ಬೀದರ್‌ | ಆಸ್ಪತ್ರೆಯಲ್ಲಿ ಮೂಲ ಸೌಕರ್ಯ ಕಲ್ಪಿಸುವಂತೆ ಆರ್‌ಟಿಐ ಕಾರ್ಯಕರ್ತರ ಆಗ್ರಹ

Date:

  • ಆಸ್ಪತ್ರೆಯಲ್ಲಿ ಸಾರ್ವಜನಿಕರಿಗೆ ಕುಡಿಯುವ ನೀರು ಹಾಗೂ ಶೌಚಾಲಯ ವ್ಯವಸ್ಥೆ ಮಾಡಬೇಕು
  • ಮಾಹಿತಿ ಹಕ್ಕು ಮತ್ತು ಸಾಮಾಜಿಕ ಕಾರ್ಯಕರ್ತರ ಸಂಘದಿಂದ ವೈದಾಧಿಕಾರಿಗಳಿಗೆ ಮನವಿ.

ಹುಮನಾಬಾದ್‌ ತಾಲೂಕು ಆಸ್ಪತ್ರೆಗೆ ಬರುವ ಸಾರ್ವಜನಿಕರ ಅನುಕೂಲಕ್ಕಾಗಿ ಮೂಲಭೂತ ಸೌಕರ್ಯ ಸೇರಿದಂತೆ ಕಚೇರಿಯ ನಿಯಮಗಳನ್ನು ಕಡ್ಡಾಯವಾಗಿ ಪಾಲಿಸುವಂತೆ ತಾಲೂಕು ಮಾಹಿತಿ ಹಕ್ಕು ಮತ್ತು ಸಾಮಾಜಿಕ ಕಾರ್ಯಕರ್ತರ ಸಂಘ ಆಗ್ರಹಿಸಿದೆ.

ಈ ಸಂಬಂಧ ಹುಮನಾಬಾದ್‌ ತಾಲೂಕು ಸಾರ್ವಜನಿಕ ಆಸ್ಪತ್ರೆ ವೈದಾಧಿಕಾರಿಗಳಿಗೆ ಹಕ್ಕೊತ್ತಾಯ ಪತ್ರವನ್ನು ಸಲ್ಲಿಸಿದ ಕಾರ್ಯಕರ್ತರು, ಕಚೇರಿಯ ಸಿಬ್ಬಂದಿಗಳು ಕಡ್ಡಾಯವಾಗಿ ತಮ್ಮ ಐಡಿ ಕಾರ್ಡ್ ಧರಿಸಬೇಕು. ಸಾರ್ವಜನಿಕ ಸೇವೆಗಳ ಸಕಾಲ ಫಲಕವನ್ನು ಅಳವಡಿಸಬೇಕು. ಕಚೇರಿಯಲ್ಲಿ ಆಸನಗಳ ವ್ಯವಸ್ಥೆ ಮಾಡಬೇಕು. ಸಾರ್ವಜನಿಕರಿಗೆ ಶುದ್ಧ ಕುಡಿಯುವ ನೀರು ಹಾಗೂ ಶೌಚಾಲಯ ವ್ಯವಸ್ಥೆ ಮಾಡಬೇಕು” ಎಂದು ಒತ್ತಾಯಿಸಿದರು.

ಈ ಸಂದರ್ಭದಲ್ಲಿ ಆರ್.ಟಿ.ಇ. ಕಾರ್ಯಕರ್ತರ ಸಂಘದ ತಾಲೂಕಾಧ್ಯಕ್ಷ ವಿಜಯಕುಮಾರ ಜಂಜೀರ್‌ ಉಪಾಧ್ಯಕ್ಷ ಅರವಿಂದ ಮಾಶೆಟ್ಟಿ ಸೇರಿದಂತೆ ಕಾರ್ಯಕರ್ತರಾದ ಮಾಣಿಕ ಹಡಪದ, ಸತೀಷ ಗಡವಂತಿ, ಬಾಬುರಡ್ಡಿ ಕಮ್ಮಾ, ವಿಜಯಕುಮಾರ ಚೆಟ್ಟಿ, ಅಮರನಾಥ ಹಡಪದ, ಸೈಯಾದ್‌ ಯಾಸಿನ್‌ ಅಲಿ , ಶಿವಕುಮಾರ ಮಿತ್ರಾ ಸೇರಿದಂತೆ ಇತರರಿದ್ದರು.

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.

ಬೇಡಿಕೆಗಳು:

1 ಸಾರ್ವಜನಿಕ ಆಸ್ಪತ್ರೆ ಕಚೇರಿಯಲ್ಲಿ ಸಿಸಿ ಕ್ಯಾಮೆರಾ ಅಳವಡಿಸಬೇಕು.

2.ನಿಗದಿಪಡಿಸಿದ ಸಮಯಕ್ಕಿಂತಲೂ ಹೆಚ್ಚಿನ ಕೆಲಸ ಸಿಬ್ಬಂದಿ ಮಾಡುತ್ತಿದ್ದರೆ ಅವರ ಹಿರಿಯ ಅಧಿಕಾರಿಗಳ ಅನುಮತಿ ಪತ್ರ ಕಡ್ಡಾಯ ನೀಡಿರಬೇಕು.

