ಜೂನ್‌ 30ರಂದು ಬೀದರ್‌ನಲ್ಲಿ ʼಸದ್ಭಾವನಾ ನಡಿಗೆʼ

Date:

ಸದ್ಭಾವನಾ ಮಂಚ್ ವತಿಯಿಂದ ಬೀದರ್ ನಗರದಲ್ಲಿ ಜೂನ್ 30ರಂದು ಬೆಳಿಗ್ಗೆ ʼಸದ್ಭಾವನಾ ನಡಿಗೆʼ ಹಮ್ಮಿಕೊಳ್ಳಲಾಗಿದೆ ಎಂದು ಸದ್ಭಾವನಾ ಮಂಚ ಸಂಚಾಲಕ ಗುರುನಾಥ ಗಡ್ಡೆ ತಿಳಿಸಿದ್ದಾರೆ.

- Advertisement -

ʼಭಾರತ ಶಾಂತಿಪ್ರಿಯ ದೇಶ. ಅನೇಕತೆಯಲ್ಲಿ ಏಕತೆ ಇದರ ವಿಶೇಷ. ವಿಶ್ವದಲ್ಲಿ ಕೋಮು ಸೌಹಾರ್ದಕ್ಕೆ ಪ್ರಸಿದ್ಧಿ ಪಡೆದಿದೆ. ಶಾಂತಿ, ಸಹಬಾಳ್ವೆ, ಸಹೋದರತ್ವ ಎಲ್ಲ ಧರ್ಮಗಳ ತಿರುಳಾಗಿದೆ. ಆದರೆ, ದೇಶ ಇತ್ತೀಚೆಗೆ ಕೋಮುವಾದ, ಕೊಲೆ, ಗುಂಪು ಕೊಲೆ, ದೊಂಬಿ, ದ್ವೇಷ, ಆರ್ಥಿಕ ಬಹಿಷ್ಕಾರದಂತಹ ಸಾಮಾಜಿಕ ಅನಿಷ್ಠಗಳಿಗೆ ಹೆಸರುವಾಸಿ ಆಗುತ್ತಿರುವುದು ಕಳವಳಕಾರಿಯಾಗಿದೆʼ ಎಂದು ಹೇಳಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಮೋದಿ ಆಡಳಿತದಲ್ಲಿ ಮಾಹಿತಿ ಹಕ್ಕು ಕಾಯ್ದೆಯ ‘ಸ್ಥಿತಿ’ ಹೇಗಿದೆ?...

ಯಾವುದೇ ಸರ್ಕಾರ ಆಡಳಿತದಲ್ಲಿರಲಿ ಪ್ರಜಾಸತ್ತಾತ್ಮಕ ವ್ಯವಸ್ಥೆಯನ್ನು ಕಾಪಾಡಬೇಕಾದ ಸಂಸ್ಥೆಗಳ ಸ್ವಾಯತ್ತತೆ ಉಳಿಯಬೇಕು. ಅವು ಪಾರದರ್ಶಕವಾಗಿರಬೇಕು. ಪ್ರಜಾಸತ್ತೆಯ ಕಾರ್ಯವೈಖರಿಯನ್ನು ಕುರಿತಂತೆ ಮುಕ್ತ ಚರ್ಚೆ ನಡೆಯುತ್ತಿರಬೇಕು. ಇದು ಸಕ್ರಿಯ, ಅರ್ಥಪೂರ್ಣ ಪ್ರಜಾಸತ್ತೆಯ ಕನಿಷ್ಠ ಅವಶ್ಯಕತೆ. ಹಾಗಾಗಿ...

ಬಂಗಾಳ ವಿಭಜನೆ | ವಿಭಜನೆಯ ವಿಷಬೀಜದಿಂದ ಒಗ್ಗಟ್ಟಿನ ಜ್ಯೋತಿ...

ಬ್ರಿಟಿಷರ 'ಒಡೆದು ಆಳುವ ನೀತಿ'ಯ ಭಾಗವಾಗಿ 1905ರ ಅಕ್ಟೋಬರ್‌ನಲ್ಲಿ ಜಾರಿಗೆ ಬಂದ ಬಂಗಾಳ ವಿಭಜನೆಯು ಭಾರತೀಯರ ರಾಷ್ಟ್ರೀಯತೆಯನ್ನು ಒಡೆಯುವ ಕುತಂತ್ರವಾಗಿತ್ತು. ಇದಕ್ಕೆ ಪ್ರತಿಯಾಗಿ ಭಾರತೀಯರು 'ರಾಷ್ಟ್ರೀಯ ಶೋಕ ದಿನ' ಆಚರಿಸಿ, ಪರಸ್ಪರ ರಾಖಿ...

ನಟ ಇಮ್ರಾನ್ ಖಾನ್ ಪ್ರತಿಭಟಿಸಿದರೆ ಗಡಿಪಾರು; ಟ್ರಂಪ್ ಪರ...

ಕಾನೂನು ಮತ್ತು ರಾಜತಾಂತ್ರಿಕ ನಿಯಮಗಳು ಎಲ್ಲರಿಗೂ ಒಂದೇ ಆಗಿರಬೇಕು ಹೊರತು ಪ್ರಧಾನಿ ಮೋದಿಯವರ ರಾಜಕೀಯ ಅನುಕೂಲಕ್ಕೆ ತಕ್ಕಂತೆ ಬದಲಾಗಬಾರದು. ವಿದೇಶಿ ಪ್ರಜೆಯೊಬ್ಬ ಭಾರತದ ನೆಲದಲ್ಲಿ ಪ್ರತಿಭಟನೆಯಲ್ಲಿ ಪಾಲ್ಗೊಳ್ಳುವುದು ತಪ್ಪು ಎನ್ನುವುದಾದರೆ, ಭಾರತದ ಪ್ರಧಾನಿಯೊಬ್ಬರು...

ʼಸಾಮಾಜಿಕ ಅನಿಷ್ಠಗಳಿಂದ ಮಕ್ಕಳು, ಯುವಕರು ಹಾಗೂ ನಾಗರಿಕರನ್ನು ರಕ್ಷಿಸಬೇಕಾಗಿದೆ. ಈ ಹಿನ್ನೆಲೆಯಲ್ಲಿ ಸೌಹಾರ್ದ ನಡಿಗೆ ಸಂಘಟಿಸಲಾಗಿದ್ದು, ನಡಿಗೆ ಬಳಿಕ ಜಿಲ್ಲೆಯಲ್ಲಿ ಶಾಂತಿ ಹಾಗೂ ಸುವ್ಯವಸ್ಥೆಗಾಗಿ ಜಿಲ್ಲಾಧಿಕಾರಿ ಅವರಿಗೆ ಮನವಿ ಪತ್ರ ಸಲ್ಲಿಸಲಾಗುವುದುʼ ಎಂದು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ʼಅಂದು ಬೆಳಿಗ್ಗೆ 10:30ಕ್ಕೆ ಮಹಮೂದ್ ಗವಾನ್ ಮದರಸಾದಿಂದ ನಡಿಗೆ ಆರಂಭಗೊಂಡು, ಚೌಬಾರಾ, ನಯಾ ಕಮಾನ್, ಬಸವೇಶ್ವರ ವೃತ್ತ, ಮಹಾವೀರ ವೃತ್ತ, ಭಗತ್‍ಸಿಂಗ್ ವೃತ್ತ, ಅಂಬೇಡ್ಕರ್ ವೃತ್ತ, ಶಿವಾಜಿ ವೃತ್ತದ ಮೂಲಕ ಹಾಯ್ದು ಜಿಲ್ಲಾಧಿಕಾರಿ ಕಚೇರಿಗೆ ತಲುಪಿ ಮುಕ್ತಾಯಗೊಳ್ಳಲಿದೆʼ ಎಂದು ಮಾಹಿತಿ ನೀಡಿದ್ದಾರೆ.

ಇದನ್ನೂ ಓದಿ : ಬೀದರ್‌ | ಕನ್ನಡದ ಅಸ್ಮಿತೆಯ ಕವಯಿತ್ರಿ ಜಯದೇವಿತಾಯಿ ಲಿಗಾಡೆ : ಚಂದ್ರಕಾಂತ ಶಾಬಾದಕರ್

ಶಾಂತಿ, ಸಹಬಾಳ್ವೆ ಬಯಸುವ ನಾಗರಿಕರು, ವಿದ್ಯಾರ್ಥಿ, ವಿದ್ಯಾರ್ಥಿನಿಯರು ನಡಿಗೆಯಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಳ್ಳಬೇಕು ಎಂದು ಅವರು ಮನವಿ ಮಾಡಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬೀದರ್ ದಕ್ಷಿಣ | ಜಿಪಂ ಮೀಸಲಾತಿಯಲ್ಲಿ ಪರಿಶಿಷ್ಟ ಜಾತಿಗೆ ಅನ್ಯಾಯ: ಜನಪ್ರತಿನಿಧಿಗಳಿಗೆ ಎಚ್ಚರಿಕೆ

ಬೀದರ್ ದಕ್ಷಿಣ ವಿಧಾನಸಭಾ ಕ್ಷೇತ್ರದ ವ್ಯಾಪ್ತಿಯ ಆರು ಜಿಲ್ಲಾ ಪಂಚಾಯಿತಿ ಕ್ಷೇತ್ರಗಳಲ್ಲಿ...

ಉಡುಪಿ | ಹಿರಿಯ ಸಾಹಿತಿ ಎ.ಎಸ್.ಎನ್. ಹೆಬ್ಬಾರ್ ಅವರಿಗೆ ಸೂಕ್ತ ರಕ್ಷಣೆ ನೀಡಲು ಜಿಲ್ಲಾಧಿಕಾರಿಗೆ ಮನವಿ

ಉಡುಪಿ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತಿನ ಸ್ಥಾಪಕ ಅಧ್ಯಕ್ಷರು, ಹಿರಿಯ ವಕೀಲರು...

ಉಡುಪಿ | ಕಾರ್ಮಿಕರು ಹಕ್ಕು ಮತ್ತು ಸೌಲಭ್ಯಗಳಿಂದ ವಂಚಿತರಾಗದಂತೆ ನೋಡಿಕೊಳ್ಳಿ: ಟಿ.ಎಂ. ಶಾಹಿದ್ ತೆಕ್ಕಿಲ್

ಕಾರ್ಮಿಕರ ಹಿತಾಸಕ್ತಿಯನ್ನು ಕಾಪಾಡುವುದರೊಂದಿಗೆ ಸರ್ಕಾರದ ಕಲ್ಯಾಣ ಕಾರ್ಯಕ್ರಮಗಳು ಅರ್ಹ ಫಲಾನುಭವಿಗಳಿಗೆ ತಲುಪುವಂತೆ...

ಬಾಗೇಪಲ್ಲಿಯಲ್ಲಿ ರಸ್ತೆ ಅಪಘಾತ:ರೈತ ನಂಜಪ್ಪ ಸಾವು

ಕೆಎಸ್‌ಆರ್‌ಟಿಸಿ ಬಸ್ ಡಿಕ್ಕಿ ಹೊಡೆದು ದ್ವಿಚಕ್ರ ವಾಹನದಲ್ಲಿ ಹೊಲಕ್ಕೆ ತೆರಳುತ್ತಿದ್ದ ನಡಂಪಲ್ಲಿ...