ರೋಣ | ನರೇಗಾ ಜಾಬ್ ಕಾರ್ಡ್‌ಗಳಿಗೆ ಕಡ್ಡಾಯವಾಗಿ ಇ-ಕೆವೈಸಿ ಮಾಡಿಸಲು ಸೂಚನೆ

Date:

Advertisements

ಮಹಾತ್ಮ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತ್ರಿ ಯೋಜನೆ (ನರೇಗಾ) ಅಡಿಯಲ್ಲಿ ಕೆಲಸ ಮಾಡುತ್ತಿರುವ ರೋಣ ತಾಲೂಕಿನ ಕೂಲಿಕಾರರಿಗೆ ಇ-ಕೆವೈಸಿ (eKYC) ಪ್ರಕ್ರಿಯೆ ಕಡ್ಡಾಯಗೊಳಿಸಲಾಗಿದೆ. ತಾಲೂಕಿನ ಎಲ್ಲಾ 22 ಗ್ರಾಮ ಪಂಚಾಯತಿಗಳ ವ್ಯಾಪ್ತಿಯಲ್ಲಿನ ಜಾಬ್ ಕಾರ್ಡ್ ಹೊಂದಿರುವ ಕೂಲಿಕಾರರು ತಮ್ಮ ಇ-ಕೆವೈಸಿ ಪ್ರಕ್ರಿಯೆಯನ್ನು ತಕ್ಷಣ ಪೂರ್ಣಗೊಳಿಸಬೇಕೆಂದು ತಾಲೂಕು ಪಂಚಾಯತ್ ಕಾರ್ಯನಿರ್ವಾಹಕ ಅಧಿಕಾರಿ ಚಂದ್ರಶೇಖರ ಬಿ. ಕಂದಕೂರ ಸೂಚನೆ ನೀಡಿದ್ದಾರೆ.

“ಸೆಪ್ಟೆಂಬರ್ 30ರೊಳಗೆ ಇ-ಕೆವೈಸಿ ಮಾಡಿಸಲು ಗ್ರಾಮೀಣಾಭಿವೃದ್ಧಿ ಆಯುಕ್ತಾಲಯ ಸೂಚನೆ ಹೊರಡಿಸಿತ್ತು. ಆದರೆ, ರೋಣ ತಾಲೂಕಿನಲ್ಲಿ ಇನ್ನೂ ಹೆಚ್ಚಿನ ಕೂಲಿಕಾರರು ಈ ಪ್ರಕ್ರಿಯೆ ಪೂರ್ಣಗೊಳಿಸದಿರುವುದರಿಂದ, ತಾಪಂ ಐಇಸಿ ಚಟುವಟಿಕೆಗಳ ಮೂಲಕ ವ್ಯಾಪಕ ಜಾಗೃತಿ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲು ಸೂಚಿಸಲಾಗಿದೆ. ಗ್ರಾಮ ಪಂಚಾಯತ್ ಅಭಿವೃದ್ಧಿ ಅಧಿಕಾರಿಗಳು ಮತ್ತು ಐಇಸಿ ಚಟುವಟಿಕೆಗಳ ಮೂಲಕ ಗ್ರಾಮಸ್ಥರಿಗೆ ಇ-ಕೆವೈಸಿಯ ಮಹತ್ವ ತಿಳಿಸಲಾಗುತ್ತಿದೆ. ಕಾರ್ಮಿಕರು ತಮ್ಮ ಜಾಬ್ ಕಾರ್ಡ್ ಮತ್ತು ಆಧಾರ್ ಕಾರ್ಡ್ ಸಹಿತವಾಗಿ ಗ್ರಾಮ ಪಂಚಾಯತ್ ಕಚೇರಿಗೆ ಅಥವಾ ಆಧಾರ್ ಕೇಂದ್ರಗಳಿಗೆ ಭೇಟಿ ನೀಡಿ, ಇ-ಕೆವೈಸಿ ಪ್ರಕ್ರಿಯೆ ಪೂರ್ಣಗೊಳಿಸಬೇಕಾಗಿದೆ” ಎಂದರು.

“ಇ-ಕೆವೈಸಿ ಪ್ರಕ್ರಿಯೆ ಪೂರ್ಣಗೊಳಿಸಿದರೆ ಕೂಲಿ ಪಾವತಿಯಲ್ಲಿ ವೇಗ ಮತ್ತು ಪಾರದರ್ಶಕತೆ ಹೆಚ್ಚುತ್ತದೆ. ಜೊತೆಗೆ, ಕಾರ್ಮಿಕರ ಹಾಜರಾತಿಯನ್ನು ಮುಖ ಆಧಾರಿತ (Face Authentication) ತಂತ್ರದ ಮೂಲಕ ಎನ್‌ಎಂಎಂಎಸ್ ಅಪ್ಲಿಕೇಶನ್‌ನಲ್ಲಿ ನಿಖರವಾಗಿ ದಾಖಲಿಸಬಹುದು. ಇದು ನರೇಗಾ ಯೋಜನೆಯ ವಿಶ್ವಾಸಾರ್ಹತೆ ಮತ್ತು ಪರಿಣಾಮಕಾರಿತೆಯನ್ನು ಹೆಚ್ಚಿಸುತ್ತದೆ.” ಸದ್ಯದಲ್ಲೇ ಎನ್‌ಎಂಎಂಎಸ್ ಅಪ್ಲಿಕೇಶನ್‌ನಲ್ಲಿ ಕಾರ್ಮಿಕರ ಫೋಟೋ ಸೆರೆಹಿಡಿದು, ಆಧಾರ್ ಸಂಖ್ಯೆಯೊಂದಿಗೆ ಮುಖ ಹೊಂದಾಣಿಕೆ ಮೂಲಕ ಹಾಜರಾತಿ ದೃಢಪಡಿಸಲಾಗುತ್ತಿದೆ. ಇ-ಕೆವೈಸಿ ಪೂರ್ಣಗೊಳಿಸದ ಕಾರ್ಮಿಕರ ಹಾಜರಾತಿಯನ್ನು ಮುಂದಿನ ದಿನಗಳಲ್ಲಿ ಪರಿಗಣಿಸಲಾಗುವುದಿಲ್ಲ” ಎಂದು ತಿಳಿಸಿದರು.