3. ರೋಗಿಗಳ ತಪಾಸಣೆಗೆ ಟೋಕನ್ ವ್ಯವಸ್ಥೆ ಮಾಡಬೇಕು.

4. ಸಾರ್ವಜನಿಕ ಆಸ್ಪತ್ರೆಯ ಎಲ್ಲ ಸೌಲಭ್ಯಗಳ ದರಪಟ್ಟಿಯ ಫಲಕವನ್ನು ಕನ್ನಡದಲ್ಲಿ ಅಳವಡಿಸಬೇಕು.

5. ಮಹಿಳಾ ಹಾಗೂ ಪುರಷರಿಗೆ ಪ್ರತ್ಯೇಕ ಚುಚ್ಚುಮದ್ದು ಕೋಣೆಗಳು ಮಾಡಬೇಕು.

6. ಸಾರ್ವಜನಿಕ ಆಸ್ಪತ್ರೆಯ ಲ್ಯಾಬ್ ನಲ್ಲಿ ದೊರೆಯುವ ಎಲ್ಲ ಸೌಲಭ್ಯಗಳನ್ನು ಹಾಗೂ ಅವುಗಳ ದರಪಟ್ಟಿ ಕನ್ನಡದಲ್ಲಿ ಫಲಕವನ್ನು ಅಳವಡಿಸಿ 24 ಗಂಟೆ ಸೇವೆಯನ್ನು ಒದಗಿಸಬೇಕು.

7. ಆಸ್ಪತ್ರೆಯ ಎದುರುಗಡೆ ಖಾಸಗಿ ವಾಹನಗಳ ನಿಲುಗಡೆಯನ್ನು ಸಂಪೂರ್ಣವಾಗಿ ನಿಷೇಧಿಸಬೇಕು.

8. ತಾಯಿ ಮತ್ತು ಮಗುವಿನ ಆಸ್ಪತ್ರೆಯ ವಿವರವನ್ನು ಸಾರ್ವಜನಿಕರಿಗೆ ಸಂಪೂರ್ಣವಾಗಿ ಮಾಹಿತಿ ಒದಗಿಸಬೇಕು.

ಈ ದಿನ ಡೆಸ್ಕ್‌
Website | + posts

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಹೆಚ್ಚು ಓದಿಸಿಕೊಂಡ ಲೇಖನಗಳು

ವಿಡಿಯೋ

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.
Related

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಹಾಸನ ಪೆನ್‌ಡ್ರೈವ್‌ | ಬ್ಲಾಕ್‌ಮೇಲ್‌ಗಾಗಿ ವಿಡಿಯೋ ಮಾಡಿಕೊಂಡಿದ್ರಾ?; ನ್ಯಾಯಾಂಗ ತನಿಖೆಗೆ ಆಗ್ರಹ

ಹಾಸನ ಪೆನ್‌ಡ್ರೈವ್ ವಿಚಾರದಲ್ಲಿ ಸುಮೊಟೊ ಪ್ರಕರಣ ದಾಖಲಿಸಿಕೊಂಡು, ನ್ಯಾಯಾಂಗ ತನಿಖೆ ನಡೆಸಬೇಕು....

ಶಿವಮೊಗ್ಗ | ಮುಂದಿನ ದಿನದಲ್ಲಿ ಕ್ಷೇತ್ರದ ರಕ್ಷಣೆ ನನ್ನದು: ಗೀತಾ ಶಿವರಾಜ್‌ಕುಮಾರ್

ಶಿವಮೊಗ್ಗ ಜಿಲ್ಲೆಯಲ್ಲಿ ರಾಜಕಾರಣಿಗಳ ಬಳಿ ಅಧಿಕಾರವಿದ್ದು, ಪರಿಹರಿಸಬಹುದಾದ ಸಮಸ್ಯೆಗಳು ಸಾಕಷ್ಟಿವೆ. ಆದರೂ,...

ಫ್ರಿ ಬಸ್ | ತೀರ್ಥಯಾತ್ರೆ ನೆಪದಲ್ಲಿ ಮಹಿಳೆಯರು ಎಲ್ಲೆಲ್ಲೋ ಹೋಗ್ತಿದ್ದಾರೆ; ಬಿಜೆಪಿ ಪ್ರಚಾರಕಿ, ನಟಿ ಶೃತಿ ವಿವಾದಾತ್ಮಕ ಹೇಳಿಕೆ

ಮಾಜಿ ಮುಖ್ಯಮಂತ್ರಿ ಎಚ್‌.ಡಿ.ಕುಮಾರಸ್ವಾಮಿ ಅವರು ಮಹಿಳೆಯರ ಬಗ್ಗೆ ವಿವಾದಾತ್ಮಕ ಹೇಳಿಕೆ ನೀಡಿದ...

ಚಾಮರಾಜನಗರ | ದೇಶದ ಪ್ರಜಾಪ್ರಭುತ್ವ, ಸಂವಿಧಾನ ರಕ್ಷಣೆಗೆ ಕಾಂಗ್ರೆಸ್‌ ಬೆಂಬಲಿಸಿ: ಮಾನವ ಬಂಧುತ್ವ ವೇದಿಕೆ

ದೇಶದ ಪ್ರಜಾಪ್ರಭುತ್ವ, ಸಂವಿಧಾನದ ರಕ್ಷಣೆಗಾಗಿ ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಪಕ್ಷವನ್ನು ಜನರು...