ಶಿವಮೊಗ್ಗ | ಪೊಲೀಸರ ವಿರುದ್ಧ ರೌಡಿಶೀಟರ್‌ಗಳ ದಾಂಧಲೆ; ಇಬ್ಬರ ಬಂಧನ

Date:

ಶಿವಮೊಗ್ಗದಲ್ಲಿ ರೌಡಿಶೀಟರ್‌ಗಳ ದಾಂಧಲೆ ಮತ್ತೆ ಹೆಚ್ಚಾಗಿದ್ದು, ಪೊಲೀಸರ ಮೇಲೆಯೇ ಹಲ್ಲೆಗೆ ಯತ್ನಿಸಿ, ಕೊಲೆ ಬೆದರಿಕೆ ಹಾಕಿರುವ ಘಟನೆ ಜನವರಿ 30 ರಂದು ನಡೆದಿದ್ದು, ಇದೀಗ ಬೆಳಕಿಗೆ ಬಂದಿದೆ.

- Advertisement -

ಶಿವಮೊಗ್ಗ ಬಿ.ಎಚ್‌ ರಸ್ತೆಯಲ್ಲಿ ಬೈಕ್‌ನಲ್ಲಿ ಬಂದ ರೌಡಿಶೀಟರ್‌ಗಳು ಗಸ್ತಿನಲ್ಲಿದ್ದ ಟ್ರಾಫಿಕ್ ಪೊಲೀಸರಿಗೆ ಸಿಕ್ಕಿಹಾಕಿಕೊಳ್ಳುತ್ತೇವೆಂದು ವೇಗವಾಗಿ ಬೈಕ್‌ ಚಲಾಯಿಸಿ, ಬಿದ್ದಿದ್ದಾರೆ. ಬಳಿಕ, ಪೊಲೀಸರಿಂದಲೇ ಬಿದ್ದೆವೆಂಬಂತೆ ದಾಂಧಲೆ ನಡೆಸಿ, ಬೆದರಿಕೆ ಹಾಕಿದ್ದಾರೆ ಎಂದು ವರದಿಯಾಗಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

137 ಜೀವ ರಕ್ಷಕ ಕ್ಯಾನ್ಸರ್ ಔಷಧಗಳ ದರ ಶೇ.70ರಷ್ಟು...

ಕ್ಯಾನ್ಸರ್ ಚಿಕಿತ್ಸೆಯ ದುಬಾರಿ ವೆಚ್ಚದಿಂದ ಕಂಗೆಟ್ಟಿರುವ ರೋಗಿಗಳಿಗೆ ಕೇಂದ್ರ ಸರ್ಕಾರದಿಂದ ಕೊಂಚ ನಿರಾಳತೆಯ ಸುದ್ದಿಯೊಂದಿದೆ! 137 ಜೀವರಕ್ಷಕ ಕ್ಯಾನ್ಸರ್ ಔಷಧಗಳ ಬೆಲೆ ಇಳಿಕೆಯಾಗುವ ಸಾಧ್ಯತೆಯಿದ್ದು, ಕೆಲವು ಔಷಧಗಳ ಗರಿಷ್ಠ ಚಿಲ್ಲರೆ ಬೆಲೆ ಶೇ.70ರವರೆಗೆ...

‘ದೇಶ್ ಕೋ ಬಿಕನೇ ನಹೀ ದೂಂಗಾ’ ಎಂದು ನವಮಂಗಳೂರು...

​ರೈಲ್ವೆ, ವಿಮಾನ ನಿಲ್ದಾಣ, ಟೆಲಿಕಾಂ ಸೇರಿದಂತೆ ದೇಶದ ಪ್ರಮುಖ ಜಯಶೀಲ ಸಾರ್ವಜನಿಕ ವಲಯಗಳನ್ನು ಈಗಾಗಲೇ ಆಯ್ದ ಕಾರ್ಪೊರೇಟ್ ಕುಳಗಳಿಗೆ ಒಪ್ಪಿಸಿರುವ ಮೋದಿ ಸರ್ಕಾರ, ಈಗ ತನ್ನ ದೃಷ್ಟಿಯನ್ನು ಕಡಲತೀರಗಳತ್ತ ಹರಿಸಿದೆ. ದೇಶದ ಆಮದು-ರಫ್ತು...

SIRನ ಒಳನೋಟ: ಸೇರ್ಪಡೆಗಿಂತ ಹೊರಗಿಡುವುದಕ್ಕೆ ಆದ್ಯತೆ ನೀಡಿದಾಗ ಏನಾಗುತ್ತದೆ?

SIR ಕರಡು ಪಟ್ಟಿಯಲ್ಲಿರುವ ಮತದಾರರ ಸಂಖ್ಯೆಯು ನೈಜ ವಯಸ್ಕ ಜನಸಂಖ್ಯೆಯ ಅಂದಾಜಿಗಿಂತ ಅಷ್ಟೊಂದು ದೊಡ್ಡ ಪ್ರಮಾಣದಲ್ಲಿ ಕಡಿಮೆಯಾಗಿರುವುದಕ್ಕೆ ಕಾರಣವೇನು? ಈ ಕಾಣೆಯಾದ ಮತದಾರರೆಲ್ಲ ಯಾರು? ಅವರು ಮತದಾರರ ಪಟ್ಟಿಯಲ್ಲಿ ಬಿಟ್ಟು ಹೋಗಿದ್ದು ಹೇಗೆ?...

