ಬೀದರ್‌ | ಅಪಘಾತ ತಗ್ಗಿಸಲು ʼರಸ್ತೆ ಸುರಕ್ಷತಾ ಓಟʼ: ಎಸ್‌ಪಿ ಚನ್ನಬಸವಣ್ಣ

Date:

  • ಜಿಲ್ಲೆಯಲ್ಲಿ ಕಳೆದ ವರ್ಷ 332, ಪ್ರಸಕ್ತ ವರ್ಷ 210 ಜನ ರಸ್ತೆ ಅಪಘಾತದಲ್ಲಿ ಮರಣ
  • ಪ್ರತಿ ಕುಟುಂಬದ ಸದಸ್ಯರು ರಸ್ತೆ ಸುರಕ್ಷತಾ ನಿಯಮಗಳನ್ನು ಪಾಲಿಸುವಂತೆ ಸಲಹೆ

ಬೀದರ ಜಿಲ್ಲೆಯಲ್ಲಿ ನಡೆಯುತ್ತಿರುವ ರಸ್ತೆ ಅಪಘಾತ ಪ್ರಮಾಣ ತಗ್ಗಿಸುವ ನಿಟ್ಟಿನಲ್ಲಿ, ಜನರಿಗೆ ರಸ್ತೆ ಸುರಕ್ಷತಾ ನಿಯಮ ಪಾಲಿಸುವಂತೆ ಪ್ರೇರೆಪಿಸುವ ಉದ್ದೇಶದಿಂದ ಜಿಲ್ಲೆಯ ವಿವಿಧ ಸಂಘ-ಸಂಸ್ತೆಗಳ ಸಹಕಾರದೊಂದಿಗೆ ರಸ್ತೆ ಸುರಕ್ಷತಾ ಓಟ ಏರ್ಪಡಿಸಲಾಗಿದೆ ಎಂದು ಬೀದರ ಜಿಲ್ಲಾ ಪೊಲೀಸ ವರಿಷ್ಠಾಧಿಕಾರಿ ಚನ್ನಬಸವಣ್ಣ ಎಸ್.ಎಲ್. ಹೇಳಿದರು.

- Advertisement -

ರವಿವಾರ ಬೀದರ ಐತಿಹಾಸಿಕ ಕೋಟೆ ಆವರಣದಲ್ಲಿ ಜಿಲ್ಲೆಯಲ್ಲಿ ರಸ್ತೆ ಅಪಘಾತ ಪ್ರಮಾಣ ತಗ್ಗಿಸುವ ಉದ್ದೇಶದಿಂದ ಆಯೋಜಿಸಿದ ರಸ್ತೆ ಸುರಕ್ಷತಾ ಓಟ ಕಾರ್ಯಕ್ರಮದಲ್ಲಿ ವಿಜೇತರಾದವರಿಗೆ ಬಹುಮಾನ ವಿತರಿಸಿ ಮಾತನಾಡಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಬ್ರಿಟಿಷ್ ಕಾಲದ ʼಗುಲಾಮಗಿರಿʼ ಕಾನೂನುಗಳೇ ಇಂದಿನ ಪೊಲೀಸ್‌ ವ್ಯವಸ್ಥೆಯ...

ಸ್ವಾತಂತ್ರ್ಯ ಬಂದು ದಶಕಗಳೇ ಕಳೆದಿದ್ದರೂ, ನಾವಿನ್ನೂ ಬ್ರಿಟಿಷರು ಭಾರತೀಯರನ್ನು ದಮನ ಮಾಡಲು ರೂಪಿಸಿದ 1861ರ ಪೊಲೀಸ್ ಕಾಯಿದೆಯ ನೆರಳಿನಲ್ಲೇ ಬದುಕುತ್ತಿದ್ದೇವೆಯೇ? ಖಾಕಿ ಪಡೆಯನ್ನು 'ಪ್ರಜೆಗಳ ರಕ್ಷಕ'ನಾಗಿಸಬೇಕಿದ್ದ ವ್ಯವಸ್ಥೆ, ಇಂದಿಗೂ ರಾಜಕಾರಣಿಗಳ ಕೈಗೊಂಬೆಯಾಗಿ ಉಳಿದುಕೊಳ್ಳಲು...

ಯಾರು ಹಿತವರು ಈ ಇಬ್ಬರೊಳಗೆ? ನೇಹಾ ಬೋರಾ ಅಭಿಜಿತ್...

