ಸಕಲೇಶಪುರ | ಹೊಸಕೋಟೆ ಬೆಟ್ಟದಲ್ಲಿ ಗಣಿಗಾರಿಕೆ ವಿರೋಧಿಸಿ ದಸಂಸದಿಂದ ಪ್ರತಿಭಟನೆ

Date:

ಹಾಸನ ಜಿಲ್ಲೆಯ ಸಕಲೇಶಪುರ ತಾಲೂಕಿನ ಹೊಸಕೋಟೆ ಬೆಟ್ಟದ ರೋಡಿಕ್ ಕಾಫಿ ಎಸ್ಟೇಟ್‌ನವರಿಗೆ ಗಣಿಗಾರಿಕೆಗಾಗಿ ನೀಡಿರುವ ಅನುಮತಿ ವಾಪಸ್ ಪಡೆಯುವಂತೆ ಒತ್ತಾಯಿಸಿ ಸಕಲೇಶಪುರ ತಾಲೂಕು ಕಚೇರಿ ಮುಂದೆ ದಲಿತ ಸಂಘರ್ಷ ಸಮಿತಿಯಿಂದ ಪ್ರತಿಭಟನೆ ನಡೆಸಲಾಯಿತು.

- Advertisement -

ಕೊಡಗು ಮತ್ತು ಹಾಸನ ಜಿಲ್ಲೆಯ ವತಿಯಿಂದ ಈ ಜಂಟಿ ಹೋರಾಟವನ್ನು ಹಮ್ಮಿಕೊಳ್ಳಲಾಗಿತ್ತು. ಸಕಲೇಶಪುರ ತಾಲೂಕು, ಯಸಳೂರು ಹೋಬಳಿ, ಹೊಸೂರು ಗ್ರಾಮಪಂಚಾಯಿತಿ ವ್ಯಾಪ್ತಿಗೆ ಒಳಪಡುವ ಹೊಸಕೋಟೆ ಬೆಟ್ಟ ಆರಾಧನ ಎಸ್ಟೇಟ್ ಪಕ್ಕದಲ್ಲಿರುವ ರೋಡಿಕ್ ಕಾಫಿ ಎಸ್ಟೇಟ್‌ನವರು ಆಲಂಕಾರಿಕ ಶಿಲಾ ಗಣಿಗಾರಿಕೆ ನಡೆಸುತ್ತಿದ್ದಾರೆ. ಇದರಿಂದ ಸುತ್ತಮುತ್ತಲಿನ ಗ್ರಾಮದಲ್ಲಿ ವಾಸಿಸುತ್ತಿರುವ ಜನರಿಗೆ ಮತ್ತು ಕಾಡು ಪ್ರಾಣಿಗಳಿಗೆ ತೊಂದರೆ ಆಗುತ್ತಿದೆ ಎಂದು ಪ್ರತಿಭಟನಾಕಾರರು ದೂರಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಶಿಕ್ಷಣ ಮಾರಾಟ ಮಾಡಿದ ಶಾಲೆಗಳೇ ಈಗ ಮಾರಾಟಕ್ಕೆ!

ಕರ್ನಾಟಕದಲ್ಲಿ ಖಾಸಗಿ ಶಾಲೆಗಳು ಮುಚ್ಚುವ ಹಂತಕ್ಕೆ ತಲುಪಿದ್ದು, ಮಾರಾಟಕ್ಕೆ ಸಜ್ಜಾಗಿವೆ. ಕೋವಿಡ್-19 ಆಕ್ರಮಣದ ನಂತರದಲ್ಲಿ ಖಾಸಗಿ ಶಾಲೆಗಳಲ್ಲಿ ದಾಖಲಾತಿಯಲ್ಲಿ ಭಾರೀ ಕುಸಿತ, ಪ್ರತಿಷ್ಠಿತ ಶಾಲೆಗಳ ಜೊತೆಗೆ ಪೈಪೋಟಿ, ಮೂಲಭೂತ ಸೌಕರ್ಯಕ್ಕೆ ತಕ್ಕಂತೆ ಲಾಭದ...

