ಬೀದರ್‌ | ಒಳ ಮೀಸಲಾತಿ ಜಾರಿಗೆ ಆಗ್ರಹಿಸಿ ಪ್ರತಿಭಟನೆ

Date:

ಪರಿಶಿಷ್ಟ ಜಾತಿಯ ಒಳ ಮೀಸಲಾತಿ ಜಾರಿಗೆ ಆಗ್ರಹಿಸಿ ಜಿಲ್ಲಾ ಮಾದಿಗ ಸಮಾಜದ ಸಂಘಟನೆಗಳ ಒಕ್ಕೂಟದ ಮುಖಂಡರು ಬೀದರ್ ನಗರದಲ್ಲಿ ಪ್ರತಿಭಟನೆ ನಡೆಸಿದರು.

- Advertisement -

ನಗರದ ಡಾ.ಬಿ.ಆರ್.ಅಂಬೇಡ್ಕರ್‌ ವೃತ್ತದ ಬಳಿ ಮಾನವ ಸರಪಳಿ ರಚಿಸಿ ರಾಜ್ಯ ಸರ್ಕಾರದ ವಿರುದ್ಧ ಘೋಷಣೆ ಕೂಗಿದರು. ಬಳಿಕ ಜಿಲ್ಲಾಧಿಕಾರಿಗಳ ಕಚೇರಿವರೆಗೆ ಪ್ರತಿಭಟನಾ ಮೆರವಣಿಗೆ ನಡೆಸಿ ಜಿಲ್ಲಾಧಿಕಾರಿಗಳ ಮುಖಾಂತರ ರಾಜ್ಯಪಾಲ, ಮುಖ್ಯಮಂತ್ರಿಗೆ ಹಕ್ಕೊತ್ತಾಯ ಪತ್ರ ಸಲ್ಲಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಬ್ರಿಟಿಷ್ ಕಾಲದ ʼಗುಲಾಮಗಿರಿʼ ಕಾನೂನುಗಳೇ ಇಂದಿನ ಪೊಲೀಸ್‌ ವ್ಯವಸ್ಥೆಯ...

ಸ್ವಾತಂತ್ರ್ಯ ಬಂದು ದಶಕಗಳೇ ಕಳೆದಿದ್ದರೂ, ನಾವಿನ್ನೂ ಬ್ರಿಟಿಷರು ಭಾರತೀಯರನ್ನು ದಮನ ಮಾಡಲು ರೂಪಿಸಿದ 1861ರ ಪೊಲೀಸ್ ಕಾಯಿದೆಯ ನೆರಳಿನಲ್ಲೇ ಬದುಕುತ್ತಿದ್ದೇವೆಯೇ? ಖಾಕಿ ಪಡೆಯನ್ನು 'ಪ್ರಜೆಗಳ ರಕ್ಷಕ'ನಾಗಿಸಬೇಕಿದ್ದ ವ್ಯವಸ್ಥೆ, ಇಂದಿಗೂ ರಾಜಕಾರಣಿಗಳ ಕೈಗೊಂಬೆಯಾಗಿ ಉಳಿದುಕೊಳ್ಳಲು...

ಯಾರು ಹಿತವರು ಈ ಇಬ್ಬರೊಳಗೆ? ನೇಹಾ ಬೋರಾ ಅಭಿಜಿತ್...

“ಹೋಲಿಕೆ ಬೇಡ, ಒಗ್ಗಟ್ಟು ಬೇಕು. ನಾವೆಲ್ಲರೂ ಒಟ್ಟಾಗಿ ಚುನಾವಣಾ ಆಯೋಗದ ಅಕ್ರಮಗಳ ವಿರುದ್ಧ ಹೋರಾಡಬೇಕು” ಎಂದು ನೇಹಾ ಬರೆದರೆ, ಅದಕ್ಕೆ ಅಭಿಜೀತ್ ಉತ್ತರ- “ಇಂಕ್ವಿಲಾಬ್ ಜಿಂದಾಬಾದ್” ನೇಹಾ ಬೋರಾ ಮತ್ತು ಅಭಿಜಿತ್ ದೀಪ್ಕೆ ನಡುವೆ...

ಸ್ವತಂತ್ರ ಸಾಂವಿಧಾನಿಕ ಸಂಸ್ಥೆಗಳ ಮೇಲಿನ ನಂಬಿಕೆಯನ್ನು ಕಸಿದುಕೊಳ್ಳುತ್ತಿರುವ ಚುನಾವಣಾ...

ನ್ಯಾಯಾಲಯ ಮತ್ತು ಚುನಾವಣಾ ಆಯೋಗಗಳ 'ಸ್ವತಂತ್ರತೆ' ಎಂಬ ಮುಖವಾಡವೇ ಈಗ ಸರ್ಕಾರಕ್ಕೆ ರಕ್ಷಣಾ ಕವಚವಾಗಿ ಕೆಲಸ ಮಾಡುತ್ತಿದೆ. ಹೀಗಾಗಿ ಇವತ್ತು ವಿರೋಧ ಪಕ್ಷಗಳ ಆಕ್ರೋಶವೆಲ್ಲವೂ ಸಾಂವಿಧಾನಿಕ ಸಂಸ್ಥೆಗಳ ಕಡೆಗೆ ತಿರುಗಿದೆ. ಸರ್ಕಾರ ತೀರಾ...

ʼ2023ರ ಸಾರ್ವತ್ರಿಕ ಚುನಾವಣೆ ಸಮಯದಲ್ಲಿ ಕಾಂಗ್ರೆಸ್ ಪ್ರಣಾಳಿಕೆಯಲ್ಲಿ 6ನೇ ಗ್ಯಾರಂಟಿಯಾಗಿ ಒಳ ಮೀಸಲಾತಿ ಜಾರಿಗೊಳಿಸುವುದಾಗಿ ಭರವಸೆ ನೀಡಿತ್ತು. ಇದೀಗ ಬೇಡಿಕೆಯನ್ನು ಈಡೇರಿಸಲು ರಾಜ ಸರ್ಕಾರ ಮುಂದಾಗಬೇಕು. ಒಳ ಮೀಸಲಾತಿ ಬ್ಯಾಕ್‌ಲಾಗ್ ಸೇರಿದಂತೆ ಯಾವುದೇ ಹುದ್ದೆ, ನೇಮಕಾತಿ ಪ್ರಕ್ರಿಯೆ ನಡೆಸಬಾರದುʼ ಎಂದು ಒತ್ತಾಯಿಸಿದರು.

ʼಪರಿಶಿಷ್ಟ ಜಾತಿಯಲ್ಲಿ ಉಪ ವರ್ಗೀಕರಣ ಆಯಾ ರಾಜ್ಯ ಸರ್ಕಾರಗಳಿಗೆ ಅಧಿಕಾರವಿದ್ದು, ಸಂವಿಧಾನ ಪರಿಚ್ಛೇದದ ತಿದ್ದುಪಡಿ ಅಗತ್ಯವಿಲ್ಲ ಸುಪ್ರೀಂ ಕೋರ್ಟ್‌ ಕಳೆದ ಆಗಸ್ಟ್‌ 1 ರಂದು ಆದೇಶ ಹೊರಡಿಸಿದೆ. ಈ ಹಿನ್ನೆಲೆಯಲ್ಲಿ ರಾಜ್ಯ ಕಾಂಗ್ರೆಸ್ ಸರ್ಕಾರ ಯಾವುದೇ ರೀತಿಯ ವಿಳಂಬ ಧೋರಣೆಗೆ ಆಸ್ಪದ ನೀಡದೇ ಒಳ ಮೀಸಲಾತಿ ಜಾರಿ ಮಾಡಬೇಕುʼ ಎಂದು ಆಗ್ರಹಿಸಿದರು.

ʼಜನಗಣತಿ ವರದಿ ವಿಚಾರವನ್ನು ಮುನ್ನೆಲೆಗೆ ತಂದು ಎಸ್.ಸಿ. ಒಳಮೀಸಲಾತಿ ಜಾರಿಗೊಳಿಸುವಲ್ಲಿ ನಿರ್ಲಕ್ಷ್ಯ ಧೋರಣೆ ತಾಳದೇ, ಸುಪ್ರೀಂ ಕೋರ್ಟ್ ತೀರ್ಪು ಉಲ್ಲಂಘನೆಯ ಒಳ ಹುನ್ನಾರವನ್ನು ಮುಂದುವರಿಸಿದರೆ ಮುಂದಿನ ದಿನಗಳಲ್ಲಿ ಹೋರಾಟ ತೀವ್ರಗೊಳಿಸಲಾಗುವುದುʼ ಎಂದು ಎಚ್ಚರಿಸಿದರು.

