ಖಾಸಗಿ ಬಸ್ ಬೈಕ್ ಗೆ ಡಿಕ್ಕಿ ಗ್ರಾಮಾಂತರ ಠಾಣೆಯ ಚಾಲಕ ಮೃತ

Date:

ಚಿಂತಾಮಣಿ : ಖಾಸಗಿ ಬಸ್ ದ್ವಿಚಕ್ರ ವಾಹನಕ್ಕೆ ಡಿಕ್ಕಿ ಹೊಡೆದು ಚಿಂತಾಮಣಿ ಗ್ರಾಮಾಂತರ ಪೊಲೀಸ್ ಠಾಣೆಯ ವಾಹನ ಚಾಲಕ ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ಇಂದು ಬೆಳಗ್ಗೆ ಸಂಭವಿಸಿದೆ.

- Advertisement -

ಮೃತಪಟ್ಟ ಪೊಲೀಸ್ ವಾಹನ ಚಾಲಕ ಚಿಂತಾಮಣಿ ತಾಲ್ಲೂಕಿನ ಇರಗಂಪಲ್ಲಿ ಗ್ರಾಮದ ಬಳಿ ಇರುವ ಗುಂದಿಕೆರೆ ಗ್ರಾಮದ ಶ್ರೀನಿವಾಸ್(55 ವರ್ಷ)ಎಂದು ಗುರುತಿಸಲಾಗಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಗಡುಸಾದ ದನಿಯೊಳಗಿನ ಮೃದು ಮನಸ್ಸು: ʼನಾನಾ ಪಾಟೇಕರ್ʼ ಎಂಬ...

ಅವರ ಗಡುಸಾದ ದನಿಯಲ್ಲಿ ಸಾಮಾನ್ಯ ಮನುಷ್ಯನ ಆಕ್ರೋಶವಿತ್ತು; ಅವರ ತೀಕ್ಷ್ಣ ನೋಟದಲ್ಲಿ ಬದುಕಿನ ಕಹಿ ಸತ್ಯಗಳಿದ್ದವು. ‘ಕ್ರಾಂತಿವೀರ್’ನಲ್ಲಿ ಅನ್ಯಾಯದ ವಿರುದ್ಧ ಸಿಡಿದವರು, ‘ಖಾಮೋಶಿ’ಯಲ್ಲಿ ಮಾತಿಲ್ಲದೆ ಮನಸ್ಸು ತಟ್ಟಿದವರು, ‘ವೆಲ್‌ಕಮ್’ನಲ್ಲಿ ನಗುವಿನ ಹೊಳೆ ಹರಿಸಿದವರು...

ಕೂಲಿಕಾರ್ಮಿಕರ ಮೊಮ್ಮಗಳ ವಿಶ್ವ ವಿಜಯ: ಭಾರತೀಯ ಮೂಲದ ನವಿ...

ವಿಶ್ವಸಂಸ್ಥೆಯ ಮಾನವ ಹಕ್ಕುಗಳ ವಿಭಾಗದ ಮಾಜಿ ಮುಖ್ಯಸ್ಥೆ ಹಾಗೂ ಪ್ರಸ್ತುತ ಅಂತಾರಾಷ್ಟ್ರೀಯ ನ್ಯಾಯಾಲಯದ (ICJ) ನ್ಯಾಯಾಧೀಶರಾಗಿರುವ ದಕ್ಷಿಣ ಆಫ್ರಿಕಾ ಮತ್ತು ಭಾರತೀಯ ಮೂಲದ ನವನೀತಮ್ 'ನವಿ' ಪಿಳ್ಳೈ (85) ಅವರಿಗೆ 2026ನೇ ಸಾಲಿನ...

ಉತ್ತರ ಕನ್ನಡ | ಗ್ರಾಮೀಣ ಮಹಿಳೆಯರ ಸಬಲೀಕರಣಕ್ಕೆ ‘ಅಕ್ಕ...