ಬಿಗಿದ ತುಟಿಯ ದೃಶ್ಯಭಾಷೆ: ನಿರ್ಬಂಧಗಳ ನೆರಳಲ್ಲಿ ರೂಪಕಗಳ ಪ್ರತಿರೋಧ

ಸಿನೆಮಾವನ್ನು ನಿಯಂತ್ರಿಸಲು ಅಧಿಕಾರಶಾಹಿ ಸದಾ ಹೊಸ ಕಟ್ಟುಪಾಡುಗಳನ್ನು ಸೃಷ್ಟಿಸುತ್ತಲೇ ಇರುತ್ತದೆ; ಆದರೆ ಕಲೆಗೆ ಇರುವ ಶಕ್ತಿಯೆಂದರೆ, ಅದು ನಿರ್ಬಂಧಗಳ ಗೋಡೆಗಳನ್ನೇ ಹೊಸ ನೋಟದ ಕಿಟಕಿಗಳನ್ನಾಗಿಸಿಕೊಳ್ಳುತ್ತದೆ. ನೇರ ಮಾತನ್ನು ಕಸಿದುಕೊಂಡಷ್ಟೂ ರೂಪಕಗಳ ನಡಿಗೆ ಬಿಗಿಯಾಗುತ್ತದೆ,...

ಕತೆ | ಪೌರಶ್ರೀ – ಐಸಾಕ್‌ ಅಸಿಮೋವ್

ಪೌರಶ್ರೀ ಓದುವುದಕ್ಕೂ ಮುನ್ನ- ಒಂದು ಪುಟ್ಟ ಟಿಪ್ಪಣಿ ಈ ಸಹಸ್ರಮಾನದ ಅತ್ಯದ್ಭುತ ವೈಜ್ಞಾನಿಕ ಲೇಖಕ ರಲ್ಲಿ ಒಬ್ಬರು ಅಮೆರಿಕ ಬೋಸ್ಟನ್ ವಿಶ್ವ ವಿದ್ಯಾಲಯ ದಲ್ಲಿ ರಸಾಯನ ಶಾಸ್ತ್ರದ ಪ್ರಾಧ್ಯಾಪಕರಾಗಿದ್ದ ಐಸಾಕ್ ಅಸಿಮೋವ್. ವಿಶ್ವ...

ಬೆಟ್ಟವು ಸಮುದ್ರ ಮಟ್ಟದಿಂದ ಸುಮಾರು 4 ಸಾವಿರ ಅಡಿಗಳ ಎತ್ತರದಲ್ಲಿದೆ. ಈ ಪ್ರದೇಶವು ಪಶ್ಚಿಮ ಘಟ್ಟಕ್ಕೆ ಸೇರಿರುವುದರಿಂದ, ಈ ಪ್ರದೇಶವನ್ನು ಹೇಮಾವತಿ ನದಿಯ ಮೂಲಸ್ಥಾನವಾಗಿದೆ. ಬೆಟ್ಟದ ಬುಡದಲ್ಲಿ 30 ಗ್ರಾಮಗಳು ಇವೆ. ಎಲ್ಲಾ ರೈತಾಪಿ ಕುಟುಂಬದವರು ವಾಸವಿದ್ದಾರೆ. ಹೀಗಾಗಿ, ಹೊಸಕೋಟೆ ಬೆಟ್ಟದಲ್ಲಿ ಗಣಿಗಾರಿಕೆ ನಡೆಸದಂತೆ ತಡೆ ವಿಧಿಸಬೇಕು ಎಂದು ಆಗ್ರಹಿಸಿದ್ದಾರೆ.

ಗಣಿಗಾರಿಕೆಯಿಂದ ಭೂಕುಸಿತವಾಗುತ್ತದೆ. ಸುತ್ತಮುತ್ತಲಿನ ಗ್ರಾಮದವರು ಝರಿ ನೀರನ್ನೇ ಕುಡಿಯುವುದಕ್ಕಾಗಿ ಅವಲಂಬಿಸಿದ್ದಾರೆ. ಪಶ್ಚಿಮ ಘಟ್ಟ ಪ್ರದೇಶಕ್ಕೆ ಒಳಪಡುವ ಹಾಗೂ ಸಾರ್ವಜನಿಕರ ವಿರೋಧ ಇರುವ ಪ್ರದೇಶದಲ್ಲಿ ಗಣಿಗಾರಿಕೆ ನಡೆಸಲು ಅವಕಾಶ ನೀಡಬಾರದು, ನೀಡಿರುವ ಅನುಮತಿಯನ್ನು ವಾಪಸ್ ಪಡೆದು ಈ ಪೂರ್ಣ ಪ್ರದೇಶವನ್ನು ಗಣಿಗಾರಿಕಾ ನಿಷೇಧಿತ ಪ್ರದೇಶವೆಂದು ಘೋಷಿಸಬೇಕು ಎಂದು ಪ್ರತಿಭಟನಾಕಾರರು ಒತ್ತಾಯಿಸಿದ್ದಾರೆ.

