ಉಡುಪಿ | ಸಾಲಿಗ್ರಾಮ ಪಾರಂಪಳ್ಳಿಯಲ್ಲಿ ಘನ ತ್ಯಾಜ್ಯ ಘಟಕದ ಉದ್ಘಾಟನೆಗೆ ಸ್ಥಳೀಯರ ವಿರೋಧ – ರಾತ್ರೋ ರಾತ್ರಿ ಪ್ರತಿಭಟನೆ ಆರಂಭ

Date:

ಉಡುಪಿ ಜಿಲ್ಲೆಯ ಬ್ರಹ್ಮಾವರ ತಾಲೂಕಿನ ಸಾಲಿಗ್ರಾಮ ಪಟ್ಟಣ ಪಂಚಾಯತ್ ವ್ಯಾಪ್ತಿಯ ಪಾರಂಪಳ್ಳಿ ಗ್ರಾಮದ ಸರ್ವೇ ನಂ. 104/24, 25ರಲ್ಲಿ ನಿರ್ಮಿತವಾಗಿರುವ ಘನ ತ್ಯಾಜ್ಯ ಘಟಕದ ಉದ್ಘಾಟನೆ ನಾಳೆ (ಅಕ್ಟೋಬರ್ 25) ನಡೆಯಲಿದ್ದು, ಇದಕ್ಕೆ ಸ್ಥಳೀಯರು ತೀವ್ರ ವಿರೋಧ ವ್ಯಕ್ತಪಡಿಸಿದ್ದಾರೆ.

- Advertisement -
WhatsApp Image 2025 10 24 at 10.31.22 AM

ಗ್ರಾಮಸ್ಥರು ರಾತ್ರೋ ರಾತ್ರಿ ಘಟಕದ ಮುಂಭಾಗದಲ್ಲೇ ಕೂತು ಪ್ರತಿಭಟನೆ ಆರಂಭಿಸಿದ್ದು, ನಾಳೆ ಸಂಜೆವರೆಗೂ ಶಾಂತಿಯುತ ಪ್ರತಿಭಟನೆ ಮುಂದುವರಿಯಲಿದೆ ಎಂದು ಪ್ರತಿಭಟನೆಯ ನೇತೃತ್ವ ವಹಿಸಿರುವ ಕೋಟ ನಾಗೇಂದ್ರ ಪುತ್ರನ್‌ ತಿಳಿಸಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಖಾಲಿಯಾಗುತ್ತಿವೆ ಉತ್ತರ ಕನ್ನಡದ ಹಳ್ಳಿಗಳು: 40ಕ್ಕೂ ಹೆಚ್ಚು ಗ್ರಾಮಗಳಲ್ಲಿ...

ಮಕ್ಕಳ ಗದ್ದಲ, ಕೃಷಿ ಚಟುವಟಿಕೆಯ ಹಿಗ್ಗು, ಹಬ್ಬ-ಹರಿದಿನಗಳ ಸಂಭ್ರಮದಿಂದ ಕಂಗೊಳಿಸುತ್ತಿದ್ದ ಹಳ್ಳಿಗಳು ಇವತ್ತು ನಿಶ್ಶಬ್ದವಾಗಿ ನಿಂತಿವೆ. ಪ್ರಕೃತಿಯ ಮಡಿಲಲ್ಲಿ ಕಟ್ಟಿಕೊಂಡಿದ್ದ ಬದುಕು ನಿಧಾನವಾಗಿ ಕರಗಿ ಹೋಗುತ್ತಿದೆ. ಊರು ತೊರೆದು ಪಟ್ಟಣ ಸೇರವುದು ಅನಿವಾರ್ಯವ...

ಕಲಬುರಗಿ | ‘ನಮ್ಮನ್ನ ಎಲ್ಲಿಗೆ ಕಳುಹಿಸುತ್ತೀರಿ?’: ತಗ್ಗಿನ ಬೇಲಿಯ...

92ಕ್ಕೂ ಅಧಿಕ ಸ್ಲಂ ಕುಟುಂಬಗಳ ಬದುಕು ಕೇವಲ ಜಮೀನಿನ ಹಕ್ಕಿನ ಪ್ರಶ್ನೆಯಲ್ಲ; ಅವರ ಸುರಕ್ಷಿತ ಓಡಾಟ, ಕುಡಿಯುವ ನೀರು ಹಾಗೂ ನಿತ್ಯದ ಬದುಕಿನ ಹಕ್ಕಿನ ಪ್ರಶ್ನೆಯೂ ಹೌದು. ನ್ಯಾಯಾಲಯದ ವಿಚಾರಣೆ ಅಂತಿಮಗೊಳ್ಳುವವರೆಗೆ ಯಾವುದೇ...

