ಸಕಲೇಶಪುರ | ಶಿರಾಡಿ ಘಾಟ್ ಬಳಿ ಗುಡ್ಡ ಕುಸಿತ: ವಾಹನ ಸಂಚಾರ ಸ್ಥಗಿತ, ಬದಲಿ ಮಾರ್ಗ ಬಳಕೆಗೆ ಸೂಚನೆ

Date:

Advertisements

ಹಾಸನ ಜಿಲ್ಲೆಯ ಸಕಲೇಶಪುರ ತಾಲೂಕಿನ ಮಂಗಳೂರು-ಬೆಂಗಳೂರು ರಾಷ್ಟ್ರೀಯ ಹೆದ್ದಾರಿ(NH-75)ಯ ದೊಡ್ಡತಪ್ಪಲೆಯಲ್ಲಿ ಭಾರೀ ಮಳೆಯಿಂದಾಗಿ ಶಿರಾಡಿ ಘಾಟ್‌ ಬಳಿ ಗುಡ್ಡ ಕುಸಿತ ಉಂಟಾಗಿದ್ದು, ಕಾರೊಂದರ ಮೇಲೆ ಬಿದ್ದ ಪರಿಣಾಮ ಕಾರು ಜಖಂಗೊಂಡಿರುವ ಘಟನೆ ನಡೆದಿದೆ, ಈ ಹಿನ್ನೆಲೆಯಲ್ಲಿ ರಸ್ತೆ ಸಂಚಾರ ಸಂಪೂರ್ಣವಾಗಿ ಸ್ಥಗಿತಗೊಂಡಿದ್ದು, ಬದಲಿ ಮಾರ್ಗ ಬಳಕೆಗೆ ಸೂಚನೆ ನೀಡಲಾಗಿದೆ.

ಮಾರನಹಳ್ಳಿ ಬಳಿ ಪೊಲೀಸರು ಬ್ಯಾರಿಕೇಡ್‌ ಹಾಕಿ ವಾಹನಗಳನ್ನು ನಿಲ್ಲಿಸಿದ್ದು, ಬದಲಿ ಮಾರ್ಗ ಬಳಸುವಂತೆ ಚಾಲಕರಿಗೆ ಸೂಚನೆ ನೀಡಿದ್ದಾರೆ. ಇದರಿಂದಾಗಿ ಸಾವಿರಾರು ವಾಹನ ಸವಾರರು ಸಂಕಷ್ಟಕ್ಕೆ ಸಿಲುಕುವಂತಾಗಿದೆ.

ಶಿರಾಡಿ ಘಾಟ್‌ ರಸ್ತೆ ಸಂಚಾರ ಸ್ಥಗಿತ

ಜಿಲ್ಲೆಯ ಮಲೆನಾಡು ಭಾಗದಲ್ಲಿ ಸುರಿಯುತ್ತಿರುವ ನಿರಂತರ ಮಳೆಯಿಂದ ಶಿರಾಡಿಘಾಟ್ ರಸ್ತೆಯ ಹಲವು ಕಡೆ ಭೂಕುಸಿತ ಉಂಟಾಗಿದ್ದು, ಮರ-ಗಿಡಗಳ ಸಹಿತ ಮಣ್ಣು ರಸ್ತೆಗೆ ಜಾರಿ ಬಿದ್ದಿದೆ. ಇದರಿಂದ ಸಂಚಾರದಲ್ಲಿ ಭಾರೀ ವ್ಯತ್ಯಯ ಉಂಟಾಗಿದೆ.

Advertisements

ಈ ಸುದ್ದಿ ಓದಿದ್ದೀರಾ? ಅಂಕೋಲಾ | ‘ಸಂವಿಧಾನ ರಕ್ಷಿಸಿ ಪ್ರಜಾಪ್ರಭುತ್ವ ಉಳಿಸಿ’ ಘೋಷಣೆಯೊಂದಿಗೆ ಮತಗಳ್ಳತನದ ವಿರುದ್ಧ ಕಾಂಗ್ರೆಸ್ ಪ್ರತಿಭಟನೆ

ವಾರದ ಕೊನೆಯಾಗಿರುವ ಹಿನ್ನೆಲೆಯಲ್ಲಿ ವಾಹನಗಳ ಸಂಚಾರ ಹೆಚ್ಚಿರುವುದರಿಂದ ಶಿರಾಡಿಘಾಟ್ ರಸ್ತೆಯಲ್ಲಿ ಟ್ರಾಫಿಕ್ ಜಾಮ್ ಉಂಟಾಗಿ ಸವಾರರು ಪರದಾಡುವ ಪರಿಸ್ಥಿತಿ ಎದುರಾಗಿದೆ. ಸದ್ಯ ನೂರಾರು ವಾಹನಗಳು ರಸ್ತೆ ಮಧ್ಯೆ ನಿಂತಿರುವುದರಿಂದ ಸಂಚಾರ ಸಂಪೂರ್ಣ ಸ್ಥಗಿತಗೊಂಡಿದೆ. ಟ್ರಾಫಿಕ್ ಜಾಮ್ ತೆರವುಗೊಳಿಸಲು ಪೊಲೀಸರು ಹರಸಾಹಸಪಡುತ್ತಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸೊರಬ | 30 ಅಡಿ ಬಾವಿಗೆ ಬಿದ್ದ ಆಕಳು ರಕ್ಷಣೆ

ಸೊರಬ, ಪಟ್ಟಣದ ಹೊಸಪೇಟೆ ಬಡಾವಣೆಯಲ್ಲಿ ಬಾವಿಗೆ ಬಿದ್ದ ಆಕಳನ್ನು ಅಗ್ನಿಶಾಮಕದಳದ ಸಿಬ್ಬಂದಿ...

ಶಿವಮೊಗ್ಗ | ಹಳೆ ದ್ವೇಷ : ಯುವಕನಿಗೆ ಚಾಕುವಿನಿಂದ ಇರಿದು ಕೊಲೆ

ಶಿವಮೊಗ್ಗ, ಹಳೆಯ ದ್ವೇಷದ ಹಿನ್ನೆಲೆಯಲ್ಲಿ ಸಂಬಂಧಿ ಯುವಕನಿಗೆ ಇನ್ನೊಬ್ಬ ಚಾಕುವಿನಿಂದ ಇರಿದು...

ಚಿಕ್ಕಬಳ್ಳಾಪುರ | ದೇಶದಲ್ಲೇ ಮೊದಲ ಬಾರಿಗೆ AI ತಂತ್ರಜ್ಞಾನದಿಂದ ಸೇವೆ ನೀಡಲು ಮುಂದಾದ ಜಿಲ್ಲಾ ಪೊಲೀಸ್

ಸಾಮಾಜಿಕ ಜಾಲತಾಣಗಳನ್ನು ಸಮರ್ಥವಾಗಿ ಬಳಸಿಕೊಂಡು ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ ಸಾರ್ವಜನಿಕರಲ್ಲಿ ಜಾಗೃತಿ ಮೂಡಿಸುವ...

ಬಾಗೇಪಲ್ಲಿ | ಡಿ.ದೇವರಾಜ ಅರಸುರವರ ಆಶಯ, ಚಿಂತನೆಗಳು ಇಂದಿಗೂ ಮಾದರಿ: ತಹಶೀಲ್ದಾರ್ ಮನೀಷ್ ಎನ್ ಪತ್ರಿ

ಮಾಜಿ ಮುಖ್ಯಮಂತ್ರಿ ಡಿ.ದೇವರಾಜ ಅರಸು ಅವರ ಆಶಯಗಳು, ಚಿಂತನೆಗಳು ಇಂದಿಗೂ ಮಾದರಿಯಾಗಿವೆ....

Download Eedina App Android / iOS

X