ರೌಡಶೀಟರ್ ಯಾಸೀನ್ ಖುರೇಶಿ ಎಂಬಾತ ಬೈಕ್‌ನಿಂದ ಬಿದ್ದಿದ್ದಾನೆ. ಪ್ರಜ್ಞೆ ತಪ್ಪಿದವನಂತೆ ನಾಟಕ ಮಾಡಿದ್ದಾನೆ. ಪೊಲೀಸರು ಆತನಿಗೆ ಹೊಡೆದು ಸಾಯಿಸಲು ಯತ್ನಿಸಿದ್ದಾರೆ ಎಂದು ಆತನ ಸಹಚರರು ದಾಂಧಲೆ ನಡೆಸಿದ್ದಾರೆ. ಟ್ರಾಫಿಕ್ ಪೊಲೀಸ್ ಪ್ರಭು ಅವರಿಗೆ ಬೆದರಿಕೆ ಹಾಕಿದ್ದಾರೆ.

ಸ್ಥಳಕ್ಕೆ ಬಂದ ಮತ್ತೊಬ್ಬ ರೌಡಿಶೀಟರ್ ವಾಸೀಂ ಎಂಬಾತ ಪೊಲೀಸರ ವಿರುದ್ಧ ಕೂಗಾಡಿದ್ದು, ಪ್ರಭು ಅವರಿಗೆ ನೀನೇ ಹೊಡೆದು ಸಾಯಿಸಿದ್ದು, ನಿನ್ನನ್ನು ಕೊಲೆ ಮಾಡುತ್ತೇವೆಂದು ಬೆದರಿಕೆ ಹಾಕಿದ್ದಾನೆಂದು ವರದಿಯಾಗಿದೆ. ಘಟನೆಯನ್ನು ತಾವೇ ವಿಡಿಯೋ ಮಾಡಿಕೊಂಡು ಸಾಮಾಜಿಕ ಜಾಲತಾಣದಲ್ಲಿ ಹರಿಬಿಟ್ಟಿದ್ದಾರೆ ಎಂದು ಹೇಳಲಾಗಿದೆ.

ದಾಂಧಲೆ ನಡೆಸಿದ ರೌಡಿಶೀಟರ್‌ಗಳನ್ನು ಪೊಲೀಸರು ಬಂಧಿಸಿದ್ದಾರೆ. ರೌಡಿ ಶೀಟರ್ ಕಡೆಕಲ್ ಹಬೀದ್, ವಾಸೀಂ ವಿರುದ್ಧ ಶಿವಮೊಗ್ಗದ ಕೋಟೆ ಪೊಲೀಸ್ ಠಾಣೆಯಲ್ಲಿ ಐಪಿಸಿ ಸೆಕ್ಷನ್ 504, 506, 189, 342, 353, 149 ಅಡಿಯಲ್ಲಿ ಪ್ರಕರಣ ದಾಖಲಾಗಿದೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಉಡುಪಿ | ಬಿಜೆಪಿ ಮತ್ತೆ ಕರೆದರೆ ಸೇರ್ಪಡೆ, ಇಲ್ಲದಿದ್ದರೆ ಕಾಂಗ್ರೆಸ್ ಅಥವಾ ಪಕ್ಷೇತರ ಆಯ್ಕೆ: ರಘುಪತಿ ಭಟ್

ಮುಂದಿನ 2028ರ ರಾಜ್ಯ ವಿಧಾನಸಭಾ ಚುನಾವಣೆಯಲ್ಲಿ ಸ್ಪರ್ಧಿಸುವುದು ಖಚಿತ. ಆದರೆ ಯಾವ...

ಹುಬ್ಬಳ್ಳಿ | ಮಾಂಜಾ ದಾರಕ್ಕೆ ಮಹಿಳೆ ಬಲಿ

ಗಾಳಿಪಟದ ಮಾಂಜಾ ದಾರ ಮತ್ತೊಂದು ಜೀವವನ್ನು ಬಲಿ ಪಡೆದಿರುವ ಹೃದಯವಿರ್ಧಾವಕ  ಘಟನೆ...

ವಿಜಯಪುರ | ವಿಜಯಪುರಕ್ಕೆ 371(ಜೆ) ಮೀಸಲಾತಿ ನೀಡಲು ಆಗ್ರಹ; ಎಸ್.ಕೆ. ಬೆಳ್ಳುಬ್ಬಿ

ವಿಜಯಪುರ ಜಿಲ್ಲೆಯನ್ನು 371(ಜೆ) ಮೀಸಲಾತಿಯಿಂದ ಹೊರಗಿಟ್ಟಿರುವುದು ದೊಡ್ಡ ಅನ್ಯಾಯವಾಗಿದ್ದು, ರಾಜ್ಯ ಸರ್ಕಾರ...

ಹಾವೇರಿ | ಪಶ್ಚಿಮ ಪದವೀಧರರ ಕ್ಷೇತ್ರ ಚುನಾವಣೆ: ಕಾಂಗ್ರೆಸ್ ಬೆಂಬಲಿಸಲು ಡಿವೈಎಫ್ಐ-ಎಸ್ಎಫ್ಐ ಕರೆ

"ಅಕ್ಟೋಬರ್ 23 ರಂದು ನಡೆಯಲಿರುವ ರಾಜ್ಯ ವಿಧಾನ ಪರಿಷತ್ ಚುನಾವಣೆಯಲ್ಲಿ ಬಿಜೆಪಿ...