“ಹೋಲಿಕೆ ಬೇಡ, ಒಗ್ಗಟ್ಟು ಬೇಕು. ನಾವೆಲ್ಲರೂ ಒಟ್ಟಾಗಿ ಚುನಾವಣಾ ಆಯೋಗದ ಅಕ್ರಮಗಳ ವಿರುದ್ಧ ಹೋರಾಡಬೇಕು” ಎಂದು ನೇಹಾ ಬರೆದರೆ, ಅದಕ್ಕೆ ಅಭಿಜೀತ್ ಉತ್ತರ- “ಇಂಕ್ವಿಲಾಬ್ ಜಿಂದಾಬಾದ್” ನೇಹಾ ಬೋರಾ ಮತ್ತು ಅಭಿಜಿತ್ ದೀಪ್ಕೆ ನಡುವೆ...

ಸ್ವತಂತ್ರ ಸಾಂವಿಧಾನಿಕ ಸಂಸ್ಥೆಗಳ ಮೇಲಿನ ನಂಬಿಕೆಯನ್ನು ಕಸಿದುಕೊಳ್ಳುತ್ತಿರುವ ಚುನಾವಣಾ...

ನ್ಯಾಯಾಲಯ ಮತ್ತು ಚುನಾವಣಾ ಆಯೋಗಗಳ 'ಸ್ವತಂತ್ರತೆ' ಎಂಬ ಮುಖವಾಡವೇ ಈಗ ಸರ್ಕಾರಕ್ಕೆ ರಕ್ಷಣಾ ಕವಚವಾಗಿ ಕೆಲಸ ಮಾಡುತ್ತಿದೆ. ಹೀಗಾಗಿ ಇವತ್ತು ವಿರೋಧ ಪಕ್ಷಗಳ ಆಕ್ರೋಶವೆಲ್ಲವೂ ಸಾಂವಿಧಾನಿಕ ಸಂಸ್ಥೆಗಳ ಕಡೆಗೆ ತಿರುಗಿದೆ. ಸರ್ಕಾರ ತೀರಾ...

“ಜಿಲ್ಲೆಯಲ್ಲಿ ಕಳೆದ ವರ್ಷ 332, ಪ್ರಸಕ್ತ ವರ್ಷ 210 ಜನ ರಸ್ತೆ ಅಪಘಾತದಲ್ಲಿ ಮರಣ ಹೊಂದಿದ್ದಾರೆ. ಇವರ ಸಾವಿಗೆ ಕಾರಣ ಕೆದಕಿದಾಗ ಇವರು ರಸ್ತೆ ಸುರಕ್ಷತಾ ನಿಯಮಗಳಾದ ಹೆಲ್ಮೆಟ್ ಧರಿಸದೆ ಇರುವುದು, ಕಾರು ಚಲಾಯಿಸುವಾಗಿ ಸೀಟ್‌ಬೆಲ್ಟ್ ಧರಿಸದೆ ಇರುವುದು ಮುಖ್ಯಕಾರಣ ಎಂದು ತಿಳಿದುಬಂದಿದೆ. ಈ ಹಿನ್ನೆಲೆಯಲ್ಲಿ ಇಂದು ರಸ್ತೆ ಸುರಕ್ಷತಾ ಓಟ ಆಯೋಜನೆ ಮಾಡಲಾಗಿದೆ.ಈ ಓಟದಲ್ಲಿ ಭಾಗವಹಿಸಿದ ಪ್ರತಿಯೊಬ್ಬರು ರಸ್ತೆ ಸುರಕ್ಷತಾ ನಿಯಮಗಳನ್ನು ಪಾಲಿಸುವದರ ಜೊತೆಗೆ ತಮ್ಮ ಕುಟುಂಬದ ಪ್ರತಿ ಸದಸ್ಯರಿಗೂ ನಿಯಮಗಳನ್ನು ಪಾಲಿಸುವಂತೆ ತಿಳಿಹೇಳಬೇಕು” ಎಂದು ಸಲಹೆ ನೀಡಿದರು.

