ಸಾಗರ ತಾಲೂಕಿನ ಆನಂದಪುರ ಸಮೀಪದ ಹೊಸೂರು ಸೇತುವೆ ಬಳಿ ಕಾರು ಹಾಗೂ ಅಶೋಕ್ ಲೇಲ್ಯಾಂಡ್ ವಾಹನದ ನಡುವೆ ಡಿಕ್ಕಿ ಸಂಭವಿಸಿದೆ.
ಸಾಗರದಿಂದ ಹೊಸೂರಿನ ಕಡೆ ತೆರಳುತ್ತಿದ್ದ ನೆಕ್ಸನ್ ಕಾರ್, ಆನಂದಪುರದಿಂದ ಸಾಗರದ ಕಡೆ ತೆರಳುತ್ತಿದ್ದ ಅಶೋಕ್ ಲೈಲ್ಯಾಂಡ್ ವಾಹನದ ನಡುವೆ ಡಿಕ್ಕಿ ಸಂಭವಿಸಿದೆ.ಅಪಘಾತದ ರಭಸಕ್ಕೆ ಕಾರು ಲೈಟ್ ಕಂಬಕ್ಕೂ ಡಿಕ್ಕಿ ಹೊಡೆದಿದೆ.

ಘಟನೆಯಲ್ಲಿ ಕಾರು ಚಾಲಕ ಹಾಗೂ ಅಶೋಕ್ ಲೇಲ್ಯಾಂಡ್ ವಾಹನದ ಚಾಲಕನಿಗೆ ಸಣ್ಣಪುಟ್ಟ ಗಾಯಗಳಾಗಿದೆ ಎಂದು ತಿಳಿದುಬಂದಿದೆ.
ಸ್ಥಳಕ್ಕೆ ಆನಂದಪುರ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದಾರೆ ಎಂಬ ವರದಿಯಾಗಿದೆ.