ಚಿಂತಾಮಣಿ | ಅಧಿಕ ಬೆಲೆಗೆ ಔಷಧಿ ಮಾರಾಟ; ಮೆಡಿಕಲ್ ಶಾಪ್‌ಗೆ ಬೀಗ

Date:

Advertisements

ಎಂಆರ್‌ಪಿ ದರಕ್ಕಿಂತ ಅಧಿಕ ಬೆಲೆಗೆ ರಕ್ತ ಸಂಗ್ರಹ ಟ್ಯೂಬ್ ಮಾರಾಟ ಮಾಡುತ್ತಿದ್ದ ಮೆಡಿಕಲ್ ಶಾಪ್‌ಗೆ ಬೀಗ ಹಾಕಿ ಸೀಜ್‌ ಮಾಡಲಾಗಿದೆ.

ಚಿಂತಾಮಣಿ ತಾಲ್ಲೂಕಿನ ಬುರಡಗುಂಟೆ ಗ್ರಾಮದಲ್ಲಿರುವ ರೋಹಿಣಿ ಮೆಡಿಕಲ್ ಅಂಡ್ ಜನರಲ್ ಸ್ಟೋರ್ ನಿಗದಿತ ದರಕ್ಕಿಂತ ಹೆಚ್ಚು ದರದಲ್ಲಿ ಔಷಧ ಮಾರಾಟ ಮಾಡುತ್ತಿದ್ದರೆಂಬ ದೂರಿನ ಮೇರೆಗೆ, ಸಹಾಯಕ ಔಷಧ ನಿಯಂತ್ರಕರು ಹಾಗೂ ಪರವಾನಿಗೆ ಪ್ರಾಧಿಕಾರಿ ಬಿ.ಎನ್.ಸವಿತಾ ಸದರಿ ಮೆಡಿಕಲ್ ಸ್ಟೋರ್‌ಗೆ ಬೀಗ ಹಾಕಿ, ಮಾರಾಟಕ್ಕೆ ನೀಡಿದ್ದ ಪರವಾನಗಿಯನ್ನು ರದ್ದುಗೊಳಿಸಿದ್ದಾರೆ.

IMG 20241129 WA0008

ಬುರಡಗುಂಟೆ ಗ್ರಾಮದ ವ್ಯಕ್ತಿಯೊಬ್ಬರು 2024ರ ಸೆಪ್ಟೆಂಬರ್ 1 ರಂದು ಮೆಡಿಕಲ್‌ನಲ್ಲಿ ರಕ್ತ ಸಂಗ್ರಹ ಟ್ಯೂಬ್ ಖರೀದಿಸಿದ್ದು, 2.80ರೂಪಾಯಿ ಬೆಲೆಯ ಟ್ಯೂಬನ್ನು 55ರೂಪಾಯಿಗೆ ಮಾರಾಟ ಮಾಡಿದ್ದಾರೆಂದು ಆರೋಪಿಸಿ ದೂರು ನೀಡಿದ್ದರು. ದೂರನ್ನು ಪರಿಶೀಲಿಸಿದ ಅಧಿಕಾರಿಗಳು ಮಾರಾಟದ ಬಿಲ್, ರಿಜಿಸ್ಟಾರ್‌, ವೈದ್ಯರ ಕುರಿತು ಸೂಕ್ತ ಮಾಹಿತಿ ಹೊಂದಿಲ್ಲದ ಕಾರಣ ಸೀಜ್‌ ಮಾಡಿದ್ದಾರೆ.

Advertisements
IMG 20241129 WA0009

ಇದನ್ನೂ ಓದಿ : ಚಿಂತಾಮಣಿ | ಬಸ್ಸು, ಕಾರು ನಡುವೆ ಭೀಕರ ಅಪಘಾತ; ಕಾರು ಚಾಲಕ ಸಾವು

IMG 20241129 WA0007

ಮೆಡಿಕಲ್ ಸ್ಟೋರ್ ಮಾಲೀಕರು ಔಷಧ ಮತ್ತು ಸೌಂದರ್ಯ ವಸ್ತುಗಳ ನಿಯಮ 1945ರ ನಿಯಮ 65 ಉಲ್ಲಂಘಿಸಿರುವುದು ದೃಢಪಟ್ಟಿದೆ. ಸಾರ್ವಜನಿಕರ ಆರೋಗ್ಯಕ್ಕೆ ಅಪಾಯ ಉಂಟುಮಾಡುವ ಭೀತಿಯ ಹಿನ್ನೆಲೆ ಮೆಡಿಕಲ್ ಸ್ಟೋರ್ ಪರವಾನಿಗೆಯನ್ನು ತಾತ್ಕಾಲಿಕವಾಗಿ ಅಮಾನತುಗೊಳಿಸಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಹಾವೇರಿ | ಗಣೇಶ ಚತುರ್ಥಿ ಪ್ರಯುಕ್ತ 265 ಹೆಚ್ಚುವರಿ ಸಾರಿಗೆ ಸೌಲಭ್ಯ

ಚತುರ್ಥಿಯ ಪ್ರಯುಕ್ತ ಸಾರ್ವಜನಿಕರು ತಮ್ಮ ಸ್ವಂತ ಊರುಗಳಿಗೆ ತೆರಳಲು ಅನುಕೂಲವಾಗುವಂತೆ ವಾಯವ್ಯ...

ಗದಗ | ಆಗಸ್ಟ್ 25ಕ್ಕೆ ಲೋಕಾಯುಕ್ತ ಜನ ಸಂಪರ್ಕ ಸಭೆ

ಸಾರ್ವಜನಿಕ ಕುಂದು-ಕೊರತೆಗಳ ಅಹವಾಲು ಸ್ವೀಕರಿಸಲು ಆಗಸ್ಟ್ 25 ಸೋಮವಾರದಂದು  ಗದಗ ಶಿರಹಟ್ಟಿ...

ಬೀದರ್‌ | ಅತಿವೃಷ್ಟಿ : ತ್ವರಿತ ಬೆಳೆ ಹಾನಿ ಪರಿಹಾರಕ್ಕೆ ಕಿಸಾನ್‌ ಸಭಾ ಒತ್ತಾಯ

ಮೇ ತಿಂಗಳಿಂದ ಜಿಲ್ಲೆಯಲ್ಲಿ ಅತಿವೃಷ್ಟಿಯಿಂದ ಉದ್ದು, ಹೆಸರು, ತೊಗರಿ ಸೇರಿದಂತೆ ಹಲವು...

ಚಿಕ್ಕಬಳ್ಳಾಪುರ | ಬಾಲಕಾರ್ಮಿಕ ಪದ್ಧತಿ ನಿರ್ಮೂಲನೆಗೆ ಎಲ್ಲರೂ ಕೈಜೋಡಿಸಿ: ಹಿರಿಯ ನ್ಯಾ. ಶಿಲ್ಪಾ

ಜಾಗತೀಕರಣ ಯುಗದಲ್ಲಿ ನಮ್ಮ ಜಾಗೃತಿ ನಮಗೆ ಗುರುವಾಗಬೇಕು. ಪೋಷಕರು ಮಕ್ಕಳನ್ನು...

Download Eedina App Android / iOS

X