ಓಟದಲ್ಲಿ 6 ಸಾವಿರಕ್ಕೂ ಅಧಿಕ ಜನ ಭಾಗಿ:

“ಜಿಲ್ಲೆಯ ಸಾರ್ವಜನಿಕರು, ಸಂಘ-ಸಂಸ್ಥೆಯ ಸದಸ್ಯರು, ವಿವಿಧ ಇಲಾಖೆಯ ಅಧಿಕಾರಿ ಹಾಗೂ ಸಿಬ್ಬಂದಿಗಳು, ಶಾಲಾ-ಕಾಲೇಜಿನ ವಿದ್ಯಾರ್ಥಿಗಳು ಸೇರಿದಂತೆ ಸುಮಾರು 6 ಸಾವಿರಕ್ಕೂ ಹೆಚ್ಚು ಜನ ಇಂದಿನ ರಸ್ತೆ ಸುರಕ್ಷತಾ ಓಟದಲ್ಲಿ ಭಾಗವಹಿಸಿ ಓಟಕ್ಕೆ ಮೇರಗು ತಂದ ಎಲ್ಲರಿಗೂ ಬೀದರ ಜಿಲ್ಲಾ ಪೊಲೀಸ್ ವತಿಯಿಂದ ಅಭಿನಂದನೆಗಳು ಸಲ್ಲಿಸಿದರು. ರಸ್ತೆ ಸುರಕ್ಷತಾ ನಿಯಮಗಳನ್ನು ಪಾಲಿಸುವದರೊಂದಿಗೆ ತಮ್ಮ ಪ್ರಾಣವನ್ನು ಕಾಪಾಡಿಕೊಳ್ಳುವದರ ಜೊತೆಗೆ ಪೊಲೀಸ್ ಇಲಾಖೆಗೆ ಸಹಕಾರ ನೀಡಬೇಕೆಂದು” ಕೋರಿದರು.

road2

ಓಟದಲ್ಲಿ ವಿಜೇತರಿಗೆ ಬಹುಮಾನ ವಿತರಣೆ:

ಈ ರಸ್ತೆ ಸುರಕ್ಷಾತ ಓಟವು 2.5 ಕಿ.ಮಿ., 5 ಕಿ.ಮಿ, ಹಾಗೂ 10 ಕಿ.ಮಿ ವಿಧಗಳಲ್ಲಿ ನಡೆಯಿತು. ಓಟವು ಬೀದರನ ಐತಿಹಾಸಿಕ ಕೋಟೆಯಿಂದ ಪ್ರಾರಂಭವಾಗಿ ಬೀದರ ನಗರದ ವಿವಿಧ ಬೀದಿಗಳಿಂದ ಸಾಗಿ ಮತ್ತೆ ಕೋಟೆ ಆವರಣಕ್ಕೆ ಬಂದು ತಲುಪಿತು. ಈ ಓಟದಲ್ಲಿ ಪ್ರಥಮ, ದ್ವೀತಿಯ, ತೃತೀಯ ಬಹುಮಾನ ವಿಜೇತರಾದ 10 ಕಿ.ಮಿ ಪರುಷ ವಿಭಾಗದಲ್ಲಿ ಭೀಮಾಶಂಕರ (ಪ್ರಥಮ), ಸದಾನಂದ ಮೇತ್ರೆ (ದ್ವಿತೀಯ), ರಮೇಶ (ತೃತೀಯ), 5 ಕಿ.ಮಿ ಪುರುಷ ವಿಭಾಗದಲ್ಲಿ ಮಲ್ಲಿಕಾರ್ಜುನ ಪುಂಡಲಿಕ್ (ಪ್ರಥಮ), ಮಹೇಶ ಭೀಮು ರಾಠೋಡ್ (ದ್ವೀತಿಯ), ದತ್ತು ಪರಶುರಾಮ (ತೃತೀಯ), 10 ಕಿ.ಮಿ ಮಹಿಳಾ ವಿಭಾಗದಲ್ಲಿ ಅಂಜಲಿ (ಪ್ರಥಮ), 5 ಕಿ.ಮಿ ಮಹಿಳಾ ವಿಭಾದಲ್ಲಿ ಐಶ್ವರ್ಯ, ಪೂಜಾ ಜಾಧವ (ದ್ವೀತಿಯ), ಶೃತಿ ಚಿದ್ರೆ (ತೃತೀಯ) ಇವರಿಗೆ ಬಹುಮಾನ ವಿತರಿಸಲಾಯಿತು.

