ಮಂಗಳೂರು ನಗರದ ಬಜಪೆಯಲ್ಲಿ ಗುರುವಾರ ರಾತ್ರಿ ದುಷ್ಕರ್ಮಿಗಳ ಗುಂಪಿನಿಂದ ಕೊಲೆಗೀಡಾದ ರೌಡಿಶೀಟರ್ ಸುಹಾಸ್ ಶೆಟ್ಟಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮಂಗಳೂರು ಪೊಲೀಸರು 5ಕ್ಕೂ ಅಧಿಕ ಆರೋಪಿಗಳನ್ನು ಬಂಧಿಸಿರುವುದಾಗಿ ತಿಳಿದು ಬಂದಿದೆ.
ಸುಹಾಸ್ ಶೆಟ್ಟಿ ಹತ್ಯೆ ಪ್ರಕರಣದಲ್ಲಿ ಹಿಂದೂಗಳು ಕೂಡ ಭಾಗಿಯಾಗಿರುವುದಾಗಿ ಬೆಳಕಿಗೆ ಬಂದಿದೆ ಎಂಬ ಮಾಹಿತಿ ಸೋಷಿಯಲ್ ಮೀಡಿಯಾಗಳಲ್ಲಿ ಹರಿದಾಡುತ್ತಿದೆ.
ಸುಹಾಸ್ ಶೆಟ್ಟಿ ಕೊಲೆ ಪ್ರಕರಣದ ತನಿಖೆ ನಡೆಸುತ್ತಿರುವ ಮಂಗಳೂರು ಪೊಲೀಸರ ತಂಡ ಈಗಾಗಲೇ ಐದಕ್ಕೂ ಅಧಿಕ ಮಂದಿ ಆರೋಪಿಗಳನ್ನು ಬಂಧಿಸಿದ್ದು, ಬಂಧಿತರಲ್ಲಿ ಇಬ್ಬರು ಹಿಂದೂಗಳು ಇದ್ದಾರೆ ಎನ್ನಲಾಗುತ್ತಿದೆ. ಆದರೆ ಈ ಬಗ್ಗೆ ಪೊಲೀಸರು ಇನ್ನೂ ಅಧಿಕೃತ ಮಾಹಿತಿ ನೀಡಿಲ್ಲ.
ಸುಹಾಸ್ ಶೆಟ್ಟಿ ಕೊಲೆ ಕೃತ್ಯದಲ್ಲಿ ಭಾಗಿಯಾಗಿದ್ದ ಹೊರ ಜಿಲ್ಲೆಯ ಇಬ್ಬರು ಹಿಂದೂಗಳನ್ನು ಪೊಲೀಸರು ಬಂಧಿಸಿರುವುದಾಗಿ ತಿಳಿದುಬಂದಿದೆ. ಬಂಧಿತರು ಅಪರಾಧ ಹಿನ್ನೆಲೆಯವರು ಎನ್ನಲಾಗುತ್ತಿದೆ.
ಮತೀಯ ಕಾರಣಕ್ಕೆ ಸುಹಾಸ್ ಶೆಟ್ಟಿ ಕೊಲೆ ನಡೆದಿದೆ ಎಂದು ಬಿಜೆಪಿ ಮತ್ತು ಸಂಘಪರಿವಾರದ ನಾಯಕರು ಆರೋಪಿಸಿದ್ದರು.
ಫಾಝಿಲ್ ಕೊಲೆಗೆ ಪ್ರತೀಕಾರವಾಗಿ ಸುಹಾಸ್ ಶೆಟ್ಟಿ ಹತ್ಯೆ ನಡೆದಿದೆ ಎಂಬ ಅನುಮಾನಗಳು ವ್ಯಕ್ತವಾಗಿತ್ತು. ಸುಹಾಸ್ ಶೆಟ್ಟಿ ಹತ್ಯೆ ಹಿನ್ನೆಲೆಯಲ್ಲಿ ಇಂದು ನಡೆದ ದಕ್ಷಿಣ ಕನ್ನಡ ಜಿಲ್ಲೆ ಬಂದ್ ವೇಳೆ ಮುಸ್ಲಿಮರಿಗೆ ಚೂರಿ ಇರಿತ ಆಗಿದ್ದು, ಮುಸ್ಲಿಮರ ಮೇಲೆ ಹಲ್ಲೆ ನಡೆದಿರುವುದು ವರದಿಯಾಗಿದೆ.
