ಸಾಗರ | ರಂಗಭೂಮಿಯಿಂದ ಜೀವಪರವಾದ ಸಮರಸ ಸಮಾಜ ಕಟ್ಟಲು ಸಾಧ್ಯ: ಸಚಿವ ಶಿವರಾಜ್ ತಂಗಡಗಿ

Date:

ಪ್ರಸ್ತುತ ಕಾಲಘಟ್ಟದಲ್ಲಿ ರಂಗಭೂಮಿಯ ಜವಾಬ್ದಾರಿ ಬಹಳ ಮಹತ್ವದಾಗಿದ್ದು, ರಂಗಭೂಮಿಯಿಂದ ಜೀವಪರವಾದ ಸಾಮರಸ್ಯದ ಒಳಿತಿನ ಸಮಾಜ ಕಟ್ಟಲು ಸಾಧ್ಯ ಎಂದು ಕನ್ನಡ ಮತ್ತು ಸಂಸ್ಕೃತಿ ಹಾಗೂ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಸಚಿವ ಶಿವರಾಜ್ ಎಸ್ ತಂಗಡಗಿ ಅವರು ಅಭಿಪ್ರಾಯಪಟ್ಟರು.

- Advertisement -

ಶಿವಮೊಗ್ಗ ಜಿಲ್ಲೆಯ ಸಾಗರ ತಾಲೂಕಿನ ಹೆಗ್ಗೋಡಿಯಲ್ಲಿರುವ ನೀನಾಸಂ ಆವರಣದಲ್ಲಿ ಭಾನುವಾರ ಆಯೋಜಿಸಿದ್ದ ನವೀಕರಿಸಿರುವ ರಂಗಸಭಾಂಗಣದ ಲೋಕಾರ್ಪಣೆ, ನೀನಾಸಂ ರಂಗ ಶಿಕ್ಷಣ ಕೇಂದ್ರದ ವರ್ಷಾಂತ್ಯದ ನಾಟಕೋತ್ಸವ ಮತ್ತು ಬೇಸಿಗೆ‌ ಶಿಬಿರವನ್ನು ಉದ್ಘಾಟಿಸಿ ಮಾತನಾಡಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಮೋದಿ ಆಡಳಿತದಲ್ಲಿ ಮಾಹಿತಿ ಹಕ್ಕು ಕಾಯ್ದೆಯ ‘ಸ್ಥಿತಿ’ ಹೇಗಿದೆ?...

ಯಾವುದೇ ಸರ್ಕಾರ ಆಡಳಿತದಲ್ಲಿರಲಿ ಪ್ರಜಾಸತ್ತಾತ್ಮಕ ವ್ಯವಸ್ಥೆಯನ್ನು ಕಾಪಾಡಬೇಕಾದ ಸಂಸ್ಥೆಗಳ ಸ್ವಾಯತ್ತತೆ ಉಳಿಯಬೇಕು. ಅವು ಪಾರದರ್ಶಕವಾಗಿರಬೇಕು. ಪ್ರಜಾಸತ್ತೆಯ ಕಾರ್ಯವೈಖರಿಯನ್ನು ಕುರಿತಂತೆ ಮುಕ್ತ ಚರ್ಚೆ ನಡೆಯುತ್ತಿರಬೇಕು. ಇದು ಸಕ್ರಿಯ, ಅರ್ಥಪೂರ್ಣ ಪ್ರಜಾಸತ್ತೆಯ ಕನಿಷ್ಠ ಅವಶ್ಯಕತೆ. ಹಾಗಾಗಿ...

ಬಂಗಾಳ ವಿಭಜನೆ | ವಿಭಜನೆಯ ವಿಷಬೀಜದಿಂದ ಒಗ್ಗಟ್ಟಿನ ಜ್ಯೋತಿ...

ಬ್ರಿಟಿಷರ 'ಒಡೆದು ಆಳುವ ನೀತಿ'ಯ ಭಾಗವಾಗಿ 1905ರ ಅಕ್ಟೋಬರ್‌ನಲ್ಲಿ ಜಾರಿಗೆ ಬಂದ ಬಂಗಾಳ ವಿಭಜನೆಯು ಭಾರತೀಯರ ರಾಷ್ಟ್ರೀಯತೆಯನ್ನು ಒಡೆಯುವ ಕುತಂತ್ರವಾಗಿತ್ತು. ಇದಕ್ಕೆ ಪ್ರತಿಯಾಗಿ ಭಾರತೀಯರು 'ರಾಷ್ಟ್ರೀಯ ಶೋಕ ದಿನ' ಆಚರಿಸಿ, ಪರಸ್ಪರ ರಾಖಿ...

ನಟ ಇಮ್ರಾನ್ ಖಾನ್ ಪ್ರತಿಭಟಿಸಿದರೆ ಗಡಿಪಾರು; ಟ್ರಂಪ್ ಪರ...

ಕಾನೂನು ಮತ್ತು ರಾಜತಾಂತ್ರಿಕ ನಿಯಮಗಳು ಎಲ್ಲರಿಗೂ ಒಂದೇ ಆಗಿರಬೇಕು ಹೊರತು ಪ್ರಧಾನಿ ಮೋದಿಯವರ ರಾಜಕೀಯ ಅನುಕೂಲಕ್ಕೆ ತಕ್ಕಂತೆ ಬದಲಾಗಬಾರದು. ವಿದೇಶಿ ಪ್ರಜೆಯೊಬ್ಬ ಭಾರತದ ನೆಲದಲ್ಲಿ ಪ್ರತಿಭಟನೆಯಲ್ಲಿ ಪಾಲ್ಗೊಳ್ಳುವುದು ತಪ್ಪು ಎನ್ನುವುದಾದರೆ, ಭಾರತದ ಪ್ರಧಾನಿಯೊಬ್ಬರು...

“ರಂಗಭೂಮಿ ಒಂದು ಮಾಧ್ಯಮ ಕ್ಷೇತ್ರ ಇದ್ದಂತೆ. ಸಮಾಜಕ್ಕೆ ಹೇಳಬೇಕಾದ್ದನ್ನು ಗಟ್ಟಿಯಾಗಿ ಹೇಳಬಹುದು. ರಂಗಭೂಮಿಯಿಂದ ಸಮಾಜಕ್ಕೆ ಒಳ್ಳೆ ಸಂದೇಶಗಳನ್ನು ನೀಡುವ ಕೆಲಸ ನಡೆಯುತ್ತಿದೆ” ಎಂದು ಹೇಳಿದರು.

ನೀನಾಸಂ ರಂಗಭೂಮಿ

ನೀನಾಸಂ, ಕಲಾವಿದರನ್ನು ತಯಾರಿಸುವ ಫ್ಯಾಕ್ಟರಿ: “ಹೆಗ್ಗೋಡಿನಲ್ಲಿ‌ರುವ ನೀ‌ನಾಸಂ ಕಲಾವಿದರನ್ನು ತಯಾರಿಸುತ್ತಿರುವ ಫ್ಯಾಕ್ಟರಿ ಇದ್ದಂತೆ. ಇಲ್ಲಿಂದ ನೀನಾಸಂ ಸತೀಶ್, ಅಚ್ಯುತ್ ಕುಮಾರ್, ಮಂಡ್ಯ ರಮೇಶ್ ಹೀಗೆ ನೂರಾರು ಮಂದಿ ಕಲಾವಿದರನ್ನು ಈ ಸಂಸ್ಥೆ ನೀಡಿದೆ.‌ ಒಂದು ಸಂಸ್ಥೆಯನ್ನು 75 ವರ್ಷ ಕಟ್ಟಿ ಬೆಳೆಸುವ ಕೆಲಸ‌ ಸುಲಭವಲ್ಲ.‌ ಆದರೆ ನೀನಾಸಂ ಸಂಸ್ಥೆಯ ಕಾರ್ಯ ಶ್ಲಾಘನೀಯ” ಎಂದರು.

“ಪ್ರತಿ ವರ್ಷ ನೀನಾಸಂ ಸಂಸ್ಥೆಗೆ ಅನುದಾನ ನೀಡಲಾಗುತ್ತಿದೆ. ಕಳೆದ ವರ್ಷ 35 ಲಕ್ಷ ರೂ. ಅನುದಾನ ನೀಡಲಾಗಿದ್ದು, ಈ ವರ್ಷ ಹೆಚ್ಚಿನ ಅನುದಾನ ನೀಡಲಾಗುವುದು” ಎಂದು ಸಚಿವರು ಭರವಸೆ ನೀಡಿದರು.‌

