ಹೆಚ್ ಡಿ ಕೋಟೆ | ಸಫಾರಿ ಬಂದ್; ಉದ್ಯೋಗಿಗಳಿಗೆ ಸಂಕಷ್ಟ

Date:

ಮೈಸೂರು ಜಿಲ್ಲೆ, ಹೆಗ್ಗಡದೇವನಕೊಟೆ ತಹಶೀಲ್ದಾರ್ ಕಚೇರಿ ಆವರಣದಲ್ಲಿ ಸಫಾರಿ ಬಂದ್ ಮಾಡಿರುವುದರಿಂದ ಸರಿ ಸುಮಾರು ಎರಡು ಸಾವಿರ ಉದ್ಯೋಗಿಗಳಿಗೆ, ಅವರನ್ನೇ ನಂಬಿಕೊಂಡಿರುವ ಕುಟುಂಬಗಳಿಗೆ ಸಂಕಷ್ಟ ಉಂಟಾಗಲಿದೆ ಎಂದು ಪ್ರತಿಭಟನೆ ನಡೆಸಿ, ತಹಶೀಲ್ದಾರ್ ಅವರಿಗೆ ಮನವಿ ನೀಡಿದರು.

- Advertisement -

ನಾಗರಹೊಳೆ ಅಭಯಾರಣ್ಯದಲ್ಲಿ ವನ್ಯಜೀವಿ-ಮಾನವ ಸಂಘರ್ಷ ತಡೆಯುವ ಉದ್ದೇಶದಿಂದ ಇತ್ತೀಚಿಗೆ ಅರಣ್ಯ ಸಚಿವರಾದ ಈಶ್ವರ್ ಬಿ. ಖಂಡ್ರೆ ಅವರು ಸಫಾರಿ ಬಂದ್ ಮಾಡಿ ಆದೇಶ ಹೊರಡಿಸಿದ್ದರು. ಇದರಿಂದಾಗಿ ಪ್ರವಾಸಿಗರು ರೆಸಾರ್ಟ್ಗಳಿಗೆ ಬಾರದ ಹಿನ್ನಲೆಯಲ್ಲಿ ಸಾವಿರಾರು ಉದ್ಯೋಗಿಗಳು ಕೆಲಸ ಕಳೆದುಕೊಳ್ಳುವುದರಿಂದ ಮುಂದೇನು? ಎನ್ನುವ ಆತಂಕಕ್ಕೆ ಒಳಗಾಗಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಗಡುಸಾದ ದನಿಯೊಳಗಿನ ಮೃದು ಮನಸ್ಸು: ʼನಾನಾ ಪಾಟೇಕರ್ʼ ಎಂಬ...

ಅವರ ಗಡುಸಾದ ದನಿಯಲ್ಲಿ ಸಾಮಾನ್ಯ ಮನುಷ್ಯನ ಆಕ್ರೋಶವಿತ್ತು; ಅವರ ತೀಕ್ಷ್ಣ ನೋಟದಲ್ಲಿ ಬದುಕಿನ ಕಹಿ ಸತ್ಯಗಳಿದ್ದವು. ‘ಕ್ರಾಂತಿವೀರ್’ನಲ್ಲಿ ಅನ್ಯಾಯದ ವಿರುದ್ಧ ಸಿಡಿದವರು, ‘ಖಾಮೋಶಿ’ಯಲ್ಲಿ ಮಾತಿಲ್ಲದೆ ಮನಸ್ಸು ತಟ್ಟಿದವರು, ‘ವೆಲ್‌ಕಮ್’ನಲ್ಲಿ ನಗುವಿನ ಹೊಳೆ ಹರಿಸಿದವರು...

ಕೂಲಿಕಾರ್ಮಿಕರ ಮೊಮ್ಮಗಳ ವಿಶ್ವ ವಿಜಯ: ಭಾರತೀಯ ಮೂಲದ ನವಿ...

ವಿಶ್ವಸಂಸ್ಥೆಯ ಮಾನವ ಹಕ್ಕುಗಳ ವಿಭಾಗದ ಮಾಜಿ ಮುಖ್ಯಸ್ಥೆ ಹಾಗೂ ಪ್ರಸ್ತುತ ಅಂತಾರಾಷ್ಟ್ರೀಯ ನ್ಯಾಯಾಲಯದ (ICJ) ನ್ಯಾಯಾಧೀಶರಾಗಿರುವ ದಕ್ಷಿಣ ಆಫ್ರಿಕಾ ಮತ್ತು ಭಾರತೀಯ ಮೂಲದ ನವನೀತಮ್ 'ನವಿ' ಪಿಳ್ಳೈ (85) ಅವರಿಗೆ 2026ನೇ ಸಾಲಿನ...

