ಮಂಗಳೂರು | ರೌಡಿಶೀಟರ್ ಸುಹಾಸ್ ಶೆಟ್ಟಿ ಹತ್ಯೆ: ಕಮಿಷನರೇಟ್ ವ್ಯಾಪ್ತಿಯಲ್ಲಿ ನಿಷೇಧಾಜ್ಞೆ ಜಾರಿ

Date:

ಮಂಗಳೂರು ನಗರದ ಬಜಪೆಯಲ್ಲಿ ಗುರುವಾರ ರಾತ್ರಿ ರೌಡಿಶೀಟರ್ ಸುಹಾಸ್ ಶೆಟ್ಟಿ ಎಂಬಾತನನ್ನು ನಾಲ್ಕರಿಂದ ಐದು ಮಂದಿಯ ಗುಂಪೊಂದು ಮಾರಕಾಸ್ತ್ರಗಳಿಂದ ಕೊಚ್ಚಿ ಕೊಲೆ ಮಾಡಿದೆ. ಈ ಹಿನ್ನೆಲೆಯಲ್ಲಿ ಪ್ರಕ್ಷುಬ್ಧ ವಾತಾವರಣ ನಿರ್ಮಾಣವಾಗಿದ್ದು, ಮುಂಜಾಗ್ರತಾ ಕ್ರಮವಾಗಿ ಮಂಗಳೂರು ನಗರ ಪೊಲೀಸ್ ಕಮಿಷನರೇಟ್ ವ್ಯಾಪ್ತಿಯಲ್ಲಿ ನಿಷೇಧಾಜ್ಞೆ ಜಾರಿಗೊಳಿಸಲಾಗಿದೆ.

- Advertisement -

ಈ ಬಗ್ಗೆ ಆದೇಶ ಹೊರಡಿಸಿರುವ ಮಂಗಳೂರು ನಗರ ಪೊಲೀಸ್ ಕಮಿಷನರ್ ಅನುಪಮ್ ಅಗರ್ವಾಲ್, ‘
ಭಾರತೀಯ ನ್ಯಾಯ ಸುರಕ್ಷಾ ಸಂಹಿತೆ ಕಲಂ: 163ರಲ್ಲಿ ಪ್ರದತ್ತವಾದ ಅಧಿಕಾರವನ್ನು ಬಳಸಿಕೊಂಡು ದಿನಾಂಕ 2025ರ ಮೇ 2 ಬೆಳಗ್ಗೆ ಆರು ಗಂಟೆಯಿಂದ ಮೇ 6ರ ಸಂಜೆ ಆರು ಗಂಟೆಯವರೆಗೆ ಮಂಗಳೂರು ನಗರ ಪೊಲೀಸ್ ಕಮಿಷನರೇಟ್ ವ್ಯಾಪ್ತಿಯನ್ನು ನಿಷೇಧಿತ ಪ್ರದೇಶವೆಂದು ಘೋಷಿಸಿ ನಿಷೇಧಾಜ್ಞೆಯನ್ನು ಜಾರಿಗೊಳಿಸಲಾಗಿದೆ” ಎಂದು ತಿಳಿಸಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಬಾಲಿವುಡ್‌ ಮೇಲೆ ಭೂಗತ ಲೋಕದ ಕರಿನೆರಳು: ದಾವೂದ್ ಇಬ್ರಾಹಿಂನಿಂದ...

ಒಂದು ಕಾಲದಲ್ಲಿ ಬಾಲಿವುಡ್ ಸಿನಿಮಾಗಳಿಗೆ ಹಣ ಹೂಡುತ್ತಿದ್ದ, ನಟ-ನಟಿಯರ ವೃತ್ತಿಜೀವನದ ಮೇಲೆ ಪ್ರಭಾವ ಬೀರುತ್ತಿದ್ದ ಭೂಗತ ಲೋಕ, ಈಗ ಗುಂಡಿನ ದಾಳಿ ಮತ್ತು ಜೀವಬೆದರಿಕೆಗಳ ಮೂಲಕ ಮತ್ತೊಮ್ಮೆ ತನ್ನ ಅಸ್ತಿತ್ವ ಪ್ರದರ್ಶಿಸುತ್ತಿದೆ. ದಾವೂದ್...

ಲೋಕಸಭೆಯ ಬಲ 850ಕ್ಕೆ ಏರಿಕೆ: ಕಲಾಪದ ಸಮಯ ಹೆಚ್ಚಳವಿಲ್ಲದಿದ್ದರೆ...

ಲೋಕಸಭೆಯ ಸದಸ್ಯರ ಬಲವನ್ನು 550ರಿಂದ 850ಕ್ಕೆ ಹೆಚ್ಚಿಸುವ ‘ಕ್ಷೇತ್ರ ಪುನರ್‌ವಿಂಗಡಣೆ ಮಸೂದೆ–2026’ ಸಂಸದೀಯ ಪ್ರಜಾಪ್ರಭುತ್ವದಲ್ಲಿ ಹೊಸ ಚರ್ಚೆ ಹುಟ್ಟುಹಾಕಿದೆ. ಜನಸಂಖ್ಯೆಗೆ ಅನುಗುಣವಾಗಿ ಸೀಟುಗಳ ಹೆಚ್ಚಳ ಅನಿವಾರ್ಯವಾದರೂ, ಸಂಸತ್ತಿನ ವಾರ್ಷಿಕ ಕಲಾಪದ ದಿನಗಳು ಮತ್ತು...

ಸೌದಿ ಅರೇಬಿಯಾದ ಕಂಠನಾಳಕ್ಕೇ ಕೈಹಾಕಿರುವ ಯೆಮನ್!

ಸೌದಿ ಅರೇಬಿಯಾದ ಜೀವನಾಡಿಗೇ ಕೈಹಾಕಿರುವ ಯೆಮನ್‌ನ ಈ ಪ್ರತಿರೋಧವು ಕೇವಲ ಒಂದು ಯುದ್ಧದ ಕಥೆಯಲ್ಲ; ಇದು ಮಧ್ಯಪ್ರಾಚ್ಯದ ರಾಜಕೀಯ ಇತಿಹಾಸವನ್ನೇ ಮರುಬರೆಯಬಹುದಾದ ಸಂಘರ್ಷವಾಗಿದೆ. ಅಲ್ಲಿಯವರೆಗೆ, ಯೆಮನ್ ಕೇವಲ ಅರಬ್ ಜಗತ್ತಿಗಷ್ಟೇ ಅಲ್ಲ, ಇಡೀ...
  1. ಈ ನಿಷೇಧ್ಞಾಜೆಯ ಅವಧಿಯಲ್ಲಿ ಸಾರ್ವಜನಿಕವಾಗಿ ಯಾವುದೇ ಕೂಗನ್ನು ಉಚ್ಚರಿಸುವುದು ಅಥವಾ ಪದ ಹಾಡುವುದು, ಚೇಷ್ಟೆ ಮಾಡುವುದು, ಸಂಜ್ಞೆಗಳನ್ನು ಉಪಯೋಗಿಸುವುದು ಮತ್ತು ಚಿತ್ರಗಳ ಮೂಲಕ, ಜಾಲತಾಣಗಳ ಮೂಲಕ ಪ್ರದರ್ಶನ ಅಥವಾ ಪ್ರಸಾರ ಮಾಡುವುದು, ಸಭ್ಯತನ, ಸದಾಚಾರ, ಸಾರ್ವಜನಿಕ ಭದ್ರತೆ ಶಿಥಿಲಗೊಳ್ಳುವಂತಹ ಯಾವುದೇ ರೀತಿಯ ಕೃತ್ಯ ಎಸಗುವುದು ಅಥವಾ ಕೃತ್ಯ ಎಸಗಲು ಪ್ರೇರೇಪಿಸುವ ಕ್ರಮವನ್ನು ನಿಷೇಧಿಸಲಾಗಿದೆ.
  2. ನಿಷೇಧಿತ ಪ್ರದೇಶದಲ್ಲಿ ಸಾರ್ವಜನಿಕರು ಐದು ಅಥವಾ ಅದಕ್ಕಿಂತ ಹೆಚ್ಚಿನ ಸಂಖ್ಯೆಯಲ್ಲಿ ಗುಂಪು ಸೇರುವುದು ಅಥವಾ ತಿರುಗಾಡುವುದನ್ನು ನಿಷೇಧಿಸಲಾಗಿದೆ.
  3. ನಿಷೇಧಿತ ಪ್ರದೇಶದಲ್ಲಿ ಯಾವುದೇ ರೀತಿಯ ಶಸ್ತ್ರಾಸ್ತ್ರ, ದೊಣ್ಣೆ, ಕತ್ತಿ, ಬಂದೂಕು, ಲಾಠಿಗಳನ್ನು ಅಥವಾ ದೈಹಿಕವಾಗಿ ಹಿಂಸೆಯನ್ನು ಉಂಟು ಮಾಡುವ ಯಾವುದೇ ವಸ್ತುಗಳನ್ನು ಒಯ್ಯುವುದು ಅಥವಾ ಹೊಂದುವುದನ್ನು ನಿಷೇಧಿಸಲಾಗಿದೆ.
  4. ಪಟಾಕಿಗಳನ್ನು ಸಿಡಿಸುವುದು ಅಥವಾ ಯಾವುದೇ ಆಸಿಡ್ ಅಥವಾ ಸ್ಫೋಟಕ ವಸ್ತುಗಳನ್ನು ಒಯ್ಯುವುದನ್ನು ನಿಷೇಧಿಸಲಾಗಿದೆ.
  5. ವ್ಯಕ್ತಿಗಳ, ಶವಗಳ ಅಥವಾ ಆಕೃತಿ ಹಾಗೂ ಪ್ರತಿಕೃತಿಗಳ ಪ್ರದರ್ಶನ ಮಾಡುವುದನ್ನು ನಿಷೇಧಿಸಲಾಗಿದೆ.
  6. ಕಲ್ಲುಗಳನ್ನು ಅಥವಾ ಕ್ಷಿಪಣಿಗಳನ್ನು ಎಸೆಯುವ ಅಥವಾ ವೇಗದಿಂದ ಒಗೆಯುವ ಸಾಧನಗಳ ಅಥವಾ ಉಪಕರಣಗಳ ಒಯ್ಯುವಿಕೆಯನ್ನು, ಶೇಖರಿಸುವುದನ್ನು ಅಥವಾ ತಯಾರಿಸುವುದನ್ನು ನಿಷೇಧಿಸಲಾಗಿದೆ.
  7. ಸರ್ಕಾರಿ ಸಂಸ್ಥೆಗಳು/ಸಂಘಟನೆಗಳು ಹಾಗೂ ಕಾರ್ಯನಿರತ ಅಧಿಕಾರಿ/ಸಿಬ್ಬಂದಿಗಳ ವಿರುದ್ಧ ನಿಂದಿಸುವಂತಹ, ಅವಹೇಳನಕಾರಿಯಾದಂತಹ ಯಾವುದೇ ಘೋಷಣೆಗಳು/ಭಾಷಣಗಳು, ಪ್ರತಿಭಟನೆಗಳು, ಅವಾಚ್ಯ ಶಬ್ದಗಳ ಬಳಕೆ, ಪ್ರಚೋದನಕಾರಿ ಭಾಷಣ, ಗಾಯನ ಇತ್ಯಾದಿ ಚಟುವಟಿಕೆಗಳನ್ನು ಸಂಪೂರ್ಣವಾಗಿ ನಿಷೇಧಿಸಲಾಗಿದೆ.
  8. ಈ ನಿಷೇಧಾಜ್ಞೆಯು ಜಾರಿಯಲ್ಲಿರುವ ಪ್ರದೇಶದಲ್ಲಿ ಸರ್ಕಾರದಿಂದ ಅಥವಾ ಸರ್ಕಾರದ ಆದೇಶದಂತೆ ನಡೆಸಲ್ಪಡುವ ಯಾವುದೇ ಕಾರ್ಯಕ್ರಮ, ಸಭೆ ಸಮಾರಂಭಗಳಿಗೆ ಅನ್ವಯವಾಗುವುದಿಲ್ಲ. ಮತ್ತು ಪೊಲೀಸ್ ಅಧಿಕಾರಿಗಳು, ಬ್ಯಾಂಕ್ ಭದ್ರತಾ ಸಿಬ್ಬಂದಿಗಳು ಕರ್ತವ್ಯ ನಿರ್ವಹಣೆಯ ವೇಳೆ ಲಾಠಿ/ ಶಸ್ತ್ರಾಸ್ತ್ರ ಮತ್ತು ಸಂಪರ್ಕ ಉಪಕರಣಗಳನ್ನು ಉಪಯೋಗಿಸುವುದಕ್ಕೆ ಅನ್ವಯವಾಗುವುದಿಲ್ಲ ಎಂದು ನಿಷೇಧ್ಞಾಜೆಯ ಆದೇಶದಲ್ಲಿ ಉಲ್ಲೇಖಿಸಲಾಗಿದೆ.

ನೂತನ ಭಾರತೀಯ ನ್ಯಾಯ ಸುರಕ್ಷಾ ಸಂಹಿತೆಯ 163ನೇ ಕಲಂ ಅಡಿ ನಿಷೇಧಾಜ್ಞೆ ಜಾರಿ

ಭಾರತೀಯ ನಾಗರಿಕ ಸುರಕ್ಷಾ ಸಂಹಿತೆ (BNSS) 2023, ಸೆಕ್ಷನ್ 163, ತುರ್ತು ಸಂದರ್ಭಗಳಲ್ಲಿ ಸಾರ್ವಜನಿಕ ಶಾಂತಿ ಮತ್ತು ಸುರಕ್ಷತೆಯನ್ನು ಕಾಪಾಡಲು ಸಂಬಂಧಿಸಿದೆ. ಇದು ಸಾರ್ವಜನಿಕ ತೊಂದರೆ ಅಥವಾ ಅಪಾಯಕಾರಿ ಸಂದರ್ಭಗಳನ್ನು ತಡೆಗಟ್ಟಲು ಆದೇಶಗಳನ್ನು ಜಾರಿಗೊಳಿಸುವ ಅಧಿಕಾರವನ್ನು ಮ್ಯಾಜಿಸ್ಟ್ರೇಟ್‌ಗಳಿಗೆ ನೀಡುತ್ತದೆ. ಈ ವಿಭಾಗವು ಹಿಂದಿನ ಕ್ರಿಮಿನಲ್ ಪ್ರೊಸೀಜರ್ ಕೋಡ್ (CrPC) 1973ರ ಸೆಕ್ಷನ್ 144ರ ಹೊಸ ರೂಪವಾಗಿದೆ.

1000359252
1000359253
eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಚಿಕ್ಕಮಗಳೂರು | ಭೀಕರ ಅಪಘಾತ: ಇಬ್ಬರಿಗೆ ಗಂಭೀರ 

ವಾಹನ ಅಪಘಾತ,ಜೆಸಿಬಿ ಮತ್ತು ಬೈಕ್ ನಡುವೆ ಭೀಕರ ರಸ್ತೆ ಅಪಘಾತದಲ್ಲಿ ಇಬ್ಬರು...

ಬಾಗೇಪಲ್ಲಿ: ಅಂತರರಾಜ್ಯ ಮಟ್ಟದ ಬಹುಭಾಷಾ ದಸರಾ ಕವಿಗೋಷ್ಠಿ

ಅಖಿಲ ಭಾರತೀಯ ಸಾಹಿತ್ಯ ಪರಿಷದ್ ವತಿಯಿಂದ ಪಟ್ಟಣಕ್ಕೆ ಸಮೀಪದ ಗಡಿದಂ ರಾಜರಾಜೇಶ್ವರಿ...

ಬಡತನ ಮೆಟ್ಟಿ ಬಿಲ್ಲುಗಾರಿಕೆ ಒಲಿಸಿಕೊಂಡ ದೇವಮ್ಮ: ಒಲಂಪಿಕ್ಸ್‌ ಕನಸಿಗೆ ಸ್ಪೂರ್ತಿ ತುಂಬಿದ ಎಂ.ಬಿ ಪಾಟೀಲ್‌

ಬಡತನದ ನಡುವೆಯೂ ಬಿಲ್ಲುಗಾರಿಕೆಯಲ್ಲಿ ಸಾಧನೆಯ ಹಾದಿಯಲ್ಲಿ ಮುನ್ನಡೆಯುತ್ತಿರುವ ಕಲ್ಯಾಣ ಕರ್ನಾಟಕದ ಪ್ರತಿಭೆ...