ಸಾಗರ ತಾಲೂಕಿನ ಜನ್ನತ್ ನಗರದ ನಿವಾಸಿ ಇಬ್ರಾಹಿಂ (ಬಾಬು), ಸೋಮವಾರ ರಾತ್ರಿ ಕಳೆ ನಾಶಕ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ.
ಕಾಲಿನ ಸ್ವಾಧಿನ ಕಳೆದುಕೊಂಡಿದ್ದರೂ ತ್ರಿಚಕ್ರ ಸೈಕಲಲ್ಲಿ ಓಡಾಡಿಕೊಂಡು ಇವರು, ಇನ್ನಿತರ ವ್ಯವಹಾರ ಮಾಡಿಕೊಂಡು ಕುಟುಂಬ ನಿರ್ವಹಣೆ ಮಾಡುತ್ತಿದ್ದರು.
ಕ್ರೀಯಾಶೀಲವಾಗಿ ಎಲ್ಲರೊಂದಿಗೆ ಆತ್ಮೀಯ ಸಂಬಂಧ ಇಟ್ಟುಕೊಂಡಿದ್ದರು.ಹಣಕಾಸಿನ ವ್ಯವಹಾರಕ್ಕೆ ಸಂಬಂಧಿಸಿದಂತೆ ಮನನೊಂದು ಆತ್ಮಹತ್ಯೆ ಮಾಡಿಕೊಂಡಿರಬಹುದು ಎಂದು ಕುಟುಂಬದ ಮೂಲಗಳು ಶಂಕೆ ವ್ಯಕ್ತಪಡಿಸಿದೆ.ಪೇಟೆ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.