ಈ ಸುದ್ದಿ ಓದಿದ್ದೀರಾ ? ಬೀದರ್‌ | ಕಳವು ಪ್ರಕರಣ: 9 ಆರೋಪಿಗಳ ಬಂಧನ; 28 ಲಕ್ಷ ಮೌಲ್ಯದ ವಸ್ತುಗಳು ಜಪ್ತಿ

ಈ ರಸ್ತೆ ಸುರಕ್ಷತಾ ಓಟ ಕಾರ್ಯಕ್ರಮದಲ್ಲಿ ಜಿಲ್ಲಾಧಿಕಾರಿ ಗೋವಿಂದರೆಡ್ಡಿ, ಬೀದರ ಉಪ ಅರಣ್ಯ ಸಂರಕ್ಷಣಾಧಿಕಾರಿ ವಾನತಿ.ಎಂ.ಎಮ್, ಹೆಚ್ಚುವರಿ ಪೊಲೀಸ್ ಅಧೀಕ್ಷಕ ಮಹೇಶ ಮೇಘಣ್ಣನವರ, ಬೀದರ ಪೊಲೀಸ ಉಪ-ಅಧೀಕ್ಷರ ಕೆ.ಎಂ ಸತೀಶ, ಗುರುನಾಥ ಕೊಳ್ಳುರ, ಅಬ್ದುಲ್ ಖದಿರ್, ಸೇರಿದಂತೆ ಈ ಓಟ ಕಾರ್ಯಕ್ರಮಕ್ಕೆ ಕೈಜೋಡಿಸಿದ ಬೀದರನ ವಿವಿಧ ಸಂಘ-ಸAಸ್ಥೆಯ ಮುಖ್ಯಸ್ಥರು ಹಾಗೂ ಸದಸ್ಯರು, ಸಾರ್ವಜನಿಕರು, ವಿವಿಧ ಇಲಾಖೆಯ ಅಧಿಕಾರಿ ಸಿಬ್ಬಂದಿಗಳು, ವಿವಿಧ ಶಾಲಾ-ಕಾಲೇಜಿನ ವಿದ್ಯಾರ್ಥಿಗಳು ಸೇರಿದಂತೆ ಇತರರು ಉಪಸ್ಥಿತರಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಹಾವೇರಿ | ನಾಳೆ ಜಿಲ್ಲಾ ಮಟ್ಟದ ಕಾರ್ಯಾಗಾರ

ಸಾವಯವ ಹಾಗೂ ನೈಸರ್ಗಿಕ ಕೃಷಿ ಪದ್ಧತಿಯನ್ನು ಉತ್ತೇಜಿಸುವ ಜೊತೆಗೆ ರೈತರು ಬೆಳೆಯುವ...

ಬೀದರ್‌ | ಪಿಸ್ತೂಲ್‌ ಮಾರಾಟ ಜಾಲ ಪತ್ತೆ ಹಚ್ಚಿದ ಪೊಲೀಸರು: ಮುಖ್ಯ ಆರೋಪಿ ಸೇರಿ ನಾಲ್ವರ ಬಂಧನ

ಅಕ್ರಮವಾಗಿ ಪಿಸ್ತೂಲ್‌ ಹಾಗೂ ಜೀವಂತ ಗುಂಡುಗಳನ್ನು ಮಾರಾಟ ಮಾಡಲು ಯತ್ನಿಸುತ್ತಿದ್ದ ದಂಧೆಕೋರರನ್ನು...

ಶಿರಸಿ | ರಾಜೇಂದ್ರ ಸಿರ್ಸಿಕರ್‌ಗೆ ಇಂಡಿಯಾ ಬುಕ್ ಆಫ್ ರೆಕಾರ್ಡ್ಸ್ ಗೌರವ

ಶಿರಸಿ: ಪ್ರಾಣಿ-ಪಕ್ಷಿಗಳ ರಕ್ಷಣೆ ಮತ್ತು ಪುನರ್ವಸತಿ ಕ್ಷೇತ್ರದಲ್ಲಿ ಕಾರ್ಯನಿರ್ವಹಿಸುತ್ತಿರುವ ಶಿರಸಿಯ ರಾಜೇಂದ್ರ...

ಧಾರವಾಡ | ಪೊಲೀಸ್ ಹೆಸರೇಳಿ ರೂ. 15,700 ವಂಚನೆ: ನಾಲ್ಕು ಬೈಕ್‍ಗಳು ನಗದು ವಶ

ಪೊಲೀಸ್ ಹೆಸರೇಳಿ ವ್ಯಕ್ತಿಯೊಬ್ಬರಿಂದ ₹15,700 ಹಣ ಪಡೆದು ವಂಚಿಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ...