ಮೈಸೂರು | ನಿಖರ ಕೃಷಿ ಬೇಸಾಯ ಪ್ರಾತ್ಯಕ್ಷಿಕ ಘಟಕ ಉದ್ಘಾಟಿಸಿದ ಎಸ್. ಪಿ. ಉದಯಶಂಕರ್

Date:

Advertisements

ಮೈಸೂರು ಜಿಲ್ಲೆ, ವರುಣಾ ವ್ಯಾಪ್ತಿ ಸುತ್ತೂರಿನ ಐಸಿಎಆರ್ ಜೆಎಸ್ಎಸ್ ಕೃಷಿ ವಿಜ್ಞಾನ ಕೇಂದ್ರದ ವತಿಯಿಂದ ರೈತರಿಗೆ ನಿಖರ ಕೃಷಿ ಬೇಸಾಯದ ಕುರಿತು ಮಾಹಿತಿ ನೀಡಲು ‘ ನಿಖರ ಕೃಷಿ ಬೇಸಾಯ ಪಾತ್ಯಕ್ಷಿಕಾ ಘಟಕ ‘ ವನ್ನು ಜೆಎಸ್ಎಸ್ ಸಂಸ್ಥೆಗಳ ಆಡಳಿತಾಧಿಕಾರಿ ಎಸ್. ಪಿ. ಉದಯಶಂಕರ್ ಉದ್ಘಾಟಿಸಿ ಎಸ್‌ಎಸ್‌ಪಿ ರೈತರಿಗೆ ಕೃಷಿ ಪರಿಕರಗಳನ್ನು ವಿತರಣೆ ಮಾಡಿದರು.

” ಜೆಎಸ್‌ಎಸ್ ಕೃಷಿ ವಿಜ್ಞಾನ ಕೇಂದ್ರವು ಕಳೆದ 30 ವರ್ಷಗಳಿಂದ ರೈತರಿಗೆ ವಿವಿಧ ಸೇವೆಗಳನ್ನು ನೀಡುತ್ತಿದೆ. ತರಬೇತಿ, ರೈತರ ತಾಕಿನಲ್ಲಿ ಪ್ರಾತ್ಯಕ್ಷಿಕೆಗಳು ಹಾಗೂ ವಿವಿಧ ವಿಸ್ತರಣಾ ಚಟುವಟಿಕೆಗಳನ್ನು ಹಮ್ಮಿಕೊಳ್ಳುತ್ತಾ ಬಂದಿದೆ. ರೈತರಿಗೆ ಕೃಷಿ ಸಂಪನ್ಮೂಲಗಳಾದ ನೀರು, ಗೊಬ್ಬರ ಸಮರ್ಪಕವಾಗಿ ಬಳಸುವ ನಿಟ್ಟಿನಲ್ಲಿ ನಿಖರ ಕೃಷಿ ಬೇಸಾಯ ತಂತ್ರಜ್ಞಾನ ಪ್ರಾತ್ಯಕ್ಷಿಕೆಯನ್ನು ನಿರ್ಮಿಸಲಾಗಿದೆ. ರೈತರು ಕೆವಿಕೆಗೆ ಭೇಟಿ ನೀಡಿ ಮಾಹಿತಿ ಪಡೆಯಲು ” ಕರೆ ನೀಡಿದರು.

ಬೆಂಗಳೂರು ವಲಯ-11 ರ ಅಟಾರಿ ನಿರ್ದೇಶಕರಾದ ಡಾ. ವಿ. ಸುಬ್ರಮಣ್ಣಿಯನ್ ಮಾತನಾಡಿ ” ಸ್ವಾತಂತ್ರ್ಯದ ಮೊದಲು ನಾವು ಆಹಾರ ಉತ್ಪನ್ನಗಳಿಗೆ ಬೇರೆ ದೇಶಗಳ ಮೇಲೆ ಅವಲಂಬಿತರಾಗಿದ್ದೆವು. ಆದರೆ, ಈಗ ಕೃಷಿಯ ಎಲ್ಲಾ ಕ್ಷೇತ್ರದಲ್ಲಿ ಸ್ವಾವಲಂಬನೆಯನ್ನು ಸಾಧಿಸಿ, ಹೊರ ದೇಶಗಳಿಗೆ ರಫ್ತು ಮಾಡುತ್ತಿದ್ದೇವೆ. ಪರಿಶಿಷ್ಟ ಜಾತಿ ಹಾಗೂ ಪರಿಶಿಷ್ಟ ಪಂಗಡಗಳ ರೈತರಿಗೆ ಅನುಕೂಲವಾಗಲೆಂದು ಕೇಂದ್ರ ಸರ್ಕಾರವು ಬಿತ್ತನೆ ಬೀಜ ಹಾಗೂ ಸಸಿಗಳನ್ನು ನೀಡಲಾಗುತ್ತಿದೆ. ಅಲ್ಲದೇ, ಎಸ್‌ಸಿಎಸ್‌ಪಿ ಯೋಜನೆಯಡಿ ವಿವಿಧ ಕೃಷಿ ಪರಿಕರಗಳನ್ನು ಕೇಂದ್ರಕ್ಕೆ ನೀಡಲಾಗಿದ್ದು, ಆಸಕ್ತ ರೈತರು ಬಾಡಿಗೆಗೆ ಪಡೆದು ಇದರ ಸದುಪಯೋಗ ಪಡೆದುಕೊಳ್ಳಬೇಕೆಂದು ” ತಿಳಿಸಿದರು.

Advertisements

ಮೈಸೂರಿನ ಜೆಎಸ್ಎಸ್ ಮಹಾ ವಿದ್ಯಾಪೀಠದ ಡಾ. ಸಿ.ಜಿ. ಬೆಟಸೂರ ಮಠ ಮಾತನಾಡಿ ” ಯುವ ರೈತರು ಕೃಷಿಯಿಂದ ವಿಮುಖರಾಗಿ ನಗರ ವಾಸಿಗಳಾಗುತ್ತಿದ್ದಾರೆ. ಕೃಷಿ ಭೂಮಿಯನ್ನು ಬಡಾವಣೆಗಳನ್ನಾಗಿ ಮಾಡಲಾಗುತ್ತಿದೆ. ಇದರಿಂದಾಗಿ ಕೃಷಿ ಭೂಮಿ ಕಡಿಮೆಯಾಗುತ್ತಿದೆ. ಇದರ ಪರಿಣಾಮ ಭವಿಷ್ಯದಲ್ಲಿ ಆಹಾರ ಉತ್ಪಾದನೆ ಕುಂಠಿತವಾಗುತ್ತಿದೆ. ಆದ ಕಾರಣ ಗ್ರಾಮೀಣ ಯುವ ರೈತರು ವ್ಯವಸಾಯದಿಂದ ವಿಮುಖರಾಗದೇ ಕೃಷಿಯಲ್ಲಿ ತೊಡಗಿಕೊಂಡು ಯಶಸ್ಸು ಸಾಧಿಸಬೇಕು. ಕೃಷಿಗೆ ಸಂಬಂಧಿಸಿದ ತಾಂತ್ರಿಕ ಸಲಹೆಯನ್ನು ಸುತ್ತೂರಿನ ಜೆಎಸ್ಎಸ್ ಕೃಷಿ ವಿಜ್ಞಾನ ಕೇಂದ್ರದಲ್ಲಿ ಪಡೆಯಲು ” ಸಲಹೆ ನೀಡಿದರು.

ಕೃಷಿ ವಿಜ್ಞಾನ ಕೇಂದ್ರದ ಮುಖ್ಯಸ್ಥರಾದ ಡಾ. ಜ್ಞಾನೇಶ್ ಬಿ.ಎನ್. ರವರು 2025 ಮೇ 3 ರಿಂದ 5ರವರೆಗೆ ಸುತ್ತೂರಿನಲ್ಲಿ ರೈತರ ಶಿಬಿರವನ್ನು ಹಮ್ಮಿಕೊಳ್ಳಲಾಗಿದೆ. ಆಸಕ್ತ ರೈತರು ಶಿಬಿರದಲ್ಲಿ ಪಾಲ್ಗೊಳ್ಳಲು ತಿಳಿಸಿದರು.

