ಹಾಸನ | ಹೆದ್ದಾರಿ ಪಕ್ಕದಲ್ಲೇ ಪಟಾಕಿ ಮಾರಾಟಕ್ಕೆ ಅವಕಾಶ: ಹ್ಯೂಮನ್ ರೈಟ್ಸ್ ಡಿಫೆನ್ಸ್ ಆರ್ಗನೈಸೇಷನ್ ವಿರೋಧ

Date:

Advertisements

ಹಾಸನ ಜಿಲ್ಲೆಯ ಸಕಲೇಶಪುರ ತಾಲೂಕಿನ ರಾಷ್ಟ್ರೀಯ ಹೆದ್ದಾರಿ 75ಕ್ಕೆ ಹೊಂದಿಕೊಂಡಿರುವ ರಸ್ತೆಯಲ್ಲಿ ಪಟಾಕಿ ಮಾರಾಟ ಮಾಡಲು ಕೊಟ್ಟಿರುವ ಜಾಗ ತೆರವುಗೊಳಿಸಿ ಬದಲಿ ವ್ಯವಸ್ಥೆ ಕಲ್ಪಿಸಬೇಕು ಎಂದು ಹ್ಯೂಮನ್ ರೈಟ್ಸ್ ಡಿಫೆನ್ಸ್ ಆರ್ಗನೈಸೇಷನ್ ಎಂದು ಒತ್ತಾಯಿಸಿದೆ.

ಈ ಸಂಬಂಧ ಹಾಸನ ಜಿಲ್ಲೆಯ ಸಕಲೇಶಪುರ ತಾಲೂಕಿನಲ್ಲಿ ಉಪವಿಭಾಗಾಧಿಕಾರಿಗಳಿಗೆ ಹ್ಯೂಮನ್ ರೈಟ್ಸ್ ಡಿಫೆನ್ಸ್ ಆರ್ಗನೈಸೇಷನ್ ವತಿಯಿಂದ ಮನವಿ ಮಾಡಲಾಯಿತು.

ಸರಕಾರದ ನಿಯಮದ ಪ್ರಕಾರ ಸಿಡಿಮದ್ದುಗಳ ಮಾರಾಟ ಮಾಡಲು ಯಾವುದೇ ಜನ ಪ್ರದೇಶದಲ್ಲಿ ಹಾಗೂ ರಾಷ್ಟ್ರೀಯ ಹೆದ್ದಾರಿ ಪಕ್ಕದಲ್ಲಿ ಪಟಾಕಿ ಮಾಡುವ ನಿಯಮ ಇಲ್ಲದಿದ್ದರೂ ಸಹ ಸಕಲೇಶಪುರ ತಾಲೂಕಿನಲ್ಲಿ ಮೊದಲ ಬಾರಿಗೆ ರಾಷ್ಟ್ರೀಯ ಹೆದ್ದಾರಿ 75ರ ರಸ್ತೆಯ ಪಕ್ಕದಲ್ಲಿ ಪಟಾಕಿಯನ್ನು ಮಾರಾಟ ಮಾಡಲು ಸ್ಥಳವನ್ನು ನಿಗದಿಪಡಿಸಿರುವುದು ಸರಿಯಲ್ಲ ಎಂದು ಮುಖಂಡರು ತಿಳಿಸಿದ್ದಾರೆ.

Advertisements

ದೀಪಾವಳಿ ಹಬ್ಬದ ಹಿನ್ನೆಲೆಯಲ್ಲಿ ಸರ್ಕಾರವು ಸಾರ್ವಜನಿಕರಿಗೆ ಪಟಾಕಿಯನ್ನು ಖರೀದಿಸಲು ಸ್ಥಳ ನಿಗದಿಪಡಿಸುವ ಸಮಯದಲ್ಲಿ ಸಾರ್ವಜನಿಕರಿಗೆ ತೊಂದರೆ ಆಗದಂತಹ ಸ್ಥಳವನ್ನು ಗುರುತಿಸಬೇಕಾಗಿರುತ್ತದೆ. ಸಕಲೇಶಪುರ ತಾಲೂಕಿನಲ್ಲಿ ಪಟಾಕಿ ಮಾರಾಟಕ್ಕೆ ಅವಕಾಶ ಕಲ್ಪಿಸಿಕೊಟ್ಟಿರುವ ಸ್ಥಳವು ರಾಷ್ಟ್ರೀಯ ಹೆದ್ದಾರಿ 75 ಕ್ಕೆ ಹೊಂದಿಕೊಂಡಿರುವುದರಿಂದ ಸಾರ್ವಜನಿಕ ಪಾದಚಾರಿಗಳಿಗೆ ತೊಂದರೆ ಆಗುತ್ತದೆ ಎಂದು ತಿಳಿಸಿದರು.

ಪಟಾಕಿ ಮಾರಾಟಕ್ಕೆ ಕೊಟ್ಟಿರುವ ಸ್ಥಳವು 100 ಮೀಟರ್ ಒಳಗೊಂಡಿರುವ ವಾಸವಿ ಹಿರಿಯ ಪ್ರಾಥಮಿಕ ಶಾಲೆ ಮತ್ತು ವಾಸವಿ ಪ್ರೌಢಶಾಲೆ ಇರುವುದರಿಂದ ಸಾರ್ವಜನಿಕವಾಗಿ ತೊಂದರೆ ಆಗುತ್ತದೆ. ಪಟಾಕಿಯನ್ನು ಮಾರಾಟ ಮಾಡುತ್ತಿರುವ ಅಂಗಡಿ ಮಳಿಗೆಗಳನ್ನು ತೆರವುಗೊಳಿಸಿ ಅಂಗಡಿ ಮಳಿಗೆಗಳನ್ನು ತೆರವುಗೊಳಿಸಿ ಸಾರ್ವಜನಿಕರ ಜೀವನಕ್ಕೆ ಯಾವುದೇ ತೊಂದರೆಯಾಗದಂತೆ ಬದಲಿ ಸೂಕ್ತ ಸ್ಥಳವನ್ನು ನಿಗದಿಪಡಿಸಬೇಕು ಎಂದು ಹ್ಯೂಮನ್ ರೈಟ್ಸ್ ಡಿಫೆನ್ಸ್ ಆರ್ಗನೈಸೇಷನ್ ಅಧಿಕಾರಿಗಳಲ್ಲಿ ಮನವಿಯ ಮೂಲಕ ತಿಳಿಸಿದ್ದಾರೆ.

ಇದನ್ನೂ ಓದಿದ್ದೀರಾ: ತೆಲಂಗಾಣ | ಮಗ ಮೃತಪಟ್ಟಿರುವುದು ತಿಳಿಯದೆ 4 ದಿನ ಶವದೊಂದಿಗೆ ಕಳೆದ ಅಂಧ ದಂಪತಿ!

ಒಂದು ವೇಳೆ ಈ ಪಟಾಕಿ ಮಾರಾಟದಿಂದ ಸಾರ್ವಜನಿಕರಿಗೆ ಯಾವುದೇ ರೀತಿಯ ಅನಾಹುತವಾದರೆ ತಾಲೂಕು ಆಡಳಿತವೇ ಸಂಪೂರ್ಣ ಹೊಣೆ ಹೊರಬೇಕಾಗುತ್ತದೆ ಎಂದು ಎಚ್ಚರಿಸಿದ್ದಾರೆ.

ಈ ಸಂದರ್ಭದಲ್ಲಿ ಹ್ಯೂಮನ್ ರೈಟ್ಸ್ ಡಿಫೆನ್ಸ್ ಆರ್ಗನೈಸೇಷನ್ ಹಾಸನ ಜಿಲಾಧ್ಯಕ್ಷ ಜೀವನ್ ಗೌಡ, ತಾಲೂಕು ಅಧ್ಯಕ್ಷ ವಿಜಯ್ ಕುಮಾರ್, ಉಪಾಧ್ಯಕ್ಷ ಪ್ರದೀಪ್ ಮಾವಿನಹಳ್ಳಿ, ಮಹೇಶ್, ಬಾಲರಾಜ್, ಸ್ಮಿಥನ್, ಮಂಜು, ಪ್ರದೀಪ್ ಇನ್ನಿತರರು ಉಪಸ್ಥಿತರಿದ್ದರು.

ಈದಿನ 2
ಈ ದಿನ ಡೆಸ್ಕ್
+ posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಚಿಕ್ಕಮಗಳೂರು l ಸಮಾಜದಲ್ಲಿ ಜಾತಿ,ಧರ್ಮಗಳ ಕಂದಕದ ಗೋಡೆಗಳನ್ನು ತೊಡೆದು ಹಾಕುವುದೇ ನಿಜವಾದ ಸಾಹಿತ್ಯ; ಸಾಹಿತಿ ಮನಸುಳಿ ಮೋಹನ್‌

ಚಿಕ್ಕಮಗಳೂರು ಜಿಲ್ಲೆ ತರೀಕೆರೆ ತಾಲೂಕಿನಲ್ಲಿ ಕನ್ನಡ ಸಾಹಿತ್ಯ ಪರಿಷತ್ತು ತಾಲ್ಲೂಕು ಸಮಿತಿ...

ಉಡುಪಿ | ಅಡಿಷನಲ್ ಎಸ್‌ಪಿ ಕಾರಿಗೆ ಡಿಕ್ಕಿ ಹೊಡೆದು ಕರ್ತವ್ಯಕ್ಕೆ ಅಡ್ಡಿ ಆರೋಪ; ಮೂವರ ಬಂಧನ

ಮಹೇಶ್ ಶೆಟ್ಟಿ ತಿಮರೋಡಿ ಅವರನ್ನು ಬಂಧಿಸಿ ಕರೆದೊಯ್ಯುವಾಗ ಪೊಲೀಸರ ಕರ್ತವ್ಯಕ್ಕೆ ಅಡ್ಡಿಪಡಿಸಿದ...

ಚಿಕ್ಕಮಗಳೂರು l ಕಾಫಿ ನಾಡಿನಲ್ಲಿ ಕಾಡಾನೆ ಹಾವಳಿ; ರೈತರ ಬೆಳೆ ಹಾನಿ

ಕಾಫಿ ನಾಡಿನಲ್ಲಿ ಕಾಡಾನೆ ಎಲ್ಲೆಡೆ ಓಡಾಡುತ್ತಿರುವ ದೃಶ್ಯ ಸಾರ್ವಜನಿಕರಿಗೆ ಹಾಗೂ ಸ್ಥಳೀಯ...

ಬೀದರ್‌ | ಬೆಳೆ ಹಾನಿ : ಹೆಕ್ಟೇರ್‌ಗೆ ₹50 ಸಾವಿರ ಪರಿಹಾರಕ್ಕೆ ಶಾಸಕ ಶೈಲೇಂದ್ರ ಬೆಲ್ದಾಳೆ ಒತ್ತಾಯ

ಬೀದರ್ ಜಿಲ್ಲೆಯಲ್ಲಿ ಅತಿವೃಷ್ಟಿಯಿಂದ ವ್ಯಾಪಕ ಬೆಳೆ ಹಾನಿ, ಸಾರ್ವಜನಿಕ ಆಸ್ತಿಪಾಸ್ತಿ ನಷ್ಟವಾಗಿದೆ....

Download Eedina App Android / iOS

X