ಇದನ್ನೂ ಓದಿದ್ದೀರಾ?http://ಮಹಾರಾಷ್ಟ್ರ | ಅಕ್ರಮ ಪಟಾಕಿ ಅಂಗಡಿಗಳ ಮೇಲೆ ‘ನೀರಿನ ದಾಳಿ’ ನಡೆಸಿದ ಅಧಿಕಾರಿಗಳು!

ಕ್ಷೇತ್ರದ ಶಾಸಕರಿಗೆ, ಅಧಿಕಾರಿಗಳಿಗೆ ಗಣಿಗಾರಿಕೆ ನಿಲ್ಲಿಸುವಂತೆ ಮನವಿ ಮಾಡಿದ್ದೇವೆ. ಗಣಿಗಾರಿಕೆ ನಿಲ್ಲಿಸದಿದ್ದರೆ ಮುಂದಿನ ದಿನಗಳಲ್ಲಿ ಉಗ್ರ ಹೋರಾಟ ಮಾಡುತ್ತೇವೆಂದು ದಸಂಸ ಹಾಸನ ಜಿಲ್ಲಾ ಸಂಚಾಲಕರಾದ ರಾಜಶೇಖರ್ ತಿಳಿಸಿದ್ದಾರೆ.

ಪ್ರತಿಭಟನೆಯಲ್ಲಿ ಹೆತ್ತೂರು ಅಣ್ಣಯ್ಯ, ಶಿವಕುಮಾರ್ ನಾರೂರು, ವಸಂತ ಹೊಸೂರು , ಬೆಳಗೂಡು ಬಸವರಾಜ್ ಇನ್ನಿತರರು ಗ್ರಾಮಸ್ಥರು ಉಪಸ್ಥಿತರಿದ್ದರು.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬಳ್ಳಾರಿ | ತೆಕ್ಕಲಕೋಟೆ ಸರ್ಕಾರಿ ಆಸ್ಪತ್ರೆಯಲ್ಲಿ ವಿದ್ಯುತ್ ಇಲ್ಲದೆ ಕತ್ತಲಲ್ಲಿ ಬಾಣಂತಿಯರು, ಮಕ್ಕಳು

ಸಿರಗುಪ್ಪ ತಾಲ್ಲೂಕಿನ ತೆಕ್ಕಲಕೋಟೆ ಸರ್ಕಾರಿ ಸಮುದಾಯ ಆರೋಗ್ಯ ಕೇಂದ್ರದ ಬಾಣಂತಿ ಮತ್ತು...

ಉಡುಪಿ ಜಿಲ್ಲೆಯ ಪಂಚಾಯತ್ ಮೀಸಲಾತಿ ಪಟ್ಟಿಯಲ್ಲಿ ಎಸ್‌ಸಿ, ಎಸ್‌ಟಿ ಪುರುಷರಿಗೆ ಅವಕಾಶವಿಲ್ಲವೇ? ಮರುಪರಿಶೀಲನೆಗೆ ಆಗ್ರಹ

ರಾಜ್ಯದಲ್ಲಿ ಜಿಲ್ಲಾ ಪಂಚಾಯತ್‌, ತಾಲೂಕು ಪಂಚಾಯತ್‌ ಹಾಗೂ ಗ್ರಾಮ ಪಂಚಾಯತ್‌ ಚುನಾವಣೆಗಳು...

ಉಡುಪಿ | ಜ್ಞಾನೇಶ್ ಕುಮಾರ್ ರಾಜೀನಾಮೆಗೆ ಆಗ್ರಹಿಸಿ ಸಾಲಿಡಾರಿಟಿ ಯೂತ್ ಮೂವ್‌ಮೆಂಟ್ ಪ್ರತಿಭಟನೆ

ಚುನಾವಣಾ ಆಯೋಗದ ಮುಖ್ಯ ಆಯುಕ್ತ ಜ್ಞಾನೇಶ್ ಕುಮಾರ್ ಕೂಡಲೇ ರಾಜೀನಾಮೆ ನೀಡುವಂತೆ...