದ ಸಂದರ್ಭದಲ್ಲಿ ಸಂಬಂಧಪಟ್ಟ...

ಕೋಲಾರ | ರಾಸುಗಳ ವಿಮಾ ಮೊತ್ತ ₹80 ಸಾವಿರಕ್ಕೆ ಏರಿಕೆ: ಹಸು ಕಳೆದುಕೊಂಡ ರೈತರಿಗೆ ನೆರವು

ರಾಸುಗಳ ವಿಮಾ ಸೌಲಭ್ಯದ ಮೊತ್ತವನ್ನು ₹60 ಸಾವಿರದಿಂದ ₹80 ಸಾವಿರಕ್ಕೆ ಹೆಚ್ಚಿಸಲಾಗಿದ್ದು,...

ಹಾಸನ | ರಾಜ್ಯದ ಹಲವು ಕಡೆ ಮಳೆ ಮುನ್ಸೂಚನೆ 

ನಾಳೆ ರಾಜ್ಯದ ಹಲವು ಜಿಲ್ಲೆಗಳಿಗೆ ಮಳೆ ಅಲರ್ಟ್ ಘೋಷಿಸಲಾಗಿದೆ. ಹಿಂಗಾರು ಚುರುಕಾಗಿರುವ...