ಸರ್ಕಾರಿ ನೌಕರರು, ರಾಜಕಾರಣಿಗಳ ವೇತನ ಸೇರಿದಂತೆ ಎಲ್ಲವೂ ಏರಿಕೆಯಾಗುತ್ತಿದೆ. ಆದರೆ, ಇದೇ ಹೊತ್ತಿನಲ್ಲಿ ಕಾರ್ಮಿಕರ ಮಕ್ಕಳ ಕಲಿಗೆ ನೀಡಲಾಗುವ ವಿದ್ಯಾರ್ಥಿ ವೇತನವನ್ನು ಕಡಿತ ಮಾಡಲಾಗಿದೆ. ಅಧಿಕಾರಿಗಳ ತಪ್ಪಿನಿಂದಾಗಿ ಕಾರ್ಮಿಕರ ಮಕ್ಕಳು ಶಿಕ್ಷೆ ಅನುಭವಿಸುವಂತಾಗಿದೆ ಎಂದು ಶ್ರೀನೆಲದ ಆಂಜನೇಯಸ್ವಾಮಿ ಕರ್ನಾಟಕ ರಾಜ್ಯ ಕಟ್ಟಡ ಮತ್ತು ಇತರೆ ಕಾರ್ಮಿಕರ ಹಾಗೂ ಮೇಸ್ತ್ರಿಗಳ ಸಂಘದ ಪ್ರಧಾನ ಕಾರ್ಯದರ್ಶಿ ಜಗದೀಶ್ ಹೇಳಿದ್ದಾರೆ.
ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರದಲ್ಲಿ ಸುದ್ದಿಗೋಷ್ಠಿ ನಡೆಸಿ ಅವರು ಮಾತನಾಡಿದರು. “ಕಟ್ಟಡ ಮತ್ತು ಇತರೆ ನಿರ್ಮಾಣ ಕೂಲಿ ಕಾರ್ಮಿಕರ ಮಕ್ಕಳಿಗೆ ನೀಡಲಾಗುತ್ತಿದ್ದ ವಿದ್ಯಾರ್ಥಿ ವೇತನವನ್ನು ಕಾರ್ಮಿಕ ಕಲ್ಯಾಣ ಮಂಡಳಿ ಶೇ.80ರಷ್ಟು ಕಡಿಮೆ ಮಾಡಿದೆ. ಇದು ಖಂಡನೀಯ. ಮಂಡಳಿಯು ತನ್ನ ಆದೇಶವನ್ನು ಹಿಂಪಡೆಬೇಕೆಂದು ಒತ್ತಾಯಿಸಿ ತಾಲೂಕು ಕಚೇರಿ ಎದುರು ನವೆಂಬರ್ 20ರಂದು ಪ್ರತಿಭಟನೆ ಹಮ್ಮಿಕೊಳ್ಳಲಾಗಿದೆ” ಎಂದು ಹೇಳಿದರು.
ಪತ್ರಿಕಾಗೋಷ್ಠಿಯಲ್ಲಿ ಅರವಿಂದ ಶಂಕರಗೌಡ, ಪ್ರೊ.ಚಂದ್ರಪ್ಪ, ಮಲ್ಲೇಶ್, ರುದ್ರಮೂರ್ತಿ, ಮಂಜುನಾಥ್ ಇದ್ದರು.