ಉತ್ತರ ಕನ್ನಡ ಜಿಲ್ಲೆಯಲ್ಲಿ 'ಅಕ್ಕ ಕೆಫೆ' ಯೋಜನೆ ಯಶಸ್ವಿಯಾಗಿ ಮುನ್ನಡೆಯುತ್ತಿದ್ದು, ಗ್ರಾಮೀಣ ಮಹಿಳೆಯರು ಸ್ವಂತ ಉದ್ಯಮ ನಡೆಸಿ ಆರ್ಥಿಕ ಸ್ವಾವಲಂಬನೆ ಸಾಧಿಸಲು ಮತ್ತು ಉದ್ಯಮಿಗಳಾಗಿ ಹೊರಹೊಮ್ಮಲು ಇದು ದಾರಿಮಾಡಿಕೊಟ್ಟಿದೆ. ಸಂಜೀವಿನಿ ಎನ್‌ಆರ್‌ಎಲ್‌ಎಂ ಯೋಜನೆಯಡಿ...

ಸುಮಾರು ದಿನಗಳಿಂದ ಚಿಂತಾಮಣಿ ಗ್ರಾಮಾಂತರ ಪೊಲೀಸ್ ಠಾಣೆಯ ಜಿಪ್ ಚಾಲಕನಾಗಿ ಕರ್ತವ್ಯ ನಿರ್ವಹಿಸುತ್ತಿದ್ದ ಶ್ರೀನಿವಾಸ್ ಬೆಳಗ್ಗೆ ತಮ್ಮ ಗ್ರಾಮದ ತೋಟದಲ್ಲಿ ಕೆಲಸ ಮುಗಿಸಿ ತನ್ನ ದ್ವಿಚಕ್ರ ವಾಹನದಲ್ಲಿ ಪೊಲೀಸ್ ಕರ್ತವ್ಯಕ್ಕೆ ಹಾಜರಾಗುತ್ತಿದ್ದ ವೇಳೆ ಚಿಂತಾಮಣಿ ನಗರದ ಶಿಡ್ಲಘಟ್ಟ ರಸ್ತೆಯ ಚೆಮನೂರು ಜುವೆಲ್ಲರ್ಸ್ ಮುಂಭಾಗ ಖಾಸಗಿ ಬಸ್ ಡಿಕ್ಕಿ ಹೊಡೆದ ಪರಿಣಾಮ ಸ್ಥಳದಲ್ಲೇ ಪೋಲಿಸ್ ವಾಹನ ಚಾಲಕ ಶ್ರೀನಿವಾಸ್ ಸ್ಥಳದಲ್ಲೇ ಮೃತಪಟ್ಟಿದ್ದಾನೆ.

ಘಟನೆಯ ವಿಷಯ ತಿಳಿದ ತಕ್ಷಣ ಡಿವೈಎಸ್ಪಿ ಮುರುಳಿಧರ್ ನಗರ ಠಾಣೆಯ ಸರ್ಕಲ್ ಇನ್ಸ್ಪೆಕ್ಟರ್ ವಿಜಿ ಕುಮಾರ್,ಗ್ರಾಮಾಂತರ ಠಾಣೆಯ ಸರ್ಕಲ್ ಇನ್ಸ್ಪೆಕ್ಟರ್ ಶಿವರಾಜ್ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿ ಮೃತ ದೇಹವನ್ನು ನಗರದ ಸಾರ್ವಜನಿಕ ಆಸ್ಪತ್ರೆಗೆ ಸ್ಥಳಾಂತರಿಸಿದ್ದಾರೆ.

ಪೊಲೀಸ್ ವಾಹನ ಚಾಲಕ ಶ್ರೀನಿವಾಸ್ ನಿಧನಕ್ಕೆ ಜಿಲ್ಲಾ ರಕ್ಷಣಾಧಿಕಾರಿಗಳಾದ ಕುಶಾಲ್ ಚೌಕ್ಸೆ, ಡಿವೈಎಸ್ಪಿ ಮುರಳಿಧರ್, ಚಿಂತಾಮಣಿ ನಗರಸಭೆಯ ಪೌರಾಯುಕ್ತರಾದ ಜಿ ಏನ್ ಚಲಪತಿ,ಸಂತಾಪ ಸೂಚಿಸಿದ್ದಾರೆ.

ಇದನ್ನು ಓದಿದ್ದೀರಾ..?ಉಚಿತ ಹೊಲಿಗೆ ಯಂತ್ರಗಳಿಂದ ಸ್ವಾವಲಂಬಿ ಬದುಕು ಕಟ್ಟಿಕೊಳ್ಳಿ : ಶಾರ್ಲೆನ್

ಘಟನೆಯ ವಿಷಯ ತಿಳಿದ ತಕ್ಷಣ ಅಲ್ಲಿ ಜಮಾಯಿಸಿದ ಹಲವು ಸ್ಥಳೀಯರು ಮಾಧ್ಯಮದವರೊಂದಿಗೆ ಮಾತನಾಡಿ ನಗರ ಭಾಗದಲ್ಲಿ ವಾಹನಗಳು ಅಡ್ಡದ್ದಿಡ್ಡಿ ನಿಲ್ಲಿಸಿರುವ ಕಾರಣಕ್ಕೆ ಇಂತಹ ಘಟನೆಗಳು ಸಂಭವಿಸುತ್ತಿರುತ್ತದೆ.ಹಾಗಾಗಿ ಸಂಬಂಧಪಟ್ಟ ಇಲಾಖೆಗಳು ನಗರ ಭಾಗದಲ್ಲಿ ಅಡ್ಡಾದಿಡ್ಡಿ ಹಾಗೂ ಮುಖ್ಯ ರಸ್ತೆಗಳ ಅಕ್ಕ ಪಕ್ಕದಲ್ಲಿ ನಿಲ್ಲಿಸುವ ವಾಹನಗಳ ಮಾಲೀಕರ ವಿರುದ್ಧ ಕಠಿಣ ಕ್ರಮ ಜರುಗಿಸಿ ಬೇಕೆಂದು ಸಂಬಂಧಪಟ್ಟ ಇಲಾಖೆಗಳಿಗೆ ಮನವಿ ಮಾಡಿಕೊಂಡಿದ್ದಾರೆ

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಆಡಳಿತದಲ್ಲಿ ಪಾರದರ್ಶಕತೆಗೆ ಮಾಹಿತಿ ಹಕ್ಕು ಕಾಯ್ದೆ ಪ್ರಮುಖ ಅಸ್ತ್ರ: ಹಣಮಂತ ಶಿಂದೆ

ಮಾಹಿತಿ ಹಕ್ಕು ಕಾಯ್ದೆಯ ಪರಿಣಾಮಕಾರಿ ಬಳಕೆ, ಆಡಳಿತದಲ್ಲಿ ಪಾರದರ್ಶಕತೆ ಹಾಗೂ ಸಾಮಾಜಿಕ...

ಯತ್ನಾಳ್ ವಿರುದ್ಧ ಹೊರ್ತಿ ವಾಗ್ದಾಳಿ; ಅರ್ಜಿ ವಾಪಸ್ ಪಡೆದ ಹಿಂದಿನ ಸತ್ಯ ಬಹಿರಂಗಪಡಿಸಲು ಸವಾಲು

ಮತದಾರರ ಪಟ್ಟಿಯಿಂದ ಹೆಸರುಗಳನ್ನು ತೆಗೆದುಹಾಕುವಂತೆ ಶಾಸಕ ಬಸನಗೌಡ ಪಾಟೀಲ ಯತ್ನಾಳ್ ಬರೆದಿರುವ...

ಆರೋಗ್ಯ ಸುರಕ್ಷತೆಗೆ ಆದ್ಯತೆ ನೀಡಿ: ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ಸೂಚನೆ

ಕೊಡಗು ಜಿಲ್ಲೆಯಲ್ಲಿ ಡೆಂಗ್ಯೂ, ಮಲೇರಿಯಾ ಸೇರಿದಂತೆ ಸಾಂಕ್ರಾಮಿಕ ರೋಗಗಳ ನಿಯಂತ್ರಣಕ್ಕೆ ಅಗತ್ಯ...

ಉಡುಪಿ | ಯುವಜನರೇ, ನಿರಂತರ ಪರಿಶ್ರಮದಿಂದ ಯಶಸ್ಸಿನ ಮೆಟ್ಟಿಲೇರಿ: ಪ್ರಕಾಶ್ ಶೆಟ್ಟಿ

ಯುವಜನರು ನಿರಂತರ ಪ್ರಯತ್ನದ ಮೂಲಕ ಜೀವನದಲ್ಲಿ ಒಂದೊಂದೇ ಮೆಟ್ಟಿಲು ಏರುತ್ತಾ ಸಾಗಿದರೆ...