ಹಳಿಯಾಳ | ಪೊಲೀಸರ ಮೇಲೆ ಹಲ್ಲೆಗೆ ಯತ್ನಿಸಿ ಪರಾರಿಯಾಗಿದ್ದ ರೌಡಿಶೀಟರ್ ಮಚ್ಚ ಮಂಜಾ ಬಂಧನ

Date:

ಹಳಿಯಾಳ: ಮೌರ್ಯ ಹೋಟೆಲ್ ಮುಂಭಾಗದ ಪಾನ್ ಶಾಪ್ ಬಳಿ ಸಾರ್ವಜನಿಕರಿಗೆ ತೊಂದರೆ ನೀಡುತ್ತಿದ್ದಲ್ಲದೆ, ಸ್ಥಳಕ್ಕೆ ಬಂದ ಪೊಲೀಸರ ಮೇಲೆಯೇ ಹಲ್ಲೆಗೆ ಯತ್ನಿಸಿ ಪರಾರಿಯಾಗಿದ್ದ ಕುಖ್ಯಾತ ರೌಡಿಶೀಟರ್ ಮಂಜುನಾಥ್ ಅಲಿಯಾಸ್ ‘ಮಚ್ಚ ಮಂಜಾ’ ಕೊನೆಗೂ ಪೊಲೀಸರ ಬಲೆಗೆ ಬಿದ್ದಿದ್ದಾನೆ.

- Advertisement -

ಮಹಾರಾಷ್ಟ್ರ ಗಡಿ ಭಾಗದಲ್ಲಿ ಭಾನುವಾರ ನಡೆಸಿದ ಭರ್ಜರಿ ಕಾರ್ಯಾಚರಣೆಯಲ್ಲಿ ಹಳಿಯಾಳ ಪೊಲೀಸರು ಈತನನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ. ಕೆಲ ದಿನಗಳ ಹಿಂದೆ ಕುಡಿದ ಅಮಲಿನಲ್ಲಿ ಪೊಲೀಸರ ಮೇಲೆಯೇ ಹಲ್ಲೆಗೆ ಯತ್ನಿಸಿದ್ದ ಈತನ ದಾದಾಗಿರಿಯ ವಿಡಿಯೋಗಳು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದ್ದವು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಕತ್ತಲೆಯಿಂದ ಬೆಳಕಿನತ್ತ ಸೌಜನ್ಯ ಹೋರಾಟ: ಸುಪ್ರೀಂ ಆದೇಶದೊಂದಿಗೆ ಮೂಡಿದ...

ಸೌಜನ್ಯ ಅತ್ಯಾಚಾರ, ಕೊಲೆ ಪ್ರಕರಣವು ಕೇವಲ ಒಂದು ಕಾನೂನು ಪ್ರಕ್ರಿಯೆಯಾಗಿ ಉಳಿಯದೆ, ಸಾರ್ವಜನಿಕ ಜಾಗೃತಿ ಮತ್ತು ನ್ಯಾಯದ ಪರವಾದ ಗಟ್ಟಿಯಾದ ಧ್ವನಿಯಾಗಿ ಮಾರ್ಪಟ್ಟಿದೆ. ಸುಪ್ರೀಂ ಕೋರ್ಟ್‌ನ ಈ ಹೊಸ ಆದೇಶವು ಸೌಜನ್ಯ ಕುಟುಂಬಕ್ಕೆ...

ವಿಜಯಪುರ | ಮಳೆ ಕೊರತೆಯಿಂದ ಮೇವಿಗೂ ಬರ: ಜಾನುವಾರು...

ಹಸಿರು ಮೇವು ಕಡಿಮೆಯಾಗಿ, ಸಂಗ್ರಹಿತ ಒಣಮೇವು ಖಾಲಿಯಾಗುತ್ತಿರುವುದರಿಂದ ಹೈನುಗಾರಿಕೆ ಮತ್ತು ಕುರಿ-ಮೇಕೆ ಸಾಕಾಣಿಕೆ ಅವಲಂಬಿತ ಕುಟುಂಬಗಳ ಆದಾಯಕ್ಕೆ ಹೊಡೆತ ಬೀಳುವ ಭೀತಿ ಎದುರಾಗಿದೆ. ಬೋರ್‌ವೆಲ್‌ಗಳಲ್ಲಿನ ನೀರಿನ ಮಟ್ಟ ಕುಸಿತ ಮತ್ತು ಹೊರ ಜಿಲ್ಲೆ/ರಾಜ್ಯಗಳಿಂದ...

ತುಳುವಿಗೆ ಅಧಿಕೃತ ಮಾನ್ಯತೆ | ಭಾಷಾ ಬೆಳವಣಿಗೆಗೆ ಇಷ್ಟೇ...

ತುಳು ಭಾಷೆಗೆ ಸಿಗುವ ಹೊಸ ಸ್ಥಾನಮಾನ ಭಾಷಾ ಹೋರಾಟದ ಅಂತಿಮ ಗುರಿಯಾಗಬಾರದು. ಬದಲಾಗಿ ಅದೊಂದು ಹೊಸ ಅಧ್ಯಾಯದ ಆರಂಭವಾಗಬೇಕು. ಸರ್ಕಾರಿ ಯೋಜನೆಗಳು, ಶೈಕ್ಷಣಿಕ ಪೋಷಣೆ ಮತ್ತು ಸ್ಥಳೀಯ ಆರ್ಥಿಕತೆಯ ಬೆಂಬಲ ಸಿಕ್ಕಾಗ ಮಾತ್ರವೇ...

ಈ ಸುದ್ದಿ ಓದಿದ್ದೀರಾ? ಭಟ್ಕಳ | ಕಾರು ಹೊಂಡಕ್ಕೆ ಸಿಲುಕಿದ ಘಟನೆಗೆ ಹೊಸ ತಿರುವು; ಮೂರು ಪ್ರಕರಣ ದಾಖಲು

ಘಟನಾ ಸ್ಥಳಕ್ಕೆ ಧಾವಿಸಿದ್ದ ಪಿಎಸ್‌ಐ ಬಸವರಾಜ ಮಬನೂರು ಅವರು ಆರೋಪಿ ವಿರುದ್ಧ ಸೂಕ್ತ ಕ್ರಮ ಕೈಗೊಳ್ಳದೆ ನಿರ್ಲಕ್ಷ್ಯ ವಹಿಸಿ ಮರಳಿದ್ದರು. ಇದು ಇಡೀ ಪೊಲೀಸ್ ಇಲಾಖೆಗೆ ತೀವ್ರ ಮುಜುಗರ ಉಂಟುಮಾಡಿತ್ತು. ಕರ್ತವ್ಯ ಲೋಪದ ಹಿನ್ನೆಲೆಯಲ್ಲಿ ಪಿಎಸ್‌ಐ ಅವರನ್ನು ಅಮಾನತುಗೊಳಿಸಿ, 8 ಸಿಬ್ಬಂದಿಯನ್ನು ಬೇರೆಡೆಗೆ ವರ್ಗಾವಣೆ ಮಾಡಲಾಗಿತ್ತು.

ಘಟನೆಯ ನಂತರ ಪೊಲೀಸರಿಂದ ತಪ್ಪಿಸಿಕೊಂಡಿದ್ದ ಮಂಜಾ, ಯಾವುದೇ ಮೊಬೈಲ್ ಫೋನ್ ಬಳಸದೆ ತಲೆಮರೆಸಿಕೊಂಡಿದ್ದನು. ಇದು ಪೊಲೀಸರಿಗೆ ಆತನ ಪತ್ತೆ ಹಚ್ಚಲು ದೊಡ್ಡ ಸವಾಲಾಗಿ ಪರಿಣಮಿಸಿತ್ತು. ಆರೋಪಿಗಾಗಿ ತೀವ್ರ ಹುಡುಕಾಟ ನಡೆಸುತ್ತಿದ್ದ ಪೊಲೀಸರು, ಖಚಿತ ಮಾಹಿತಿ ಮೇರೆಗೆ ಮಹಾರಾಷ್ಟ್ರ ಗಡಿಯಲ್ಲಿ ಕಾರ್ಯಾಚರಣೆ ನಡೆಸಿ ಕಡೆಗೂ ಆತನನ್ನು ಹೆಡೆಮುರಿ ಕಟ್ಟಿದ್ದಾರೆ.

ಉತ್ತರ ಕನ್ನಡ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳ ಮಾರ್ಗದರ್ಶನದಲ್ಲಿ, ಹಳಿಯಾಳ ಸಿಪಿಐ ಜೈಪಾಲ್ ಪಾಟೀಲ್ ನೇತೃತ್ವದ ಜಂಟಿ ತಂಡ ಈ ಕಾರ್ಯಾಚರಣೆ ನಡೆಸಿದೆ. ತಂಡದಲ್ಲಿ ಹಳಿಯಾಳ ಮತ್ತು ದಾಂಡೇಲಿ ಪಿಎಸ್ಐಗಳಾದ ಕೃಷ್ಣಗೌಡ ಅರಕೇರಿ, ಮಹಾಂತೇಶ್ ನಾಯ್ಕ್, ಕಿರಣ್ ಪಾಟೀಲ್ ಹಾಗೂ ಹಳಿಯಾಳ, ದಾಂಡೇಲಿ, ರಾಮನಗರ ಪೊಲೀಸ್ ಠಾಣೆಗಳ ಸಿಬ್ಬಂದಿಗಳಾದ ಎಂ.ಎಂ. ಮುಲ್ಲಾ, ಕೃಷ್ಣ, ಚಂದ್ರು, ಶಫಿ, ಬಸವರಾಜ ತೇಲಸಂಗ, ಗಂಗಾಧರ್, ನಿಂಗಪ್ಪ ಬಳ್ಳಾರಿ, ಸೊಹೇಲ್, ಬಸವರಾಜು ತ್ಯಾಪಿ, ಶ್ರೀಶೈಲ ಮತ್ತು ಬಸವರಾಜ ಹಗರಿ ಅವರು ಪಾಲ್ಗೊಂಡು ಆರೋಪಿಯನ್ನು ಬಂಧಿಸಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಉಡುಪಿ | ಅಧಿಕಾರಿಗಳ ನಿರ್ಲಕ್ಷ್ಯದಿಂದ ದೌರ್ಜನ್ಯಗಳಿಗೆ ಕಡಿವಾಣ ಬೀಳುತ್ತಿಲ್ಲ : ಸಂಜೀವ ಬಳ್ಕೂರು

ರಾಯಚೂರು ಜಿಲ್ಲೆಯಲ್ಲಿ ದಲಿತ ಮಹಿಳೆಯರ ಮೇಲೆ ನಿರಂತರವಾಗಿ ನಡೆಯುತ್ತಿರುವ ಅತ್ಯಾಚಾರ ಹಾಗೂ...

ಗದಗ | ಅಲ್ಪಸಂಖ್ಯಾತರ ಅಭಿವೃಧ್ದಿ ನಿಗಮದಲ್ಲಿ ಮಧ್ಯವರ್ತಿಗಳ ಹಾವಳಿ: ಕಡಿವಾಣಕ್ಕೆ ಆಗ್ರಹ

ಗದಗ ಜಿಲ್ಲೆಯ ಬಡ ಅಲ್ಪಸಂಖ್ಯಾತರ ಕುಟುಂಬಗಳಿಗೆ ಸರ್ಕಾರದ ಯೋಜನೆಗಳು ಪ್ರಮಾಣಿಕವಾಗಿ ದೊರಕಿಸಿ...

ಕೋಲಾರ | ವಿದ್ಯಾರ್ಥಿನಿಯ ನಾಲ್ಕು ವರ್ಷದ ವಿದ್ಯಾಭ್ಯಾಸಕ್ಕೆ ಎಲ್.ಜಿ. ಫೌಂಡೇಶನ್ ನೆರವು

ವಕ್ಕಲೇರಿ ಗ್ರಾಮದ ಕೂಲಿ ಕಾರ್ಮಿಕ ನಾಗರಾಜ್ ಅವರ ಪುತ್ರಿಯ ನಾಲ್ಕು ವರ್ಷದ...

ಬಾಗೇಪಲ್ಲಿ | ದ್ವಿಭಾಷಾ ನೀತಿ ಕೈಬಿಟ್ಟು ತ್ರಿಭಾಷಾ ಸೂತ್ರವನ್ನುಮುಂದುವರಿಸಬೇಕು ಎಂದು ಬೆಂಗಳೂರು ಛಲೋ

ರಾಜ್ಯದಲ್ಲಿ 15 ಸಾವಿರ ಹಿಂದಿ ಶಿಕ್ಷಕರು ಹಾಗೂ ಅವರ ಕುಟುಂಬದವರ ಹಿತದೃಷ್ಟಿಯಿಂದ...