ಚುನಾವಣಾ ಆಯೋಗದ ಸಭೆ: ಪರಿಹಾರವಲ್ಲ, ತೇಪೆ ಹಚ್ಚುವ ಕಾರ್ಯಕ್ರಮ

ಅವೈಜ್ಞಾನಿಕ 'SIR' ಪ್ರಕ್ರಿಯೆ ಮತ್ತು ಆಯೋಗದೊಳಗಿನ ಭಿನ್ನಾಭಿಪ್ರಾಯಗಳು ಸಾರ್ವಜನಿಕವಾಗಿ ಬಯಲಾದ ಬೆನ್ನಲ್ಲೇ ಬಿಡುಗಡೆಯಾದ ಚುನಾವಣಾ ಆಯೋಗದ ಪತ್ರಿಕಾ ಪ್ರಕಟಣೆ, ತಪ್ಪುಗಳನ್ನು ತಿದ್ದುವ ಬದಲು ವ್ಯವಸ್ಥೆಯ ಲೋಪಗಳಿಗೆ ತೇಪೆ ಹಚ್ಚುವ ಯತ್ನದಂತೆ ಕಾಣುತ್ತಿದೆ. ದೇಶದ ಇತಿಹಾಸದಲ್ಲೇ...

ಮಾಧ್ಯಮದ ಜೊತೆ ಮಾತನಾಡಿದ ಅವರು, ಕಳೆದ 5-6 ತಿಂಗಳಿಂದ ಸ್ಥಳೀಯರು ಈ ಘಟಕದ ವಿರುದ್ಧ ನಿರಂತರವಾಗಿ ಆಕ್ರೋಶ ವ್ಯಕ್ತಪಡಿಸುತ್ತಿದ್ದರೂ, ಅಧಿಕಾರಿಗಳು ಮತ್ತು ಪಟ್ಟಣ ಪಂಚಾಯತ್ ಸಾರ್ವಜನಿಕರ ಅಭಿಪ್ರಾಯವನ್ನು ಕಡೆಗಣಿಸಿ ಉದ್ಘಾಟನೆಗೆ ಮುಂದಾಗಿದ್ದಾರೆ ಎಂದು ಆರೋಪಿಸಿದರು. “ಈ ಘಟಕ ಸುತ್ತಮುತ್ತಲಿನ ಕೃಷಿಭೂಮಿಗೆ ಹಾನಿ ಉಂಟುಮಾಡುವ ಜೊತೆಗೆ ಪರಿಸರ ಮಾಲಿನ್ಯ ಮತ್ತು ಸಾಂಕ್ರಾಮಿಕ ರೋಗಗಳ ಸಾಧ್ಯತೆ ಇದೆ. ಸಾರ್ವಜನಿಕರ ಜೀವಮಾನಕ್ಕೆ ಅಪಾಯ ಉಂಟುಮಾಡುವಂತ ಈ ಯೋಜನೆಯನ್ನು ತಕ್ಷಣ ನಿಲ್ಲಿಸಬೇಕು,” ಎಂದು ಅವರು ಆಗ್ರಹಿಸಿದರು.

WhatsApp Image 2025 10 24 at 10.31.05 AM

ಈಗಾಗಲೇ ಪ್ರತಿಭಟನೆಗೆ ನೂರಾರು ಸಂಖ್ಯೆಯಲ್ಲಿ ಗ್ರಾಮಸ್ಥರು ಭಾಗಿಯಾಗಿದ್ದು, ರಾತ್ರಿ ಪೂರ್ತಿ ಪ್ರತಿಭಟನೆ ಮುಂದುವರಿಯುತ್ತದೆ. ನಾಳೆ ಬೆಳಿಗ್ಗೆ 8 ಗಂಟೆಗೆ ಇನ್ನಷ್ಟು ಗ್ರಾಮಸ್ಥರು ಸೇರಿ ಪ್ರತಿಭಟನೆಯನ್ನು ಬಲಪಡಿಸುವ ನಿರೀಕ್ಷೆಯಿದೆ. ಸಂಜೆ 5-00 ಗಂಟೆಯವರೆಗೆ ಕಪ್ಪು ಪಟ್ಟಿ ಧರಿಸಿ ಶಾಂತಿಯುತ ಪ್ರತಿಭಟನೆಯನ್ನು ನಡೆಸುತ್ತೇವೆ ಎಂದು ಹೇಳಿದರು.

