ಸಾಗರ | ಅಪಘಾತ ನಿಯಂತ್ರಣಕ್ಕೆ ಹೊಸ ವಿಧಾನ; ವಾಹನಗಳಿಗೆ ರಿಫ್ಲೆಕ್ಟೀವ್ ಸ್ಟಿಕರ್ ಅಂಟಿಸುವ ಅಭಿಯಾನ

Date:

Advertisements

ಶಿವಮೊಗ್ಗ ಜಿಲ್ಲಾದ್ಯಂತ ಅಪಘಾತಗಳ ಸಂಖ್ಯೆ ಗಣನೀಯವಾಗಿ ಏರಿಕೆಯಾಗಿರುವ ಪರಿಣಾಮ ಅಪಘಾತ ನಿಯಂತ್ರಣಕ್ಕೆ ಪೊಲೀಸ್‌ ಇಲಾಖೆ ಹೊಸ ಅಭಿಯಾನವೊಂದನ್ನು ಆರಂಭಿಸಿದೆ.

ವಾಹನಗಳಿಗೆ ರಿಫ್ಲೆಕ್ಟೀವ್ ಸ್ಟಿಕರ್ ಅಂಟಿಸುವ ಅಭಿಯಾನ ಶುರು ಮಾಡಲಾಗಿದೆ. ಇದು ರಾತ್ರಿ ವೇಳೆ ಸಂಭವಿಸಬಹುದಾದ ಅಪಘಾತಗಳನ್ನು ನಿಯಂತ್ರಿಸಲು ಸಹಕಾರಿಯಾಗಲಿದೆ ಎಂದು ಎಸ್‌ಪಿ ಮಿಥುನ್ ಕುಮಾರ್ ತಿಳಿಸಿದರು. ಆನಂದಪುರ ಪೊಲೀಸ್ ಠಾಣೆ ಮುಂಭಾಗದಲ್ಲಿ ವಾಹನಗಳಿಗೆ ಪ್ರತಿಫಲಿತ ಸ್ಟಿಕರ್ ಅಂಟಿಸುವ ಮೂಲಕ ಅಭಿಯಾನಕ್ಕೆ ಅಧಿಕೃತವಾಗಿ ಚಾಲನೆ ನೀಡಿ ಮಾತನಾಡಿದರು.

“ಕಳೆದ ವರ್ಷ ಶಿವಮೊಗ್ಗ ಜಿಲ್ಲೆಯಲ್ಲಿ 363 ಜನ ರಸ್ತೆ ಅಪಘಾತದಲ್ಲಿ ಮರಣ ಹೊಂದಿದ್ದಾರೆ. ಇದನ್ನು ಕೂಲಂಕಷವಾಗಿ ತನಿಖೆ ಮಾಡಿದಾಗ ಈ ಅಪಘಾತಗಳೆಲ್ಲ ರಾತ್ರಿ ಸಮಯದಲ್ಲೇ ಹೆಚ್ಚು ಸಂಭವಿಸಿದ್ದು ಗಮನಕ್ಕೆ ಬಂದಿದೆ. ಇದಕ್ಕೆ ಮುಖ್ಯ ಕಾರಣ ವಾಹನಗಳಿಗೆ ರಿಫ್ಲೆಕ್ಟೀವ್ ಸ್ಟಿಕರ್ ಇಲ್ಲದೆ ಇರುವುದು ಎಂದು ವರದಿಗಳು ಹೇಳಿವೆ.

Advertisements
1001294995

ಇದರಿಂದ ಪ್ರತಿ ವಾಹನಗಳ ಹಿಂದೆ ರಿಫ್ಲೆಕ್ಟೀವ್ ಸ್ಟಿಕರ್ ಅಳವಡಿಸಿ ರಾತ್ರಿಯ ಸಮಯದಲ್ಲಿ ವಾಹನಗಳ ಅಪಘಾತವನ್ನು ತಡೆಗಟ್ಟುವುದು ಈ ಅಭಿಯಾನದ ಮುಖ್ಯ ಉದ್ದೇಶವಾಗಿದೆ” ಎಂದರು.

ಈ ಸುದ್ದಿ ಓದಿದ್ದೀರಾ?: ಸಾಗರ | ಅಧಿಕಾರ ಕೊಟ್ಟ ಜನರ ಋಣ ತೀರಿಸುತ್ತೇನೆ: ಶಾಸಕ ಗೋಪಾಲಕೃಷ್ಣ ಬೇಳೂರು

ಈ ವೇಳೆ ಸಾಗರದ ಡಿವೈಎಸ್‌ಪಿ ಗೋಪಾಲ್ ಕೃಷ್ಣ ನಾಯಕ್, ಸರ್ಕಲ್ ಇನ್ಸ್ಪೆಕ್ಟರ್ ಸಂತೋಷ್ ಶೆಟ್ಟಿ ಮತ್ತು ಆನಂದಪುರ ಪೊಲೀಸ್ ಸಬ್ ಇನ್ಸ್ಪೆಕ್ಟರ್ ಯುವರಾಜ್ ಕಂಬಳಿ ಮತ್ತು ಸಿಬ್ಬಂದಿ ವರ್ಗದವರು ಇದ್ದರು.