ಈ ಸುದ್ದಿ ಓದಿದ್ದೀರಾ? ಕುದುರೆಮುಖ ಕಬ್ಬಿಣದ ಅದಿರು ಕಂಪನಿ ಅರಣ್ಯ ಇಲಾಖೆಗೆ ₹1,400 ಕೋಟಿ ಪಾವತಿಸಿಲ್ಲ: ಸಚಿವ ಈಶ್ವರ ಖಂಡ್ರೆ

ಪ್ರತಿಭಟನೆಯಲ್ಲಿ ಮಾದಿಗ ದಂಡೋರಾ ಮೀಸಲಾತಿ ಹೋರಾಟ ಸಮಿತಿ ರಾಜ್ಯ ಕಾರ್ಯಧ್ಯಕ್ಷರಾದ ಫರ್ನಾಂಡಿಸ್ ಹಿಪ್ಪಳಗಾಂವ, ರಾಜು ಕಡ್ಯಾಳ, ಜಿಲ್ಲಾಧ್ಯಕ್ಷ ವಿಜಯಕುಮಾರ ಹಿಪ್ಪಳಗಾಂವ, ಉಪಾಧ್ಯಕ್ಷರಾದ ಕಮಲಾಕರ.ಎಲ್.ಹೆಗಡೆ, ಜಾಪೇಟ್ ಕಡ್ಯಾಳ್, ಸ್ವಾಮಿದಾಸ ಮೇಘಾ, ದತ್ತಾತ್ರಿ ಜ್ಯೋತಿ, ಸುಧಾಕರ ಕೊಳ್ಳೂರ, ಸುಧಾಕರ ಸೂರ್ಯವಂಶಿ, ಶಿವಣ್ಣಾ ಹಿಪ್ಪಳಗಾಂವ, ಪೀಟರ್ ಚಿಟಗುಪ್ಪಾ, ರವಿ ನಿಜಾಂಪೂರೆ, ಪರಮೇಶ್ವರ ಕಾಳಮಂದರಗಿ, ಜಯಶೀಲ್ ಕಲವಾಡೆ, ವಿಜಯಕುಮಾರ ಸೂರ್ಯವಂಶಿ,ವೀರಶೇಟ್ಟಿ , ಮನೋಹರ, ರಾಜು ಸಾಂಗ್ಲೆ, ಸಚೀನ ಅಂಬೇಸಿಂಗೆ, ಗೋರಖ ನಿಂಬೂರ, ಪೀಟರ್ ಶ್ರೀಮಂಡಲ ಸೇರಿದಂತೆ ಅನೇಕರು ಪಾಲ್ಗೊಂಡಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಹಾವೇರಿ | ನಾಳೆ ಜಿಲ್ಲಾ ಮಟ್ಟದ ಕಾರ್ಯಾಗಾರ

ಸಾವಯವ ಹಾಗೂ ನೈಸರ್ಗಿಕ ಕೃಷಿ ಪದ್ಧತಿಯನ್ನು ಉತ್ತೇಜಿಸುವ ಜೊತೆಗೆ ರೈತರು ಬೆಳೆಯುವ...

ಬೀದರ್‌ | ಪಿಸ್ತೂಲ್‌ ಮಾರಾಟ ಜಾಲ ಪತ್ತೆ ಹಚ್ಚಿದ ಪೊಲೀಸರು: ಮುಖ್ಯ ಆರೋಪಿ ಸೇರಿ ನಾಲ್ವರ ಬಂಧನ

ಅಕ್ರಮವಾಗಿ ಪಿಸ್ತೂಲ್‌ ಹಾಗೂ ಜೀವಂತ ಗುಂಡುಗಳನ್ನು ಮಾರಾಟ ಮಾಡಲು ಯತ್ನಿಸುತ್ತಿದ್ದ ದಂಧೆಕೋರರನ್ನು...

ಶಿರಸಿ | ರಾಜೇಂದ್ರ ಸಿರ್ಸಿಕರ್‌ಗೆ ಇಂಡಿಯಾ ಬುಕ್ ಆಫ್ ರೆಕಾರ್ಡ್ಸ್ ಗೌರವ

ಶಿರಸಿ: ಪ್ರಾಣಿ-ಪಕ್ಷಿಗಳ ರಕ್ಷಣೆ ಮತ್ತು ಪುನರ್ವಸತಿ ಕ್ಷೇತ್ರದಲ್ಲಿ ಕಾರ್ಯನಿರ್ವಹಿಸುತ್ತಿರುವ ಶಿರಸಿಯ ರಾಜೇಂದ್ರ...

ಧಾರವಾಡ | ಪೊಲೀಸ್ ಹೆಸರೇಳಿ ರೂ. 15,700 ವಂಚನೆ: ನಾಲ್ಕು ಬೈಕ್‍ಗಳು ನಗದು ವಶ

ಪೊಲೀಸ್ ಹೆಸರೇಳಿ ವ್ಯಕ್ತಿಯೊಬ್ಬರಿಂದ ₹15,700 ಹಣ ಪಡೆದು ವಂಚಿಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ...