ಸಕಲೇಶಪುರ | ಲಂಚ ಮುಕ್ತ ಕರ್ನಾಟಕ ನಿರ್ಮಾಣಕ್ಕೆ ಕೆಆರ್‌ಎಸ್‌ ಗೆಲ್ಲಿಸಿ: ರವಿ ಕೃಷ್ಣಾರೆಡ್ಡಿ

Date:

ಭ್ರಷ್ಟಾಚಾರದ ವಿರುದ್ಧ ಹೋರಾಡುವುದು, ಜನಸಾಮಾನ್ಯರಿಗೆ ನೆಮ್ಮದಿಯ ಬದುಕು ಕಟ್ಟಿಕೊಡುವುದು ನಮ್ಮ ಪ್ರಮುಖ ಉದ್ದೇಶವಾಗಿದೆ ಎಂದು ‌ಕೆಆರ್‌ಎಸ್ (ಕರ್ನಾಟಕ ರಾಷ್ಟ್ರ ಸಮಿತಿ) ರಾಜ್ಯಾಧ್ಯಕ್ಷ ರವಿ ಕೃಷ್ಣಾರೆಡ್ಡಿ ಹೇಳಿದರು.

ಹಾಸನ ಜಿಲ್ಲೆಯ ಸಕಲೇಶಪುರ ವಿಧಾನಸಭಾ ಕ್ಷೇತ್ರದ ಕೆಆರ್‌ಎಸ್‌ ಅಭ್ಯರ್ಥಿ ಬಿ ವಿ ಪ್ರದೀಪ್‌ ಪರವಾಗಿ ನಡೆದ ಮತಯಾಚನೆ ವೇಳೆ ಮಾತನಾಡಿದರು.

“ಕೆಆರ್‌ಎಸ್‌ಗೆ ಮತ ನೀಡಿ ಗೆಲ್ಲಿಸಿ, ರಾಜ್ಯದಲ್ಲಿ ಲಂಚ ಮುಕ್ತ ಆಡಳಿತ ನೀಡಿ ತೋರಿಸುತ್ತೇವೆ” ಎಂದು ಭರವಸೆ ನೀಡಿದರು.

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.

“ಕಳ್ಳಕಾಕರು ನಮ್ಮ ರಾಜ್ಯ, ದೇಶವನ್ನು ಆಳುತ್ತಿದ್ದು, ಜನರ ನೆಮ್ಮದಿಯನ್ನು ಕಿತ್ತುಕೊಳ್ಳುತ್ತಿದ್ದಾರೆ. ಹಾಗಾಗಿ ತಮ್ಮ ಪವಿತ್ರವಾದ ಮತಗಳನ್ನು ಅರ್ಹ ಅಭ್ಯರ್ಥಿಗೆ ನೀಡಿ, ಕೆಆರ್‌ಎಸ್‌ ಗೆಲ್ಲಿಸಿ ಸಕಲೇಶಪುರದಲ್ಲಿ ನಿಮ್ಮ ಸೇವೆ ಮಾಡಲು ಅವಕಾಶ ಮಾಡಿಕೊಡಿ” ಎಂದರು.  

“ಬಿಜೆಪಿ, ಕಾಂಗ್ರೆಸ್‌ ಮತ್ತು ಜೆಡಿಎಸ್‌ ಅಧಿಕಾರಕ್ಕೆ ಬಂದರೆ ಗೋವಿಂದ. ನಮ್ಮ ಹಣದಿಂದಲೇ ನಮ್ಮನ್ನು ಆಳುತ್ತಾರೆ. ಹಾಗಾಗಿ ಜನಸಾಮಾನ್ಯರಿಗೆ ಅನುಕೂಲವಾಗುವ ಜನರ ಸಂಕಷ್ಟಕ್ಕೆ ಸ್ಪಂದಿಸುವ ಕೆಆರ್‌ಎಸ್‌ ಪಕ್ಷಕ್ಕೆ ನಿಮ್ಮ ಮತ ನೀಡಿ ಒಂದು ಅವಕಾಶ ಕೊಡಿ” ಎಂದು ಕೋರಿದರು.