ಉತ್ತರ ಕನ್ನಡ | ಗ್ರಾಮೀಣ ಮಹಿಳೆಯರ ಸಬಲೀಕರಣಕ್ಕೆ ‘ಅಕ್ಕ...

ಉತ್ತರ ಕನ್ನಡ ಜಿಲ್ಲೆಯಲ್ಲಿ 'ಅಕ್ಕ ಕೆಫೆ' ಯೋಜನೆ ಯಶಸ್ವಿಯಾಗಿ ಮುನ್ನಡೆಯುತ್ತಿದ್ದು, ಗ್ರಾಮೀಣ ಮಹಿಳೆಯರು ಸ್ವಂತ ಉದ್ಯಮ ನಡೆಸಿ ಆರ್ಥಿಕ ಸ್ವಾವಲಂಬನೆ ಸಾಧಿಸಲು ಮತ್ತು ಉದ್ಯಮಿಗಳಾಗಿ ಹೊರಹೊಮ್ಮಲು ಇದು ದಾರಿಮಾಡಿಕೊಟ್ಟಿದೆ. ಸಂಜೀವಿನಿ ಎನ್‌ಆರ್‌ಎಲ್‌ಎಂ ಯೋಜನೆಯಡಿ...

ತಾಲ್ಲೂಕು ಕಚೇರಿ ಆವರಣದಲ್ಲಿ ವಾಟರ್ ವುಡ್ ಅಂಡ್ ರೆಸಾರ್ಟ್, ಸಾರಾಯ್ ರೆಸಾರ್ಟ್, ಸಂದೇಶ್ ವಾಟರ್ ಎಡ್ಜ್ ಕಾವ್ ರೆಸಾರ್ಟ್, ರೆಡ್ ಅರ್ಥ್, ಡಿಸ್ಕವರಿ ವಿಲೇಜ್, ಕಬಿನಿ ಲೇಕ್, ವೈಲ್ಡ್ ಅರೇಂಜ್ ಕಬಿನಿ ಲೇಕ್ ವ್ಯೂ, ಕಬಿನಿ ಸ್ಟ್ರಿಂಗ್ಸ್, ಫೈರ್ ಫೈಲ್ಸ್ ಸೇರಿದಂತೆ 12 ರೆಸಾರ್ಟ್ ಗಳ ಉದ್ಯೋಗಿಗಳು ಪ್ರತಿಭಟನೆ ನಡೆಸಿ ಸಫಾರಿ ಸ್ಥಗಿತ ವಾಪಸ್ ಪಡೆಯುವಂತೆ ಒತ್ತಾಯಿಸಿದರು.

ಹೆಗ್ಗಡದೇವನಕೋಟೆ ತಾಲ್ಲೂಕಿನಲ್ಲಿ ಯಾವುದೇ ಕೈಗಾರಿಕೆ, ಕಾರ್ಖಾನೆ ಇಲ್ಲದಿರುವುದರಿಂದ ರೆಸಾರ್ಟ್ ಗಳು ಉದ್ಯೋಗದ ಆಸರೆಯಾಗಿವೆ. ಪ್ರಕೃತಿ ಸಿರಿ ಹೊಂದಿರುವುದರಿಂದ ಪ್ರವಾಸಿಗರು ಹೆಚ್ಚಿನ ಮಟ್ಟದಲ್ಲಿ ಬರುತ್ತಾರೆ. ಇದರಿಂದಾಗಿ ರೆಸಾರ್ಟ್ ನಡೆಯುತ್ತಿತ್ತು. ಉದ್ಯೋಗ ಅವಕಾಶ ಲಭಿಸಿತ್ತು. ಇದೀಗ ಅದನ್ನು ನಿಷೇಧಿಸಲಾಗಿದೆ. ಈಗ ಪ್ರವಾಸಿಗರು ಬರದೇ ಬಿಕೋ ಎನ್ನುತ್ತಿವೆ.

