ಮಂಗಳೂರು | ಪತ್ರಿಕಾ ದಿನಾಚರಣೆ, ಮೋಗ್ಲಿಂಗ್ ಸ್ಮಾರಕ ನಿರ್ಮಾಣವಾಗಲಿ – ಸದಾಶಿವ ಉಳ್ಳಾಲ್

Date:

ಕನ್ನಡದ ಪ್ರಥಮ ಪತ್ರಿಕೆ ‘ಮಂಗಳೂರ ಸಮಾಚಾರ’ ಮಂಗಳೂರಿನಲ್ಲಿ ಆರಂಭಗೊಂಡ ಹಿನ್ನೆಲೆಯಲ್ಲಿ ಪತ್ರಿಕೆಯ ಸ್ಥಾಪಕ ಸಂಪಾದಕ ಹರ್ಮನ್ ಮೋಗ್ಲಿಂಗ್ ಅವರ ಸ್ಮಾರಕ ಮಂಗಳೂರಿನಲ್ಲಿ ನಿರ್ಮಾಣವಾಗುವುದು ಅಗತ್ಯ ಎಂದು ಮಂಗಳೂರು ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಸದಾಶಿವ ಉಳ್ಳಾಲ ಅವರು ಅಭಿಪ್ರಾಯಪಟ್ಟರು.

- Advertisement -

ಪತ್ರಿಕಾ ದಿನಾಚರಣೆ ಅಂಗವಾಗಿ ಕರ್ನಾಟಕ ಜರ್ನಲಿಸ್ಟ್ ಯೂನಿಯನ್ ಮಂಗಳೂರಿನ ಬಲ್ಮಠದ ಥೀಯೊಲಾಜಿಕಲ್ ಕಾಲೇಜು ಆವರಣದಲ್ಲಿ ಏರ್ಪಡಿಸಿದ ಸಂಪಾದಕ ಹರ್ಮನ್ ಮೋಗ್ಲಿಂಗ್ ಅವರ ಪ್ರತಿಮೆಗೆ ಗೌರವಾರ್ಪಣೆ ಮಾಡುವ ಕಾರ್ಯಕ್ರಮದಲ್ಲಿ ಅವರು ಪಾಲ್ಗೊಂಡು ಮಾತನಾಡಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಪಾಕಿಸ್ತಾನದಲ್ಲಿ ಅಹಿಂಸಾ ಮೂರ್ತಿಯ ‘ರಹಸ್ಯರಕ್ಷಣೆ’: ಕರಾಚಿಯಿಂದ ಇಸ್ಲಾಮಾಬಾದ್‌ಗೆ ಗಾಂಧಿ...

ಪಾಕಿಸ್ತಾನದ ಇಸ್ಲಾಮಾಬಾದ್‌ನಲ್ಲಿರುವ ಭಾರತೀಯ ಹೈಕಮಿಷನ್ ಕಚೇರಿಯ ಪ್ರವೇಶ ದ್ವಾರದಲ್ಲಿ ಮಹಾತ್ಮ ಗಾಂಧೀಜಿಯವರ ಭವ್ಯ ಕಂಚಿನ ಪ್ರತಿಮೆ ಇಂದಿಗೂ ಗಾಂಭೀರ್ಯದಿಂದ ನಿಂತಿದೆ. ಕೈಯಲ್ಲಿ ಊರುಗೋಲು ಹಿಡಿದು ದೂರದ ದಿಗಂತವನ್ನು ದಿಟ್ಟಿಸುವಂತಿರುವ ಈ ಬಾಪೂ ಪ್ರತಿಮೆಯು...

ಗಾಂಧಿಯ ಆರ್ಥಿಕ ಸಾಮಾಜಿಕ ಸಂಕೇತಗಳು: ಉಪ್ಪು, ಖಾದಿ, ಚರಕ...

ಗ್ರಾಮೀಣ ಭಾರತದ ಆರ್ಥಿಕತೆ ಮನಗಂಡಿದ್ದ ಗಾಂಧಿ ಹಾಲಿನ ಬಗೆಗಿನ ಕಠೋರ ನಿಲುವನ್ನು ನಿರಾಕರಿಸಿ ತನ್ನನ್ನು ತಾನು ಮೇಕೆಯ ಮಮಕಾರದ ಹಾಲಿಗೆ ಕೊಟ್ಟುಕೊಂಡಿದ್ದರು. ಈಗಿನ ಪಶುಪಾಲಕ ಸಮುದಾಯಗಳ ಸಾವಯವ ಬದುಕಿನ ರೀತಿ ನೀತಿ ಗಮನಿಸಿ......

ಈ ದಿನ ವಿಶೇಷ | ಗಾಂಧೀ ಎಂದರೆ ಏನು?

ಇಂದು ಮಹಾತ್ಮಾ ಗಾಂಧೀಜಿಯವರ ಜನ್ಮದಿನ. ಅವರ ವಿಚಾರ, ಚಿಂತನೆ, ನಡೆ-ನುಡಿ... ಅವರನ್ನು ಗ್ರಹಿಸಲು ಅವರ ದಿನಚರಿಯ ಭಾಗವೇ ಆಗಿದ್ದ ಕೆಲವು ತುಣುಕುಗಳು ನಿಮ್ಮ ಓದಿಗಾಗಿ... ಆರೆಸ್ಸೆಸ್‌ಗೊಂದು ಕಿವಿಮಾತುಅದು ದೇಶ ವಿಭಜನೆಯ ಕಾಲ. ಎಲ್ಲೆಲ್ಲೂ ಹಿಂದೂ-ಮುಸ್ಲಿಂ...

ಮೊಗ್ಲಿಂಗ್ ಸ್ಮಾರಕ ನಿರ್ಮಾಣ ಮಾಡುವ ನಿಟ್ಟಿನಲ್ಲಿ ಜಿಲ್ಲಾಡಳಿತದೊಂದಿಗೆ ಚರ್ಚಿಸಿ ವಿಸ್ತೃತವಾದ ಸಮಾಲೋಚನಾ ಸಭೆ ನಡೆಸುವುದಾಗಿ ಸದಾಶಿವ ಉಳ್ಳಾಲ್ ಅವರು ಭರವಸೆ ನೀಡಿದರು. ಕರ್ನಾಟಕ ಗೇರು ಅಭಿವೃದ್ಧಿ ನಿಗಮದ ಅಧ್ಯಕ್ಷೆ ಮಮತಾ ಡಿ.ಎಸ್. ಗಟ್ಟಿ ಮಾತನಾಡಿ, ನ್ಯಾಯಯುತ ಹಾಗೂ ಸಮಾನತೆಯ ಸಮಾಜ ನಿರ್ಮಾಣದಲ್ಲಿ ಪತ್ರಿಕಾರಂಗ ಪ್ರಮುಖ ಪಾತ್ರ ವಹಿಸಿದೆ. ಕರ್ನಾಟಕದಲ್ಲಿ ಪತ್ರಿಕೋದ್ಯಮ ಆರಂಭಿಸಿದ ಮೊಗ್ಲಿಂಗ್ ಅವರು ಮಂಗಳೂರಿಗೂ ಹಿರಿಮೆ‌ ತಂದಿದ್ದಾರೆ ಎಂದರು.

ಕರ್ನಾಟಕ ಥಿಯೋಲಾಜಿಕಲ್ ಕಾಲೇಜ್ ಪ್ರಿನ್ಸಿಪಾಲ್ ಡಾ. ಎಚ್.ಎಮ್. ವಾಟ್ಸನ್ ಅವರು ಮಾತನಾಡಿ, ಮಂಗಳೂರ ಸಮಾಚಾರ ಸಂಪಾದಕ ಮೋಗ್ಲಿಂಗ್ ಅವರ ಸ್ಮಾರಕ ಮಂಗಳೂರಿನಲ್ಲಿ ಶೀಘ್ರ ನಿರ್ಮಾಣವಾಗುವಂತಾಗಲಿ ಎಂದು ಆಶಯ ವ್ಯಕ್ತಪಡಿಸಿದರು.

ಕರ್ನಾಟಕ ತುಳು ಸಾಹಿತ್ಯ ಅಕಾಡೆಮಿಯ ಅಧ್ಯಕ್ಷ ತಾರಾನಾಥ್ ಗಟ್ಟಿ ಕಾಪಿಕಾಡ್, ಕರ್ನಾಟಕ ಕೊಂಕಣಿ ಅಕಾಡೆಮಿ ಅಧ್ಯಕ್ಷ ಸ್ಟ್ಯಾನಿ ಅಲ್ವಾರಿಸ್ ಶುಭಕೋರಿ ಮಾತನಾಡಿದರು. ಹಿರಿಯ ಪತ್ರಿಕಾ ಛಾಯಗ್ರಾಹಕ ವಿಶ್ವನಾಥ ಸುವರ್ಣ ಭಾಗವಹಿಸಿದ್ದರು.
ಕರ್ನಾಟಕ ಜರ್ನಲಿಸ್ಟ್ ಯೂನಿಯನ್ ಸಮಿತಿ ಸದಸ್ಯರಾದ ಈಶ್ವರ್ ವಾರಣಾಸಿ, ಗಿರಿಧರ್ ಶೆಟ್ಟಿ, ಡೋನಾಲ್ಡ್ ಪಿಂಟೋ, ಹಮೀದ್ ವಿಟ್ಲ, ಶಿವಪ್ರಸಾದ್ ಆಲೆಟ್ಟಿ, ಗಣೇಶ್ ಕುಕ್ಕುದಡಿ, ಜಯಶ್ರೀ ಕೊಯಂಗೋಡಿ ಮೊದಲಾದವರು ಉಪಸ್ಥಿತರಿದ್ದರು. ಗೌರವಾಧ್ಯಕ್ಷ ಹರೀಶ್ ಬಂಟ್ವಾಳ್ ಸ್ವಾಗತಿಸಿ ಕಾರ್ಯಕ್ರಮ ನಿರ್ವಹಿಸಿದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಕಪ್ಪತಗುಡ್ಡದ ಮಡಿಲಲ್ಲಿ ಗಾಂಧಿ ತತ್ವಗಳ ಪ್ರೇರಣಾ ಕೇಂದ್ರ ‘ಸಬರಮತಿ ಆಶ್ರಮ’

ಗದಗ ನಗರದ ಕಪ್ಪತಗುಡ್ಡದ ಸೆರಗಿನಲ್ಲಿರುವ 'ಮಹಾತ್ಮ ಗಾಂಧಿ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್...

ಹಾವೇರಿ | ಮುನಿಶ್ವರ ಎಚ್ ಚೂರಿ ಅವರ ನಿವೃತ್ತಿ ಬದುಕು ಹಸನಾಗಲಿ : ಉಡಚಪ್ಪ ಮಾಳಗಿ

"ತಮ್ಮ ವೃತ್ತಿ ಹಾಗೂ ಪ್ರವೃತ್ತಿಯಲ್ಲಿ ಪ್ರಮಾಣಿಕತೆಯನ್ನು ರೂಡಿಸಿಕೊಂಡು, ಯಶಸ್ವಿಯಾಗಿ ನಿವೃತ್ತಿಯಾದ ಮುನಿಶ್ವರ...

ಕಾರವಾರ, ಕುಮಟಾ, ದಾಂಡೇಲಿ ಪೊಲೀಸ್‌ ಅಧಿಕಾರಿಗಳ ವರ್ಗಾವಣೆ

ಉತ್ತರ ಕನ್ನಡ ಜಿಲ್ಲೆಯ ಪೊಲೀಸ್ ಇಲಾಖೆಯಲ್ಲಿ ಹಲವು ಅಧಿಕಾರಿಗಳ ವರ್ಗಾವಣೆ ಹಾಗೂ...

ಗದಗ | ಆನಂದಕಂದರ ಸಾಹಿತ್ಯವು ಸಾರ್ವಕಾಲಿಕ ಮೌಲ್ಯ ಹೊಂದಿದೆ: ಡಾ. ಅರ್ಜುನ ಗೊಳಸಂಗಿ

ಕನ್ನಡ ನಾಡು-ನುಡಿ, ಸಂಸ್ಕೃತಿ ಮತ್ತು ಜನಪದ ಸೊಗಡನ್ನು ಅಕ್ಷರ ರೂಪಕ್ಕಿಳಿಸಿದ ಆನಂದಕಂದರ...