ಕೆಎಸ್‌ಒಯು ಹಗರಣ | ಎಫ್‌ಐಆರ್ ದಾಖಲು; ಸಿಬಿಐ ತನಿಖೆ ಆರಂಭ

Date:

Advertisements

ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾಲಯ (ಕೆಎಸ್‌ಒಯು)ನಲ್ಲಿ ನಡೆದ 300 ಕೋಟಿ ರೂಪಾಯಿಗೂ ಅಧಿಕ ಹಣ ದುರುಪಯೋಗಕ್ಕೆ ಸಂಬಂಧಿಸಿ ಸಿಬಿಐ ತನಿಖೆ ಆರಂಭಿಸಿದೆ. ಪ್ರಕರಣ ಸಂಬಂಧ ಅಪರಿಚಿತ ಅಧಿಕಾರಿಗಳ ವಿರುದ್ಧ ಸಿಬಿಐ ಎಫ್‌ಐಆರ್ ದಾಖಲಿಸಿದೆ.

ಕೆಎಸ್‌ಒಯುನ ಸಹಯೋಗದ ಸಂಸ್ಥೆಗಳ ಕಾರ್ಯಕ್ರಮದಲ್ಲಿ ಅಪರಿಚಿತ ಅಧಿಕಾರಿಗಳು 300 ಕೋಟಿ ರೂಪಾಯಿಗೂ ಅಧಿಕ ಹಣ ದುರುಪಯೋಗ ಮಾಡಿದ್ದಾರೆಂಬ ಆರೋಪ ಕೇಳಿಬಂದಿತ್ತು.

ಮೈಸೂರಿನಲ್ಲಿ ಕೇಂದ್ರ ಕಚೇರಿ ಹೊಂದಿರುವ ವಿಶ್ವವಿದ್ಯಾನಿಲಯವು ದೇಶಾದ್ಯಂತ ಮತ್ತು ವಿದೇಶಗಳಲ್ಲಿ ತನ್ನ ಸಹಯೋಗದ ಸಂಸ್ಥೆಗಳನ್ನು ತೆರೆದಿದೆ. ಸಹಯೋಗ ಸಂಸ್ಥೆಗಳು ಪ್ರವೇಶ ಶುಲ್ಕ, ಪರೀಕ್ಷಾ ಶುಲ್ಕ ಮತ್ತು ವಿಶ್ವವಿದ್ಯಾನಿಲಯಕ್ಕೆ ಜಮಾ ಮಾಡಬೇಕಾದ ಇತರ ಶುಲ್ಕಗಳಿಗೆ ವಿದ್ಯಾರ್ಥಿಗಳಿಂದ ಸಂಗ್ರಹಿಸಿದ ಶುಲ್ಕವನ್ನು ಜಮಾ ಮಾಡುತ್ತಿವೆಯೆಂದು ಎಫ್ಐಆರ್‌ನಲ್ಲಿ ಉಲ್ಲೇಖಿಸಲಾಗಿದೆ.

Advertisements

ಕೆಎಸ್‌ಒಯುಗೆ ಸಂಬಂಧಿಸಿದ 2013-14 ಮತ್ತು 2014-15ರ ಆರ್ಥಿಕ ವರ್ಷಗಳ ಲೆಕ್ಕಪರಿಶೋಧನೆಯ ಸಮಯದಲ್ಲಿ ಹಲವು ಸಹಯೋಗ ಸಂಸ್ಥೆಗಳಿಂದ ಜಮೆ ಆಗಿರುವ 50 ಕೋಟಿ ರೂಪಾಯಿ ಲೆಕ್ಕಪತ್ರದಲ್ಲಷ್ಟೇ ಇದ್ದು, ಹಣದ ರೂಪದಲ್ಲಿ ಇರಲಿಲ್ಲ.

“2009-10 ರಿಂದ 2012-2013ರ ಆರ್ಥಿಕ ವರ್ಷಗಳಿಗೆ ಸಂಬಂಧಿಸಿ ಸುಮಾರು 250 ಕೋಟಿ ರೂಪಾಯಿ ವಿದ್ಯಾರ್ಥಿಗಳ ಪ್ರವೇಶ ಮತ್ತು ವಿಶ್ವವಿದ್ಯಾನಿಲಯದಿಂದ ಪಡೆದ ಮೊತ್ತ ಲೆಕ್ಕದಲ್ಲಿ ಇದ್ದರೂ, ಹಣದ ರೂಪದಲ್ಲಿ ಇಲ್ಲದ ಕಾರಣ ಅದರ ಆಧಾರದ ಮೇಲೆ ಲೆಕ್ಕಪರಿಶೋಧಕರು ಈ ಕುರಿತು ಆಕ್ಷೇಪ ವ್ಯಕ್ತಪಡಿಸಿದ್ದರು” ಎಂದು ಎಫ್ಐಆರ್ ಆರೋಪಿಸಿದೆ.

