ರೈತರಿಂದ ಖರೀದಿಸುವ ಹಾಲಿನ ಬೆಲೆ ಇಳಿಕೆ; 1 ರೂ. ಕಡಿತ

Date:

Advertisements

ಮಂಡ್ಯ ಜಿಲ್ಲಾ ಹಾಲು ಒಕ್ಕೂಟ (ಮನ್ಮುಲ್) ಹಾಲಿನ ದರವನ್ನು ಕಡಿಮೆ ಮಾಡಿದ್ದು, ರೈತರನ್ನು ಆತಂಕಕ್ಕೆ ದೂಡಿದೆ. ತನ್ನ ವ್ಯಾಪ್ತಿಯಲ್ಲಿ ಪ್ರತಿ ಲೀಟರ್‌ ಹಾಲಿಗೆ 1 ರೂ. ಕಡಿತ ಮಾಡಿ ಮನ್ಮುಲ್ ಆದೇಶ ಹೊರಡಿಸಿದೆ. ಪರಿಷ್ಕೃತ ದರವು ಜೂನ್ 1ರಿಂದಲೇ ಜಾರಿಯಾಗಲಿದೆ ಎಂದೂ ಹೇಳಿದೆ.

ಮನ್ಮುಲ್ ಆಡಳಿತ ಮಂಡಳಿಯ ಸಭೆ ಮೇ 26 ರಂದು ನಡೆದಿತ್ತು. ಆ ಸಭೆಯಲ್ಲಿ ದರ ಕಡಿತ ಮಾಡುವ ಬಗ್ಗೆ ತೀರ್ಮಾನಿಸಲಾಗಿತ್ತು. ಅದರಂತೆ, ಜೂನ್‌ 1ರಿಂದ ಜಾರಿಗೆ ಬರುವಂತೆ ಪರಿಷ್ಕೃತ ದರವನ್ನು ಘೋಷಿಸಲಾಗಿದೆ ಎಂದು ಮನ್ಮುಲ್ ವ್ಯವಸ್ಥಾಪಕ ನಿರ್ದೇಶಕ ಡಾ ಪಿ.ಆರ್ ಮಂಜೇಶ್ ತಿಳಿಸಿದ್ದಾರೆ.

ಮನ್ಮುಲ್‌ನಲ್ಲಿ ಪ್ರತಿದಿನ 9,38,035 ಕೆಜಿ ಹಾಲನ್ನು ಸಂಗ್ರಹಿಸಲಾಗುತ್ತಿದೆ. ಈ ಹಿಂದೆ, ಬೇಸಿಗೆಯ ಕಾರಣದಿಂದಾಗಿ, ಹಸಿರು ಮೇವಿನ ಕೊರತೆ ಉಂಟಾಗಿತ್ತು. ಹಾಲಿನ ಇಳುವರಿ ಕಡಿಮೆಯಾಗಿತ್ತು. ಹಾಗಾಗಿ, ರೈತರಿಗೆ ನೆರವು ನೀಡುವ ಉದ್ದೇಶದಿಂದ ಪ್ರತಿ ಲೀಟರ್‌ಗೆ 2 ರೂ. ಹೆಚ್ಚುವರಿಯಾಗಿ ನೀಡಲಾಗುತ್ತಿತ್ತು. ಇದೀಗ, ಬೇಸಿಗೆ ಕಳೆದು, ಮಳೆಗಾಲ ಆರಂಭವಾಗುತ್ತಿದೆ. ಹಸಿರು ಮೇವಿನ ಲಭ್ಯತೆ ಇದೆ. ಹೀಗಾಗಿ, ದರ ಪರಿಷ್ಕರಿಸಿದೆ. 1 ರೂ. ಇಳಿಸಲಾಗಿದೆ ಎಂದು ಹೇಳಿದ್ದಾರೆ.

Advertisements

ಪರಿಷ್ಕೃತ ದರದಂತೆ ಪ್ರತಿ ಲೀಟರ್‌ ಹಾಲಿಗೆ ಸಂಘಗಳಿಗೆ 32.15 ರೂ. ಹಾಗೂ ಹಾಲು ಉತ್ಪಾದಕರಿಗೆ 31.25 ರೂ. ನೀಡಲಾಗುತ್ತದೆ ಎಂದು ಸುತ್ತೋಲೆಯಲ್ಲಿ ಹೇಳಲಾಗಿದೆ.

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಉಡುಪಿ | ಕಡಿಮೆ ದರದಲ್ಲಿ ಊಟ ಉಪಾಹಾರ ಒದಗಿಸುವ ಅಕ್ಕ ಕೆಫೆ ಪ್ರಾರಂಭ

ಉಡುಪಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಉಡುಪಿ ವತಿಯಿಂದ ಜಿಲ್ಲಾಧಿಕಾರಿಗಳ ಕಚೇರಿ ಆವರಣದಲ್ಲಿ...

ಸಕಲೇಶಪುರ | ಸಮಾಜ ವ್ಯಸನಮುಕ್ತವಾದಾಗ ಮಾತ್ರ ನೆಮ್ಮದಿಯ ಬದುಕು ಸಾಧ್ಯ: ಅವಿನಾಶ್‌ ಕಾಕಡೆ

ಸಮಾಜ ವ್ಯಸನಮುಕ್ತವಾದಾಗ ಮಾತ್ರ ನೆಮ್ಮದಿಯ ಬದುಕು ಸಾಧಿಸಲು ಸಾಧ್ಯ. ಹಾಗಾಗಿ ಮನೆಯಿಂದಲೇ...

ಯಾದಗಿರಿ | ಅತಿವೃಷ್ಟಿಯಿಂದ ಬೆಳೆ ಹಾನಿ: ರೈತರಿಗೆ ಪರಿಹಾರ ನೀಡುವಂತೆ ಆಗ್ರಹ

ಯಾದಗಿರಿ ಜಿಲ್ಲೆಯಲ್ಲಿ ಅತಿವೃಷ್ಟಿಯಿಂದ ಬೆಳೆ ಹಾನಿದ ರೈತರಿಗೆ ಸಮೀಕ್ಷೆ ನಡೆಸಿ ಶೀಘ್ರದಲ್ಲಿ...

ಗುಬ್ಬಿ | ಜನಪದ ಸಾಹಿತ್ಯ ಎಂದೆಂದಿಗೂ ಜೀವಂತ : ಡಾ.ಮೂರ್ತಿ ತಿಮ್ಮನಹಳ್ಳಿ

ಕನ್ನಡ ಸಾಹಿತ್ಯ ಲೋಕದಲ್ಲಿ ಹಲವು ಪ್ರಕಾರಗಳ ಪೈಕಿ ಜನಪದ ಸಾಹಿತ್ಯ...

Download Eedina App Android / iOS

X