ಗುಂಡ್ಲುಪೇಟೆ | ನಿರ್ಬಂಧಿತ ಅರಣ್ಯ ಪ್ರದೇಶದಲ್ಲಿ ರೌಡಿ ಶೀಟರ್ ಮದ್ಯಪಾರ್ಟಿ; ಅರಣ್ಯ ಇಲಾಖೆಯ ಭದ್ರತೆ ಬಗ್ಗೆ ಪ್ರಶ್ನೆ

Date:

ಬಂಡೀಪುರ ಹುಲಿ ಸಂರಕ್ಷಿತ ಪ್ರದೇಶದ ಮದ್ದೂರು ವಲಯ ವ್ಯಾಪ್ತಿಯ ನಿರ್ಬಂಧಿತ ಅರಣ್ಯ ಪ್ರದೇಶದಲ್ಲಿ ರೌಡಿ ಶೀಟರ್ ಹಾಗೂ ಆತನ ಸಂಗಡಿಗರು ಮದ್ಯದ ಪಾರ್ಟಿ ನಡೆಸಿರುವ ಆರೋಪ ಕೇಳಿಬಂದಿದ್ದು, ಅರಣ್ಯ ಇಲಾಖೆಯ ಭದ್ರತಾ ವ್ಯವಸ್ಥೆ ಕುರಿತು ಸಾರ್ವಜನಿಕ ವಲಯದಲ್ಲಿ ತೀವ್ರ ಪ್ರಶ್ನೆಗಳು ಉದ್ಭವಿಸಿವೆ.

- Advertisement -

ಗುಂಡ್ಲುಪೇಟೆ ಪೊಲೀಸ್ ಠಾಣೆಯ ರೌಡಿ ಶೀಟರ್ ಪಟ್ಟಿಯಲ್ಲಿರುವ ಸತೀಶ್ (ಹಂಗಳ ಮಹದೇವಪ್ರಸಾದ್) ಎಂಬಾತ ತನ್ನ ಸಂಗಡಿಗರಾದ ಗಂಗಾಧರ್ ಹಾಗೂ ಚೇತನ್ ಅವರೊಂದಿಗೆ ಮದ್ದೂರು ವಲಯದ ಹುಲಿಕಟ್ಟೆ ಪ್ರದೇಶದಲ್ಲಿರುವ ಕಳ್ಳಬೇಟೆ ತಡೆ ಶಿಬಿರದ ಸಮೀಪ ಮದ್ಯ ಸೇವಿಸಿ ಪಾರ್ಟಿ ನಡೆಸಿದ್ದಾನೆ ಎನ್ನಲಾಗಿದೆ. ಈ ಸಂಬಂಧದ ಕೆಲವು ಛಾಯಾಚಿತ್ರಗಳು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದ್ದು, ಸಾರ್ವಜನಿಕರ ಆಕ್ರೋಶಕ್ಕೆ ಕಾರಣವಾಗಿವೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

137 ಜೀವ ರಕ್ಷಕ ಕ್ಯಾನ್ಸರ್ ಔಷಧಗಳ ದರ ಶೇ.70ರಷ್ಟು...

ಕ್ಯಾನ್ಸರ್ ಚಿಕಿತ್ಸೆಯ ದುಬಾರಿ ವೆಚ್ಚದಿಂದ ಕಂಗೆಟ್ಟಿರುವ ರೋಗಿಗಳಿಗೆ ಕೇಂದ್ರ ಸರ್ಕಾರದಿಂದ ಕೊಂಚ ನಿರಾಳತೆಯ ಸುದ್ದಿಯೊಂದಿದೆ! 137 ಜೀವರಕ್ಷಕ ಕ್ಯಾನ್ಸರ್ ಔಷಧಗಳ ಬೆಲೆ ಇಳಿಕೆಯಾಗುವ ಸಾಧ್ಯತೆಯಿದ್ದು, ಕೆಲವು ಔಷಧಗಳ ಗರಿಷ್ಠ ಚಿಲ್ಲರೆ ಬೆಲೆ ಶೇ.70ರವರೆಗೆ...

‘ದೇಶ್ ಕೋ ಬಿಕನೇ ನಹೀ ದೂಂಗಾ’ ಎಂದು ನವಮಂಗಳೂರು...