WhatsApp Image 2025 10 24 at 10.31.23 AM

ಸಾಮಾಜಿಕ ಹೋರಾಟಗಾರ ದಿನೇಶ್ ಗಾಣಿಗ ಮಾತನಾಡಿ, “ಈ ಪ್ರದೇಶವು ಪರಿಸರ ಸಂವೇದನಾಶೀಲವಾದ ‘CRZ’ ವ್ಯಾಪ್ತಿಗೆ ಒಳಪಡುವುದರಿಂದ ಇಲ್ಲಿ ಯಾವುದೇ ಕಟ್ಟಡ ನಿರ್ಮಾಣ ಕಾನೂನಿನ ಪ್ರಕಾರ ಸಾಧ್ಯವಿಲ್ಲ. ಇದೇ ಸ್ಥಳದಲ್ಲಿ ಹಿಂದೆ ಮೀನು ಸಂಸ್ಕರಣ ಘಟಕವನ್ನು ಆರಂಭಿಸಲು ಪ್ರಯತ್ನಿಸಿದಾಗಲೂ ಸಾರ್ವಜನಿಕರ ವಿರೋಧದಿಂದ ಅದು ಸ್ಥಗಿತಗೊಂಡಿತ್ತು. ಇಂತಹ ಪ್ರದೇಶದಲ್ಲಿ ತ್ಯಾಜ್ಯ ಘಟಕ ಸ್ಥಾಪನೆ ಅಕ್ರಮವಾಗಿದೆ,” ಎಂದು ಹೇಳಿದರು.

WhatsApp Image 2025 10 24 at 10.31.04 AM 2

ಗ್ರಾಮಸ್ಥರ ಶಾಂತಿಯುತ ಪ್ರತಿಭಟನೆಯ ಮಧ್ಯೆ ಅಧಿಕಾರಿಗಳು ಮತ್ತು ಪಟ್ಟಣ ಪಂಚಾಯತ್‌ ವತಿಯಿಂದ ಘಟಕ ಉದ್ಘಾಟನೆ ನಡೆಯುತ್ತದೆಯೇ ಎಂಬುದು ಈಗ ಕುತೂಹಲಕ್ಕೆ ಕಾರಣವಾಗಿದೆ.

ಎ೫ಡ
eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಕಲಬುರಗಿ | ಈಶಾನ್ಯ ಶಿಕ್ಷಕರ ಕ್ಷೇತ್ರ: ಮತದಾರರ ಪಟ್ಟಿಗೆ ಹೆಸರು ಸೇರ್ಪಡೆಗೆ ಸೆ.29 ಕೊನೆಯ ದಿನ

ವಿಧಾನ ಪರಿಷತ್ತಿನ ಈಶಾನ್ಯ ಶಿಕ್ಷಕರ ಕ್ಷೇತ್ರದ ಚುನಾವಣೆಗೆ ಸಿದ್ಧತೆ ಆರಂಭವಾಗಿದ್ದು, ಅರ್ಹ...

ಕಲಬುರಗಿ | ವಜ್ರ ಮಹೋತ್ಸವದ ಸ್ಮರಣಾರ್ಥ ವಿಶೇಷ ಅಂಚೆ ಲಕೋಟೆ ಬಿಡುಗಡೆ

ಕಲ್ಯಾಣ ಕರ್ನಾಟಕದ ವಾಣಿಜ್ಯ ಮತ್ತು ಕೈಗಾರಿಕಾ ಕ್ಷೇತ್ರದ ಬೆಳವಣಿಗೆಯಲ್ಲಿ ತನ್ನದೇ ಆದ...

ಯಾದಗಿರಿ | ಪ್ರವಾಸೋದ್ಯಮಕ್ಕೆ ಹೊಸ ಒತ್ತು: 21 ತಾಣಗಳ ಅಭಿವೃದ್ಧಿಗೆ ಆದ್ಯತೆ

ಐತಿಹಾಸಿಕ, ನೈಸರ್ಗಿಕ ಹಾಗೂ ಸಾಂಸ್ಕೃತಿಕ ವೈಶಿಷ್ಟ್ಯಗಳನ್ನು ಹೊಂದಿರುವ ಯಾದಗಿರಿ ಜಿಲ್ಲೆಯ ಪ್ರವಾಸೋದ್ಯಮ...

ಯಾದಗಿರಿ | ದಲಿತರ ಮೇಲಿನ ದೌರ್ಜನ್ಯ ಪ್ರಕರಣಗಳ ಸಿಐಡಿ ತನಿಖೆಗೆ ಆಗ್ರಹ

ರಾಜ್ಯದಲ್ಲಿ ದಲಿತರ ಮೇಲೆ ನಡೆಯುತ್ತಿರುವ ದೌರ್ಜನ್ಯ, ಕೊಲೆ, ಅತ್ಯಾಚಾರ ಹಾಗೂ ಮರಣಾಂತಿಕ...