ಆಂತರಿಕ ಹಣಕಾಸು ಪರಿಶೋಧನೆ ವೇಳೆ ಹಣಕಾಸು ಅಕ್ರಮ ಎಸಗಿರುವುದು ಕಂಡಬಂದಿದ್ದು, ಅದಕ್ಕೆ ಹೊಣೆಗಾರರು ಯಾರೆಂಬುದು ದೃಢಪಟ್ಟಿಲ್ಲ. ಹೀಗಾಗಿ ಪ್ರಕರಣವನ್ನು ಕೇಂದ್ರೀಯ ತನಿಖಾ ದಳ (ಸಿಬಿಐ)ಕ್ಕೆ ಒಪ್ಪಿಸಲು ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾಲಯದ ನಿರ್ದೇಶಕರ ಮಂಡಳಿ ತೀರ್ಮಾನಿಸಿತು. ಈ ಕುರಿತು ರಾಜ್ಯ ಸರ್ಕಾರಕ್ಕೂ ಶಿಫಾರಸು ಮಾಡಿ, ಒಪ್ಪಿಗೆ ಪಡೆಯಿತು.

ಈ ಸುದ್ದಿ ಓದಿದ್ದೀರಾ? ರಾಯಚೂರು | 86 ಮಂದಿ ಸಫಾಯಿ ಕರ್ಮಚಾರಿಗಳಿಗೆ ಎಂಎಸ್‌ಐಡಿ ಗುರುತಿನ ಚೀಟಿ ವಿತರಣೆ

ತನ್ನ ಉಲ್ಲೇಖದಲ್ಲಿ, ರಾಜ್ಯ ಸರ್ಕಾರವು 2009-10 ರಿಂದ 2015-16 ರವರೆಗಿನ ಅವಧಿಯಲ್ಲಿ ಕೆಎಸ್‌ಒಯು, ಮೈಸೂರು ಮತ್ತು ಅದರ ಸಹಯೋಗದ ಸಂಸ್ಥೆಗಳಿಂದ ಭಾರತದಾದ್ಯಂತ ಹರಡಿರುವ ಶುಲ್ಕದ ದುರುಪಯೋಗದ ಕುರಿತು ತನಿಖೆ ನಡೆಸುವಂತೆ ಮತ್ತು ಅಪರಾಧಿಗಳನ್ನು ಗುರುತಿಸುವಂತೆ ಕೇಂದ್ರ ಏಜೆನ್ಸಿಯನ್ನು ಕೇಳಿದೆ.

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಉಡುಪಿ | ಕಡಿಮೆ ದರದಲ್ಲಿ ಊಟ ಉಪಾಹಾರ ಒದಗಿಸುವ ಅಕ್ಕ ಕೆಫೆ ಪ್ರಾರಂಭ

ಉಡುಪಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಉಡುಪಿ ವತಿಯಿಂದ ಜಿಲ್ಲಾಧಿಕಾರಿಗಳ ಕಚೇರಿ ಆವರಣದಲ್ಲಿ...

ಸಕಲೇಶಪುರ | ಸಮಾಜ ವ್ಯಸನಮುಕ್ತವಾದಾಗ ಮಾತ್ರ ನೆಮ್ಮದಿಯ ಬದುಕು ಸಾಧ್ಯ: ಅವಿನಾಶ್‌ ಕಾಕಡೆ

ಸಮಾಜ ವ್ಯಸನಮುಕ್ತವಾದಾಗ ಮಾತ್ರ ನೆಮ್ಮದಿಯ ಬದುಕು ಸಾಧಿಸಲು ಸಾಧ್ಯ. ಹಾಗಾಗಿ ಮನೆಯಿಂದಲೇ...

ಕರ್ನಾಟಕ ಕೃಷಿ ಇಲಾಖೆಯಿಂದ ರೈತರಿಗೆ ಡಿಜಿಟಲ್ ಬಲ: ಬಿಇಎಲ್ ಜೊತೆ ಒಡಂಬಡಿಕೆ

ಕೃಷಿ ಸೇವೆಗಳು ರೈತರಿಗೆ ಇನ್ನಷ್ಟು ಸುಲಭವಾಗಿ ದತ್ತಾಂಶ ಆಧಾರಿತವಾಗಿ ಮತ್ತು ಅವಶ್ಯಕತೆಗೆ...

ಯಾದಗಿರಿ | ಅತಿವೃಷ್ಟಿಯಿಂದ ಬೆಳೆ ಹಾನಿ: ರೈತರಿಗೆ ಪರಿಹಾರ ನೀಡುವಂತೆ ಆಗ್ರಹ

ಯಾದಗಿರಿ ಜಿಲ್ಲೆಯಲ್ಲಿ ಅತಿವೃಷ್ಟಿಯಿಂದ ಬೆಳೆ ಹಾನಿದ ರೈತರಿಗೆ ಸಮೀಕ್ಷೆ ನಡೆಸಿ ಶೀಘ್ರದಲ್ಲಿ...

Download Eedina App Android / iOS

X