ಈದಿನ 1
ಈ ದಿನ ಡೆಸ್ಕ್
+ posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

1 COMMENT

  1. ಇದೆಲ್ಲಾ ಬರೀ ನಾಟಕ. ಪೊಲೀಸರಿಗೆ ಏನಾದರೂ ಜವಾಬ್ದಾರಿ ಇದ್ದರೆ: ಜನಗಳು ಹೈಯ್ ಭೀಮ್ ಹಾಕಿ ಗಾಡಿ ಓಡಿಸುವುದನ್ನು ನಿಲ್ಲಿಸಲಿ ಹಾಗೆಯೇ ಹಿಂದಿನ ಕಾಲದಲ್ಲಿ ಇದ್ದಂತೆ ಗಾಡಿ ದೀಪದ ಮೇಲಿನ ಅರ್ಧ ಭಾಗವನ್ನು ಕಪ್ಪು ಬಣ್ಣದಿಂದ ಮುಚ್ಚಲಿ. ಆಗ ಗಾಡಿ ಬೆಳಕು ನೆಲಕ್ಕೆ ಬೀಳುತ್ತದೆ ಎದುರಿಗೆ ಬರುವ ಸವಾರನಿಗೆ ಅಲ್ಲ.

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಚಿಕ್ಕಮಗಳೂರು l ಸಮಾಜದಲ್ಲಿ ಜಾತಿ,ಧರ್ಮಗಳ ಕಂದಕದ ಗೋಡೆಗಳನ್ನು ತೊಡೆದು ಹಾಕುವುದೇ ನಿಜವಾದ ಸಾಹಿತ್ಯ; ಸಾಹಿತಿ ಮನಸುಳಿ ಮೋಹನ್‌

ಚಿಕ್ಕಮಗಳೂರು ಜಿಲ್ಲೆ ತರೀಕೆರೆ ತಾಲೂಕಿನಲ್ಲಿ ಕನ್ನಡ ಸಾಹಿತ್ಯ ಪರಿಷತ್ತು ತಾಲ್ಲೂಕು ಸಮಿತಿ...

ಉಡುಪಿ | ಅಡಿಷನಲ್ ಎಸ್‌ಪಿ ಕಾರಿಗೆ ಡಿಕ್ಕಿ ಹೊಡೆದು ಕರ್ತವ್ಯಕ್ಕೆ ಅಡ್ಡಿ ಆರೋಪ; ಮೂವರ ಬಂಧನ

ಮಹೇಶ್ ಶೆಟ್ಟಿ ತಿಮರೋಡಿ ಅವರನ್ನು ಬಂಧಿಸಿ ಕರೆದೊಯ್ಯುವಾಗ ಪೊಲೀಸರ ಕರ್ತವ್ಯಕ್ಕೆ ಅಡ್ಡಿಪಡಿಸಿದ...

ಚಿಕ್ಕಮಗಳೂರು l ಕಾಫಿ ನಾಡಿನಲ್ಲಿ ಕಾಡಾನೆ ಹಾವಳಿ; ರೈತರ ಬೆಳೆ ಹಾನಿ

ಕಾಫಿ ನಾಡಿನಲ್ಲಿ ಕಾಡಾನೆ ಎಲ್ಲೆಡೆ ಓಡಾಡುತ್ತಿರುವ ದೃಶ್ಯ ಸಾರ್ವಜನಿಕರಿಗೆ ಹಾಗೂ ಸ್ಥಳೀಯ...

ಬೀದರ್‌ | ಬೆಳೆ ಹಾನಿ : ಹೆಕ್ಟೇರ್‌ಗೆ ₹50 ಸಾವಿರ ಪರಿಹಾರಕ್ಕೆ ಶಾಸಕ ಶೈಲೇಂದ್ರ ಬೆಲ್ದಾಳೆ ಒತ್ತಾಯ

ಬೀದರ್ ಜಿಲ್ಲೆಯಲ್ಲಿ ಅತಿವೃಷ್ಟಿಯಿಂದ ವ್ಯಾಪಕ ಬೆಳೆ ಹಾನಿ, ಸಾರ್ವಜನಿಕ ಆಸ್ತಿಪಾಸ್ತಿ ನಷ್ಟವಾಗಿದೆ....

Download Eedina App Android / iOS

X