ಈ ಸುದ್ದಿ ಓದಿದ್ದೀರಾ? ಮಧುಗಿರಿ | ದಲಿತ ಯುವಕನಿಗೆ ದೇವಾಲಯ ಪ್ರವೇಶ ನಿರಾಕರಣೆ; ವಿಡಿಯೋ ವೈರಲ್

“ಬಿ ವಿ ಕಾರಂತರ ರಂಗಮಂದಿರ ನವೀಕರಣಕ್ಕೆ 75 ಲಕ್ಷ‌ದ ಅಗತ್ಯವಿದೆಯೆಂದು ನನ್ನ ಗಮನಕ್ಕೆ ತಂದಿದ್ದಾರೆ. ಈ ಬಗ್ಗೆ ಸ್ಥಳೀಯ ಶಾಸಕರೊಂದಿಗೆ ಚರ್ಚೆ ನಡೆಸಿ ಅಗತ್ಯದ ಅನುದಾನ ಒದಗಿಸಲು ಕ್ರಮ ಕೈಗೊಳ್ಳಲಾಗುವುದು” ಎಂದು ತಿಳಿಸಿದರು.

ಕಾರ್ಯಕ್ರಮದಲ್ಲಿ ಸ್ಥಳೀಯ ಶಾಸಕ‌ ಬೇಳೂರು ಗೋಪಾಲ ಕೃಷ್ಣ, ಬೋವಿ ಅಭಿವೃದ್ಧಿ ನಿಗಮದ ಅಧ್ಯಕ್ಷ ರವಿಕುಮಾರ್, ನೀನಾಸಂನ ಸಿದ್ದಾರ್ಥ್ ಭಟ್, ಅಕ್ಷರ ಹಾಗೂ ಇತರರು ಇದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಉಡುಪಿ | ಕಾರ್ಮಿಕರು ಹಕ್ಕು ಮತ್ತು ಸೌಲಭ್ಯಗಳಿಂದ ವಂಚಿತರಾಗದಂತೆ ನೋಡಿಕೊಳ್ಳಿ: ಟಿ.ಎಂ. ಶಾಹಿದ್ ತೆಕ್ಕಿಲ್

ಕಾರ್ಮಿಕರ ಹಿತಾಸಕ್ತಿಯನ್ನು ಕಾಪಾಡುವುದರೊಂದಿಗೆ ಸರ್ಕಾರದ ಕಲ್ಯಾಣ ಕಾರ್ಯಕ್ರಮಗಳು ಅರ್ಹ ಫಲಾನುಭವಿಗಳಿಗೆ ತಲುಪುವಂತೆ...

ಬಾಗೇಪಲ್ಲಿಯಲ್ಲಿ ರಸ್ತೆ ಅಪಘಾತ:ರೈತ ನಂಜಪ್ಪ ಸಾವು

ಕೆಎಸ್‌ಆರ್‌ಟಿಸಿ ಬಸ್ ಡಿಕ್ಕಿ ಹೊಡೆದು ದ್ವಿಚಕ್ರ ವಾಹನದಲ್ಲಿ ಹೊಲಕ್ಕೆ ತೆರಳುತ್ತಿದ್ದ ನಡಂಪಲ್ಲಿ...

ಮಂಗಳೂರು | ಕೊಳ್ತಮಜಲು ರಹ್ಮಾನ್ ಹತ್ಯೆ ಪ್ರಕರಣ: ಆರೋಪಿಗಳ ಜಾಮೀನು ರದ್ದುಪಡಿಸಿದ ಸುಪ್ರೀಂ ಕೋರ್ಟ್

ಕೊಳ್ತಮಜಲು ರಹ್ಮಾನ್ ಹತ್ಯೆ ಪ್ರಕರಣದಲ್ಲಿ ಆರೋಪಿಗಳಿಗೆ ಇತ್ತೀಚೆಗೆ ನ್ಯಾಯಾಲಯ ಜಾಮೀನು ನೀಡಿತ್ತು....

ಕೋಲಾರ | ಚೈನಾ ಶಾಂಘೈನಲ್ಲಿ ಕನ್ನಡದ ಮೊದಲ ಜಾನಪದ ಕಾರ್ಯಕ್ರಮ: ಗೋ.ನಾ. ಸ್ವಾಮಿ ಭಾಗಿ

ಚೈನಾ ದೇಶದ ಶಾಂಘೈನಲ್ಲಿ ಕನ್ನಡಿಗರ ಸಂಘದ ವತಿಯಿಂದ ಆಯೋಜಿಸಿದ್ದ ಕನ್ನಡದ ಮೊದಲ...