ಈ ಸುದ್ದಿ ಓದಿದ್ದೀರಾ? ಕೊಡಗು | ಬಡ ವರ್ಗಕ್ಕೆ ನಿವೇಶನ ನೀಡುವಂತೆ ಆಗ್ರಹಿಸಿ ಪ್ರತಿಭಟನೆ

ಹೆಚ್.ವಿ. ದಿವ್ಯಾ, ಡಾ. ಪ್ರಸಾದ್ ವೈ.ಪಿ, ಡಾ. ರಕ್ಷಿತ್ ರಾಜ್ ಯು.ಎಂ.ಸೇರಿದಂತೆ ಕೆವಿಕೆಯ ಸಿಬ್ಬಂದಿ ವರ್ಗದವರು ಹಾಗೂ 80ಕ್ಕೂ ಹೆಚ್ಚು ರೈತರು ಕಾರ್ಯಕ್ರಮದಲ್ಲಿ ಇದ್ದರು.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಚಿಕ್ಕಮಗಳೂರು l ತೆಂಗಿನಕಾಯಿ ಕಳ್ಳತನ ಆರೋಪ: ವ್ಯಕ್ತಿಯ ಹತ್ಯೆ; ಆರೋಪಿಗಳ ಬಂಧನ

ತೆಂಗಿನಕಾಯಿ ಕಳ್ಳತನ ಮಾಡಿದ್ದಾನೆ ಎಂಬ ಕಾರಣಕ್ಕೆ ವ್ಯಕ್ತಿಯನ್ನು ಹತ್ಯೆ ಮಾಡಿರುವ ಘಟನೆ...

ಗದಗ | ಒಳಮೀಸಲಾತಿ ಅಂಗೀಕಾರ ಸ್ವಾಗತಾರ್ಹ: ಬಸವರಾಜ ಕಡೇಮನಿ

"ಒಳಮೀಸಲಾತಿ ಜಾರಿಗಾಗಿ ಒತ್ತಾಯಿಸಿ ಮೂವತ್ತೈದು ವರ್ಷಗಳ ನಿರಂತರ ಹೋರಾಟದ ಫಲದಿಂದ ರಾಜ್ಯ...

ಸಕಲೇಶಪುರ | ವ್ಯಸನಮುಕ್ತ ರಾಜ್ಯ ಆಂದೋಲನಕ್ಕೆ ಸರ್ಕಾರ ಸಂಪೂರ್ಣ ಬೆಂಬಲ ನೀಡಬೇಕು: ಬಿ ಆರ್‌ ಪಾಟೀಲ್

ವ್ಯಸನಮುಕ್ತ ರಾಜ್ಯ ಆಂದೋಲನಕ್ಕೆ ಸರ್ಕಾರ ಸಂಪೂರ್ಣವಾಗಿ ಬೆಂಬಲ ನೀಡಿದಾಗ ಮಾತ್ರ ವ್ಯಸನವನ್ನು...

ಚಿಕ್ಕಮಗಳೂರು l ಸಭಾಧ್ಯಕ್ಷರೇ ಮಲೆನಾಡಿನ ಸಮಸ್ಯೆ ಬಗ್ಗೆ ಚರ್ಚಿಸಲು ಅವಕಾಶ ಕಲ್ಪಿಸಿ; ಹೆಚ್.ಡಿ ತಮ್ಮಯ್ಯ

ಮಲೆನಾಡಿನಲ್ಲಿ ಕಾಡುತ್ತಿರುವ ಕಾಡು-ಪ್ರಾಣಿ-ಮಾನವ ಸಂಘರ್ಷದಿಂದ ಜನಜೀವನ ಅಸ್ತವ್ಯಸ್ಥವಾಗಿದೆ. ಇಂತಹ ಗಂಭೀರ ಸಮಸ್ಯೆಗಳ...

Download Eedina App Android / iOS

X