ಚಾಮರಾಜನಗರ | ವನ್ಯಜೀವಿ-ಮಾನವ ಸಂಘರ್ಷ ತಹಬಂದಿಗೆ ಬಾರದಿದ್ದರೆ ಸಫಾರಿ ಬಂದ್: ಈಶ್ವರ ಖಂಡ್ರೆ

Date:

ಚಾಮರಾಜನಗರದ ಜಿಲ್ಲಾ ಪಂಚಾಯ್ತಿ ಸಭಾಂಗಣದಲ್ಲಿ ನಡೆದ ಅರಣ್ಯ, ಕಂದಾಯ ಮತ್ತು ಪೊಲೀಸ್ ಇಲಾಖೆಯ ಅಧಿಕಾರಿಗಳ ಸಭೆಯಲ್ಲಿ “ಬಂಡೀಪುರ, ಮೈಸೂರು ಜಿಲ್ಲೆಯಲ್ಲಿ ಮಾನವ-ವನ್ಯಜೀವಿ ಸಂಘರ್ಷ ಹೆಚ್ಚುತ್ತಿದ್ದು, ಇದು ತಹಬಂದಿಗೆ ಬಾರದಿದ್ದರೆ ಸಫಾರಿಯನ್ನು ಸಂಪೂರ್ಣ ಬಂದ್ ಮಾಡುವುದಾಗಿ” ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ ಸಚಿವ ಈಶ್ವರ ಬಿ ಖಂಡ್ರೆ ಎಚ್ಚರಿಕೆ ನೀಡಿದ್ದಾರೆ.

- Advertisement -

“ವನ್ಯಜೀವಿ-ಮಾನವ ಸಂಘರ್ಷ ಇರುವ ಸ್ಥಳದಲ್ಲಿ ಹೆಚ್ಚಿನ ಸಿಬ್ಬಂದಿ ನಿಯೋಜಿಸಲು ಸಿಬ್ಬಂದಿ ಕೊರತೆ ಎನ್ನುತ್ತೀರಿ. ಹಾಗಾದರೆ, ಸಫಾರಿಗೆ ನಿಯೋಜಿಸಿರುವ ಸಿಬ್ಬಂದಿಯನ್ನೇ ಅಲ್ಲಿಗೆ ನಿಯೋಜಿಸಬೇಕಾಗುತ್ತದೆ. ಮಾನವ-ವನ್ಯಜೀವಿ ಸಂಘರ್ಷ ತಪ್ಪಿಸಲು ಅರಣ್ಯ ಇಲಾಖೆ ಕಂದಾಯ ಮತ್ತು ಪೊಲೀಸ್ ಇಲಾಖೆಯೊಂದಿಗೆ ಸಮನ್ವಯದಿಂದ ಕಾರ್ಯ ನಿರ್ವಹಿಸಬೇಕು. ಸಮನ್ವಯದ ಕೊರತೆ, ಪರಸ್ಪರ ದೋಷಾರೋಪವನ್ನು ಸರ್ಕಾರ ಕ್ಷಮಿಸುವುದಿಲ್ಲ ಸಬೂಬುಗಳಿಗೆ ಅವಕಾಶವಿಲ್ಲ. ಎಲ್ಲಾ ಇಲಾಖೆಗಳೂ ಜೊತೆಗೂಡಿ ಮಾನವ- ವನ್ಯಜೀವಿ ಸಂಘರ್ಷ ನಿಯಂತ್ರಿಸಬೇಕು” ಎಂದು ಸೂಚಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಬೆಟ್ಟದಷ್ಟಾದ ಅತ್ಯಾಚಾರ ಪ್ರಕರಣಗಳು – ತೆವಳುತ್ತಿರುವ ನ್ಯಾಯದಾನ

ಪೊಲೀಸರೆಂದು ನಟಿಸಿ ಬೆದರಿಸುವುದು, ನಿರ್ಜನ ಪ್ರದೇಶಗಳಲ್ಲಿ ತೋಳಗಳಂತೆ ಕಾದು ಹಲ್ಲೆಗೈದು ಸಾಮೂಹಿಕ ಅತ್ಯಾಚಾರ ನಡೆಸಿ ಕೊಂದೆಸೆಯುವುದು, ಕಿಂಚಿತ್ತೂ ಭಯವಿಲ್ಲದೆ ಕೃತ್ಯದ ವಿಡಿಯೋ ತುಣುಕುಗಳನ್ನು ಸಾಮಾಜಿಕ ಜಾಲತಾಣಗಳಲ್ಲಿ ಹರಿಬಿಡುವುದಲ್ಲದೆ, ಸಂತ್ರಸ್ತರ ಗುರುತು ಬಹಿರಂಗಪಡಿಸುವ ಪ್ರವೃತ್ತಿ...

ಶಾಮನೂರು ಫ್ಯಾಮಿಲಿಗೆ ಸಚಿವ ಬಸವಂತಪ್ಪ ಕೈ ಮುಗಿಯುವ ಅಗತ್ಯವಿದೆಯೇ?

ಬಸವಂತಪ್ಪನವರನ್ನು ಗೆಲ್ಲಿಸಿದ್ದು, ಕಾಂಗ್ರೆಸ್ಸಿನ ಸಾಂಪ್ರದಾಯಿಕ ಮತದಾರರು. ಶಾಮನೂರು ಕುಟುಂಬದ ಸುತ್ತ ಕಟ್ಟಿರುವ ಕಲ್ಪಿತ ಬಲವನ್ನು ಮೀರಿ, ಬಸವಂತಪ್ಪ ಬೆಳೆಯಬೇಕು ಎಂಬುದು ಕ್ಷೇತ್ರದ ಮತದಾರರ ಅಭಿಪ್ರಾಯ. ಪೌರಕಾರ್ಮಿಕರ ಮಗನಾಗಿ ಹುಟ್ಟಿ, ಸಚಿವ ಸ್ಥಾನದವರೆಗೆ ಬೆಳೆದವರು ಕೆ.ಎಸ್....

ಪಾಕ್‌ಗೆ ತಕ್ಕ ಉತ್ತರ ನೀಡಿದ್ದಾಗಿ ಎದೆ ತಟ್ಟಿಕೊಳ್ಳುವ ಮೋದೀಜಿ,...

ಬಾಲಾಕೋಟ್‌ನಿಂದ ಇತ್ತೀಚಿನ 'ಆಪರೇಷನ್ ಸಿಂಧೂರ್'ವರೆಗೆ ಪಾಕಿಸ್ತಾನಕ್ಕೆ ತಕ್ಕ ಉತ್ತರ ನೀಡಿದ್ದಾಗಿ ಪ್ರಧಾನಿ ಮೋದಿ ನೇತೃತ್ವದ ಬಿಜೆಪಿ ಸರ್ಕಾರ ಎದೆ ತಟ್ಟಿಕೊಳ್ಳುತ್ತಿದೆ. ಶತೃ ದೇಶವನ್ನು ಮಣಿಸುವುದು ಯಾರಿಗಾದರೂ ಹೆಮ್ಮೆಯೇ. ಆದರೆ, ದೇಶದ ಅಖಂಡತೆಗೆ ಅತಿ...

ಆನೆ, ಹುಲಿಗಳ ಸಂಖ್ಯೆಯಲ್ಲಿ ಹೆಚ್ಚಳವಾಗುತ್ತಿದೆ. ಇದು ನಿಮಗೂ ತಿಳಿದಿದೆ. ಹೆಚ್ಚುತ್ತಿರುವ ಪ್ರಾಣಿಗಳಿಗೆ ಅನುಗುಣವಾಗಿ ಅರಣ್ಯ ಪ್ರದೇಶ ಹೆಚ್ಚಳ ಮಾಡಲು ಸಾಧ್ಯವಿಲ್ಲ. ಆದರೆ, ಇರುವ ಕಾಡಿನಲ್ಲೇ ವನ್ಯಜೀವಿಗಳಿಗೆ ಸೂಕ್ತ ಆಹಾರ ಸಿಗುವಂತೆ ಮಾಡಲು ಕಾರ್ಯಯೋಜನೆ ರೂಪಿಸಿ ಎಂದು ಸ್ಪಷ್ಟ ಸೂಚನೆ ನೀಡಿದರು. ಮಾಂಸಹಾರಿ ಕಾಡು ಪ್ರಾಣಿಗಳಿಗೆ ಕಾಡಿನೊಳಗೆ ಜಿಂಕೆ, ಕಡವೆ ಇತ್ಯಾದಿ ಲಭಿಸಬೇಕಾದರೆ, ಸಸ್ಯಹಾರಿ ಪ್ರಾಣಿಗಳಿಗೆ ಹುಲ್ಲು, ಸೊಪ್ಪು ಲಭ್ಯವಾಗಬೇಕು. ಈ ನಿಟ್ಟಿನಲ್ಲಿ ಅರಣ್ಯಾಧಿಕಾರಿಗಳು ಲಾಂಟನಾ, ಸನ್ನಾ ಇತ್ಯಾದಿ ಕಳೆ ತೆಗೆದು ಹೆಚ್ಚು ಸೊಪ್ಪು, ಹುಲ್ಲು ಲಭಿಸುವಂತೆ ಮಾಡಬೇಕು ಎಂದು ಸೂಚಿಸಿದರು.

ಈ ಸುದ್ದಿ ಓದಿದ್ದೀರಾ? ಚಾಮರಾಜನಗರ | ಮಾನವ-ಪ್ರಾಣಿ ಸಂಘರ್ಷ ತಡೆಗೆ ಪರಿಣಾಮಕಾರಿ ಕ್ರಮ : ಈಶ್ವರ ಖಂಡ್ರೆ

ಇತ್ತೀಚೆಗೆ ಸರಗೂರಿನಲ್ಲಿ ಮೃತಪಟ್ಟ ವ್ಯಕ್ತಿಯ ಪಾರ್ಥಿವ ಶರೀರದ ಮರಣೋತ್ತರ ಪರೀಕ್ಷೆಯನ್ನು ಸರಗೂರು ಅಥವಾ ಎಚ್.ಡಿ.ಕೋಟೆ ಇಲ್ಲವೆ ನಂಜನಗೂಡಿನಲ್ಲಿ ಮಾಡಿಸಬಹುದಾಗಿತ್ತು. ಮೈಸೂರಿಗೆ ತರುವ ಅಗತ್ಯವೇನಿತ್ತು. ಅನಗತ್ಯವಾಗಿ ಸರ್ಕಾರದ ಮೇಲೆ ಸಚಿವರ ಮೇಲೆ ಆರೋಪ ಬರುವಂತೆ ಮಾಡಬೇಡಿ. ಪ್ರಾಮಾಣಿಕವಾಗಿ ಮತ್ತು ದಕ್ಷತೆಯಿಂದ ಕಾರ್ಯ ನಿರ್ವಹಿಸಿ. ಮಾನವ-ವನ್ಯಜೀವಿ ಸಂಘರ್ಷದಲ್ಲಿ ಯಾರೂ ಮೃತಪಡುವುದು ಬೇಡ. ಒಂದೊಮ್ಮೆ ಯಾರಾದರೂ ಮೃತಪಟ್ಟರೆ, ಜಿಲ್ಲಾಡಳಿತ, ಪೊಲೀಸ್ ಇಲಾಖೆ, ಅರಣ್ಯ ಇಲಾಖೆ ಹಾಗೂ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯು ಜವಾಬ್ದಾರಿಯುತವಾಗಿ ಕಾರ್ಯ ನಿರ್ವಹಿಸಬೇಕು. ತ್ವರಿತವಾಗಿ ಮರಣೋತ್ತರ ಪರೀಕ್ಷೆ ನಡೆಸಿ ಮೃತರ ಕುಟುಂಬಕ್ಕೆ ಆದಷ್ಟು ಶೀಘ್ರ ಪಾರ್ಥಿವ ಶರೀರ ಒಪ್ಪಿಸಿ, ಅಂತ್ಯಕ್ರಿಯೆ ಆಗುವವರೆಗೂ ಇದ್ದು ಪರಿಸ್ಥಿತಿ ನಿಯಂತ್ರಣದಲ್ಲಿಡಬೇಕು ಎಂದು ಸೂಚಿಸಿದರು.

ಮಾನವ ವನ್ಯಜೀವಿ ಸಂಘರ್ಷ ನಿಯಂತ್ರಣಕ್ಕೆ 8 ಅಂಶದ ಕಾರ್ಯಯೋಜನೆ:

  • ಮಾನವ ವನ್ಯಜೀವಿ ಸಂಘರ್ಷ ಇರುವ ಪ್ರದೇಶಗಳನ್ನು ಗುರುತಿಸಬೇಕು ಮತ್ತು ಯಾವ ಸ್ವರೂಪದ ಸಮಸ್ಯೆ ಸಂಘರ್ಷ ಇದೆ ಎಂದು ಪಟ್ಟಿ ಮಾಡಬೇಕು.
  • ಮಾನವ ಸಂಪನ್ಮೂಲದ ಸಮರ್ಪಕ ನಿರ್ವಹಣೆ ಮಾಡಬೇಕು. ಸಂಘರ್ಷದ ತೀವ್ರತೆಯ ಆಧಾರದ ಮೇಲೆ ಅಧಿಕಾರಿ ಸಿಬ್ಬಂದಿಯನ್ನು ನಿಯೋಜನೆ ಮಾಡಬೇಕು. ಅಗತ್ಯ ಬಿದ್ದರೆ ಸಮೀಪದ ವಲಯದ ಅಧಿಕಾರಿ ಸಿಬ್ಬಂದಿಯನ್ನೂ ನಿಯೋಜಿಸಬೇಕು.
  • ಗಸ್ತು ಹೆಚ್ಚಿಸಬೇಕು. ಗಸ್ತು ವಾಹನಗಳಿಗೆ ಕಡ್ಡಾಯವಾಗಿ ಜಿಪಿಎಸ್ ಅಳವಡಿಸಬೇಕು. ಅರಣ್ಯದ ಅಂಚಿನ ಗ್ರಾಮಗಳಲ್ಲಿ ಗಸ್ತು ಹೆಚ್ಚಳ ಮಾಡಿ, ಗಸ್ತು ರಿಜಿಸ್ಟರ್ ನಿರ್ವಹಣೆ ಮಾಡಬೇಕು.
  • ಹಿರಿಯ ಅಧಿಕಾರಿಗಳು ನಿಯಮಿತವಾಗಿ ಅರಣ್ಯದಂಚಿನ ಅದರಲ್ಲೂ ಮಾನವ-ವನ್ಯಜೀವಿ ಸಂಘರ್, ಇರುವ ಗ್ರಾಮದಲ್ಲಿ ವಾಸ್ತವ್ಯ ಮಾಡಿ, ಸಮಸ್ಯೆ ಪರಿಹರಿಸಬೇಕು.
  • ಸ್ಥಳೀಯರ ಬೆಂಬಲ ಇಲ್ಲದೆ ಮಾನವ-ವನ್ಯಜೀವಿ ಸಂಘರ್ಷ ನಿಯಂತ್ರಣ ಅಸಾಧ್ಯ. ಈ ನಿಟ್ಟಿನಲ್ಲಿ ಅರಣ್ಯದಂಚಿನ ಗ್ರಾಮಗಳ ಉತ್ಸಾಹಿ ಯುವಕರು ಮತ್ತು ಹಿರಿಯರನ್ನು ಗುರುತಿಸಿ ಅವರಿಗೆ ಅರಣ್ಯ ಮಿತ್ರ ಎಂದು ಪರಿಗಣಿಸಿ ಗಸ್ತು, ವನ್ಯಜೀವಿ ಸೆರೆ ಕಾರ್ಯಾಚರಣೆ ವೇಳೆ ಅವರ ಸೇವೆ ಬಳಸಿಕೊಳ್ಳಬೇಕು.
  • ವನ್ಯಜೀವಿ ಸಂರಕ್ಷಣೆ ಕಾರ್ಯಾಚರಣೆ, ವನ್ಯಜೀವಿಗಳು ಸಂಚರಿಸುವ ಗ್ರಾಮದ ಬಳಿ 24×7 ವಾಹನ ಮತ್ತು ಸಿಬ್ಬಂದಿ ಲಭ್ಯವಾಗುವಂತೆ ನೋಡಿಕೊಳ್ಳಬೇಕು.
  • ವನ್ಯಜೀವಿ ಸೆರೆ, ವನ್ಯಜೀವಿ ದಾಳಿ ಮಾಡಿದಾಗ ಏನು ಮಾಡಬೇಕು, ವನ್ಯಜೀವಿ ಕಾಣಿಸಿಕೊಂಡಾಗ ಯಾವ ರೀತಿ ಸ್ಪಂದಿಸಬೇಕು ಎಂಬ ಬಗ್ಗೆ ಗ್ರಾಮದ ಯುವಕರಿಗೆ ಮತ್ತುಮಕ್ಕಳಿಗೆ ಅಣಕು ಪ್ರದರ್ಶನಗಳ ಮೂಲಕ ಜಾಗೃತಿ ಮೂಡಿಸಬೇಕು.
  • ಜಿಲ್ಲಾ ಮಟ್ಟದಲ್ಲಿ ಸಮನ್ವಯ ಸಮಿತಿ ರಚಿಸಬೇಕು ಮತ್ತು ತಾಲೂಕು ಮಟ್ಟದಲ್ಲಿ ಉಪ ಸಮಿತಿ ರಚಿಸಿ ವಿವಿಧ ಇಲಾಖೆಗಳ ನಡುವೆ ಸಮನ್ವಯತೆ ಕಾಯ್ದುಕೊಳ್ಳಬೇಕು. ಈ ಸಮಿತಿ ನಿಯಮಿತವಾಗಿ ಸಭೆ ನಡೆಸಿ ಮಾನವ ವನ್ಯಜೀವಿ ಸಂಘರ್ಷ ನಿಯಂತ್ರಣಕ್ಕೆ ಶ್ರಮಿಸಬೇಕು.

ಈ ವಿಶೇಷ ಸುದ್ದಿ ಓದಿದ್ದೀರಾ? ಹೊಲಯ ಸಮುದಾಯದ ವಿಶಿಷ್ಟ ಸಾಂಸ್ಕೃತಿಕ ಆಚರಣೆ ʼಬಲಿ ಚಕ್ರವರ್ತಿ ಚಟ್ಟʼದ ರಹಸ್ಯ ಗೊತ್ತೇ?

ಸಭೆಯಲ್ಲಿ ಸಚಿವರಾದ ಕೆ. ವೆಂಕಟೇಶ್, ಡಾ. ಎಚ್.ಸಿ. ಮಹದೇವಪ್ಪ, ಲೋಕಸಭಾ ಸದಸ್ಯ ಸುನೀಲ್ ಬೋಸ್, ಶಾಸಕರಾದ ಸಿ. ಪುಟ್ಟರಂಗಶೆಟ್ಟಿ, ಎ.ಆರ್. ಕೃಷ್ಣಮೂರ್ತಿ, ಎಂ.ಆರ್. ಮಂಜುನಾಥ್, ಎಚ್.ಎಂ. ಗಣೇಶ್ ಪ್ರಸಾದ್, ದರ್ಶನ್ ಧ್ರುವ ನಾರಾಯಣ್, ಅನಿಲ್ ಚಿಕ್ಕಮಾದು, ಸಿ.ಎನ್. ಮಂಜೇಗೌಡ ಹಾಗೂ ಅರಣ್ಯ ಇಲಾಖೆಯ ಉನ್ನತಾಧಿಕಾರಿಗಳು, ಮೈಸೂರು, ಚಾಮರಾಜನಗರ ಜಿಲ್ಲೆಯ ಜಿಲ್ಲಾಧಿಕಾರಿಗಳು ಮತ್ತು ಉನ್ನತಾಧಿಕಾರಿಗಳು ಇದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ರಾಯಚೂರು | ಈಜಲು ತೆರಳಿದ್ದಾಗ ನೀರಿನಲ್ಲಿ ಮುಳುಗಿ ಯುವಕ ಸಾವು

ಈಜಲು ತೆರಳಿದ್ದ ಯುವಕ ನೀರಿನಲ್ಲಿ ಮುಳುಗಿ ಮೃತಪಟ್ಟ ಘಟನೆ ರಾಯಚೂರು ತಾಲೂಕಿನ...

ರಾಯಚೂರು | ತೆರಿಗೆ ವಸೂಲಾತಿಯಲ್ಲಿ ಲೋಪ: ಇಬ್ಬರು ಪಿಡಿಓ ಅಮಾನತು, ಮೂವರು ಕರವಸೂಲಿಗಾರರ ವಜಾಕ್ಕೆ ವಿಚಾರಣೆ

ತೆರಿಗೆ ವಸೂಲಾತಿಯಲ್ಲಿ ನಿರ್ಲಕ್ಷ್ಯ ಹಾಗೂ ಕರ್ತವ್ಯ ಲೋಪ ಎಸಗಿರುವುದು ಪತ್ತೆಯಾದ ಹಿನ್ನೆಲೆಯಲ್ಲಿ...

ಹಾವೇರಿ | ಪುಸ್ತಕ ಓದಿನ ಪರಂಪರೆಯನ್ನು ಮರು ಕಟ್ಟಬೇಕಾಗಿದೆ: ಶೋಭಾ ಜಾಗಟಗೇರಿ

"ಮುಷ್ಠಿಯಲ್ಲಿ ಇರುವ ಮೊಬೈಲ್ ಜೀವನ ಪಾಠವನ್ನ್ನು ಕಲಿಸುವುದಕ್ಕಿಂತ ದಾರಿ ತಪ್ಪಿಸುವ ಕೆಲಸ...

ಉತ್ತರ ಕನ್ನಡ | 3.24 ಲಕ್ಷ ಪಡಿತರ ಚೀಟಿ ಸದಸ್ಯರ ಇ-ಕೆವೈಸಿ ಬಾಕಿ; ಅಕ್ಟೋಬರ್ 20ರೊಳಗೆ ಪೂರ್ಣಗೊಳಿಸಲು ಮನವಿ

ಉತ್ತರ ಕನ್ನಡ ಜಿಲ್ಲೆಯ ಪಡಿತರ ಚೀಟಿಗಳಲ್ಲಿರುವ 5,69,044 ಸದಸ್ಯರು ಐದು ವರ್ಷಗಳ...