“ಕತ್ತಲೆಯಲ್ಲಿ ಆಶಾ ಬೆಳಕು ಬರಲಿದೆ. ಹಾಗಾಗಿ ಕೆಆರ್‌ಎಸ್‌ನ ಟಾರ್ಚ್‌ ಗುರುತಿಗೆ ನಿಮ್ಮ ಮತ ನೀಡಿ ನಮ್ಮನ್ನು ಜಯಶೀಲರನ್ನಾಗಿ ಮಾಡಿ” ಎಂದರು.

ಈ ಸುದ್ದಿ ಓದಿದ್ದೀರಾ? ಅರಸೀಕೆರೆ ಕ್ಷೇತ್ರ | ಶಿವಲಿಂಗೇಗೌಡ-ಸಂತೋಷ್ ನಡುವೆ ನೇರ ಕದನ

ಈ ವೇಳೆ ಆಲೂರು, ಸಕಲೇಶಪುರ ಕ್ಷೇತ್ರದ ಕೆಆರ್‌ಎಸ್ ಅಭ್ಯರ್ಥಿ ಬಿ ವಿ ಪ್ರದೀಪ್, ಪಕ್ಷದ ಕಾರ್ಯಕರ್ತರು ಸೇರಿದಂತೆ ಇತರರು ಇದ್ದರು.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ನಮ್ಮನ್ನು ಬೆಂಬಲಿಸಿ

ಹೆಚ್ಚು ಓದಿಸಿಕೊಂಡ ಲೇಖನಗಳು

ವಿಡಿಯೋ

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.
Related

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬಾಲ್ಯವಿವಾಹ | ಕರ್ನಾಟಕಕ್ಕೆ 2ನೇ ಸ್ಥಾನ: ನಾಚಿಕೆಗೇಡಿನ ಸಂಗತಿ ಎಂದ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್

ಕಳೆದ ಮೂರು ವರ್ಷಗಳಲ್ಲಿ ಭಾರತದಲ್ಲಿ ಸಾವಿರಾರು ಬಾಲ್ಯವಿವಾಹಗಳು ನಡೆದಿವೆ. ಅತಿ ಹೆಚ್ಚು...

ಕೊಡಗು | ಜನರ ಸಮಸ್ಯೆಗಳನ್ನು ಕಾರ್ಯಾಂಗದ ಮೂಲಕ‌ ಪರಿಹರಿಸುವುದು ಶಾಸಕಾಂಗದ ಕರ್ತವ್ಯ: ಶಾಸಕ ಡಾ ಮಂತರ್ ಗೌಡ

"ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಸಾರ್ವಜನಿಕ ಕೆಲಸಗಳನ್ನು ಕಾರ್ಯಾಂಗದ ಮೂಲಕ ಪರಿಹರಿಸುವುದು ಶಾಸಕಾಂಗದ ಕರ್ತವ್ಯ" ...

ಮಂಡ್ಯ | ಕೆರಗೋಡು ಬೆನ್ನಲ್ಲೇ ಕೆ.ಆರ್​ ಪೇಟೆಯಲ್ಲಿ ಭಗವಾಧ್ವಜ ವಿವಾದ

ಇತ್ತೀಚೆಗೆ ಮಂಡ್ಯ ಜಿಲ್ಲೆಯ ಕೆರಗೋಡು ಗ್ರಾಮದ ಗ್ರಾಮ ಪಂಚಾಯತಿ ಆವರಣದಲ್ಲಿ ಹಾರಿಸಲಾಗಿದ್ದ...

ಗದಗ | ಡೆಂಘೀ ಮುಂಜಾಗ್ರತಾ ಕ್ರಮ ಕೈಗೊಳ್ಳಲು ಜನರಲ್ಲಿ ಜಾಗೃತಿ ಮೂಡಿಸಿ : ಜಿಲ್ಲಾಧಿಕಾರಿ ಗೋವಿಂದ ರೆಡ್ಡಿ

ಡೆಂಘೀ ಜ್ವರವು ಈಡಿಸ್ ಜಾತಿಯ ಸೊಳ್ಳೆಗಳ ಕಚ್ಚುವಿಕೆಯಿಂದ ಒಬ್ಬರಿಂದ ಒಬ್ಬರಿಗೆ ಹರಡುವ...