​ರೈಲ್ವೆ, ವಿಮಾನ ನಿಲ್ದಾಣ, ಟೆಲಿಕಾಂ ಸೇರಿದಂತೆ ದೇಶದ ಪ್ರಮುಖ ಜಯಶೀಲ ಸಾರ್ವಜನಿಕ ವಲಯಗಳನ್ನು ಈಗಾಗಲೇ ಆಯ್ದ ಕಾರ್ಪೊರೇಟ್ ಕುಳಗಳಿಗೆ ಒಪ್ಪಿಸಿರುವ ಮೋದಿ ಸರ್ಕಾರ, ಈಗ ತನ್ನ ದೃಷ್ಟಿಯನ್ನು ಕಡಲತೀರಗಳತ್ತ ಹರಿಸಿದೆ. ದೇಶದ ಆಮದು-ರಫ್ತು...

SIRನ ಒಳನೋಟ: ಸೇರ್ಪಡೆಗಿಂತ ಹೊರಗಿಡುವುದಕ್ಕೆ ಆದ್ಯತೆ ನೀಡಿದಾಗ ಏನಾಗುತ್ತದೆ?

SIR ಕರಡು ಪಟ್ಟಿಯಲ್ಲಿರುವ ಮತದಾರರ ಸಂಖ್ಯೆಯು ನೈಜ ವಯಸ್ಕ ಜನಸಂಖ್ಯೆಯ ಅಂದಾಜಿಗಿಂತ ಅಷ್ಟೊಂದು ದೊಡ್ಡ ಪ್ರಮಾಣದಲ್ಲಿ ಕಡಿಮೆಯಾಗಿರುವುದಕ್ಕೆ ಕಾರಣವೇನು? ಈ ಕಾಣೆಯಾದ ಮತದಾರರೆಲ್ಲ ಯಾರು? ಅವರು ಮತದಾರರ ಪಟ್ಟಿಯಲ್ಲಿ ಬಿಟ್ಟು ಹೋಗಿದ್ದು ಹೇಗೆ?...

ಸಾರ್ವಜನಿಕರ ಪ್ರವೇಶಕ್ಕೆ ನಿರ್ಬಂಧವಿರುವ ಅರಣ್ಯ ಪ್ರದೇಶದಲ್ಲಿ, ಅದರಲ್ಲೂ ಕಳ್ಳಬೇಟೆ ತಡೆ ಶಿಬಿರದ ಸಮೀಪ ಇಂತಹ ಚಟುವಟಿಕೆಗಳು ನಡೆದಿರುವುದು ಅರಣ್ಯ ಇಲಾಖೆಯ ಭದ್ರತಾ ವೈಫಲ್ಯವನ್ನು ಬಿಂಬಿಸುತ್ತದೆ ಎಂದು ಸ್ಥಳೀಯರು ಆರೋಪಿಸಿದ್ದಾರೆ.

ವನ್ಯಜೀವಿಗಳ ಮುಕ್ತ ಸಂಚಾರವಿರುವ ಸೂಕ್ಷ್ಮ ಪ್ರದೇಶಗಳಲ್ಲಿ ಕಟ್ಟುನಿಟ್ಟಿನ ನಿಗಾವಹಿಸಬೇಕಾದ ಅಧಿಕಾರಿಗಳು ಇಂತಹ ಘಟನೆಗಳನ್ನು ತಡೆಯುವಲ್ಲಿ ವಿಫಲರಾಗಿದ್ದಾರೆ ಎಂಬ ಟೀಕೆಗಳು ವ್ಯಕ್ತವಾಗಿವೆ. ಕಾಡಿನಲ್ಲಿ ಒಣಗಿದ ಸೌದೆ ಸಂಗ್ರಹಿಸಲು ತೆರಳುವ ರೈತರು ಹಾಗೂ ಬುಡಕಟ್ಟು ಜನರ ವಿರುದ್ಧ ಪ್ರಕರಣ ದಾಖಲಿಸುವ ಅರಣ್ಯ ಇಲಾಖೆ, ಕ್ರಿಮಿನಲ್ ಹಿನ್ನೆಲೆಯುಳ್ಳವರ ವಿರುದ್ಧ ಕ್ರಮ ಕೈಗೊಳ್ಳಲು ಹಿಂಜರಿಕೆ ಏಕೆ ಎಂಬ ಪ್ರಶ್ನೆಯನ್ನು ಸಾರ್ವಜನಿಕರು ಎತ್ತಿದ್ದಾರೆ.

ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಕಾಡಿನೊಳಗೆ ಅತಿಕ್ರಮಣ ಪ್ರವೇಶ ಮಾಡಿರುವುದು ಹಾಗೂ ಅಗತ್ಯ ಅನುಮತಿ ಪಡೆಯದಿರುವ ಕಾರಣ ಚಿತ್ರದಲ್ಲಿರುವ ಮೂವರ ವಿರುದ್ಧ ಅರಣ್ಯ ಕಾಯ್ದೆಯಡಿ ಪ್ರಕರಣ ದಾಖಲಿಸಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಇದೇ ವೇಳೆ, ವಲಯಾಧಿಕಾರಿ ಪುನೀತ್ ಅವರ ಸಹಕಾರದಿಂದಲೇ ಆರೋಪಿಗಳು ಕಾಡಿನೊಳಗೆ ಪ್ರವೇಶಿಸಿದ್ದಾರೆ ಎಂಬ ಆರೋಪವೂ ಕೇಳಿಬಂದಿದೆ. ಈ ಕುರಿತು ಅವರ ವಿರುದ್ಧ ಶಿಸ್ತು ಕ್ರಮ ಕೈಗೊಳ್ಳುವಂತೆ ಮೇಲಾಧಿಕಾರಿಗಳಿಗೆ ಪತ್ರ ಬರೆಯಲಾಗಿದೆ ಎಂದು ಬಂಡೀಪುರ ಹುಲಿ ಯೋಜನೆ ನಿರ್ದೇಶಕ ಎಲ್. ನಂದೀಶ್ ಪತ್ರಿಕಾ ಪ್ರಕಟಣೆಯಲ್ಲಿ ಮಾಹಿತಿ ನೀಡಿದ್ದಾರೆ.

ಈ ವಿಶೇಷ ಸುದ್ದಿ ಓದಿದ್ದೀರಾ?ಕುಂಡೆಹಬ್ಬ–ಬೋಡ್ ನಮ್ಮೆ: ಕೊಡಗಿನ ಜನಪದ ಸಂಸ್ಕೃತಿಯ ಜೀವಂತ ಪರಂಪರೆ

ಘಟನೆಯು ಅರಣ್ಯ ಪ್ರದೇಶಗಳ ಭದ್ರತೆ, ಅಧಿಕಾರಿಗಳ ಜವಾಬ್ದಾರಿ ಹಾಗೂ ವನ್ಯಜೀವಿ ಸಂರಕ್ಷಣೆಯ ಕುರಿತು ಸಾರ್ವಜನಿಕ ವಲಯದಲ್ಲಿ ವ್ಯಾಪಕ ಚರ್ಚೆಗೆ ಕಾರಣವಾಗಿದೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬಾಗಲಕೋಟೆ | ಬಡವರ ಅನ್ನಕ್ಕೂ ಕನ್ನ! ಅಹಮದಾಬಾದ್‌ಗೆ ಅನ್ನಭಾಗ್ಯದ ಅಕ್ಕಿ ಸಾಗಾಟ; 34 ಟನ್ ಅಕ್ಕಿ ತುಂಬಿದ ಲಾರಿ ಜಪ್ತಿ

ಬಡವರು ಹಸಿವಿನಿಂದ ಬಳಲಬಾರದು, ಪ್ರತಿಯೊಂದು ಕುಟುಂಬಕ್ಕೂ ಆಹಾರ ಭದ್ರತೆ ದೊರೆಯಬೇಕು ಎಂಬ...

ಬಳ್ಳಾರಿ | ಆಂಧ್ರದ ಮಲ್ಲಯ್ಯನ ಜಾತ್ರೆಯಲ್ಲಿ ಬಡಿಗೆ ಕಾಳಗ: ಓರ್ವ ಸಾವು, 80 ಮಂದಿಗೆ ಗಾಯ

ಆಂಧ್ರದ ಆಲೂರು ಮಂಡಲದ ನೇರಣಿಕೆ ಗುಡ್ಡದ ಮಲ್ಲಯ್ಯನ ಜಾತ್ರೆಯಲ್ಲಿ ನಡೆಯುವ ಬಡಿಗೆ...

ಮಂಡ್ಯ | ಟನ್ ಕಬ್ಬಿಗೆ ₹5,500 ಎಫ್‌ಆರ್‌ಪಿ ಘೋಷಿಸಲು ಆಗ್ರಹ

2025-26ನೇ ಸಾಲಿನ ಕಬ್ಬಿಗೆ ಟನ್‌ಗೆ ₹5,500ರ ನ್ಯಾಯಯುತ ಮತ್ತು ಲಾಭದಾಯಕ ಬೆಲೆ...

ಗದಗ | ಮೋಹನ ಲಿಂಬಿಕಾಯಿ ಬೆಂಬಲಿಸಲು ಸಿಪಿಐ(ಎಂ) ಕರೆ

"ಇದೇ ಅಕ್ಟೋಬರ್ 23 ರಂದು ನಡೆಯಲಿರುವ ರಾಜ್ಯ ವಿಧಾನ ಪರಿಷತ್ ಚುನಾವಣೆಯಲ್ಲಿ...