ಇದೀಗ ಪ್ರಕರಣಕ್ಕೆ ಸಂಬಂಧಿಸಿ ಇಬ್ಬರು ಹಿಂದೂಗಳ ಬಂಧನ ನಡೆದಿದೆ ಎಂದು ತಿಳಿದುಬಂದಿದ್ದು, ಕೊಲೆ ಕೃತ್ಯಕ್ಕೆ ಬೇರೆ ಆಯಾಮ ಇದೆ ಎನ್ನಲಾಗುತ್ತಿದೆ. ಅಪರಾಧ ಜಗತ್ತಿನ ವೈಯಕ್ತಿಕ ದ್ವೇಷದ ಕಾರಣಕ್ಕೆ ಕೊಲೆ ನಡೆದಿರುವ ಶಂಕೆ ಇದೆ. ರೌಡಿಶೀಟರ್ ಸುಹಾಸ್ ಶೆಟ್ಟಿ ಗ್ಯಾಂಗ್‌ವಾರ್‌ಗೆ ಬಲಿಯಾಗಿರುವ ಅನುಮಾನ ವ್ಯಕ್ತವಾಗಿದೆ.
ಸುಹಾಸ್ ಶೆಟ್ಟಿ ಕೊಲೆ ಪ್ರಕರಣದ ಆರೋಪಿಗಳನ್ನು ಬಂಧಿಸಿರುವ ಬಗ್ಗೆ ಪೊಲೀಸರು ಈವರೆಗೆ ಅಧಿಕೃತ ಮಾಹಿತಿ ನೀಡಿಲ್ಲ. ಮಂಗಳೂರು ನಗರ ಪೊಲೀಸ್ ಆಯುಕ್ತರು ಶೀಘ್ರದಲ್ಲಿಯೇ ಈ ಬಗ್ಗೆ ಮಾಹಿತಿ ನೀಡುವ ಸಾಧ್ಯತೆ ಇದೆ ಎನ್ನಲಾಗುತ್ತಿದೆ.
”ವೈಯಕ್ತಿಕವಾದ ದ್ವೇಷಕ್ಕಾಗಿ ನಡೆದಿರುವ ಘಟನೆ” ಎಂದಿದ್ದ ಸ್ಪೀಕರ್ ಯು ಟಿ ಖಾದರ್
ಫಾಝಿಲ್ ತಂದೆ ಹಾಗೂ ಸಹೋದರರು ಮಾತನಾಡಿದ್ದಾರೆ. ಸುಹಾಸ್ ಕೊಲೆಗೂ ನಮಗೂ ಯಾವುದೇ ಸಂಬಂಧ ಇಲ್ಲ ನಮಗೂ ಈ ಕೃತ್ಯಕ್ಕೂ ಯಾವುದೇ ಸಂಬಂಧ ಇಲ್ಲ. ಇಂತಹ ಪ್ರತಿಕಾರದ ಆಲೋಚನೆಯನ್ನು ನಾವು ಮಾಡಿಯೂ ಇಲ್ಲ. ನಾವು ಎಲ್ಲವನ್ನೂ ಅಂದೇ ದೇವರ ಪಾಲಿಗೆ ಬಿಟ್ಟಿದ್ದೇವೆ ಎಂದಿದ್ದಾರೆ ಎಂದು ಸ್ಪೀಕರ್ ಯು ಟಿ ಖಾದರ್ ಶುಕ್ರವಾರ ಮಧ್ಯಾಹ್ನ ಬೆಂಗಳೂರಿನಲ್ಲಿ ಹೇಳಿಕೆ ನೀಡಿದ್ದರು.

“ಇದೆಲ್ಲವೂ ವೈಯಕ್ತಿಕವಾದ ದ್ವೇಷಕ್ಕಾಗಿ ನಡೆದಿರುವ ಘಟನೆಯಾಗಿದೆ. ಧರ್ಮ ಧರ್ಮದ ದ್ವೇಷ ಅಲ್ಲ” ಇದು ಎಂದು ಯುಟಿ ಖಾದರ್ ತಿಳಿಸಿದ್ದರು.