ಈ ಸುದ್ದಿ ಓದಿದ್ದೀರಾ? ಮಳವಳ್ಳಿ | ಕಾಲುವೆಗೆ ಬಿದ್ದಿದ್ದ ಕಾಡಾನೆ ರಕ್ಷಣೆ

ಹೀಗೇ ಮುಂದುವರೆದರೆ ರೆಸಾರ್ಟ್ ಮುಚ್ಚುವ ಪರಿಸ್ಥಿತಿ ನಿರ್ಮಾಣವಾಗುತ್ತದೆ. ಇದನ್ನೇ ನಂಬಿ ಜೀವನ ನಡೆಸುತ್ತಿರುವ ಕುಟುಂಬಗಳ ಪರಿಸ್ಥಿತಿಯನ್ನು ಆಲೋಚಿಸದೆ ಆದೇಶ ಮಾಡಲಾಗಿದೆ. ಇದರಿಂದ ಕುಟುಂಬಗಳು ಬೀದಿಪಾಲಾಗುವ ಸಾಧ್ಯತೆ ಹೆಚ್ಚಿದ್ದು ಕೂಡಲೇ ಸಫಾರಿ ಬಂದ್ ಆದೇಶ ವಾಪಸ್ ಪಡೆಯಬೇಕು ಎಂದು ಆಗ್ರಹಿಸಿದ್ದಾರೆ.

ಈ ವಿಶೇಷ ಸುದ್ದಿ ಓದಿದ್ದೀರಾ? ಶ್ರೀರಂಗಪಟ್ಟಣ | ಪುರಾತತ್ವ ಇಲಾಖೆಯ ನಿರ್ಲಕ್ಷ್ಯ; ಕೋಟೆ ಪ್ರದೇಶದಲ್ಲಿ ನಿಯಮ ಉಲ್ಲಂಘನೆಯ ಆರೋಪ

ಪ್ರತಿಭಟನೆಯಲ್ಲಿ ಹೊಸಮಾಳ ಸ್ವಾಮಿ, ಯಶೋಧ, ದೇವಯ್ಯ, ಸಲೀಂ, ಷಣ್ಮುಗ, ಚಂದ್ರು, ಶಿವಪ್ಪ, ಮೂರ್ತಿ, ವಿಜಯಕುಮಾರ್, ಚಿಕ್ಕಣ್ಣ, ಕೃಷ್ಣ, ಪ್ರತಾಪ್ ಸಿಂಹ, ದೇವೇಶ, ರವಿ, ರಾಕಿ, ಮಹೇಶ್, ಗುರುಸ್ವಾಮಿ ಸೇರಿದಂತೆ ನೂರಾರು ಜನ ಇದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಆಡಳಿತದಲ್ಲಿ ಪಾರದರ್ಶಕತೆಗೆ ಮಾಹಿತಿ ಹಕ್ಕು ಕಾಯ್ದೆ ಪ್ರಮುಖ ಅಸ್ತ್ರ: ಹಣಮಂತ ಶಿಂದೆ

ಮಾಹಿತಿ ಹಕ್ಕು ಕಾಯ್ದೆಯ ಪರಿಣಾಮಕಾರಿ ಬಳಕೆ, ಆಡಳಿತದಲ್ಲಿ ಪಾರದರ್ಶಕತೆ ಹಾಗೂ ಸಾಮಾಜಿಕ...

ಯತ್ನಾಳ್ ವಿರುದ್ಧ ಹೊರ್ತಿ ವಾಗ್ದಾಳಿ; ಅರ್ಜಿ ವಾಪಸ್ ಪಡೆದ ಹಿಂದಿನ ಸತ್ಯ ಬಹಿರಂಗಪಡಿಸಲು ಸವಾಲು

ಮತದಾರರ ಪಟ್ಟಿಯಿಂದ ಹೆಸರುಗಳನ್ನು ತೆಗೆದುಹಾಕುವಂತೆ ಶಾಸಕ ಬಸನಗೌಡ ಪಾಟೀಲ ಯತ್ನಾಳ್ ಬರೆದಿರುವ...

ಆರೋಗ್ಯ ಸುರಕ್ಷತೆಗೆ ಆದ್ಯತೆ ನೀಡಿ: ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ಸೂಚನೆ

ಕೊಡಗು ಜಿಲ್ಲೆಯಲ್ಲಿ ಡೆಂಗ್ಯೂ, ಮಲೇರಿಯಾ ಸೇರಿದಂತೆ ಸಾಂಕ್ರಾಮಿಕ ರೋಗಗಳ ನಿಯಂತ್ರಣಕ್ಕೆ ಅಗತ್ಯ...

ಉಡುಪಿ | ಯುವಜನರೇ, ನಿರಂತರ ಪರಿಶ್ರಮದಿಂದ ಯಶಸ್ಸಿನ ಮೆಟ್ಟಿಲೇರಿ: ಪ್ರಕಾಶ್ ಶೆಟ್ಟಿ

ಯುವಜನರು ನಿರಂತರ ಪ್ರಯತ್ನದ ಮೂಲಕ ಜೀವನದಲ್ಲಿ ಒಂದೊಂದೇ ಮೆಟ್ಟಿಲು ಏರುತ್ತಾ ಸಾಗಿದರೆ...