Advertisements

ಇದನ್ನೂ ಓದಿ: ಗದಗ | ಲಿಂ. ಡಾ. ಎಂ.ಎಂ. ಕಲಬುರ್ಗಿ ಅವರಿಗೆ ಮರಣೋತ್ತರ ‘ಸ್ಮಾರಕ ರಾಷ್ಟ್ರೀಯ ಪ್ರಶಸ್ತಿ’

ರೋಣ ತಾಲೂಕಿನ ಒಟ್ಟು 22 ಗ್ರಾಮ ಪಂಚಾಯತಿಗಳಲ್ಲಿ 30054 ಕುಟುಂಬಗಳಿದ್ದು, 73585 ನೊಂದಣಿ ಆದ ಕೂಲಿಕಾರರು ಇದ್ದು, ಅದರಲ್ಲಿ 50113 ಸಕ್ರಿಯ ಕೂಲಿಕಾರರು ಇರುತ್ತಾರೆ ಇವರೆಲ್ಲರೂ ಇ-ಕೆವೈಸಿ ಮಾಡಿಕೊಳ್ಳಲು ತಿಳಿಸಿರುತ್ತಾರೆ. ತಾಲೂಕಿನಲ್ಲಿ ಸಾಮೂಹಿಕ ಹಾಗೂ ವೈಯಕ್ತಿಕ ಕಾಮಗಾರಿಗಳ ಮೂಲಕ ಕೂಲಿಕಾರರಿಗೆ 100 ದಿನಗಳ ಕನಿಷ್ಠ ಉದ್ಯೋಗ ಒದಗಿಸಲಾಗುತ್ತಿದ್ದು, ಸರ್ಕಾರದ ಈ ಮಹತ್ವಾಕಾಂಕ್ಷಿ ಯೋಜನೆಯ ಯಶಸ್ವಿ ಅನುಷ್ಠಾನಕ್ಕಾಗಿ ಎಲ್ಲ ಕಾರ್ಮಿಕರು ತಕ್ಷಣ ಇ-ಕೆವೈಸಿ ಪ್ರಕ್ರಿಯೆ ಪೂರ್ಣಗೊಳಿಸಬೇಕು” ಎಂದು ಮನವಿ ಮಾಡಿದರು.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಶಿವಮೊಗ್ಗ | ಅ. 9ರಿಂದ ವಿಮಾನ ನಿಲ್ದಾಣದ ಮುಖ್ಯದ್ವಾರದಲ್ಲಿ ಅನಿರ್ದಿಷ್ಟವಧಿ ಧರಣಿ

ಶಿವಮೊಗ್ಗ, ತಾಲೂಕಿನ ನಿಧಿಗೆ ಹೋಬಳಿ ಸೋಗಾನೆ ಗ್ರಾಮದ ವಿಮಾನ ನಿಲ್ದಾಣಕ್ಕೆ ಜಮೀನು...

ಕೊರಟಗೆರೆ | ರಾಮಾಯಣ ಮಹಾಕಾವ್ಯ ಬೇರೆ ದೇಶದಲ್ಲಿಯೂ ಪ್ರಚಲಿತದಲ್ಲಿದೆ : ಗೋಪಿನಾಥ್

ನಿಸರ್ಗದೊಂದಿಗೆ ನಿಕಟ ಸಂಪರ್ಕ ಹೊಂದಿದ್ದ ಮಹರ್ಷಿ ವಾಲ್ಮೀಕಿ ಅವರಲ್ಲಿ ಕವಿತ್ವ ಭಾವನೆ...

ವೀಲ್ ಚೇರ್ ಬ್ಯಾಸ್ಕೆಟ್ ಬಾಲ್ ರಾಜ್ಯ ತಂಡಕ್ಕೆ ಗುಬ್ಬಿಯ ಗಂಗರಾಜು ಆಯ್ಕೆ

 ಗೋವಾ ರಾಜ್ಯದಲ್ಲಿ ನಡೆದಿರುವ ಇಂಟರ್ ನ್ಯಾಷನಲ್ ಪರ್ಪಲ್ ಫೆಸ್ಟ್ 2025 ಹಿನ್ನಲೆ...

ಗುಬ್ಬಿ | ಮಹರ್ಷಿ ವಾಲ್ಮೀಕಿ ಅವರ ಸನ್ಮಾರ್ಗ ಪ್ರಸ್ತುತ ಔಚಿತ್ಯವಿದೆ : ಶಾಸಕ ಎಸ್.ಆರ್.ಶ್ರೀನಿವಾಸ್

 ಸಮಾಜಕ್ಕೆ ಕೊಡುಗೆ ನೀಡಿದ ಗಣ್ಯರ ಜನ್ಮ ದಿನವನ್ನು ಒಂದು ಸಮಾಜಕ್ಕೆ ಸೀಮಿತ...

Download Eedina App Android / iOS

X